ಕಾವೇರಿ ನೀರಾವರಿ ನಿಗಮದ ಅಧೀಕ್ಷಕ ಇಂಜಿನಿಯರ್ ಅಧ್ಯಕ್ಷತೆಯಲ್ಲಿ ನಡೆದ ಸಭೆಯಲ್ಲಿ ತೀರ್ಮಾನ
ಮಂಡ್ಯ: ಪ್ರಸಿದ್ಧ ಪ್ರವಾಸಿತಾಣ ಕೆ.ಆರ್.ಎಸ್.ನ ಬೃಂದಾವನದಲ್ಲಿ ಚಿರತೆ ಕಾಣಿಸಿಕೊಂಡಾಗಿನಿAದ ಪ್ರವಾಸಿಗರಿಗೆ ನಿರ್ಬಂಧ ವಿಧಿಸಿರುವುದರಿಂದ ಸರ್ಕಾರಕ್ಕೆ ಆರ್ಥಿಕವಾಗಿ ನಷ್ಟ ಉಂಟಾಗುತ್ತಿದ್ದು, ಈ ಕಾರಣದಿಂದ ವನ್ಯಜೀವಿ ಸಂರಕ್ಷಣಾ ದಳದಿಂದ ಕಾರ್ಯಾಚರಣೆ ಮಾಡಿಸುವುದು ಸೂಕ್ತ ಎಂದು ಕಾವೇರಿ ನೀರಾವರಿ ನಿಗಮದ ಅಧೀಕ್ಷಕ ಇಂಜಿನಿಯರ್ ಎಚ್.ಎಸ್. ಆನಂದ ಅವರ ಅಧ್ಯಕ್ಷತೆಯಲ್ಲಿ ನಗರದ ಕಾ.ನೀ.ನಿ.ದ ಕಚೇರಿಯಲ್ಲಿ ಬುಧವಾರ ನಡೆದ ಸಭೆಯಲ್ಲಿ ತೀರ್ಮಾನಿಸಲಾಯಿತು.
ಚಿರತೆ ಕಾಣಿಸಿಕೊಂಡ ಹಿನ್ನೆಲೆಯಲ್ಲಿ ಕಳೆದ ನ.೭ರಿಂದ ಬೃಂದಾವನಕ್ಕೆ ಬರುವ ಪ್ರವಾಸಿಗರಿಗೆ ಪ್ರವೇಶವನ್ನು ಸಂಪೂರ್ಣ ನಿಷೇಧಿಸಲಾಗಿದ್ದು, ಪ್ರವಾಸಿಗರಿಗೆ ಅನುವು ಮಾಡಿಕೊಡುವ ದೃಷ್ಟಿಯಿಂದ ಅರಣ್ಯ ಇಲಾಖೆ ಮತ್ತು ನಿಗದ ಕಚೇರಿಯ ಅಧಿಕಾರಿಗಳೊಂದಿಗೆ ಚರ್ಚಿಸಲಾಯಿತು.
ಚಿರತೆಯ ಚಲನವಲನಗಳನ್ನು ವೀಕ್ಷಿಸುವ ಸಲುವಾಗಿ ಈಗಾಗಲೇ ಅರಣ್ಯ ಇಲಾಖೆ ವತಿಯಿಂದ ಕ್ಯಾಮೆರಾ ಟ್ರಾö್ಯಪ್‌ಗಳನ್ನು ಅಳವಡಿಸಲಾಗಿದೆ. ಇನ್ನೂ ಅನೇಕ ಭಾಗಗಳಲ್ಲಿ ಕಂಡುಬಂದಿರುವುದರಿಂದ ಇನ್ನೂ ಹೆಚ್ಚಿನ ಸಂಖ್ಯೆಯಲ್ಲಿ ಕ್ಯಾಮೆರಾ ಟ್ರ್ಯಾಪ್ ಅಳವಡಿಸಿದಲ್ಲಿ ಚಿರತೆಯನ್ನು ಸೆರೆ ಹಿಡಿಯಲು ಅನುಕೂಲವಾಗುತ್ತದೆ ಎಂದು ತೀರ್ಮಾನಿಸಲಾಯಿತು.
ಚಿರತೆಯು ಕೆಲವೊಮ್ಮೆ ಉತ್ತು ಮತ್ತು ದಕ್ಷಿಣ ಗಾರ್ಡನ್ ಹಾಗೂ ತೋಟಗಾರಿಕೆ ಇಲಾಖೆಯ ನಗುವನದಲ್ಲಿ ಸಂಚರಿಸುತ್ತಿರುವುದು ಕಂಡುಬAದ ಕಾರಣ ಡ್ರೋನ್ ಕ್ಯಾಮೆರಾ ಕಾರ್ಯಾಚರಣೆ ಮಾಡಿ ಪತ್ತೆ ಹಚ್ಚಿ ಸೆರೆ ಹಿಡಿಬಹುದಾಗಿರುತ್ತದೆ ಎಂದು ನಿರ್ಣಯಿಸಲಾಯಿತು.
