ಮಂಡ್ಯ : ನಿನ್ನೆ ರಾತ್ರಿ ಸುರಿದ ಬಾರಿ ಮಳೆಯಿಂದಾಗಿ ನಗರದ ಹಾಲಹಳ್ಳಿ ಕೆರೆ ಫಸ್ಟ್ ಕ್ರಾಸ್ ನಲ್ಲಿರುವ ಮನೆಗಳಿಗೆ ನೀರು ನುಗ್ಗಿದ್ದು ಅವಾಂತರ ಸೃಷ್ಟಿಯಾಗಿದೆ. ಇಡೀ ರಾತ್ರಿ ಸುರಿದ ಮಳೆಗೆ ಆಲಳ್ಳಿ ಕೆರೆ ಮುಸ್ಲಿಂಕೆರೆ ನಡುವೆ ಬರುವ ರಾಜಕಾಲ್ವೆ ತುಂಬಿ ಡ್ರೈನೇಜ್ ಪೈಪುಗಳ ಮುಖಾಂತರ ಮನೆಗಳಿಗೆ ನೀರು ನುಗ್ಗಿದೆ.
ರಾತ್ರಿ ಸುಮಾರು 12 ರಿಂದ ಒಂದು ಮೂವತ್ತರ ತನಕ ಸತತವಾಗಿ ಮಳೆ ಸುರಿದ ಪರಿಣಾಮ ಅವಾಂತರ ಸೃಷ್ಟಿಯಾಗಿದ್ದು ಮನೆಯಲ್ಲಿ ಮಲಗಿದ್ದ ಮಕ್ಕಳು ಮಹಿಳೆಯರು ರಾತ್ರಿಪೂರ ನಿದ್ದೆಗೆಟ್ಟು ಜೀವಭಯದಲ್ಲಿ ಬೆಳಗಿನವರೆಗೆ ಕಾಲ ಕಳೆಯುವಂತಾಯ್ತು.
ರಾತ್ರಿ ಏಕಾಏಕಿ ಪೈಪುಗಳ ಮುಖಾಂತರ ನೀರು ನುಗ್ಗಿದ್ದರಿಂದ ಮನೆಯಲ್ಲಿರುವ ವಸ್ತುಗಳನ್ನು ಎತ್ತಲು ಸಾಧ್ಯವಾಗಿಲ್ಲ. ಅಡಿಗೆ ಸಾಮಗ್ರಿಗಳು. ಪಾತ್ರೆಗಳು ಬಟ್ಟೆಗಳು ಎಲ್ಲಾ ನೀರಿನಲ್ಲಿ ತೆಲುವ ದೃಶ್ಯ ಸಾಮಾನ್ಯವಾಗಿತ್ತು. ಬೆಳ್ಳಂಬೆಳಗ್ಗೆ ಎದ್ದು ಮನೆಯ ಮಾಲೀಕರು ಗಳು ಹಾಗೂ ಅಕ್ಕಪಕ್ಕದವರು ಸೇರಿ ಮನೆಗಳನ್ನು ಶುಚಿ ಮಾಡುವ ಕಾರ್ಯ ನಡೆಯಿತು.
ಅಂಗನವಾಡಿ ಕಾರ್ಯಕರ್ತೆಯರ ಆದ ಶಾರದಮ್ಮ ಹಾಗೂ ಗಾಯತ್ರಿ ಅಮ್ಮನವರ ಮನೆಗಳಿಗೆ ಅತಿ ಹೆಚ್ಚು ನೀರು ನುಗ್ಗಿ ಹಾನಿಯನ್ನು ಉಂಟು ಮಾಡಿದೆ ಸಂಬಂಧ ಪಟ್ಟವರು ಇತ್ತ ಗಮನಹರಿಸಿ ಸಮಸ್ಯೆಗೆ ಕ್ರಮ ಕೈಗೊಳ್ಳಬೇಕೆಂದು ಮನವಿ ಮಾಡಿದ್ದಾರೆ.
ಗ್ರಹಣ..! ಸೂರ್ಯ-ಚಂದ್ರರ ನಡುವೆ ಭೂಮಿ ಬಂದರೆ ಚಂದ್ರ ಗ್ರಹಣ ! ಭಾರತ-ರಷ್ಯಾ ನಡುವೆ ಅಮೆರಿಕ ಬಂದರೆ ‘ಸುಂಕ ’ ಗ್ರಹಣ…
ರಾಜ್ಯದ ೮೦೫ ಪೆಟ್ರೋಲ್ ಬಂಕ್‌ಗಳ ತಪಾಸಣೆಯಲ್ಲಿ ಬರೋಬ್ಬರಿ ೭೬೮ ಬಂಕ್‌ಗಳಲ್ಲಿ (ಶೇ. ೮೫ ರಷ್ಟು) ಅಳತೆಯಲ್ಲಿ ಮೋಸ ಕಂಡುಬಂದಿರುವುದು ಸಾರ್ವಜನಿಕರಿಗೆ…
ಒಂದು ಕಡೆ ಒರಾಕಲನಂತಹ ಕಂಪೆನಿಗಳು ತಮ್ಮ ನೌಕರರನ್ನು ಯಾವುದೇ ಮುನ್ಸೂಚನೆ ನೀಡದೇ ಕೇವಲ ಒಂದೇ ಒಂದು ಇ ಮೇಲ್ ಸಂದೇಶದ…
ಡಾ.ಕೆ.ವಿ.ಲಕ್ಷ್ಮೀದೇವಿ, ಗುರುಕೃಪಾ ಸಂಗೀತ ಕೇಂದ್ರ, ಮೈಸೂರು ಇಂದು ಗುರು ನಮನ ಮಡಿಕೇರಿ ನಾಗೇಂದ್ರರೆಂದೇ ಪ್ರಖ್ಯಾತರಾದ ‘ಗುರು ಕೃಪಾ ಸಂಗೀತ ಕೇಂದ್ರ’ದ…
ಸತೀಶ್ ತಿಪಟೂರು ಕರ್ನಾಟಕದ ಯಾವುದೇ ಭಾಗದಲ್ಲಿ ಜಂಬೆ ಮೇಷ್ಟ್ರ ಹಿರಿ - ಕಿರಿಯ ವಿದ್ಯಾರ್ಥಿಗಳು ಮೂರ್ನಾಲ್ಕು ಜನ ಒಂದೆಡೆ ಸೇರಿದರೆಂದರೆ…
ಪ್ರತಿ ಭಾರತೀಯರ ಎದೆ ಬಡಿತದ ಚೇತನ ಗಾಂಧೀಜಿ: ಕೈಯಲ್ಲೊಂದು ಕೋಲು ಹಿಡಿದು, ದುಂಡು ಕನ್ನಡಕ ಧರಿಸಿ, ಸತ್ಯ, ಅಹಿಂಸೆಯ ಅಸದಿಂದ…