ಮಂಡ್ಯ: ಜಿಲ್ಲೆಯಲ್ಲಿ 5 ಲಕ್ಷ ಹೆಕ್ಟೇರ್ ಪ್ರದೇಶಕ್ಕಿಂತ ಹೆಚ್ಚು ವಿಸ್ತೀರ್ಣದಲ್ಲಿ ವಿವಿಧ ಬೆಳೆಗಳನ್ನು ಬೆಳೆಯಲಾಗಿದೆ, ಅಗತ್ಯಕ್ಕಿಂತ ಹೆಚ್ಚಿನ ಪ್ರಮಾಣದಲ್ಲಿ 1.70 ಲಕ್ಷ ಮೆಟ್ರಿಕ್ ಟನ್ ರಸಗೊಬ್ಬರ ಬಳಕೆ ಮಾಡಲಾಗಿದೆ ಎಂದು ಕೃಷಿ ಇಲಾಖೆಯ ಜಂಟಿ ನಿರ್ದೇಶಕ ಅಶೋಕ್ ಹೇಳಿದರು.
ಇಂದು ಶ್ರೀರಂಗಪಟ್ಟಣ ದಸರಾ ಅಂಗವಾಗಿ ಕೃಷಿ ಇಲಾಖೆಯ ವತಿಯಿಂದ ಆಯೋಜಿಸಲಾಗಿದ್ದ ರೈತ ದಸರಾ ಕಾರ್ಯಕ್ರಮದ ಕುರಿತು ಮಾತನಾಡಿದ ಅವರು, ರಾಜ್ಯದಲ್ಲಿ ಅತಿ ಹೆಚ್ಚು ಯೂರಿಯಾ ಬಳಸುವ ಜಿಲ್ಲೆಗಳಲ್ಲಿ ಮಂಡ್ಯ ಸಹ ಒಂದಾಗಿದೆ. ಅತಿಯಾದ ಯೂರಿಯಾ ಬಳಕೆಯಿಂದ ಭೂಮಿಯ ಫಲವತ್ತತೆ ಹಾಗೂ ಬೆಳೆಯ ಗುಣಮಟ್ಟ ಕುಂದುತ್ತದೆ ಎಂದು ಹೇಳಿದರು.
ರಾಷ್ಟ್ರೀಯ ನೈಸರ್ಗಿಕ ಕೃಷಿ ಪದ್ದತಿಯನ್ನು ಸದರಿ ವರ್ಷ ಜಾರಿಗೊಳಿಸಲಾಗಿದೆ. ಯಾವುದೇ ರಾಸಾಯನಿಕ ಗೊಬ್ಬರ ಬಳಸದೆ ಸಾವಯವ ಗೊಬ್ಬರ ಉಪಯೋಗಿಸಿ ಎಂದರು.
ರೈತರು ರಾಸಾಯನಿಕ ಗೊಬ್ಬರ ಬಳಸಿ ಅಧಿಕ ಇಳುವರಿ ಪಡೆಯಬಹುದು ಆದರೆ ಉತ್ತಮ ಗುಣಮಟ್ಟದ ಬೆಳೆ ಬೆಳೆಯಲು ಸಾಧ್ಯವಿಲ್ಲ, ಸಾವಯವ ಗೊಬ್ಬರ ಬಳಸುವುದರಿಂದ ಉತ್ತಮ ಗುಣಮಟ್ಟದ ಬೆಳೆ ಹಾಗೂ ಬೆಲೆಯನ್ನು ಪಡೆಯಬಹುದು ಎಂದು ತಿಳಿಸಿದರು.
ಬೆಲ್ಲದ ನಾಡು ರೈತ ಉತ್ಪಾದಕ ಸಂಸ್ಥೆಯ ಅಧ್ಯಕ್ಷ ಕರಸವಾಡಿ ಮಹಾದೇವ ಅವರು ಮಾತನಾಡಿ, ಜಿಲ್ಲೆಯ ಬಸರಾಳು ರೈತ ಉತ್ಪಾದಕ ಕಂಪನಿ 6 ಕೋಟಿಗೂ ಅಧಿಕ ವಹಿವಾಟು ಮಾಡಿದೆ, ಪ್ರಗತಿ ಪರ ಕೃಷಿಕರಿಗೆ ಇದು ಒಂದು ಪ್ರೇರಣೆ, ರೈತರು ಸಾವಯವ ಕೃಷಿ ಪದ್ಧತಿ ಅನುಸರಿಸಿ ಬೆಳೆ ಬೆಳೆಯಿರಿ, ರಾಸಾಯನಿಕ ಮುಕ್ತ ಬೆಳೆಗಳಿಗೆ ದೇಶ ವಿದೇಶಗಳಲ್ಲಿ ಉತ್ತಮ ಬೆಲೆ ಇದೆ, ರೈತರು ಬೆಳೆದ ಬೆಳೆಯನ್ನು ಬ್ರ್ಯಾಂಡಿಂಗ್ ಮತ್ತು ಪ್ಯಾಕಿಂಗ್ ಮಾಡಲು ಕೃಷಿ ಇಲಾಖೆ ಸಹಾಯಧನ ನೀಡುತ್ತದೆ ಎಂದು ತಿಳಿಸಿದರು.
