ಮಂಡ್ಯ : ಜಿಲ್ಲೆಯ ನೂತನ ಜಿಲ್ಲಾಧಿಕಾರಿಯಾಗಿ ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆಯ ಆಯುಕ್ತ ಡಾ. ಎಚ್ ಎನ್ ಗೋಪಾಲಕೃಷ್ಣ ಅವರು ನೇಮಕವಾಗಿದ್ದಾರೆ.
ಕೃಷ್ಣ ಅವರು 2012ನೇ ಬ್ಯಾಚ್ ನ ಐಎಎಸ್ ಅಧಿಕಾರಿ. ಹಾಸನದಲ್ಲಿ ಅಪರ ಜಿಲ್ಲಾಧಿಕಾರಿಯಾಗಿದ್ದ ಇವರು ಐಎಎಸ್ ಗೆ ಪದೋನ್ನತಿ ಪಡೆದ ಬಳಿಕ ಸೆಸ್ಕ್ ವ್ಯವಸ್ಥಾಪಕ ನಿರ್ದೇಶಕರಾಗಿ ಕಾರ್ಯನಿರ್ವಹಿಸಿದ್ದರು. ಪ್ರಸ್ತುತ ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆಯ ಆಯುಕ್ತರಾಗಿದ್ದರು.
ಈ ಹಿಂದೆ ಅಧಿಕಾರದಲ್ಲಿ ಇದ್ದಂತಹ ಎಸ್ ಅಶ್ವತಿ ಅವರನ್ನು ವರ್ಗಾವಣೆ ಮಾಡಲಾಗಿದೆ. 2021 ಫೆಬ್ರವರಿ 15ರಂದು ಮಂಡ್ಯ ಜಿಲ್ಲಾಧಿಕಾರಿಯಾಗಿ ನೇಮಕಗೊಂಡಿದ್ದ ಇವರು ಒಂದುವರೆ ವರ್ಷಗಳ ಕಾಲ ಯಾವುದೇ ಕಪ್ಪು ಚುಕ್ಕೆ ಇಲ್ಲದೆ ಜಿಲ್ಲಾಧಿಕಾರಿಯಾಗಿ ಕರ್ತವ್ಯ ನಿರ್ವಹಿಸಿದ್ದರು. ಇವರೊಂದಿಗೆ ಇವರ ಪತಿ ಐಎಎಸ್ ಅಧಿಕಾರಿ ಡಾ. ಬಗಾದಿ ಗೌತಮ್ ಅವರು ನೆರೆಯ ಮೈಸೂರು ಜಿಲ್ಲಾಧಿಕಾರಿಯಾಗಿದ್ದರು. ಇದೀಗ ಇವರಿಬ್ಬರೂ ಬೆಂಗಳೂರಿಗೆ ವರ್ಗಾವಣೆಗೊಂಡಿದ್ದಾರೆ. ಅಶ್ವತಿ ಅವರು ಪಸು ವೈದ್ಯಕೀಯ ಸೇವಾ ಇಲಾಖೆಯ ಆಯುಕ್ತರಾಗಿ ವರ್ಗಾವಣೆಯಾಗಿದ್ದರೆ. ಪತಿ ಬಗಾದಿ ಗೌತಮ್ ಅವರು ಗಣಿ ಮತ್ತು ಭೂ ವಿಜ್ಞಾನ ಇಲಾಖೆಯ ನಿರ್ದೇಶಕರಾಗಿ ವರ್ಗಾವಣೆಯಾಗಿದ್ದಾರೆ.
ಮೈಸೂರು : ‘ಹಳೆಯ ಮೈಸೂರು ರಕ್ಷಣೆಯ ನಿಟ್ಟಿನಲ್ಲಿ ಕಾಲಕಾಲಕ್ಕೆ ಸೂಕ್ತ ಕ್ರಮ ವಹಿಸಬೇಕು. ಪಾರಂಪರಿಕ ಕಟ್ಟಡಗಳ ಸಂರಕ್ಷಣೆಗೂ ಆದ್ಯತೆ ನೀಡಬೇಕು.…
ಬೆಳಗಾವಿ : ಕರ್ನಾಟಕ ಬಾಲವಿಕಾಸ ಅಕಾಡೆಮಿಯಿಂದ ಇದೇ ಪ್ರಥಮಬಾರಿಗೆ ಬೆಳಗಾವಿ ಸುವರ್ಣ ವಿಧಾನಸೌಧದ ಉತ್ತರ ಪ್ರವೇಶ ದ್ವಾರದ ಬಳಿ ಇರುವ…
ಹನೂರು : ಅಕ್ರಮ ಗಾಂಜಾ ಮಾರಾಟ ಮಾಡುತ್ತಿದ್ದ ಮಹಿಳೆಯೋರ್ವಳನ್ನು ಮಲೆ ಮಹದೇಶ್ವರ ಬೆಟ್ಟ ಪೊಲೀಸರು ಬಂಧಿಸಿರುವ ಘಟನೆ ಜರುಗಿದೆ. ಹನೂರು…
ಹೊಸದಿಲ್ಲಿ : ದೇಶದ 140 ಕೋಟಿ ಜನರ ಮತದಾನದ ಹಕ್ಕು ಉಳಿಸಲು ನಾವು ಮತಕಳ್ಳತನದ ವಿರುದ್ಧ ಹೋರಾಟ ಮಾಡುತ್ತಿದ್ದೇವೆ. ಇದರಲ್ಲಿ…
ಚಿಕ್ಕಮಗಳೂರು : ಅದೊಂದು ಬಹುಕಾಲದ ಪ್ರೀತಿ, ಪ್ರೀತಿ ಮಾಡಿ, ಪ್ರೇಯಸಿಯಿಂದ ಹಣ ಪಡೆದು, ಇದೀಗ ಬೇರೊಂದು ಮದುವೆಗೆ ಸಿದ್ಧವಾಗಿದ್ದ ಹುಡಗ…
ಬಂಡೀಪುರ, ನಾಗರಹೊಳೆಯಲ್ಲಿ ಹೊಸ ವರ್ಷ ಆಚರಿಸಲು ಬಯಸಿದವರಿಗೆ ನಿರಾಸೆ ರೆಸಾರ್ಟ್, ಹೋಟೆಲ್ ಮಾಲೀಕರಿಂದ ಸಫಾರಿ ಪುನಾರಂಭಕ್ಕೆ ಒತ್ತಡ? ಮೈಸೂರು :…