ಮದ್ದೂರು: ಪಟ್ಟಣ ಸೇರಿದಂತೆ ತಾಲ್ಲೂಕಿನ ವಿವಿಧ ಗ್ರಾಮಗಳ 66/11 ಕೆವಿ ವಿದ್ಯುತ್ ವಿತರಣಾ ಕೇಂದ್ರದಿಂದ ಹೊರಡುವ ಲೈನ್‌ಗೆ ಎಚ್.ಟಿ.ಕೇಬಲ್ ಅಳವಡಿಸುವ ಕಾಮಗಾರಿ ಕೈಗೊಂಡಿರುವುದರಿಂದ ವಿದ್ಯುತ್ ವಿತರಣೆಯಲ್ಲಿ ವ್ಯತ್ಯಯವಾಗಲಿದೆ ಎಂದು ಸೆಸ್ಕ್ ಇಲಾಖೆ ತಿಳಿಸಿದೆ.
ಅ.8ರಂದು ಶನಿವಾರ ಮತ್ತು ಅ.9ರ ಭಾನುವಾರ ಬೆಳಿಗ್ಗೆ 10ರಿಂದ ಸಂಜೆ 5ರ ವರೆವಿಗೆ 11 ಕೆ.ವಿ.ಫೀಡರ್ ಎಫ್-1 ಮದ್ದೂರು ಟೌನ್, ಕೆಎಸ್‌ಆರ್‌ಟಿಸಿ ಡಿಪೋ ಎಲ್‌ಐಸಿ ಕಚೇರಿ ಶಿವಪುರ, ಸೋಮನಹಳ್ಳಿ, ಮದ್ದೂರಮ್ಮ ದೇವಾಲಯ, ಎಫ್-೫ ಕದಲೂರು, ಹೆಮ್ಮನಹಳ್ಳಿ, ಎಫ್-6 ಬೆಸಗರಹಳ್ಳಿ, ಮಳಗೆರೆಹಳ್ಳಿ, ಚಾಮನಹಳ್ಳಿ ಗ್ರಾಪಂ ವ್ಯಾಪ್ತಿಯ ವಿವಿಧ ಗ್ರಾಮಗಳಲ್ಲಿ ವಿದ್ಯುತ್ ವ್ಯತ್ಯಯ ಉಂಟಾಗಲಿದ್ದು, ಗ್ರಾಹಕರು ಹಾಗೂ ಸಾರ್ವಜನಿಕರು ಇಲಾಖೆಯೊಂದಿಗೆ ಸಹಕರಿಸುವಂತೆ ಕೋರಲಾಗಿದೆ.
ಸೋಮನಹಳ್ಳಿ ವರದಿ:
ತಾಲ್ಲೂಕಿನ ಸೋಮನಹಳ್ಳಿ ಕೈಗಾರಿಕಾ ಪ್ರದೇಶದ ಕ.ವಿ.ಪ್ರ.ನಿ.ನಿ. 66/11 ಕೆವಿ ವಿದ್ಯುತ್ ವಿತರಣಾ ಕೇಂದ್ರದಲ್ಲಿ ತುರ್ತು ನಿರ್ವಹಣಾ ಕಾಮಗಾರಿ ಕೈಗೊಂಡಿರುವುದರಿಂದ ಅ.9ರಂದು ಬೆಳಿಗ್ಗೆ 10ರಿಂದ ಸಂಜೆ 4 ಗಂಟೆಯವರೆಗೆ ವಿದ್ಯುತ್ ವ್ಯತ್ಯಯವಾಗಲಿದ್ದು, ಗ್ರಾಹಕರು ಹಾಗೂ ಸಾರ್ವಜನಿಕರು ಇಲಾಖೆಯೊಂದಿಗೆ ಸಹಕರಿಸುವಂತೆ ಸೆಸ್ಕ್ ಇಲಾಖೆ ತಿಳಿಸಿದೆ.