ನೇಸರ ಆಗ್ರಿ ಸಂಸ್ಥೆಯ ಸಂಸ್ಧಾಪಕಿ ರೇಷ್ಮಾ ರಾಣಿ ಅವರು ಮಾತನಾಡಿ, ಒಂದೇ ಬಾರಿ ಸಾವಯವ ಕೃಷಿ ಮಾಡಲು ಕಷ್ಟವಾಗಬಹುದು ನಿಮ್ಮ ಬಳಿ ಇರುವ ಜಾಗದಲ್ಲಿ ಅರ್ಧ ಭಾದಲ್ಲಿ ನಿತ್ಯದ ಕೃಷಿ ಪದ್ಧತಿ ಬಳಸಿ ಬೆಳೆ ಬೆಳೆಯಿರಿ, ಉಳಿದ ಅರ್ಧ ಜಾಗದಲ್ಲಿ ಸಾವಯಾವ ಕೃಷಿ ಪದ್ಧತಿ ಅಳವಡಿಸಿಕೊಳ್ಳಿ, ಸಾವಯಾವ ಕೃಷಿ ಪದ್ಧತಿಯನ್ನು ಅಳವಡಿಸಿಕೊಳ್ಳುವುದರಿಂದ ನಮ್ಮ ಪರಿಸರ, ಆರೋಗ್ಯವನ್ನು ಕಾಪಾಡಿಕೊಳ್ಳಬಹುದು, ಮುಂದಿನ ಪೀಳಿಗೆಗೆ ಉತ್ತಮ ವಾತಾವರಣ ನಿರ್ಮಾಣ ಮಾಡಬಹುದು ಎಂದು ಅರ್ಥ ಮಾಡಿಕೊಂಡು ಮುಂದೆ ಸಾವಯವ ಕೃಷಿ ಅಳವಡಿಸಿಕೊಳ್ಳಬಹುದು ಎಂದರು.
ಭಾರತದಲ್ಲಿ 5 ಗ್ಲೋಬಲ್ ಗ್ಯಾಪ್ (Good agricultural practices) ಸಂಸ್ಥೆ ಕಾರ್ಯ ನಿರ್ವಹಿಸುತ್ತಿವೆ, ರೈತರು ಇವರ ಬಳಿ ಹೋಗಿ ಬೆಳೆಯನ್ನು ಪ್ರಮಾಣಿಕರಿಸದರೆ ಅವರು ಬೆಳೆಯುವ ಬೆಳೆಗೆ ಉತ್ತಮ ಬೆಲೆ ಸಿಗುತ್ತದೆ ಎಂದು ಹೇಳಿದರು.
ಪಶು ವೈದ್ಯಕೀಯ ವಿಶ್ವವಿದ್ಯಾನಿಲಯದ ಸಹ ಪ್ರಾಧ್ಯಾಪಕರಾದ ಡಾ. ಹೆಚ್.ಎಸ್ ಮಧುಸೂದನ್ ಅವರು ಮಾತನಾಡಿ, ರೈತರು ತಾವು ಬೆಳೆಯುವ ಬೆಳೆಗಳಿಂದ ಕೆಲವು ಬಾರಿ ಲಾಭ ಕಾಣದೇ ಇರಬಹುದು, ಆದರೆ ಪಶು ಸಂಗೋಪನೆಯಲ್ಲಿ ನೀವು ಲಾಭಗಳಿಸದಿರಲು ಸಾಧ್ಯವಿಲ್ಲ, ಹಸು ಹಾಲು ಉತ್ಪಾದನೆಯನ್ನು ಹೆಚ್ಚಿಸಲು ಶಕ್ತಿ ಹೆಚ್ಚಿಸಲು ಸಾರಜನಕ, ಕೊಬ್ಬು, ನಾರು ಮತ್ತು ಲವಣಾಂಶ ಪೋಷಕಾಂಶಗಳು ಅತ್ಯಗತ್ಯ, ಪಶು ಆಸ್ಪತ್ರೆಗಳಲ್ಲಿ ಕೊಕು ಮಾತ್ರೆ ದೊರೆಯುತ್ತದೆ. ಕೊಕು ಮಾತ್ರೆ ಜಿಂಕ್ ಅಂಶವನ್ನು ಹೊಂದಿರುತ್ತದೆ. ಜಿಂಕ್ ರೋಗ ನಿರೋಧಕ ಶಕ್ತಿ ಹೆಚ್ಚಿಸುತ್ತದೆ, ಇದರ ಜೊತೆ ಹಸಿ ಹುಲ್ಲು, ಜೋಳ ದಂತಹ ಆಹಾರವನ್ನು ನೀಡುವುದರಿಂದ ಹಾಲಿನ ಗುಣಮಟ್ಟ ಹೆಚ್ಚುತ್ತದೆ ಎಂದರು.
