ಜಿಲ್ಲೆಗಳು

ಮಂಡ್ಯ: ದೃಢಪಟ್ಟ ಅತ್ಯಾಚಾರ, ಪೋಕ್ಸೋ ಕಾಯಿದೆಯಡಿ ಪ್ರಕರಣ ದಾಖಲು

ಮಂಡ್ಯ : ಮನೆಪಾಠಕ್ಕೆoದು ತೆರಳಿ ಕೊಲೆಯಾಗಿದ್ದ ಬಾಲಕಿ ಮೇಲೆ ಅತ್ಯಾಚಾರ ನಡೆದಿರುವುದು ವೈದ್ಯಕೀಯ ವರದಿಯಿಂದ ದೃಢಪಟ್ಟಿದೆ. ಹೀಗಾಗಿ ಆರೋಪಿ ವಿರುದ್ಧ ಅತ್ಯಾಚಾರ ಮತ್ತು ಪೋಕ್ಸೋ ಕಾಯಿದೆಯಡಿ ಪ್ರಕರಣ ದಾಖಲಾಗಿದೆ. ಜತೆಗೆ, ಆರೋಪಿಯನ್ನು ಗುರುವಾರ ರಾತ್ರಿ ನ್ಯಾಯಾಧೀಶರ ಎದುರು ಹಾಜರುಪಡಿಸಿ ಮತ್ತೆ ಪೊಲೀಸ್ ವಶಕ್ಕೆ ಪಡೆಯಲಾಯಿತು.

ಪಟ್ಟಣದ ೧೦ ವರ್ಷದ ಬಾಲಕಿಯನ್ನು ಟ್ಯೂಷನ್ ಸಂಸ್ಥೆ ಮಾಲೀಕ, ಮಳವಳ್ಳಿ ತಾಲೂಕು ನೆಲಮಾಕನಹಳ್ಳಿ ನಿವಾಸಿ ಕಾಂತರಾಜು ಅತ್ಯಾಚಾರವೆಸಗಿ, ಕೊಲೆ ಮಾಡಿದ್ದನು. ಬಳಿಕ ಬಾಲಕಿಯ ಶವವನ್ನು ಟ್ಯೂಷನ್ ನಡೆಯುತ್ತಿದ್ದ ಕಟ್ಟಡದ ಪಕ್ಕದಲ್ಲಿ ನಿರ್ಮಾಣ ಹಂತದಲ್ಲಿದ್ದ ಮನೆಯ ನೀರಿನ ಸಂಪ್‌ನೊಳಗೆ ಹಾಕಿದ್ದರು.
ಮನೆಗೆ ಬಾರದ ಬಾಲಕಿಗಾಗಿ ಪೋಷಕರು ಹುಡುಕಾಟ ನಡೆಸಿದಾಗ, ಕಾಂತರಾಜು ಕೂಡ ಅವರೊಂದಿಗೆ ಸೇರಿ ಬಾಲಕಿಯನ್ನು ಹುಡುಕುವ ನಾಟಕವಾಡಿದ್ದನು. ಶವ ಪತ್ತೆಯಾದ ಬಳಿಕ ಕಾಂತರಾಜು ಮೇಲೆ ಅನುಮಾನ ವ್ಯಕ್ತಪಡಿಸಿ, ಆತನೇ ಕೊಲೆ ಮಾಡಿದ್ದಾನೆಂದು ಆರೋಪಿಸಿ ದೂರು ನೀಡಿದ್ದರು. ಈ ಹಿನ್ನೆಲೆಯಲ್ಲಿ ಬುಧವಾರ ರಾತ್ರಿಯೇ ಆರೋಪಿಯನ್ನು ಪೊಲೀಸರು ವಶಕ್ಕೆ ಪಡೆದಿದ್ದರು.
ಜತೆಗೆ, ಪೋಷಕರು ನೀಡಿದ ದೂರು ಆಧರಿಸಿ ಪೊಲೀಸರು ಐಪಿಸಿ ಸೆಕ್ಷನ್ ೩೦೨ ಪ್ರಕಾರ ಪ್ರಕರಣ ದಾಖಲಿಸಿಕೊಂಡಿದ್ದರು. ಆದರೆ, ಗುರುವಾರ ಬಂದ ವೈದ್ಯಕೀಯ ವರದಿಯಲ್ಲಿ ಬಾಲಕಿ ಮೇಲೆ ಅತ್ಯಾಚಾರ ನಡೆದಿರುವುದು ಖಚಿತವಾಗಿದೆ. ಈ ಹಿನ್ನೆಲೆಯಲ್ಲಿ ಐಪಿಸಿ ಸೆಕ್ಷನ್ ೩೦೨ ಜತೆಗೆ, ೨೦೧, ೩೭೬(ಎ), ೩೭೬(ಎಬಿ), ಕಲಂ ೫(ಐ) ೫(ಎಂ) ೪ ಮತ್ತು ೬ ಹಾಗೂ ಪೋಕ್ಸೋ ಕಾಯಿದೆ-೨೦೧೨ನ್ನು ಸೇರಿಸಲಾಗಿದೆ.


