ಮಳವಳ್ಳಿ: ೧೦ ವರ್ಷದ ಬಾಲಕಿಯ ಮೇಲಿನ ಅವಾನುಷ ಕೃತ್ಯ ಖಂಡಿಸಿ ಪಟ್ಟಣದ ಸಮಸ್ತ ನಾಗರಿಕರು ಬುಧವಾರ ರಾತ್ರಿ ಪಟ್ಟಣದ ತಾಲ್ಲೂಕು ಪಂಚಾಯಿತಿ ಆವರಣದಿಂದ ಮೇಣದ ಬತ್ತಿ ಹಿಡಿದು ಮೌನ ಮೆರವಣಿಗೆ ನಡೆಸಿ ಮೃತ ಬಾಲಕಿಗೆ ಶಾಂತಿ ಕೋರಿದರು.
ಪಟ್ಟಣದ ಸವಾನ ಮನಸ್ಕರ ಬಳಗ ಸೌಹಾರ್ದ ನಾಗರಿಕರ ವೇದಿಕೆ, ಮುಸ್ಲಿಂ ಸಮುದಾಯದ ಮುಖಂಡರು, ವರ್ತಕರ ಸಂಘ, ಪ್ರಾಂತ ಕೃಷಿ ಕೂಲಿಕಾರರ ಸಂಘ, ಜನವಾದಿ ಮಹಿಳಾ ಸಂಘಟನೆ, ವಿದ್ಯಾ ವಿಕಾಸ್ ಶಾಲೆಯ ಶಿಕ್ಷಕರು, ವಿವಿಧ ಸಂಘ ಸಂಸ್ಥೆಗಳ ಪದಾಧಿಕಾರಿಗಳು ಸೇರಿದಂತೆ ಸಾವಿರಾರು ಜನರು ಸಾಮೂಹಿಕವಾಗಿ ಬಾಲಕಿುಂ ಭಾವಚಿತ್ರವನ್ನಿಟ್ಟುಕೊಂಡು ಮೇಣದ ಬತ್ತಿ ಹಿಡಿದು ಪಟ್ಟಣದ ಪ್ರಮುಖ ರಸ್ತೆಗಳಲ್ಲಿ ಮೌನ ಮೆರವಣಿಗೆ ನಡೆಸಿದರು.
ಈ ಸಂದರ್ಭದಲ್ಲಿ ಸೌಹಾರ್ದ ನಾಗರಿಕರ ವೇದಿಕೆಯ ಅಧ್ಯಕ್ಷ ಎಂ.ಎನ್.ಮಹೇಶ್‌ಕುವಾರ್ ವಾತನಾಡಿ, ಇದೊಂದು ಘನಘೋರ ಘಟನೆ, ತಾಲ್ಲೂಕಿನಲ್ಲಿ ಇಂದು ಕರಾಳ ದಿನವಾಗಿದೆ. ಇಂತಹ ಘಟನೆಗಳು ಮರುಕಳಿಸಬಾರದು. ಮೃತ ಬಾಲಕಿುಂ ಸಾವಿಗೆ ನ್ಯಾಯ ನೀಡಬೇಕು. ಈ ಘಟನೆ ಇಡೀ ನಾಗರಿಕ ಸವಾಜ ತಲೆ ತಗ್ಗಿಸುವಂತಾಗಿದೆ ಎಂದು ಹೇಳಿದರು.
ಇಂತಹ ಘಟನೆಗಳು ನಡೆುಂದಂತೆ ಮುಂದಿನ ದಿನದಲ್ಲಿ ಸೌಹಾರ್ದ ನಾಗರಿಕರ ವೇದಿಕೆ ವತಿಯಿಂದ ತಾಲ್ಲೂಕಿನಾದ್ಯಂತ ಶಾಲಾ-ಕಾಲೇಜುಗಳಲ್ಲಿ ಡ್ರಗ್ಸ್ ಮುಕ್ತ, ದುಶ್ಚಟ ಮುಕ್ತ, ಪ್ರಜ್ಞಾವಂತ ಸವಾಜ ನಿರ್ವಾಣಕ್ಕೆ ಜನಜಾಗೃತಿ ನಡೆುಂಲಿದೆ.
ಇಂತಹ ಅವಾುಂಕ ಕೃತ್ಯಗಳ ಆರೋಪಿಗಳ ವಿರುದ್ಧ ನಮ್ಮ ಹೋರಾಟ ನಿರಂತರ ಎಂದರು.
ಈ ಸಂದರ್ಭದಲ್ಲಿ ಸವಾನ ಮನಸ್ಕರ ನೂರಾರು ಜನರು ಹಾಜರಿದ್ದರು.
