ಮಂಡ್ಯ

ಮೋದಿ ಸರ್ಕಾರ ರಾಜ್ಯಕ್ಕೆ ಅನ್ಯಾಯ ಮಾಡಿದ್ದು ಬರೋಬ್ಬರಿ 1,85,468 ಕೋಟಿ: ಸಚಿವ ಕೃಷ್ಣ ಭೈರೇಗೌಡ

ಮಂಡ್ಯ: ನರೇಂದ್ರ ಮೋದಿ ನೇತೃತ್ವದ ಕೇಂದ್ರ ಸರ್ಕಾರ ಕರ್ನಾಟಕ ರಾಜ್ಯಕ್ಕೆ ಕಳೆದ 5 ವರ್ಷದ ಅವಧಿಯಲ್ಲಿ 1,85,468 ಕೋಟಿ ರೂಪಾಯಿಗಳ ತೆರಿಗೆ ವಂಚನೆ ಮಾಡಿದ್ದು, ಕೇಂದ್ರ ಹಣಕಾಸು ಆಯೋಗದ ಶಿಫಾರಸ್ಸಿನಂತೆ ಕನಿಷ್ಠ 11,495 ಕೋಟಿ ಪರಿಹಾರ ನೀಡಬೇಕೆಂಬ ಶಿಫಾರಸ್ಸನ್ನು ತಿರಸ್ಕರಿಸಿ ರಾಜ್ಯಕ್ಕೆ, ಗಾಯದ ಮೇಲೆ ಬರೆ ಎಳದಿದೆ ಎಂದು ಕಂದಾಯ ಸಚಿವ ಕೃಷ್ಣಭೇರೇಗೌಡ ಅಂಕಿ ಅಂಶಗಳನ್ನು ಸಭಿಕರ ಮುಂದಿಟ್ಟರು.

ನಗರದ ಕರ್ನಾಟಕ ರಾಜ್ಯ ರೈತ ಸಂಘ, ದಲಿತ ಸಂಘರ್ಷ ಸಮಿತಿ ಹಾಗೂ ಕರ್ನಾಟಕ ಜನಶಕ್ತಿ ಮತ್ತು ಜಾಗೃತಿ ಕರ್ನಾಟಕದ ವತಿಯಿಂದ ಆಯೊಜಿಸಿದ್ದ ‘ಕರ್ನಾಟಕಕ್ಕಾದ ತೆರಿಗೆ ಪಾಲಿನ ವಂಚನೆ ರೈತನ ಗಾಯದ ಮೇಲೆ ಬರೆ’ ಎಂಬ ವಿಚಾರಗೋಷ್ಠಿಯಲ್ಲಿ ಭಾಗವಹಿಸಿ ಮಾತನಾಡಿದರು.

2023-24 ನೇ ಸಾಲಿನ ಜಿಎಸ್‌ಟಿ ಪಾಲಿನ ತೆರಿಗೆ 32,192 ಕೋಟಿ, 15ನೇ ಹಣಕಾಸು ಆಯೋಗದ ಪಾಲು 11,376 ಕೋಟಿ, ಸೆಸೆ ಮತ್ತು ಸರ್‌ ಚಾರ್ಚ್‌ ನಷ್ಟ 8,263 ಕೋಟಿ ಸೇರಿ ಒಟ್ಟು 51,831 ಕೋಟಿ ಕೇಂದ್ರದಿಂದ ರಾಜ್ಯಕ್ಕೆ ಬರಬೇಕಾದ ತೆರಿಗೆ ಬಾಕಿ ಇದೆ ಎಂದು ಮಾಹಿತಿ ನೀಡಿದರು. ಇನ್ನೂ 2023-24 ನೇ ಸಾಲಿನ 52,092 ಕೋಟಿ ರೂ ತೆರಿಗೆ ರಾಜ್ಯಕ್ಕೆ ಬರಬೇಕಿದೆ ಎಂದು ಅಂಕಿ ಅಂಶ ಸಮೇತ ಸಾಬೀತು ಪಡಿಸಿದರು.

ಕೇಂದ್ರದ ತೆರಿಗೆಗೆ ಶೇ.40ರಷ್ಟು ಪಾಲು ನೀಡುವ ದಕ್ಷಿಣ ಭಾರತದ ರಾಜ್ಯಗಳನ್ನು ಕಡೆಗಣಿಸಿ, ಉತ್ತರ ಭಾರತದ ರಾಜ್ಯಗಳಿಗೆ ಹೆಚ್ಚು ಪಾಲಿ ನೀಡಿರುವ ಬಗ್ಗೆ ವಿವರಿಸಿದರು.