ಬಾಲಕಿ ಮೇಲೆ ಅತ್ಯಾಚಾರ ನಡೆದಿರುವುದು ವೈದ್ಯಕೀಯ ವರದಿಯಲ್ಲಿ ದೃಢಪಟ್ಟ ಹಿನ್ನೆಲೆಯಲ್ಲಿ ೩೭೬(ಎ), ೩೭೬(ಎಬಿ) ಹಾಗೂ ಪೋಕ್ಸೋ ಕಾಯಿದೆಯನ್ನು ಸೇರಿಸಿಕೊಂಡು ಪ್ರಕರಣ ದಾಖಲಿಸಲಾಗಿದೆ. ಆರೋಪಿಯನ್ನು ಹೆಚ್ಚಿನ ವಿಚಾರಣೆಗಾಗಿ ಮತ್ತೆ ಪೊಲೀಸ್ ವಶಕ್ಕೆ ಪಡೆಯಲಾಗಿದೆ.
ಎನ್.ಯತೀಶ್, ಎಸ್ಪಿ, ಮಂಡ್ಯ

andolanait

Recent Posts

ಜ.1ರಂದು ಚಾ.ಬೆಟ್ಟಕ್ಕೆ ಹೆಚ್ಚಿನ ಜನ ನಿರೀಕ್ಷೆ : ಅಗತ್ಯ ವ್ಯವಸ್ಥೆಗೆ ಜಿಲ್ಲಾಧಿಕಾರಿ ಸೂಚನೆ

ಮೈಸೂರು : ಹೊಸ ವರ್ಷ ಜನವರಿ 1ರಂದು ಚಾಮುಂಡಿ ಬೆಟ್ಟಕ್ಕೆ ಹೆಚ್ವಿನ ಭಕ್ತಾಧಿಗಳು ಆಗಮಿಸುವ ನಿರೀಕ್ಷೆ ಇದ್ದು, ಅಗತ್ಯ ವ್ಯವಸ್ಥೆಗಳನ್ನು…

2 mins ago

ಬೈಕ್ ಸಮೇತ ಸಜೀವ ದಹನವಾದ ಯುವಕ ; ಕೊಲೆ ಶಂಕೆ

ನಂಜನಗೂಡು : ಬೈಕ್ ಸಮೇತ ಯುವಕ ಸಜೀವ ದಹನವಾಗಿರುವ ಘಟನೆ ತಾಲ್ಲೂಕಿನ ಕೊರೆಹುಂಡಿ ಗ್ರಾಮದ ಹುಲ್ಲಹಳ್ಳಿ ನಾಲೆ ಬಳಿ ನಡೆದಿದೆ.…

8 mins ago

ಪೂರ್ಣ ಪ್ರಮಾಣದಲ್ಲಿ ಜಾರಿಯಾಗದ ಗ್ಯಾರಂಟಿ : ಸುಧಾಕರ್‌ ಟೀಕೆ

ಹನೂರು : ಯಾರು ಮುಖ್ಯಮಂತ್ರಿ ಕುರ್ಚಿಯಲ್ಲಿ ಕುಳಿತುಕೊಳ್ಳುತ್ತಾರೆ ಅನ್ನೋದು ಮುಖ್ಯವಲ್ಲ. ಅಭಿವೃದ್ಧಿ ಮಾಡ್ತಿದ್ದಾರಾ, ರಾಜ್ಯವನ್ನು ಅಭಿವೃದ್ಧಿಯ ದಿಕ್ಕಿನತ್ತ ಕೊಂಡೊಯ್ಯುತ್ತಿದ್ದಾರಾ ಅನ್ನೋದೇ…

36 mins ago

ಮೈಸೂರು | ವಿವಿಧೆಡೆ ವಿಷ್ಣುವರ್ಧನ್‌ ಅವರ ಪುಣ್ಯ ಸ್ಮರಣೆ

ಮೈಸೂರು : ಕರ್ನಾಟಕ ರತ್ನ ಸಾಹಸ ಸಿಂಹ ಡಾ.ವಿಷ್ಣುವರ್ಧನ್ ಅವರ 16 ನೇ ವರ್ಷದ ಸ್ಮರಣೆಯನ್ನು ನಗರದ ವಿವಿಧೆಡೆ ವಿಷ್ಣುವರ್ಧನ್…

2 hours ago

ಉತ್ತರಾಖಂಡದ ಅಲ್ಮೋರಾದಲ್ಲಿ ಕಂದಕಕ್ಕೆ ಉರುಳಿದ ಬಸ್:‌ 7 ಮಂದಿ ಪ್ರಯಾಣಿಕರು ಸಾವು

ಉತ್ತರಾಖಂಡ: ಇಲ್ಲಿನ ಅಲ್ಮೋರಾದ ಭಿಕಿಯಾಸೈನ್‌ ಪ್ರದೇಶದಲ್ಲಿ ಪ್ರಯಾಣಿಕರಿದ್ದ ಬಸ್‌ ಕಂದಕಕ್ಕೆ ಉರುಳಿಬಿದ್ದ ಪರಿಣಾಮ ಏಳು ಮಂದಿ ಸಾವನ್ನಪ್ಪಿದ್ದು, 12 ಮಂದಿ…

3 hours ago

ಕಾಂಗ್ರೆಸ್‌ ನಾಯಕಿ ಪ್ರಿಯಾಂಕಾ ಗಾಂಧಿ ಪುತ್ರ ರೈಹಾನ್‌ ವಾದ್ರಾ ನಿಶ್ಚಿತಾರ್ಥ

ನವದೆಹಲಿ: ಕಾಂಗ್ರೆಸ್‌ ನಾಯಕಿ ಪ್ರಿಯಾಂಕಾ ಗಾಂಧಿ ಹಾಗೂ ಉದ್ಯಮಿ ರಾಬರ್ಟ್‌ ವಾದ್ರಾ ಪುತ್ರ ರೈಹಾನ್‌ ವಾದ್ರಾ ತಮ್ಮ ಬಹುಕಾಲದ ಗೆಳತಿ…

3 hours ago