ಜಿಲ್ಲೆಗಳು

ಸಿದ್ದರಾಮಯ್ಯ ಅಮೃತ ಮಹೋತ್ಸವಕ್ಕೆ ತೆರಳಿದ್ದ ವ್ಯಕ್ತಿ ಶವವಾಗಿ ಪತ್ತೆ

ಮಂಡ್ಯ: ವಿಪಕ್ಷ ನಾಯಕ ಹಾಗೂ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಅಮೃತ ಮಹೋತ್ಸವಕ್ಕೆ ತೆರಳಿದ್ದ ಜಿಲ್ಲೆಯ ಪಾಂಡವಪುರ ತಾಲ್ಲೂಕಿನ ವೃದ್ಧ ಸ್ವಾಮಿಗೌಡ ( 74) ಅವರು ಅಪಘಾತದಿಂದ ಮೃತಪಟ್ಟಿರುವ ಘಟನೆ ತಡವಾಗಿ ಬೆಳಕಿಗೆ ಬಂದಿದೆ.

ಹರಿಹರ ಬೈಪಾಸ್‌ ಬಳಿ ನಡೆದ ಅಪಘಾತದಲ್ಲಿ ವೃದ್ಧ ಸ್ವಾಮಿಗೌಡ ನಿಧನರಾಗಿದ್ದು ಇವರು ಆ.3ರಂದು ಕಾರ್ಯಕ್ರಮವನ್ನು ಮುಗಿಸಿ ಪಾಂಡವಪುರಕ್ಕೆ ವಾಪಸ್‌ ಬರುವ ವೇಳೆ ತಪ್ಪಿಸಿಕೊಂಡು ಹೆದ್ದಾರಿಯ ಬಳಿ ಬಸ್ಸಿಗಾಗಿ ಕಾಯುತ್ತಿದ್ದ ವೇಳೆ ಅಪರಿಚಿತ ವಾಹನ ಡಿಕ್ಕಿಯಾಗಿ ಸ್ಥಳದಲ್ಲಿಯೇ ಸಾವನ್ನಪಿದ್ದಾರೆ. ಈ ಬಗ್ಗೆ ಹರಿಹರ ಗ್ರಾಮಾಂತರ ಪೊಲೀಸ್‌ ಠಾಣೆಯಲ್ಲಿ ಹಿಟ್‌ ಅಂಡ್‌ ರನ್‌ ಪ್ರಕರಣ ದಾಖಲಾಗಿದೆ.

ಸ್ವಾಮಿಗೌಡ ಅವರು ನಾಪತ್ತೆಯಾಗಿರುವ ಸಂಬಂಧ ಇವರ ಕುಟುಂಬಸ್ಥರು ಶ್ರೀರಂಗಪಟ್ಟಣ ದ ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಿಸಿದ್ದರು. ಪೊಲೀಸರು ಹರಿಹರ ಪೊಲೀಸ್‌ ಠಾಣೆಗೆ ಈ ಸಂಬಂಧವಾಗಿ ಸ್ವಾಮಿಗೌಡ ಅವರ ಭಾವಚಿತ್ರವನ್ನು ಕಳುಹಿಸಿದ್ದಾರೆ. ಗುರುತಿಸಿದ ನಂತರ ಪ್ರಕರಣ  ತಡವಾಗಿ ಬೆಳಕಿಗೆ ಬಂದಿದೆ.

ಇಂದು ಮರಣೋತ್ತರ ಪರೀಕ್ಷೆಯನ್ನು ನಡೆಸಿ ಸ್ವಾಮಿಗೌಡ ಮೃತ ದೇಹವನ್ನು ಕುಟುಂಬಕ್ಕೆ ಹಸ್ತಾಂತರಿಸಲಾಗಿದೆ.

 

andolanait

Recent Posts

ಭಯಗೊಳಿಸುವ ಸಿನೆಮಾ ಕಥೆ ನಿಜವಾಗುವ ಸಾಧ್ಯತೆ!

