ಮಂಡ್ಯ : ಸತತವಾಗಿ ಸುರಿಯುತ್ತಿರುವ ಭಾರೀ ಮಳೆಯಿಂದಾಗಿ ಮನೆಯ ಗೋಡೆ ಕುಸಿದ ಪರಿಣಾಮ ಸ್ಥಳದಲ್ಲಿ ಮಲಗಿದ್ದ ವೃದ್ದೆ ಸಾವನ್ನಪ್ಪಿರುವ ಘಟನೆ ಸಾಹುಕಾರ್ ಚೆನ್ನಯ್ಯ ಬಡಾವಣೆಯಲ್ಲಿ ನಡೆದಿದೆ.
65 ವರ್ಷ ವಯಸ್ಸಿನ ಪಾರ್ವತಿ ಬಾಯಿ ಎಂಬುವವರೇ ನಿಧನರಾದವರು. ಇವರು ಮನೆಯಲ್ಲಿ ಒಬ್ಬರೇ ವಾಸಿಸುತ್ತಿದ್ದರು ಎನ್ನಲಾಗಿದೆ. ಸ್ಥಳಕ್ಕೆ ಮಂಡ್ಯ ಪಶ್ಚಿಮ ಠಾಣೆಯ ಪೊಲೀಸರು ಬೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಮೃತ ದೇಹವನ್ನು ಮಂಡ್ಯದ ಮಿಮ್ಸ್ ಶವಾಗಾರಕ್ಕೆ ರವಾನಿಸಲಾಗಿದೆ.