ಮಂಡ್ಯ

ಮಂಡ್ಯ | ಮೈಶುಗರ್ ಕಾರ್ಖಾನೆಗೆ ಮತ್ತೆ 10 ಕೋಟಿ ರೂ. ನೆರವು

ಮಂಡ್ಯ : ಮೈಷುಗರ್ ಸಕ್ಕರೆ ಕಾರ್ಖಾನೆಯು ಯಶಸ್ವಿಯಾಗಿ ಕಬ್ಬು ನುರಿಸಲು ಮೂರನೇ ಬಾರಿಗೆ 10 ಕೋಟಿ ರೂ.ಗಳ ನೆರವನ್ನು ನೀಡಿ ಸಹಕರಿಸಿರುವುದಕ್ಕೆ ಮುಖ್ಯಮಂತ್ರಿ ಸಿದ್ದರಾಮಯ್ಯ, ಜಿಲ್ಲಾ ಉಸ್ತುವಾರಿ ಸಚಿವ ಎನ್.ಚಲುವರಾಯಸ್ವಾಮಿ ಹಾಗೂ ಜಿಲ್ಲೆಯ ಎಲ್ಲಾ ಶಾಸಕರಿಗೆ ಅಭಿನಂದನೆ ಸಲ್ಲಿಸುವುದಾಗಿ ಮೈಷುಗರ್ ಅಧ್ಯಕ್ಷ ಸಿ.ಡಿ.ಗಂಗಾಧರ್ ತಿಳಿಸಿದರು.

ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬಂದಾಗಿನಿಂದ ಸತತವಾಗಿ ನೆರವು ನೀಡುತ್ತಿದ್ದು, ಕಳೆದ ಹಂಗಾಮಿನಲ್ಲಿ ಸರ್ಕಾರದ ಅನುದಾನ ಪಡೆಯದೇ ರೈತರಿಗೆ ಪೂರ್ಣ ಹಣವನ್ನು ಪಾವತಿ ಮಾಡಿ ಮೈಷುಗರ್ ಇತಿಹಾಸದಲ್ಲಿ ಮಾದರಿಯಾಗಿದ್ದೇವೆ ಎಂದು ಸುದ್ದಿಗೋಷ್ಠಿಯಲ್ಲಿ ಮಾಹಿತಿ ನೀಡಿದರು.

ತತ್ಸಂಬಂಧ 2023ರಲ್ಲಿ ಅಧಿಕಾರಕ್ಕೆ ಬಂದ ತಕ್ಷಣ ಮೈಷುಗರ್‌ಗೆ 50 ಕೋಟಿ ಅನುದಾನ ನೀಡಿಲಾಗಿತ್ತು, ಇತ್ತೀಚೆಗೆ 53 ಕೋಟಿ ವಿದ್ಯುತ್ ಬಿಲ್ ಮನ್ನ ಮಾಡಿದ ಸರ್ಕಾರ ಇದೀಗ 10 ಕೋಟಿ ರೂ. ನೆರವನ್ನು ನೀಡಿದೆ. ಈ ಬಾರಿಯೂ ಕಬ್ಬು ನಾಟಿ ಮಾಡಿದ ಹಿರಿತನದ ಆಧಾರದಲ್ಲಿ ನೊಂದಣಿಯಾಗಿರುವ ಕಬ್ಬನ್ನು ಯಶಸ್ವಿಯಾಗಿ ನುರಿಯಲಿದ್ದೇವೆ ಎಂದು ಹೇಳಿದರು.

ಒಪ್ಪಿಗೆಯಾಗಿರುವ ಕಬ್ಬನ್ನು ಯಶಸ್ವಿ ಯಾಗಿ ಅರೆಯುವ ಮೂಲಕ ಈ ಬಾರಿ ಪಡೆಯುವ ನೆರವಿನಲ್ಲಿ ಕನಿಷ್ಠ 4 ಕೋಟಿ ರೂಗಳನ್ನು ಹಿಂದಿರುಗಿಸುವ ಮೂಲಕ ಇತಿಹಾಸ ಬರೆಯುವ ಯೋಜನೆ ರೂಪಿಸಿಕೊಂಡಿರುವುದಾಗಿ ಪ್ರಶ್ನೆಗೆ ಉತ್ತರ ನೀಡಿದ ಅವರು, ನಗರ ವ್ಯಾಪ್ತಿಯಲ್ಲಿ ಮೈಷುಗರ್ ಕಂಪನಿಗೆ ಸೇರಬೇಕಾದ ಆರೂವರೆಯಿಂದ ಏಳು ಎಕರೆ ಹಾಗೂ ಕಂದಾಯ ವ್ಯಾಪ್ತಿಯ 20ರಿಂದ 30 ಎಕರೆ ಒತ್ತುವರಿ ಭೂಮಿಯನ್ನು ತೆರವುಗೊಳಿಸಲು ಕ್ರಮ ವಹಿಸಲಾಗುವುದು. ವಾಣಿಜ್ಯವಾಗಿ ಇಂದಿನ ದರದಂತೆ ಬಾಡಿಗೆ ನೀಡುವುದಾದರೆ ಅವರಿಗೇ ಬಾಡಿಗೆಗೆ ನೀಡಲಾಗುವುದು ಎಂದು ತಿಳಿಸಿದರು.