ಬೃಂದಾವನದಲ್ಲಿ ಅನವಶ್ಯಕ ಗಿಡಗಂಟಿಗಳನ್ನು ತೆರವುಗೊಳಿಸುತ್ತಿರುವ ಕಾರ್ಮಿಕರು ಸುರಕ್ಷತೆ ಹಾಗೂ ಜಾಗರೂಕತೆಯಿಂದ ಕೆಲಸ ನಿರ್ವಹಿಸಬೇಕು. ಚಿರತೆ ಸೆರೆಹಿಡಿಯಲು ಅರಣ್ಯ ಇಲಾಖೆಯ ಮೇಲಧಿಕಾಗಿಳ ಗಮನಕ್ಕೆ ತಂದು ಚರ್ಚಿಸಿ ಗುರುವಾರದಿಂದಲೇ ತೀವ್ರ ಕಾರ್ಯಾಚರಣೆ ನಡೆಸಲು ಅರಣ್ಯ ಇಲಾಖೆಯ ಅಧಿಕಾರಿಗಳಿಗೆ ಸೂಚಿಸಲಾಯಿತು.
ಸಭೆಯಲ್ಲಿ ಕೆ.ಆರ್.ಎಸ್. ಕಾರ್ಯಪಾಲಕ ಇಂಜಿನಿಯರ್ ರಾಮಮೂರ್ತಿ, ಸಹಾಯಕ ಕಾರ್ಯಪಾಲಕ ಇಂಜಿನಿಯರ್ ಫಾರೂಖ್ ಅಹಮದ್ ಅಬು, ನಾಗಮಂಗಲ ಉಪ ವಿಭಾಗದ ಸಹಾಯಕ ಅರಣ್ಯ ಸಂರಕ್ಷಣಾಧಿಕಾರಿ ಶಂಕರೇಗೌಡ, ಮಂಡ್ಯ ಉಪವಿಭಾಗದ ಮಹದೇವಸ್ವಾಮಿ, ಶ್ರೀರಂಗಪಟ್ಟಣದ ಅರಣ್ಯಾಧಿಕಾರಿ ಅನಿತಾ ಭಾಗವಹಿಸಿದ್ದರು.
ಮಳೆಗಾಲದಲ್ಲಿ ಕೆರೆ ಕಟ್ಟೆಗಳು ತುಂಬಿ ತಗ್ಗು ಪ್ರದೇಶಗಳಿಗೆ ನೀರು ನುಗ್ಗಿ ಅನಾಹುತಗಳೇ ಸೃಷ್ಟಿಯಾಗುತ್ತವೆ. ನಗರ ಪ್ರದೇಶಗಳಲ್ಲಿ ಇರುವ ಕೆರೆಗಳ ಹೂಳೆತ್ತಿ…
ಭ್ರಷ್ಟಾಚಾರವೇ ಇಲ್ಲದ ವ್ಯವಸ್ಥೆ ನಿರ್ಮಾಣ ಮಾಡುವುದು ಇನ್ನು ತುಂಬಾ ಕಷ್ಟಕರವಾದ ಕೆಲಸ ಎಂದು ನಿವೃತ್ತ ಲೋಕಾಯುಕ್ತ ನ್ಯಾಯ ಮೂರ್ತಿ ಎನ್.ಸಂತೋಷ್…
ಇಂದು ಡಿಜಿಟಲ್ ತಂತ್ರಜ್ಞಾನ ಹೆಚ್ಚಾಗಿ ಬಳಕೆಯಾಗುತ್ತಿದ್ದು, ಇದರಿಂದಾಗಿ ಶಿಕ್ಷಣ ಕ್ಷೇತ್ರದಲ್ಲಿ ದೊಡ್ಡ ಬದಲಾವಣೆ ಕಂಡುಬಂದಿದೆ. ಆನ್ಲೈನ್ ತರಗತಿಗಳು, ಯೂಟ್ಯೂಬ್ ಶಿಕ್ಷಣ…
ವೈಡ್ ಆಂಗಲ್ ಬಾ.ನಾ.ಸುಬ್ರಹ್ಮಣ್ಯ ೨೦೨೬ರ ಆರಂಭದ ವೇಳೆ ಹಲವು ಬೆಳವಣಿಗೆಗಳು. ೨೦೨೫ರ ಕೊನೆಯ ಶುಕ್ರವಾರ ತೆರೆ ಕಂಡ ೨ ಚಿತ್ರಗಳ…
ಕೃಷ್ಣ ಸಿದ್ದಾಪುರ ಸಿಬ್ಬಂದಿ ಕೊರತೆ, ಜನಸಂಖ್ಯೆ ಆಧಾರದಲ್ಲಿ ಹೊಸ ಠಾಣೆ ಸ್ಥಾಪನೆ, ಹೆಚ್ಚಿನ ಸಿಬ್ಬಂದಿ ನಿಯೋಜನೆಗೆ ಆಗ್ರಹ ಸಿದ್ದಾಪುರ:ಸಿದ್ದಾಪುರ ಪೊಲೀಸ್…
ಕೆ.ಬಿ.ರಮೇಶನಾಯಕ ಮೈಸೂರು: ಮೈಸೂರು ಜಿಲ್ಲಾ ಸಹಕಾರ ಹಾಲು ಉತ್ಪಾದಕರ ಸಂಘಗಳ ಒಕ್ಕೂಟ(ಮೈಮುಲ್) ಆಡಳಿತ ಮಂಡಳಿಯ ಐದು ವರ್ಷಗಳ ಆಡಳಿತ ಮುಂದಿನ…