ಜಿಲ್ಲೆಗಳು

ಮಂಡ್ಯ : ಅಮಿತ್‌ ಶಾ ಸ್ವಾಗತದ ಫ್ಲೆಕ್ಸ್‌ಗಳಲ್ಲಿ ಸಂಸದೆ ಸುಮಲತಾ ಅವರ ಭಾವಚಿತ್ರ

ಮಂಡ್ಯ: ಕೇಂದ್ರ ಗೃಹಸಚಿವ ಅಮಿತ್‌ ಶಾ ಡಿ.30ರಂದು ನಗರಕ್ಕೆ ಭೇಟಿ ನೀಡುತ್ತಿದ್ದು ಎಲ್ಲೆಡೆ ಕೇಸರಿ ಬಾವುಟ, ಫ್ಲೆಕ್ಸ್‌, ಬ್ಯಾನರ್‌ ರಾರಾಜಿಸುತ್ತಿವೆ. ಫ್ಲೆಕ್ಸ್‌ಗಳಲ್ಲಿ ಪಕ್ಷೇತರ ಸಂಸದೆ ಸುಮಲತಾ ಭಾವಚಿತ್ರ ಇರುವುದು ಚರ್ಚೆಗೆ ಗ್ರಾಸವಾಗಿದ್ದು ಅವರು ಬಿಜೆಪಿಗೆ ಸೇರ್ಪಡೆಯಾಗುತ್ತಾರಾ ಎಂಬ ‌ಪ್ರಶ್ನೆ ಸೃಷ್ಟಿಯಾಗಿದೆ.

ಜಿಲ್ಲಾ ಹಾಲು ಒಕ್ಕೂಟದ (ಮನ್‌ಮುಲ್‌) ಆವರಣದಲ್ಲಿ ನಿರ್ಮಾಣವಾಗಿರುವ ಮೆಗಾ ಡೇರಿಗೆ ಅಮಿತ್‌ ಶಾ ಶುಕ್ರವಾರ ಚಾಲನೆ ನೀಡಲಿದ್ದಾರೆ. ನಂತರ ನಗರದಲ್ಲಿ ನಡೆಯಲಿರುವ ಬಿಜೆಪಿ ಜನಸಂಪರ್ಕ ಯಾತ್ರೆಯಲ್ಲಿ ಪಾಲ್ಗೊಳ್ಳಲಿದ್ದಾರೆ. ಈ ಹಿನ್ನೆಲೆಯಲ್ಲಿ ನಗರದಾದ್ಯಂತ ಫ್ಲೆಕ್ಸ್‌ ಅಳವಡಿಸಲಾಗಿದೆ.

ಶ್ರೀರಂಗಪಟ್ಟಣ ಬಿಜೆಪಿ ಮುಖಂಡ ಸಚ್ಚಿದಾನಂದ ಅಳವಡಿಸಿರುವ ಬಹುತೇಕ ಫ್ಲೆಕ್ಸ್‌ಗಳಲ್ಲಿ ಸುಮಲತಾ ಭಾವಚಿತ್ರಗಳಿವೆ. ಕಳೆದ ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ನಲ್ಲಿದ್ದ ಸಚ್ಚಿದಾನಂದ ಸುಮಲತಾ ಪರ ಕೆಲಸ ಮಾಡಿದ್ದರು. ಇದೇ ಕಾರಣಕ್ಕಾಗಿ ಅವರನ್ನು ಕೆಪಿಸಿಸಿ ಅವರನ್ನು ಉಚ್ಛಾಟನೆ ಮಾಡಿತ್ತು. ನಂತರ ಅವರು ಬಿಜೆಪಿ ಸೇರ್ಪಡೆಯಾಗಿದ್ದರು.

‘ಮುಂದಿನ ವಿಧಾನಸಭಾ ಚುನಾವಣೆಯಲ್ಲಿ ಸಚ್ಚಿದಾನಂದ ಯಾವುದೇ ಪಕ್ಷದಿಂದ ಸ್ಪರ್ಧಿಸಿದರೂ ಬೆಂಬಲ ನೀಡಲಾಗುವುದು’ ಎಂದು ಸುಮಲತಾ ಘೋಷಿಸಿದ್ದರು. ಈ ಕಾರಣಕ್ಕೆ ಅಮಿತ್‌ ಶಾ ಅವರಿಗೆ ಸ್ವಾಗತ ಕೋರುವ ಫ್ಲೆಕ್ಸ್‌ಗಳಲ್ಲಿ ಸುಮಲತಾ ಭಾವಚಿತ್ರ ಹಾಕಿಸಿದ್ದಾರೆ. ಬಿಜೆಪಿ ಕಾರ್ಯಕ್ರಮದಲ್ಲಿ ಪಕ್ಷೇತರ ಸಂಸದೆಯ ಭಾವಚಿತ್ರ ಇರುವ ಸಂಬಂಧ ಹಲವರು ಸಾಮಾಜಿಕ ಜಾಲತಾಣಗಳಲ್ಲಿ ಆಕ್ಷೇಪ ವ್ಯಕ್ತಪಡಿಸಿದ್ದಾರೆ