ಜು.28ರಂದು ಮದ್ದೂರಿನಲ್ಲಿ ವಿವಿಧ ಅಭಿವೃದ್ಧಿ ಕಾಮಗಾರಿಗಳ ಚಾಲನೆ ಹಾಗೂ ಉದ್ಘಾಟನೆಗೆ ಮುಖ್ಯಮಂತ್ರಿಗಳು, ಉಪ ಮುಖ್ಯಮಂತ್ರಿಗಳು, ಜಿಲ್ಲಾ ಉಸ್ತುವಾರಿ ಸಚಿವರು ಸೇರಿದಂತೆ ಸಂಪುಟದ ಅನೇಕ ಸಚಿವರು ಆಗಮಿಸಲಿದ್ದು, ಸದರಿ ಕಾರ್ಯ ಕ್ರಮದಲ್ಲಿ ಹೆಚ್ಚಿನ ಸಂಖ್ಯೆಯ ಸಾರ್ವಜನಿಕರು ಭಾಗವಹಿಸುವಂತೆ ಮನವಿ ಮಾಡಿದರು.

ಗೋಷ್ಟಿಯಲ್ಲಿ ಕೆ.ಸುರೇಶ್, ಶ್ರೀಧರ್, ವೀಣಾ ಶಂಕರ್, ಉದಯ್, ದೇವಯ್ಯ, ಸಿ.ಎಂ.ದ್ಯಾವಪ್ಪ, ನಾಗರಾಜು ಇದ್ದರು.

ಆಂದೋಲನ ಡೆಸ್ಕ್

Recent Posts

ವಿಷ ಕುಡಿದು ವ್ಯಕ್ತಿ ಆತ್ಮಹತ್ಯೆ: ಗರಿಕೆ ಖಂಡಿ ಅರಣ್ಯದಲ್ಲಿ ಶವ ಪತ್ತೆ

ಹನೂರು: ವಿಷ ಕುಡಿದು ವ್ಯಕ್ತಿಯೊಬ್ಬರು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ರಾಮಪುರ ಪೊಲೀಸ್ ಠಾಣೆ ವ್ಯಾಪ್ತಿಯ ಗರಿಕೆಕಂಡಿ ಅರಣ್ಯ ಪ್ರದೇಶದಲ್ಲಿ ನಡೆದಿದೆ.…

5 hours ago

ಕಾಂಗ್ರೆಸ್‌ ನಾಯಕ ರಾಹುಲ್‌ ಗಾಂಧಿ ಭೇಟಿಯಾದ ಮಾಜಿ ಸಿಎಂ ಸಿದ್ದರಾಮಯ್ಯ

ನವದೆಹಲಿ: ದೆಹಲಿ ಪ್ರವಾಸದಲ್ಲಿರುವ ಮಾಜಿ ಸಿಎಂ ಸಿದ್ದರಾಮಯ್ಯ ಅವರು ಇಂದು ಕಾಂಗ್ರೆಸ್‌ ನಾಯಕ ರಾಹುಲ್‌ ಗಾಂಧಿ ಅವರನ್ನು ಭೇಟಿಯಾಗಿದ್ದಾರೆ. ನಿನ್ನೆ…

6 hours ago

ಶ್ರಾವಣ ಮಾಸದ ಕೊನೆಯ ದಿನದ 108 ಕುಂಭಾಭಿಷೇಕ: ಮಲೆ ಮಹದೇಶ್ವರ ಕ್ಷೇತ್ರದಲ್ಲಿ ಭಕ್ತಿ ವೈಭವ

ಹನೂರು: ಸುಕ್ಷೇತ್ರ ಶ್ರೀ ಮಲೆ ಮಹದೇಶ್ವರ ಸ್ವಾಮಿ ಕ್ಷೇತ್ರದಲ್ಲಿ ಶ್ರಾವಣ ಮಾಸದ ಸಮಾರೋಪದ ಅಂಗವಾಗಿ 108 ಕುಂಭಾಭಿಷೇಕ ಮಹೋತ್ಸವ ಹಾಗೂ…

7 hours ago

ಹನೂರು| ದ್ವಿಚಕ್ರ ವಾಹನಕ್ಕೆ ಕಾರು ಡಿಕ್ಕಿ: ಮೂವರು ಯುವಕರು ದುರ್ಮರಣ

ಮಹಾದೇಶ್‌ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ಕೊಪ್ಪ ಗ್ರಾಮದಿಂದ ಕೊಳ್ಳೇಗಾಲಕ್ಕೆ ತೆರಳುತ್ತಿದ್ದ ದ್ವಿಚಕ್ರ ವಾಹನಕ್ಕೆ ಕಾರು ಡಿಕ್ಕಿ…

7 hours ago

ಓದುಗರ ಪತ್ರ: ದಸರಾ ಚಿತ್ರೋತ್ಸವ ಮುಂದುವರಿಯಲಿ

ಮೈಸೂರು ದಸರಾ ನಮ್ಮ ನಾಡಿನ ಹೆಮ್ಮೆ. ಈ ನಾಡಹಬ್ಬದಲ್ಲಿ ದಸರಾ ಚಿತ್ರೋತ್ಸವವನ್ನು ರದ್ದುಪಡಿಸಿರುವ ನಿರ್ಧಾರ ಖಂಡನೀಯ. ಈ ನಿರ್ಧಾರವನ್ನು ಮರುಪರಿಶೀಲಿಸಿ…

13 hours ago

ಓದುಗರ ಪತ್ರ: ಫಿಲಂ ಸಿಟಿ ಯೋಜನೆ ಆದಷ್ಟು ಬೇಗ ಕಾರ್ಯರೂಪಕ್ಕೆ ಬರಲಿ

ಮೈಸೂರು ಜಿಲ್ಲೆಯ ಇಮ್ಮಾವು ಬಳಿ ಅಂತರಾಷ್ಟ್ರೀಯ ದರ್ಜೆಯ ಫಿಲಂ ಸಿಟಿ ನಿರ್ಮಿಸುವ ಬಗ್ಗೆ ಮೈಸೂರು ಜಿ ಉಸ್ತುವಾರಿ ಸಚಿವರಾದ ಯತೀಂದ್ರ…

13 hours ago