ಮಂಡ್ಯ

ಕೆಆರ್‌ಎಸ್‌ ಜಲಾಶಯದಿಂದ 1.20 ಲಕ್ಷ ಕ್ಯೂಸೆಕ್ಸ್ ನೀರು ಬಿಡುಗಡೆ: ಕಾವೇರಿ ನದಿ ಪಾತ್ರದಲ್ಲಿ ಪ್ರವಾಹ

ಮಂಡ್ಯ: ಜಿಲ್ಲೆಯ ಶ್ರೀರಂಗಪಟ್ಟಣ ತಾಲ್ಲೂಕಿನ ಕೆಆರ್‌ಎಸ್‌ ಜಲಾಶಯದಿಂದ 1.20 ಲಕ್ಷ ಕ್ಯೂಸೆಕ್ಸ್‌ ನೀರು ಬಿಡುಗಡೆ ಮಾಡಿರುವ ಹಿನ್ನೆಲೆಯಲ್ಲಿ ಕಾವೇರಿ ನದಿ ಪಾತ್ರದಲ್ಲಿ ಪ್ರವಾಹ ಪರಿಸ್ಥಿತಿ ಉಂಟಾಗಿದ್ದು, ಜನತೆ ಎಚ್ಚರಿಕೆಯಿಂದ ಇರುವಂತೆ ಸೂಚನೆ ನೀಡಲಾಗಿದೆ.

ಕಾವೇರಿ ನದಿ ಅಪಾಯದ ಮಟ್ಟ ಮೀರಿ ಹರಿಯುತ್ತಿರುವುದರಿಂದ ಪ್ರಸಿದ್ಧ ರಂಗನತಿಟ್ಟು ಪಕ್ಷಿಧಾಮದಲ್ಲಿ ದೋಣಿ ವಿಹಾರ ಸ್ಥಗಿತಗೊಳಿಸಲಾಗಿದ್ದು, ಪ್ರವಾಸಿಗರ ಪ್ರವೇಶಕ್ಕೂ ಸಹ ನಿರ್ಬಂಧ ವಿಧಿಸಲಾಗಿದೆ.

ನದಿ ಪ್ರವಾಹದಿಂದ ಶ್ರೀರಂಗಪಟ್ಟಣದ ಕಾವೇರಿ ನದಿ ತಟದ ಪಶ್ಚಿಮವಾಹಿನಿ, ಸ್ನಾನಘಟ್ಟ, ಸಂಗಮ ಸೇರಿ ಹಲವು ಪ್ರದೇಶ ಜಲಾವೃತವಾಗಿದ್ದು, ಕಾವೇರಿ ನದಿ ತಟದಲ್ಲಿರುವ ನಿಮಿಷಾಂಭ ದೇಗುಲದ ಬಳಿ ನದಿ ಬಳಿಗೆ ತೆರಳಲು ಜನರಿಗೆ ನಿರ್ಬಂಧ ವಿಧಿಸಲಾಗಿದೆ.

ನಿಮಿಷಾಂಭ ದೇಗುಲದ ಬಳಿ ಭಕ್ತರ ಸ್ನಾನಘಟ್ಟ ಹಾಗೂ ಸ್ನಾನಗೃಹ ಜಲಾವೃತವಾಗಿದ್ದು, ಪಶ್ಚಿಮ ವಾಹಿನಿ ಹಾಗೂ ಸ್ನಾನಘಟ್ಟ ಶ್ರದ್ಧಾ ಕೇಂದ್ರ ಬಹುತೇಕ ಮುಳುಗಡೆಯಾಗಿದೆ.

ಚೆಕ್‌ಪೋಸ್ಟ್ ಬಳಿಯ ಸಾಯಿಮಂದಿರಕ್ಕೂ ಕಾವೇರಿ ನದಿ ಪ್ರವಾಹದ ನೀರು ನುಗ್ಗಿದ್ದು, ನದಿ ಪಾತ್ರದ ರೈತರ ಜಮೀನು ಪ್ರವಾಹದಿಂದ ಮುಳುಗಡೆಯಾಗಿವೆ.

ಶ್ರೀರಂಗಪಟ್ಟಣದ ಬಳಿಯ ವೆಲ್ಲೆಸ್ಲಿ ಸೇತುವೆ ಮುಳುಗಡೆ ಹಂತದಲ್ಲಿ ತಲುಪಿದ್ದು, ಈ ಸೇತುವೆ ಮೇಲೆ ಜನ ಮತ್ತು ವಾಹನ ಸಂಚಾರವನ್ನು ನಿರ್ಬಂಧಿಸಿ ತಹಶೀಲ್ದಾರ್ ಆದೇಶ ಹೊರಡಿಸಿದ್ದಾರೆ.

ಶ್ರೀರಂಗಪಟ್ಟಣದ ಬಳಿ ಕಾವೇರಿ ನದಿ ಅಪಾಯದ ಮಟ್ಟ ಮೀರಿ ಹರಿಯುತ್ತಿದ್ದು, ಪ್ರವಾಹ ಪರಿಸ್ಥಿತಿ ಎದುರಿಸಲು ಜಿಲ್ಲಾಡಳಿತ ಮತ್ತು ತಾಲ್ಲೂಕು ಆಡಳಿತ ಸಕಲ ಸಿದ್ಧತೆ ನಡೆಸಿದೆ.