andolanait

Recent Posts

ಅರಮನೆ ಫಲಪುಷ್ಪ ಪ್ರದರ್ಶನ | ಸಂಗೀತ ಸಂಜೆಯಲ್ಲಿ ಪ್ರೇಕ್ಷಕರು ತಲ್ಲೀನ

ಮೈಸೂರು : ಮೈಸೂರು ಅರಮನೆ ಮಂಡಳಿ ವತಿಯಿಂದ ಕ್ರಿಸ್‌ಮಸ್ ಹಾಗೂ ಹೊಸವರ್ಷದ ಪ್ರಯುಕ್ತ 10 ದಿನಗಳ ‘ಅರಮನೆ ಫಲಪುಷ್ಪ ಪ್ರದರ್ಶನ’…

15 mins ago

ಎತ್ತಿನ ಗಾಡಿಗೆ ಸಾರಿಗೆ ಬಸ್‌ ಡಿಕ್ಕಿ : ಎತ್ತು ಸಾವು

ಹಲಗೂರು : ಎತ್ತಿನ ಗಾಡಿ ತೆರಳುತ್ತಿದ್ದ ವೇಳೆ ಕೆಎಸ್‌ಆರ್‌ಟಿಸಿ ಬಸ್ ಡಿಕ್ಕಿ ಹೊಡೆದ ಪರಿಣಾಮ ಎತ್ತು ಸ್ಥಳದಲ್ಲೇ ಮೃತಪಟ್ಟ ಘಟನೆ…

20 mins ago

ಮುತ್ತತ್ತಿ : ಕಾವೇರಿ ನದಿ ಸೆಳೆತಕ್ಕೆ ಸಿಲುಕಿ ಯುವಕ ಸಾವು

ಹಲಗೂರು : ಇಲ್ಲಿಗೆ ಸಮೀಪದ ಮುತ್ತತ್ತಿ ಕಾವೇರಿ ನದಿಯಲ್ಲಿ ಈಜಾಡುತ್ತಿದ್ದ ವೇಳೆ ನೀರಿನ ಸೆಳೆತಕ್ಕೆ ಸಿಲುಕಿ ಯುವಕ ಮೃತಪಟ್ಟಿರುವ ಘಟನೆ…

22 mins ago

ಪೊಲೀಸ್‌ ಭದ್ರತೆಯಲ್ಲಿ ದೇಗುಲ ಪ್ರವೇಶಿಸಿದ ದಲಿತರು : ಶಾಂತಿ ಸಭೆಯಲ್ಲಿ ಪಂಚ ಬೇಡಿಕೆ

ಭಾರತೀನಗರ : ಇಲ್ಲಿಗೆ ಸಮೀಪದ ಕೆ.ಶೆಟ್ಟಹಳ್ಳಿ ಗ್ರಾಮದಲ್ಲಿ ಪೊಲೀಸರ ಭದ್ರತೆಯೊಂದಿಗೆ ಗ್ರಾಮದ ಪರಿಶಿಷ್ಟ ಜಾನಾಂಗದ ಮಹಿಳೆಯರು, ಪುರುಷರು ದೇವಾಲಯಗಳಿಗೆ ಪ್ರವೇಶಿಸಿದರು.…

25 mins ago

ಅಕ್ರಮ ವಿದ್ಯುತ್‌ ಸಂಪರ್ಕ: 31 ಪ್ರಕರಣ ದಾಖಲು, 2.17 ಲಕ್ಷ ರೂ. ದಂಡ

ಮೈಸೂರು : ಅಕ್ರಮವಾಗಿ ವಿದ್ಯುತ್‌ ಸಂಪರ್ಕ ಪಡೆದಿರುವ ಸಂಬಂಧ ಯಶಸ್ವಿ ಕಾರ್ಯಾಚರಣೆ ನಡೆಸಿದ ಚಾಮುಂಡೇಶ್ವರಿ ವಿದ್ಯುತ್‌ ಸರಬರಾಜು ನಿಗಮ ನಿಯಮಿತ(ಚಾವಿಸನಿನಿ)…

35 mins ago

ಚಿನ್ನಸ್ವಾಮಿ ಕ್ರಿಕೆಟ್‌ ಕ್ರೀಡಾಂಗಣದಲ್ಲಿ ಕ್ರಿಕೆಟ್‌ ಪಂದ್ಯ : ಸಮಿತಿ ರಚನೆ

ಬೆಂಗಳೂರು : ನಗರದ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಕ್ರಿಕೆಟ್ ಪಂದ್ಯ ನಡೆಸುವ ಕುರಿತಂತೆ ಪರಿಶೀಲಿಸಲು ಸಮಿತಿ ರಚಿಸಲಾಗಿದೆ ಎಂದು ಗೃಹ ಸಚಿವರಾದ…

52 mins ago