ಐಟಿ, ಆರೋಗ್ಯ, ಆಡಳಿತ ಹೀಗೆ ಎಲ್ಲೆಲ್ಲಿ ಎಐ ಬಳಕೆ ಸಾಧ್ಯವೋ ಅಲ್ಲೆಲ್ಲಾ ಪ್ರಾಥಮಿಕ ಹಂತದ ಉದ್ಯೋಗ ಗಳು ಕಡಿತವಾಗಲಿವೆ. ಎಐ…

57 seconds ago

‘ಎಐ’ ಅತಿ ಬಳಕೆಯ ವ್ಯಸನದ ಬಗ್ಗೆ ಎಚ್ಚರದಿಂದಿರಿ

‘ಕೃತಕ ಬುದ್ಧಿವಂತಿಕೆ’ಯನ್ನು ನಮ್ಮ ಸಹಾಯಕನಾಗಿ ಬಳಸಿಕೊಳ್ಳಬೇಕೇ ಹೊರತು, ಅದರ ಮೇಲೆ ಅವಲಂಬಿತರಾಗಬಾರದು; ಇಂದು ಶಾಲೆ, ಕಾಲೇಜಿನ ಪ್ರಾಧ್ಯಾಪಕರಿಂದ ‘ಎಲ್ಲರ ಅಸೈನ್‌ಮೆಂಟೂ…

5 mins ago

ಡೂಮರ್ಸ್ ಮತ್ತು ಬೂಮರ್ಸ್

ನಾನು ಎ.ಐ. ಅಥವಾ ಕೃತಕ  ಬುದ್ಧಿಮತ್ತೆಯ ರಂಗಕ್ಕೆ ಪ್ರಪ್ರಥಮವಾಗಿ ಇಳಿದದ್ದು ಸುಮಾರು ೩೫ ವರ್ಷಗಳ ಹಿಂದೆ, ನ್ಯೂಯಾರ್ಕಿನಲ್ಲಿ ಸ್ನಾತಕೋತ್ತರ ವಿದ್ಯಾರ್ಥಿಯಾಗಿದ್ದಾಗ.…

8 mins ago

ಮನುಷ್ಯನ ಬೆನ್ನೇರಿರುವ ಎಐ ಬೇತಾಳ

ಮಾನವ ದುಡಿಮೆಯನ್ನು ಕಡಿಮೆಗೊಳಿಸಿರುವ ಎಐಯನ್ನು ಸಂಪೂರ್ಣವಾಗಿ ಹೀಗಳೆಯುವಂತೆಯೂ ಇಲ್ಲ. ಮನುಷ್ಯ ನಿರ್ಮಿತ ಈ ಕೃತಕ ಬುದ್ಧಿಯ ಬೇತಾಳ ನಮ್ಮದೇ ಕೂಸು!…

12 mins ago

ವಂದೇ ಮಾತರಂ: ದೇಶಪ್ರೇಮ-ಬಹುತ್ವದ ಭಿನ್ನ ವ್ಯಾಖ್ಯಾನ

೧೮೭೫ರಲ್ಲಿ ಬಂಕಿಮಚಂದ್ರ ಚಟ್ಟೋಪಾಧ್ಯಾಯ ರಚಿಸಿದ ‘ವಂದೇ ಮಾತರಂ’ ಸ್ವಾತಂತ್ರ್ಯ ಚಳವಳಿಯ ಭಾಗವಾಗಿತ್ತು. ಧಾರ್ಮಿಕ ಆಕ್ಷೇಪಣೆಗಳಿಂದಾಗಿ ೧೯೩೭ರಲ್ಲಿ ಕಾಂಗ್ರೆಸ್ ಮೊದಲ ಎರಡು…

18 mins ago

ಚುನಾವಣಾ ಆಯೋಗದ ಬಿಕ್ಕಟ್ಟು ಬಗೆಹರಿಯುವುದು ಹೇಗೆ?

ದೆಹಲಿ ಕಣ್ಣೋಟ  ಶಿವಾಜಿ ಗಣೇಶನ್‌  ನಿಷ್ಪಕ್ಷಪಾತವಾಗಿ ಚುನಾವಣೆ ನಡೆಸಬೇಕಾದ ಚುನಾವಣಾ ಆಯೋಗದ ಈಗಿನ ಕಾರ್ಯವೈಖರಿ, ನಿರಂಕುಶ ಅಧಿಕಾರ ಚಲಾವಣೆ ಇಂದು…

28 mins ago