ಮಂಡ್ಯ : ಜಿಲ್ಲೆಯ ಮಳವಳ್ಳಿಯ ಎಂ. ನಾಗರತ್ನ ಅವರಿಗೆ ಕರ್ನಾಟಕ ವಿಶ್ವ ವಿದ್ಯಾಲಯ ಪಿ.ಎಚ್‌ಡಿ (ಡಾಕ್ಟರೇಟ್) ಪದವಿ ಘೋಷಿಸಿದೆ.
ನಾಗರತ್ನ ಅವರು ವಿವಿಯ ಪ್ರಾಚೀನ ಭಾರತೀಯ ಇತಿಹಾಸ ಮತ್ತು ಶಾಸನಶಾಸ್ತ್ರ ವಿಭಾಗಕ್ಕೆ ಸಲ್ಲಿಸಿದ “ಹಿಸ್ಟೋರಿಯೋಗ್ರಪಿ ಆಫ್ ಪಲ್ಲವಾಸ್- ಎ ಕ್ರಿಟಿಕಲ್ ಸ್ಟಡಿ” ವಿಷಯದ ಮಹಾ ಪ್ರಬಂಧಕ್ಕೆ ಡಾಕ್ಟರೇಟ್ ಪದವಿ ನೀಡಿ ಪುರಸ್ಕರಿಸಲಾಗಿದೆ.
ಪ್ರಾಚೀನ ಭಾರತೀಯ ಇತಿಹಾಸ ಮತ್ತು ಶಾಸನಶಾಸ್ತ್ರ ವಿಭಾಗದ ಮುಖ್ಯಸ್ಥ ಫ್ರೊ. ಲೋಕೇಶ್ ಅವರ ಮಾರ್ಗದರ್ಶನದಲ್ಲಿ ನಾಗರತ್ನ ಅವರು ಮಹಾ ಪ್ರಬಂಧ ಸಿದ್ಧಪಡಿಸಿದ್ದರು.
ಎಂ. ನಾಗರತ್ನ ಅವರ ಕಿರುಪರಿಚಯ :
ಪ್ರಸ್ತುತ ಉಡುಪಿಯ ಅಜ್ಜರಕಾಡು ಪ್ರದೇಶದಲ್ಲಿ ವಾಸಿಸುತ್ತಿರುವ ಗೃಹಿಣಿ, ಮಳವಳ್ಳಿಯ ನಾಗರತ್ನ ಅವರು ಇತಿಹಾಸ ಮತ್ತು ಕನ್ನಡ ಈ ಎರಡು ವಿಷಯಗಳಲ್ಲಿ ಕ್ರಮವಾಗಿ ಬೆಂಗಳೂರು ವಿವಿ ಮತ್ತು ಮೈಸೂರಿನ ಕರಾಮು ವಿವಿಯಲ್ಲಿ ಸ್ನಾತಕೋತ್ತರ ಪದವಿ ಪಡೆದಿದ್ದಾರೆ. ಎಂ.ಎಡ್ ಪದವಿ ಅಧ್ಯಯನ ಮಾಡಿರುವ ಇವರು ಎರಡು ವರ್ಷ ಪ್ರೌಢಶಾಲಾ ಅಧ್ಯಾಪಕಿಯಾಗಿ ಕಾರ್ಯನಿರ್ವಹಿಸಿದ ಅನುಭವ ಹೊಂದಿದ್ದಾರೆ. ಶಾಲಾ ವಿದ್ಯಾರ್ಥಿನಿಯಾಗಿದ್ದ ದಿನಗಳಿಂದಲೂ ಪಠ್ಯದ ಜತೆ ಪಠ್ಯೇತರ ಚಟುವಟಿಕೆಗಳಲ್ಲಿ ಗಮನ ಸೆಳೆದಿದ್ದ ಇವರು NCC ‘ಬಿ’ ಪ್ರಮಾಣ ಪತ್ರ ಪಡೆದುಕೊಂಡಿದ್ದಾರೆ.
ಕೇರಳಂ: ಮುಖ್ಯ ಚುನಾವಣಾ ಆಯುಕ್ತ ಜ್ಞಾನೇಶ್ ಕುಮಾರ್ ಅವರನ್ನು ಹುದ್ದೆಯಿಂದ ಕೆಳಗಿಳಿಸುವಂತೆ ಆಗ್ರಹಿಸಿ ಕೇರಳಂ ವಿಧಾನಸಭೆಯಲ್ಲಿ ನಿರ್ಣಯ ಅಂಗೀಕರಿಸಲಾಗಿದೆ. ಎಸ್‌ಐಆರ್…
ಶ್ರೀರಂಗಪಟ್ಟಣ: ಇಲ್ಲಿ ನಡೆಯುವ ದಸರಾ ಮಹೋತ್ಸವದಲ್ಲಿ ಭಾಗವಹಿಸುವ ಆನೆಗಳನ್ನು ಆಯ್ಕೆ ಮಾಡಲಾಗಿದೆ. ಧನಂಜಯ, ಲಕ್ಷ್ಮಿ ಹಾಗೂ ರೂಪ ಆನೆಗಳು ಈ…
ಮೈಸೂರು: ವಿಶ್ವವಿಖ್ಯಾತ ಮೈಸೂರು ದಸರಾ 2026ರ ಸಿದ್ಧತೆಗಳು ಬಿರುಸುಗೊಂಡಿವೆ. ದಸರಾ ಗಜಪಡೆ ಹಾಗೂ ಅಶ್ವಪಡೆಗೆ ನಡೆದ ಮೂರನೇ ಹಂತದ ಕುಶಾಲತೋಪು…
ನವದೆಹಲಿ: ಸತ್ಯಕ್ಕೆ ಅಂತಿಮ ಗೆಲುವಾಗಲಿದೆ. ಈ ಹೋರಾಟದಿಂದ ಯಾವುದೇ ಕಾರಣಕ್ಕೂ ಹಿಂಜರಿಯುವುದಿಲ್ಲ” ಎಂದು ಲೋಕಸಭೆ ವಿರೋಧ ಪಕ್ಷದ ನಾಯಕ ರಾಹುಲ್…
ಮೈಸೂರು: ಬಹುಭಾಷಾ ನಟ ಪ್ರಭುದೇವ್ ಅವರು ತಮ್ಮ ತಾಯಿಯೊಂದಿಗೆ ಸುತ್ತೂರು ಮಠಕ್ಕೆ ಭೇಟಿ ನೀಡಿ ಶ್ರೀಗಳ ದರ್ಶನ ಪಡೆದರು. ನಾಳೆ…
ವರದಿ ರೂಪ: ರವಿಚಂದ್ರ ಚಿಕ್ಕೆಂಪಿಹುಂಡಿ ಮಾಗಡಿ ರಸ್ತೆಯಲ್ಲಿತ್ತು ದೊಡ್ಡ ಮೋರಿ, ಮರಗಳ ತೋಪು, ಸುತ್ತಲೂ ಕತ್ತಲಿನಿಂದ ಕೂಡಿದ್ದ ನಿರ್ಜನ ಪ್ರದೇಶ…