ಮಂಡ್ಯ: ಸಮಾಜ ಕಲ್ಯಾಣ ಇಲಾಖೆ ವತಿಯಿಂದ ೨೦೨೨-೨೩ನೇ ಸಾಲಿನಲ್ಲಿ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ವರ್ಗದ ನಿರುದ್ಯೋಗಿ ಯುವಕ, ಯುವತಿಯರಿಗೆ ಎನ್‌ಎಬಿಎಚ್‌ನಿಂದ ಮಾನ್ಯತೆ ಪಡೆದ ಹಾಸ್ಪಿಟಲ್‌ಗಳ ಸಹಯೋಗದಲ್ಲಿ ಶೇ.೭೫ರಷ್ಟು ಉದ್ಯೋಗ ಖಾತರಿಯೊಂದಿಗೆ ಪ್ಯಾರಾಮೆಡಿಕಲ್ ಸ್ಕಿಲ್ ತರಬೇತಿ ಹಾಗೂ ನಾನ್ ಪ್ಯಾರಾಮೆಡಿಕಲ್ ಅಲ್ಪಾವಧಿ ಸರ್ಟಿಫಿಕೇಟ್ ಕೋರ್ಸ್‌ಗಳಿಗೆ ವಸತಿ ಸಹಿತ ತರಬೇತಿ ನೀಡಲು ಅರ್ಜಿ ಆಹ್ವಾನಿಸಲಾಗಿದೆ.
ಪ್ಯಾರಾಮೆಡಿಕಲ್ ಡಿಪ್ಲೊಮಾ ಕೋರ್ಸ್ ಮುಕ್ತಾಯಗೊಳಿಸಿದ ಹಾಗೂ ದ್ವಿತೀಯ ಪಿಯು.ಸಿ ವಿಜ್ಞಾನ ವಿಭಾಗದಲ್ಲಿ ಉತ್ತೀರ್ಣರಾದ ಎಲ್ಲ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ವರ್ಗಗಳ ಅಭ್ಯರ್ಥಿಗಳು ನ.೧೫ ರೊಳಗಾಗಿ ಅರ್ಜಿಯನ್ನು ಸಲ್ಲಿಸಬಹುದು.
ಹೆಚ್ಚಿನ ಮಾಹಿತಿಗಾಗಿ ಸಮಾಜ ಕಲ್ಯಾಣ ಇಲಾಖೆಯ ದೂ.ಸಂ.೦೮೨೩೨-೨೨೦೭೭೨ ಸಂಪರ್ಕಿಸಬಹುದೆಂದು ಸಮಾಜ ಕಲ್ಯಾಣ ಇಲಾಖೆಯ ಉಪನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.





