ಮಂಡ್ಯ

ಮಳೆಯಿಂದಾಗಿ ರಾಜ್ಯದಲ್ಲಿ 12 ಲಕ್ಷ ಹೆಕ್ಟೇರ್‌ ಬೆಳೆಹಾನಿ: ಸಚಿವ ಚಲುವರಾಯಸ್ವಾಮಿ

ಮಂಡ್ಯ: ಭಾರೀ ಮಳೆಯಿಂದಾಗಿ ರಾಜ್ಯದಲ್ಲಿ 12 ಲಕ್ಷ ಹೆಕ್ಟೇರ್‌ ಬೆಳೆ ಹಾನಿಯಾಗಿದೆ ಎಂದು ಕೃಷಿ ಸಚಿವ ಚೆಲುವರಾಯಸ್ವಾಮಿ ತಿಳಿಸಿದರು.

ಕೃಷಿ ಹಾಗೂ ಮಂಡ್ಯ ಜಿಲ್ಸಾ ಉಸ್ತುವಾರಿ ಸಚಿವ ಎನ್.ಚಲುವರಾಯಸ್ವಾಮಿ, ಮಂಡ್ಯ ಕ್ಷೇತ್ರದ ಶಾಸಕರಾದ ರವಿಕುಮಾರ್ ಗಣಿಗ ಸೇರಿದಂತೆ ಮಂಡ್ಯ ನಗರದ ಕೆಹೆಚ್‌ಬಿ ಕಾಲೋನಿ ಪ್ರದೇಶಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದರು.

ಮಂಡ್ಯ ಜಿಲ್ಲೆಯಲ್ಲಿ ಮಳೆಹಾನಿ ಪರಿಶೀಲನೆ ನಡೆಸಿದ ಬಳಿಕ ಮಾತನಾಡಿದ ಕೃಷಿ ಸಚಿವ ಚಲುವರಾಯಸ್ವಾಮಿ ಅವರು, ನಿನ್ನೆ ಮೊನ್ನೆಯಿಂದ ಮಂಡ್ಯದಲ್ಲೂ ಸಾಕಷ್ಟು ಮಳೆಯಾಗಿದೆ. ಶ್ರೀರಂಗಪಟ್ಟಣದ ದರಸಗುಪ್ಪೆ ಬಳಿ ಸಿಡಿಎಸ್‌ ನಾಲೆ ಒಡೆದಿದೆ. ರವಿ ಶಾಸಕರಾದ ಬಳಿಕ ತಡೆಗೋಡೆ ನಿರ್ಮಾಣ ಮಾಡಿಸಿದ್ದರು. ತಡೆಗೋಡೆ ನಿರ್ಮಾಣದಿಂದ ಹೆಚ್ಚಿನ ತೊಂದರೆ ಆಗುತ್ತಿಲ್ಲ. ರಸ್ತೆ, ಒಳಚರಂಡಿ ಕಾಮಗಾರಿ ಶೀಘ್ರ ಆರಂಭಿಸುತ್ತೇವೆ ಎಂದು ಹೇಳಿದರು.

ಮೊನ್ನೆಯ ಮಳೆಗೆ ಮಂಡ್ಯ ಜಿಲ್ಲೆಯಲ್ಲಿ 80 ಹೆಕ್ಟೇರ್‌ ಪ್ರದೇಶದಲ್ಲಿ ಬೆಳೆಹಾನಿಯಾಗಿದೆ. ರಾಜ್ಯದಲ್ಲಿ 12 ಲಕ್ಷ ಹೆಕ್ಟೇರ್‌ ಬೆಳೆ ಹಾನಿಯಾಗಿದ್ದು ಕೂಡಲೇ ಬೆಳೆಹಾನಿ ಬಗ್ಗೆ ಸರ್ವೆ ಮಾಡಿಸಿ ಪರಿಹಾರ ನೀಡುತ್ತೇವೆ ಎಂದು ಸಚಿವರು ತಿಳಿಸಿದರು.

ಆಂದೋಲನ ಡೆಸ್ಕ್

Recent Posts

ಮುಡುಕುತೊರೆ ಜಾತ್ರೆ : ಪೋಸ್ಟರ್ ಬಿಡುಗಡೆಗೊಳಿಸಿದ ಸಚಿವ ಎಚ್‌ಸಿಎಂ

ಮೈಸೂರು : ಮುಡುಕುತೊರೆ ಭ್ರಮರಾಂಬ ಸಮೇತ ಶ್ರೀ ಮಲ್ಲಿಕಾರ್ಜುನಸ್ವಾಮಿ ಜಾತ್ರಾ ಮಹೋತ್ಸವದ ಅಂಗವಾಗಿ ಧಾರ್ಮಿಕ ಮತ್ತು ದತ್ತಿ ಇಲಾಖೆ ಹಾಗೂ…

