ಮಂಡ್ಯ

ಮಂಡ್ಯ ಅಭ್ಯರ್ಥಿ ಸ್ಟಾರ್‌ ಚಂದ್ರುಗಿಂತ ಅವರ ಪತ್ನಿಯೇ ಶ್ರೀಮಂತೆ.!

ಮಂಡ್ಯ: ಮಂಡ್ಯ ಲೋಕಸಭಾ ಕ್ಷೇತ್ರದ ಕಾಂಗ್ರೆಸ್‌ ಅಭ್ಯರ್ಥಿ ಸ್ಟಾರ್‌ ಚಂದ್ರು ಅಲಿಯಾಸ್‌ ವೆಂಕಟರಮಣೇಗೌಡ ಅವರು ತಮ್ಮ ಅಫಿಡವಿಟ್‌ನಲ್ಲಿ ಹಂಚಿಕೊಂಡಿರುವ ಮಾಹಿತಿಯ ಪ್ರಕಾರ ತಮಗಿಂತ ತಮ್ಮ ಪತ್ನಿಯೇ ಶ್ರೀಮಂತೆ ಎಂದು ಉಲ್ಲೇಖಿಸಿದ್ದಾರೆ.

ಕಾಂಗ್ರೆಸ್ ಅಭ್ಯರ್ಥಿ ಸ್ಟಾರ್‌ ಚಂದ್ರು ಮತ್ತು ಅವರ ಪತ್ನಿ ಕುಸುಮಾ ಅವರು 622.96 ಕೋಟಿ ರೂಪಾಯಿ ಮೌಲ್ಯದ ಆಸ್ತಿ ಘೋಷಿಸಿಕೊಂಡಿದ್ದಾರೆ. ಅಫಿಡವಿಟ್ ಪ್ರಕಾರ ಗೌಡರ ಪತ್ನಿ ಅವರಿಗಿಂತ ಶ್ರೀಮಂತರಾಗಿದ್ದಾರೆ.

ಸ್ಟಾರ್ ಚಂದ್ರು ಅವರ ವೈಯಕ್ತಿಕ ಆಸ್ತಿ ಮೌಲ್ಯ ರೂ. 267.05 ಕೋಟಿ ಮತ್ತು ಪಿತ್ರಾರ್ಜಿತವಾಗಿ 26.59 ಕೋಟಿ ಸೇರಿದಂತೆ ಒಟ್ಟು 293.64 ಕೋಟಿ ರೂ. ಆಸ್ತಿ ಹೊಂದಿದ್ದಾರೆ.

ಅವರ ಪತ್ನಿ ಕುಸುಮಾ ಅವರ ಆಸ್ತಿ ಮೌಲ್ಯ 329.32 ಕೋಟಿ ಆಗಿದ್ದು, ಅಫಿಡವಿಟ್‌ನಲ್ಲಿ ‘ಸ್ಟಾರ್ ಇನ್‌ಫ್ರಾಟೆಕ್ ಪ್ರೈವೇಟ್ ಲಿಮಿಟೆಡ್’ನಲ್ಲಿ 176.44 ಕೋಟಿ ರೂ. ಹೂಡಿಕೆ ಮಾಡಿರುವುದಾಗಿ ತಿಳಿಸಿದ್ದಾರೆ.

ವಾಸು ವಿ ಹೊಂಗನೂರು

ಮೂಲತಃ ಚಾಮರಾಜನಗರ ಜಿಲ್ಲೆಯ ಹೊಂಗನೂರು ಗ್ರಾಮದವನಾದ ನಾನು ಒಂದು ದಶಕದಿಂದ ಮೈಸೂರಿನಲ್ಲಿ ನೆಲೆಸಿದ್ದೇನೆ. ಪದವಿಯಲ್ಲಿ ಪತ್ರಿಕೋದ್ಯಮ ವಿಭಾಗ ಆಯ್ದುಕೊಂಡು ಅಂದಿನಿಂದಲೇ ಹವ್ಯಾಸಿ ಪತ್ರಕರ್ತನಾಗಿ ವೃತ್ತಿ ಆರಿಸಿಕೊಂಡೆ. ಮೈಸೂರು ವಿಶ್ವವಿದ್ಯಾನಿಲಯದಲ್ಲಿ 2020ರಲ್ಲಿ ಪತ್ರಿಕೋದ್ಯಮ ವಿಷಯದಲ್ಲಿ ಸ್ನಾತಕೋತ್ತರ ಪದವಿ ಪಡೆದೆ. ಪತ್ರಿಕೋದ್ಯಮದಲ್ಲಿ 3 ವರ್ಷಗಳ ಅನುಭವವಿದ್ದು, ಕಳೆದ ಒಂದು ವರ್ಷದಿಂದ ಆಂದೋಲನ ದಿನಪತ್ರಿಕೆಯಲ್ಲಿ ವರದಿಗಾರನಾಗಿ ಕೆಲಸ ಮಾಡುತ್ತಿದ್ದೇನೆ. ಕಳೆದ 6 ತಿಂಗಳಿನಿಂದ ಆಂದೋಲನ ಡಿಜಿಟಲ್‌ ವಿಭಾಗದಲ್ಲಿ ತೊಡಗಿಸಿಕೊಂಡಿದ್ದೇನೆ. ಕ್ರಿಕೆಟ್‌ ಮೇಲೆ ಎಲ್ಲಿಲ್ಲದ ಪ್ರೀತಿಯಿದ್ದು, ಪ್ರವಾಸ, ಇತಿಹಾಸ ಅಧ್ಯಯನ ಕಡೆ ಒಲವು ಹೆಚ್ಚು. ಪತ್ರಿಕಾ ರಂಗದಲ್ಲಿ ಕ್ರೀಡಾ ವಿಭಾಗದಲ್ಲಿ ಹೆಚ್ಚು ಆಸಕ್ತಿ ಇದೆ‌. ಮೊಬೈಲ್‌ ನಂಬರ್:‌ 9620318288

