ಮಂಡ್ಯ: ಲೋಕಸಭೆ ಚುನಾವಣೆ ಸಮೀಪಿಸುತ್ತಿದ್ದು, ಇಂದು ( ಏಪ್ರಿಲ್ 4 ) ನಾಮಪತ್ರ ಸಲ್ಲಿಸಲು ಕೊನೆ ದಿನವಾದ್ದರಿಂದ ಹಲವು ಕ್ಷೇತ್ರಗಳ ಅಭ್ಯರ್ಥಿಗಳು ನಾಮಪತ್ರ ಸಲ್ಲಿಸುತ್ತಿದ್ದಾರೆ. ಬಿಜೆಪಿ ಹಾಗೂ ಜಾ.ದಳ ಮೈತ್ರಿಕೂಟಕ್ಕೆ ಕಗ್ಗಂಟಾಗಿದ್ದ ಮಂಡ್ಯ ಕ್ಷೇತ್ರಕ್ಕೆ ಕುಮಾರಸ್ವಾಮಿ ಅಭ್ಯರ್ಥಿಯಾಗಿದ್ದು, ಇದ್ದ ಎಲ್ಲಾ ಅಡೆತಡೆಗಳು ಶಮನವಾಗಿವೆ.
ಹೆಚ್‌ಡಿ ಕುಮಾರಸ್ವಾಮಿ ಇಂದು ನಾಮಪತ್ರವನ್ನು ಸಲ್ಲಿಸಿದ್ದಾರೆ. ಈ ಸಂದರ್ಭದಲ್ಲಿ ಮಾಜಿ ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ, ಮೈಸೂರು – ಕೊಡಗು ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಯದುವೀರ್ ಕೃಷ್ಣದತ್ತ ಚಾಮರಾಜ ಒಡೆಯರ್, ಮಾಜಿ ಶಾಸಕ ಸಿಎಸ್ ಪುಟ್ಟರಾಜು ಹಾಗೂ ಗೋವಾ ಸಿಎಂ ಪ್ರಮೋದ್ ಸಾವಂತ್ ಉಪಸ್ಥಿತರಿದ್ದರು.
ನಾಮಪತ್ರ ಸಲ್ಲಿಸುವ ಮುನ್ನ ಮಾಧ್ಯಮದವರ ಜತೆ ಮಾತನಾಡಿದ ಕುಮಾರಸ್ವಾಮಿ ಇಲ್ಲಿ ಸ್ಪರ್ಧಿಸುವುದು ಅನಿವಾರ್ಯವಾಗಿತ್ತು. ಕ್ಷೇತ್ರದಲ್ಲಿರುವ ಸಮಸ್ಯೆಗಳನ್ನು ಬಗೆಹರಿಸುವ ಕೆಲಸವನ್ನು ಮಾಡುತ್ತೇನೆ ಎಂದು ಹೇಳಿದರು.
ನಾಮಪತ್ರ ಸಲ್ಲಿಕೆಗೂ ಮುನ್ನ ಅರ್ಕೇಶ್ವರ ಸ್ವಾಮಿ ದೇವಸ್ಥಾನ, ಕಾಳಕಾಂಬ ದೇವಸ್ಥಾನ, ಶ್ರೀ ಜನಾರ್ಧನ ಸ್ವಾಮಿ ದೇವಾಲಯಗಳಿಗೆ ಭೇಟಿ ನೀಡಿ ಪೂಜೆ ಸಲ್ಲಿಸಿದ ಕುಮಾರಸ್ವಾಮಿ ವಿಶ್ವೇಶ್ವರಯ್ಯ, ಬಾಬು ಜಗಜೀವನರಾವ್ ಹಾಗೂ ಅಂಬೇಡ್ಕರ್ ಪುತ್ತಳಿಗೆ ಹಾರ ಹಾಕಿ ನಮಿಸಿದರು.
ಮೊದಲ ವಿಶ್ವಕನ್ನಡ ಸಮ್ಮೇಳನದ ಸಿದ್ಧತೆಯ ಸಂದರ್ಭ. ಬರಗಾಲದ ವೇಳೆ ದುಬಾರಿ ವೆಚ್ಚದ ಇಂತಹ ಸಮ್ಮೇಳನ ಅಗತ್ಯ ಇಲ್ಲ ಎಂದು ಇದರ…
ಇಂದು ನಮ್ಮ ದೇಶದ ಆರೋಗ್ಯ ಕ್ಷೇತ್ರದಲ್ಲಿ ಒಂದು ‘ನಿಶ್ಯಬ್ದ ಕ್ರಾಂತಿ’ ಸಂಭವಿಸುತ್ತಿದೆ. ಒಂದು ಕಾಲದಲ್ಲಿ ಪ್ಲೇಗ್, ಕಾಲರಾದಂತಹ ಸಾಂಕ್ರಾಮಿಕ ರೋಗಗಳು…
ಆರ್.ಟಿ.ವಿಠ್ಠಲಮೂರ್ತಿ ಅವರ ವಾರದ ಅಂಕಣ ಮಾಜಿ ಮುಖ್ಯಮಂತ್ರಿ ದೇವರಾಜ ಅರಸರನ್ನು ಇತಿಹಾಸ ಪದೇ ಪದೇ ಸ್ಮರಿಸುತ್ತದೆ. ಅಂದ ಹಾಗೆ ಮುಖ್ಯಮಂತ್ರಿಗಳಾದವರು…
ಎಚ್.ಡಿ.ಕೋಟೆ : ಪ್ರಭಾವಿಗಳು ಮತ್ತು ಅಧಿಕಾರಿಗಳು ನಕಲಿ ದಾಖಲೆ ಸೃಷ್ಟಿಸಿ, ಮುಗ್ಧ ಆದಿವಾಸಿ ಜನರ ೮ ಎಕರೆ ಜಮೀನು ಕಬಳಿಸಲು…
ಮೈಸೂರು : ಸಿಎಆರ್, ಡಿಎಆರ್ ಪೇದೆಗಳ ನೇಮಕಾತಿಗಾಗಿ ಕರ್ನಾಟಕ ಪರೀಕ್ಷಾ ಪ್ರಾಧಿಕಾರ ಭಾನುವಾರ ನಡೆಸಿದ ಸ್ಪರ್ಧಾತ್ಮಕ ಪರೀಕ್ಷೆಯು ಸುಗಮವಾಗಿ ನಡೆಯಿತು.…