Mysore
23
haze

Social Media

ಶುಕ್ರವಾರ, 05 ಡಿಸೆಂಬರ್ 2025
Light
Dark

ಸಾಹಿತ್ಯ ಸಮ್ಮೇಳನಕ್ಕೆ ಆಗಮಿಸಿದ್ದ ಮಂಡ್ಯದ ಶಿಕ್ಷಕ ಸಾವು

ಹಾವೇರಿ: 86ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನಕ್ಕೆ ಆಗಮಿಸಿದ್ದ ಶಿಕ್ಷಕರೊಬ್ಬರು ಸಾವನ್ನಪ್ಪಿದ ಘಟನೆ ಹಾವೇರಿಯಲ್ಲಿ ನಡೆದಿದೆ.

56 ವರ್ಷದ ಸಂಗನಗೌಡ ಮೃತ ಶಿಕ್ಷಕ. ಕನ್ನಡ ಸಾಹಿತ್ಯ ಸಮ್ಮೇಳನಕ್ಕೆ ಬಂದಿದ್ದ ಶಿಕ್ಷಕ ಸಂಗನಗೌಡ ಅವರು ರಾತ್ರಿ ಹಾವೇರಿಯ ಗೆಳೆಯರ ಬಳಗದ ಶಾಲೆಯಲ್ಲಿ ವಾಸ್ತವ್ಯ ಮಾಡಿದ್ದರು. ಇದ್ದಕ್ಕಿದ್ದಂತೆ ಅವರಿಗೆ ಉಸಿರಾಟದ ಸಮಸ್ಯೆ ಕಾಣಿಸಿಕೊಂಡಿದೆ. ತಕ್ಷಣ ಅವರನ್ನು ಜಿಲ್ಲಾಸ್ಪತ್ರೆಗೆ ದಾಖಲಿಸಲಾಗಿತ್ತು.
ಆದರೆ ಚಿಕಿತ್ಸೆ ಫಲಕಾರಿಯಾಗದೇ ಸಾವನ್ನಪ್ಪಿದ್ದಾರೆ. ಸಂಗನಗೌಡ ಮಂಡ್ಯ ಜಿಲ್ಲೆಯ ಕೆ.ಆರ್.ಪೇಟೆ ಮತ್ತಿಕೇರಿ ಗ್ರಾಮದವರು. ಸಾಹಿತ್ಯ ಸಮ್ಮೇಳನಕ್ಕಾಗಿ ಹಾವೇರಿಗೆ ಬಂದಿದ್ದರು. ಈ ವೇಳೆ ದುರ್ಘಟನೆ ಸಂಭವಿಸಿದೆ.

Tags:

ಸುದ್ದಿ ಬಗ್ಗೆ ನಿಮ್ಮ ಅಭಿಪ್ರಾಯ ತಿಳಿಸಿ

error: Content is protected !!