ಆಂದೋಲನ ಡೆಸ್ಕ್

Recent Posts

ಐತಿಹಾಸಿಕ ಕ್ಷಣ | ಆಸ್ಕರ್‌ ರೇಸ್‌ನಲ್ಲಿ ಕಾಂತಾರ ಚಾಪ್ಟರ್‌-1

ಬೆಂಗಳೂರು : ಕನ್ನಡ ಚಿತ್ರರಂಗದಲ್ಲಿ ಹೊಸ ಅಲೆಯನ್ನೇ ಸೃಷ್ಟಿ ಮಾಡಿದ ರಿಷಬ್ ಶೆಟ್ಟಿ ಅಭಿನಯದ ಕಾಂತಾರ ಚಾಪ್ಟರ್ 1 ಚಿತ್ರವು…

10 mins ago

ವಂಚನೆ ಪ್ರಕರಣ | ವಿಚಾರಣೆಗೆ ಹಾಜರಾಗುವಂತೆ ಮಾಜಿ ಸಚಿವ ನಾಗೇಂದ್ರಗೆ ಸಿಬಿಐ ನೋಟಿಸ್‌

ಬೆಂಗಳೂರು : ಕರ್ನಾಟಕ ಮಹರ್ಷಿ ವಾಲ್ಮೀಕಿ ಅಭಿವೃದ್ಧಿ ನಿಗಮದಲ್ಲಿ ನಡೆದಿದೆ ಎನ್ನಲಾದ ಬಹುಕೋಟಿ ವಂಚನೆ ಪ್ರಕರಣ ಸಂಬಂಧ ಮಾಜಿ ಸಚಿವ…

17 mins ago

ದಳಪತಿ ವಿಜಯ್‌ಗೆ ಬಿಗ್‌ ರಿಲೀಫ್‌ : ಜನನಾಯಗನ್‌ ಚಿತ್ರಕ್ಕೆ U/A ಸರ್ಟಿಫಿಕೇಟ್‌ ನೀಡುವಂತೆ ಹೈಕೋರ್ಟ್‌ ಆದೇಶ

ಚೆನ್ನೈ : ದಳಪತಿ ವಿಜಯ್ ಅವರ ಮುಂಬರುವ ಚಿತ್ರ ಜನ ನಾಯಗನ್‍ಗೆ ಸೆನ್ಸಾರ್ ಪತ್ರ ನೀಡುವಂತೆ ಮದ್ರಾಸ್ ಹೈಕೋರ್ಟ್ ಮಹತ್ವದ…

43 mins ago

ದಾಖಲೆಯ ವೀಕ್ಷಣೆ ಕಂಡ ‘ಟಾಕ್ಸಿಕ್’ ಟೀಸರ್ ; ನಿಲ್ಲದ ʻರಾಯʼನ ಅಬ್ಬರ

ಬೆಂಗಳೂರು : ರಾಕಿ ಬಾಯ್ ಯಶ್ ನಟನೆಯ ‘ಟಾಕ್ಸಿಕ್’ ಟೀಸರ್ 24 ಗಂಟೆಯಲ್ಲಿ ಬರೋಬ್ಬರಿ 200 ಮಿಲಿಯನ್ ಅಂದರೆ 20…

1 hour ago

ಬಳ್ಳೂರುಹುಂಡಿಯಲ್ಲಿ ಕಾಡಾನೆಗಳ ಹಾವಳಿ : ಸಲಗಗಳ ಕಾಟಕ್ಕೆ ಬೇಸತ್ತ ಜನ

ನಂಜನಗೂಡು : ಇತ್ತೀಚಿನ ದಿನಗಳಲ್ಲಿ ನಂಜನಗೂಡಿನ ಕಾಡಂಚಿನ ಭಾಗಗಳಲ್ಲಿ ಆನೆ ಹಾವಳಿ ಹೆಚ್ಚಾಗಿದೆ. ಕಾಡಾನೆಗಳಿಂದ ತಮ್ಮ ಕೃಷಿ ಉಳಿಸುವ ಜೊತೆಗೆ…

3 hours ago

ಬಿಳಿರಂಗನಬೆಟ್ಟದಲ್ಲಿ ಅಗ್ನಿ ಅವಘಡ : ಹೊತ್ತಿ ಉರಿದ ಹೋಟೆಲ್‌, ಅಂಗಡಿ ಮಳಿಗೆಗಳು

ಚಾಮರಾಜನಗರ : ಅಗ್ನಿ ಅವಘಡ ಸಂಭವಿಸಿ ಹತ್ತಾರು ಅಂಗಡಿ ಮಳಿಗೆಗಳು ಸುಟ್ಟು ಭಸ್ಮ ಆಗಿರುವ ಘಟನೆ ಬಿಳಿಗಿರಿರಂಗನ ಬೆಟ್ಟದಲ್ಲಿ ಶುಕ್ರವಾರ…

3 hours ago