7 mins ago

ಗುರಿ ಇಟ್ಟುಕೊಂಡು ನಿರಂತರ ಓದಿ : ಪಿಯುಸಿ ವಿದ್ಯಾರ್ಥಿಗಳಿಗೆ ನಿಶಾಂತ್‌ ಸಲಹೆ

ಹನೂರು : ಪ್ರತಿಯೊಬ್ಬ ವಿದ್ಯಾರ್ಥಿಗೂ ದ್ವಿತೀಯ ಪಿಯುಸಿ ಒಂದು ಪ್ರಮುಖ ಘಟವಾಗಿದ್ದು, ವಿದ್ಯಾರ್ಥಿಗಳು ತಮ್ಮ ಜೀವನವನ್ನು ರೂಪಿಸಿಕೊಳ್ಳುವಲ್ಲಿ ಒಂದು ಗುರಿ…

42 mins ago

ಉತ್ತರ ಪ್ರದೇಶದಲ್ಲಿ ಭಾರತೀಯ ವಾಯುಪಡೆಯ ವಿಮಾನ ಪತನ: ಇಬ್ಬರು ಪೈಲಟ್‌ಗಳು ಬಚಾವ್‌

ಉತ್ತರ ಪ್ರದೇಶ: ಇಲ್ಲಿನ ಪ್ರಯಾಗ್‌ರಾಜ್‌ನಲ್ಲಿ ತರಬೇತಿ ಹಾರಾಟ ನಡೆಸುತ್ತಿದ್ದಾಗ ಭಾರತೀಯ ವಾಯುಪಡೆಯ ಮೈಕ್ರೋಲೈಟ್‌ ವಿಮಾನವೊಂದು ಅಪಘಾತಕ್ಕೀಡಾಗಿದೆ. ವಿಮಾನದಲ್ಲಿದ್ದ ಇಬ್ಬರೂ ಪೈಲಟ್‌ಗಳನ್ನು…

2 hours ago

ನೈಸರ್ಗಿಕ ಕೃಷಿ ಪದ್ಧತಿ ಎಲ್ಲರ ಪಾಲಿಗೆ ಜೀವನೋಪಾಯವಾಗಲಿ: ಡಾ. ಶರಣ ಪ್ರಕಾಶ್‌ ಪಾಟೀಲ್

ಬೆಂಗಳೂರು: ಕರ್ನಾಟಕದಲ್ಲಿ ಜೀವನೋಪಾಯಕ್ಕೆ ಅದರಲ್ಲೂ ಮಹಿಳೆಯರ ಜೀವನೋಪಾಯಕ್ಕೆ ಹೆಚ್ಚು ಆದ್ಯತೆ ನೀಡಲಾಗುತ್ತಿದೆ. ಇದರ ಜೊತೆಗೆ ನೃಸರ್ಗಿಕ ಕೃಷಿ ಪದ್ಧತಿಯ ಬಗ್ಗೆ…

2 hours ago

ಚಾಮುಂಡಿಬೆಟ್ಟದ ಪಾರಂಪರಿಕತೆಗೆ ಧಕ್ಕೆಯಾಗದಂತೆ ಅಭಿವೃದ್ಧಿ: ಡಾ.ಹೆಚ್.ಸಿ.ಮಹದೇವಪ್ಪ

ಮೈಸೂರು: ಪ್ರಸಾದ್ ಯೋಜನೆಯಡಿ ಚಾಮುಂಡಿ ಬೆಟ್ಟದ ಪಾರಂಪರಿಕತೆಗೆ ಯಾವುದೇ ಧಕ್ಕೆ ಆಗದಂತೆ ಅಭಿವೃದ್ಧಿ ಮಾಡಲಾಗುವುದು ಎಂದು ಸಮಾಜ ಕಲ್ಯಾಣ ಇಲಾಖೆಯ…

2 hours ago

ಅಶ್ಲೀಲ ಮೆಸೇಜ್‌ ಪ್ರಕರಣ: ವಿಚಾರಣೆಗೆ ಹಾಜರಾಗುವಂತೆ ದರ್ಶನ್‌ ಪತ್ನಿ ವಿಜಯಲಕ್ಷ್ಮೀಗೆ ಸಿಸಿಬಿ ನೋಟಿಸ್‌

ಬೆಂಗಳೂರು: ಸೋಷಿಯಲ್‌ ಮೀಡಿಯಾದಲ್ಲಿ ಅಶ್ಲೀಲ ಮೆಸೇಜ್‌, ಕಮೆಂಟ್‌ ಮಾಡಿ ನಿಂದಿಸಿದ ಆರೋಪಕ್ಕೆ ಸಂಬಂಧಿಸಿದಂತೆ ದರ್ಶನ್‌ ಪತ್ನಿ ವಿಜಯಲಕ್ಷ್ಮೀಗೆ ಸಿಸಿಬಿ ಪೊಲೀಸರು…

2 hours ago