ಕಾರ್ಯಕ್ರಮದಲ್ಲಿ ಶ್ರೀರಂಗಪಟ್ಟಣ ತಹಶೀಲ್ದಾರ್ ಚೇತನ ಯಾದವ್, ಕೃಷಿ ತಜ್ಞರು ಹಾಗೂ ಜಿಲ್ಲೆಯ ವಿವಿಧ ರೈತ ಉತ್ಪಾದಕ ಕಂಪನಿಗಳ ಮಾಲೀಕ ಸೇರಿದಂತೆ ಇನ್ನಿತರ ಗಣ್ಯರು ಉಪಸ್ಥಿತರಿದ್ದರು.
ಹೊಸದಿಲ್ಲಿ : ಭಾರತೀಯ ರೈಲ್ವೆ ಇಲಾಖೆಯು ಡಿಸೆಂಬರ್ 26ರಿಂದ ಅನ್ವಯವಾಗುವಂತೆ ಹೊಸ ರೈಲು ಟಿಕೆಟ್ ದರವನ್ನು ಪರಿಷ್ಕರಣೆ ಮಾಡಿದೆ. ಪ್ರಯಾಣಿಕರಿಗೆ…
ಗುಂಡ್ಲುಪೇಟೆ : ತಾಲ್ಲೂಕಿನ ಮುಕ್ತಿ ಕಾಲೋನಿ ಗ್ರಾಮದ ಜಮೀನೊಂದರ ಬಾಳೆ ತೋಟದಲ್ಲಿ ಹುಲಿ ಕಾಣಿಸಿಕೊಂಡಿದ್ದು ಜನರು ಕಿರುಚಾಡಿ, ಪಟಾಕಿ ಸಿಡಿಸಿದರೂ…
ಮೈಸೂರು : ವನ್ಯಜೀವಿ ಛಾಯಾಗ್ರಹಣ ಹಾಗೂ ಸಾಕ್ಷ್ಯಚಿತ್ರ ತಯಾರಕರಾಗುವ ಮೊದಲು ಕಾಡಿನ ಭಾಷೆ ಅರಿತುಕೊಂಡಿರಬೇಕು ಎಂದು ವನ್ಯಜೀವಿ ಛಾಯಾಗ್ರಾಹಕರಾದ ಕೃಪಾಕರ್…
ಮೈಸೂರು : ಮುಂಜಾನೆಯ ಚುಮುಚುಮು ಚಳಿಗೆ, ಸೂರ್ಯ ಇನ್ನೂ ಮಂಜಿನ ನಡುವೆ ಕಣ್ಣು ಬಿಡುವ ಮುನ್ನವೇ ಅರಮನೆಯ ಕೋಟೆ ಆಂಜನೇಯ…
ಕೊಪ್ಪಳ: ಯಾವುದೇ ಕ್ಷಣದಲ್ಲಿ ರಾಜ್ಯದಲ್ಲಿ ಅಧಿಕೃ ಹಸ್ತಾಂತರವಾಗಬಹುದು ಎಂದು ಶಾಸಕ ಜನಾರ್ಧನ ರೆಡ್ಡಿ ಭವಿಷ್ಯ ನುಡಿದಿದ್ದಾರೆ. ಈ ಕುರಿತು ಕೊಪ್ಪಳದಲ್ಲಿ…
ಕಲಬುರ್ಗಿ: ರಾಜ್ಯದಲ್ಲಿ ನಾಯಕತ್ವ ಗೊಂದಲವನ್ನು ಹೈಕಮಾಂಡ್ ಸೃಷ್ಟಿ ಮಾಡಿಲ್ಲ. ಲೋಕಲ್‌ನವರೇ ಮಾಡಿಕೊಂಡಿದ್ದಾರೆ. ಸ್ಥಳೀಯ ನಾಯಕರೇ ಇದನ್ನು ಬಗೆಹರಿಸಿಕೊಳ್ಳಬೇಕು. ಎಲ್ಲದಕ್ಕೂ ಹೈಕಮಾಂಡ್…