ವಕೀಲರ ಸಂಘದ ಖಂಡನೆ
ಪಟ್ಟಣದಲ್ಲಿ ಅಪ್ರಾಪ್ತ ಬಾಲಕಿಯ ಮೇಲಿನ ಅವಾನುಷ ಕೃತ್ಯವನ್ನು ತಾಲ್ಲೂಕು ವಕೀಲರ ಸಂಘ ಖಂಡಿಸಿ, ಆರೋಪಿ ಪರ ಯಾವ ವಕೀಲರೂ ವಕಾಲತ್ತು ವಹಿಸದಂತೆ ಖಂಡನಾ ನಿರ್ಣಯ ಕೈಗೊಂಡಿದೆ.
ಶಾಸಕರ ಭೇಟಿ: ಸಾಂತ್ವನ
ಬಾಲಕಿಯ ಮನೆಗೆ ಶಾಸಕ ಡಾ.ಕೆ.ಅನ್ನದಾನಿ ಬೇಟಿ ನೀಡಿ ಕುಟುಂಬದವರಿಗೆ ಸಾಂತ್ವನ ಹೇಳಿದರು. ಮಾಜಿ ಶಾಸಕರಾದ ಪಿ.ಎಂ.ನರೇಂದ್ರಸ್ವಾಮಿ, ಮಾಜಿ ಸಚಿವ ಬಿ.ಸೋಮಶೇಖರ್ ಸೇರಿದಂತೆ ಹಲವು ಗಣ್ಯರು ಭೇಟಿ ನೀಡಿ ಸಾಂತ್ವನ ಹೆಳಿದರು.
ಹುಣಸೂರು : ಸದಾ ಜನನಿಬಿಡ ಪ್ರದೇಶವಾದ ಹುಣಸೂರು ಬಸ್ ನಿಲ್ದಾಣ ಹಿಂಭಾಗದ ಸ್ಕೈ ಗೋಲ್ಡ್ ಅಂಡ್ ಡೈಮಂಡ್ ಜ್ಯುಯಲರಿ ಅಂಗಡಿಯಲ್ಲಿ…
ತಿ.ನರಸೀಪುರ : ಮುಡುಕುತೊರೆಯು ಪ್ರಸಿದ್ಧ ಧಾರ್ಮಿಕ ಸ್ಥಳವಾಗಿದ್ದು, ಪ್ರವಾಸೋದ್ಯಮ ಕೇಂದ್ರವೂ ಆಗಿದೆ. ಈ ಹಿನ್ನೆಲೆಯಲ್ಲಿ ಈ ಭಾಗವನ್ನು ಮತ್ತಷ್ಟು ಅಭಿವೃದ್ಧಿಪಡಿಸಲಾಗುವುದು…
ಮೈಸೂರು : ರಂಗಾಯಣದ ಪ್ರತಿಷ್ಠಿತ ಉತ್ಸವ ಬಹುರೂಪಿ ರಾಷ್ಟ್ರೀಯ ನಾಟಕೋತ್ಸವವು ಜನವರಿ 11 ರಿಂದ 18 ರವರೆಗೆ ನಡೆಯಲಿದೆ ಎಂದು…
ಬೆಂಗಳೂರು : ಹೊಸ ವರ್ಷಾಚರಣೆ ವೇಳೆ ಬೆಂಗಳೂರು ನಗರದಲ್ಲಿ ಅಹಿತಕರ ಘಟನೆಗಳಿಗೆ ಆಸ್ಪದವಾಗದಂತೆ ಕಟ್ಟುನಿಟ್ಟಿನ ಕ್ರಮ ಕೈಗೊಳ್ಳುವಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ…
ಬೆಂಗಳೂರು: ಅಕ್ರಮ ಗಣಿಗಾರಿಕೆ ಪ್ರಕರಣದಲ್ಲಿ ಶಾಸಕ ಸ್ಥಾನದಿಂದಲೇ ಅನರ್ಹಗೊಂಡು ನ್ಯಾಯಾಲಯದ ತಡೆಯಾಜ್ಞೆಯಿಂದ ಬಚಾವ್ ಆಗಿದ್ದ ಮಾಜಿ ಸಚಿವ ಹಾಗೂ ಶಾಸಕ…
ನವದೆಹಲಿ: ಉನ್ನಾವೋ ಅತ್ಯಾಚಾರ ಪ್ರಕರಣದಲ್ಲಿ ಉಚ್ಚಾಟಿತ ಬಿಜೆಪಿ ಶಾಸಕ ಕುಲದೀಪ್ ಸಿಂಗ್ ಸೆಂಗಾರ್ ಅವರ ಜೀವಾವಧಿ ಶಿಕ್ಷೆಯನ್ನು ಅಮಾನತುಗೊಳಿಸಿದ ದೆಹಲಿ…