Recent Posts

‘ಸಂಜು ವೆಡ್ಸ್ ಗೀತಾ 2’ಗಿದ್ದ ತಡೆಯಾಜ್ಞೆಗೆ ತೆರವು: ಜನವರಿ.17ಕ್ಕೆ ಚಿತ್ರ ಬಿಡುಗಡೆ

ನಾಗಶೇಖರ್ ನಿರ್ದೇಶನದ ‘ಸಂಜು ವೆಡ್ಸ್ ಗೀತಾ 2’ ಚಿತ್ರವು ಜನವರಿ.10ರಂದೇ ಬಿಡುಗಡೆಯಾಗಬೇಕಿತ್ತು. ಆದರೆ, ತೆಲುಗು ನಿರ್ಮಾಪಕರೊಬ್ಬರು ನಾಗಶೇಖರ್ ಮೇಲೆ ಕೇಸ್‍…

5 mins ago

ಹಸುಗಳ ಕೆಚ್ಚಲು ಕೊಯ್ದ ಪ್ರಕರಣ: ನ್ಯಾಯಯುತ ತನಿಖೆಗೆ ಬಿಜೆಪಿ ಆಗ್ರಹ

ಬೆಂಗಳೂರು: ಇಲ್ಲಿನ ಚಾಮರಾಜಪೇಟೆಯಲ್ಲಿ ನಡೆದ ಮೂರು ಹಸುಗಳ ಕೆಚ್ಚಲು ಕೊಯ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ಪೊಲೀಸರು ಬಂಧಿಸಿರುವ ವ್ಯಕ್ತಿಯು ಅಮಾಯಕ ಹಾಗೂ…

3 hours ago

ಜೈಲಿನಿಂದ ಬಿಡುಗಡೆಯಾದ ಬಳಿಕ ನಟ ದರ್ಶನ್‌ ಮೊದಲ ಮಾತು

ಬೆಂಗಳೂರು: ಜೈಲಿನಿಂದ ಬಿಡುಗಡೆಯಾದ ಬಳಿ ಚಾಲೆಂಜಿಂಗ್‌ ಸ್ಟಾರ್‌ ದರ್ಶನ್‌ ಅವರು ಮೊದಲ ಬಾರಿಗೆ ಸೋಷಿಯಲ್‌ ಮೀಡಿಯಾದಲ್ಲಿ ಪೋಸ್ಟ್‌ ಹಂಚಿಕೊಂಡಿದ್ದಾರೆ. ಮೈಸೂರಿನ…

3 hours ago

ಗಾಜಾ ಪಟ್ಟಿಯಲ್ಲಿ ಮುಂದುವರಿದ ಕದನ: ವಾಯುದಾಳಿಯಲ್ಲಿ 30 ಮಂದಿ ಸಾವು

ಜೆರುಸೇಲಂ: ಗಾಜಾ ಪಟ್ಟಿಯಲ್ಲಿ ಕದನ ಮುಂದುವರಿದಿದ್ದು, ಮಂಗಳವಾರ ಇಸ್ರೆಲ್‌ ಸೇನೆ ನಡೆಸಿದ ಪ್ರತ್ಯೇಕ ವಾಯುದಾಳಿಯಲ್ಲಿ ಮಕ್ಕಳು ಸೇರಿದಂತೆ 30 ಮಂದಿ…

4 hours ago

ಡ್ರಗ್ಸ್‌ ಕೇಸ್:‌ ನಟಿ ರಾಗಿಣಿಗೆ ಬಿಗ್‌ ರಿಲೀಫ್‌ ಕೊಟ್ಟ ಹೈಕೋರ್ಟ್‌

ಬೆಂಗಳೂರು: ಡ್ರಗ್ಸ್‌ ಪ್ರಕರಣದಲ್ಲಿ ನಟಿ ರಾಗಿಣಿ ದ್ವಿವೇದಿಗೆ ಬಿಗ್‌ ರಿಲೀಫ್‌ ಸಿಕ್ಕಿದೆ. ನಟಿ ರಾಗಿಣಿ ದ್ವಿವೇದಿ ವಿರುದ್ಧ ಯಾವುದೇ ಸಾಕ್ಷ್ಯ…

4 hours ago

ಮಹಾಕುಂಭಮೇಳದಲ್ಲಿ ಕಮಾಲ್‌ ಮಾಡಿದ ಕೆಎಂಎಫ್‌: ಒಂದು ಕೋಟಿಗೂ ಅಧಿಕ ಟೀ ಮಾರುವ ಗುರಿ

ಪ್ರಯಾಗ್‌ ರಾಜ್:‌ ಇಲ್ಲಿ ನಡೆಯುತ್ತಿರುವ ಮಹಾಕುಂಭಮೇಳದಲ್ಲಿ 10 ಟೀ ಪಾಯಿಂಟ್‌ ತೆರೆಯಲು ಕೆಎಂಎಫ್‌ ಒಪ್ಪಂದ ಮಾಡಿಕೊಂಡಿದೆ. ಇದರ ಜೊತೆಗೆ ನಂದಿನಿ…

4 hours ago