ಪ್ರಜಾಪ್ರಭುತ್ವ ಉಳಿದರೆ ಬಹುಸಂಖ್ಯಾತರಾಗಿರಯವ ರೈತರು, ದಲಿತರು, ಬಡವರು, ಶ್ರಮಿಕರು ಉಳಿಯುತ್ತಾರೆ. ಈ ಹಿನ್ನಲೆಯಲ್ಲಿ ರಾಜಕೀಯ ನಾಯಕರು ಸಾರ್ವಜನಿಕರಿಗೆ ಸತ್ಯದ ದರ್ಶನ ಮಾಡಿಸಬೇಕು ಎಂದು ಹೇಳಿದರು.

ವಿಚಾರಗೋಷ್ಠಿಯಲ್ಲಿ ಕೃಷಿ ಸಚಿವ ಎನ್‌ ಚಲುವರಾಯಸ್ವಾಮಿ, ಶಾಸಕರಾದ ಪಿ.ರವಿಕುಮಾರ್‌, ದರ್ಶನ್‌ ಪುಟ್ಟಣ್ಣಯ್ಯ, ದಿನೇಶ್‌ ಗೂಳಿಗೌಡ, ರೈತ ಸಂಘದ ರಾಜ್ಯದಕ್ಷ ಬಡಗಲಪುರ ನಾಗೇಂದ್ರ, ದಸಂಸ ಮುಖಂಡ ಗುರುಪ್ರಸಾದ್‌ ಕೆರಗೋಡು ಸೇರಿದ್ದಂತೆ ರೈತರು ಹಾಜರಿದ್ದರು

ಎನ್‌ ಎಂ ಪ್ರದ್ಯುಮ್ನ

ಮೈಸೂರು ಜಿಲ್ಲೆಯ ನಂಜನಗೂಡಿನವನಾದ ನಾನು, ಸದ್ಯ ಮೈಸೂರಿನಲ್ಲಿ ನೆಲೆಸಿದ್ದೇನೆ. 2011 ಮೈಸೂರಿನ ಮಹಾರಾಜಾ ಕಾಲೇಜಿನಲ್ಲಿ ಬಿಎ ಪತ್ರಿಕೋದ್ಯಮ ಮುಗಿಸಿದ ಬಳಿಕ ಪತ್ರಿಕೋದ್ಯಮ ಕ್ಷೇತ್ರದಲ್ಲಿ 8 ವರ್ಷಗಳ ಕಾಲ ಅನುಭವ ಪಡೆದಿದ್ದೇನೆ. ಮೈಸೂರಿನ ಪಾದೇಶಿಕ ಪತ್ರಿಕೆ ʼಹಲೋ ಮೈಸೂರುʼಯಿಂದ ಪ್ರಾರಂಭಿಸಿ, ಜನಶ್ರೀ(ಟಿವಿ), ಸಿರಿ(ಟಿವಿ), ವಿಶ್ವವಾಣಿ ಪತ್ರಿಕೆ, ಟಿವಿ-೯(ಟಿವಿ) ಸಂಸ್ಥೆಗಳಲ್ಲಿ ವರದಿಗಾರ, ಮುಖ್ಯ ವರದಿಗಾರ ಹಾಗೂ ಉಪ ಸಂಪಾದಕನಾಗಿ ಕೆಲಸ ಮಾಡಿದ್ದೇನೆ. ಪ್ರಿಂಟ್‌ ಮೀಡಿಯಾದಲ್ಲಿ 6 ವರ್ಷ ಹಾಗೂ ಎಲೆಕ್ಟ್ರಾನಿಕ್‌ ಮೀಡಿಯಾದಲ್ಲಿ 2 ವರ್ಷಗಳ ಕಾಲ ಅನುಭವ ಹೊಂದಿದ್ದು, ಸದ್ಯ ಮೈಸೂರಿನ ʼಆಂದೋಲನ ದಿನಪತ್ರಿಕೆʼಯ ಭಾಗವಾದ ʼಆಂದೋಲನ ಡಿಜಿಟಲ್‌ʼನಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ವೈಲ್ಡ್‌ಲೈಫ್‌ ಫೋಟೋಗ್ರಫಿ, ಪುಸ್ತಕ ಓದುವುದು ನನ್ನ ನೆಚ್ಚಿನ ಹವ್ಯಾಸಗಳಾಗಿವೆ.

Recent Posts

ಸಂಸತ್‌ ವಿಶೇಷ ಅಧಿವೇಶನ: ಮೂರು ಮಹತ್ವದ ಮಸೂದೆ ಮಂಡನೆ

ನವದೆಹಲಿ: ಇಂದಿನಿಂದ ಆರಂಭವಾಗಿರುವ ಸಂಸತ್ತಿನ ವಿಶೇಷ ಅಧಿವೇಶನದಲ್ಲಿ ಕೇಂದ್ರ ಸರ್ಕಾರವು ಮೂರು ಪ್ರಮುಖ ಮಸೂದೆಗಳನ್ನು ಮಂಡಿಸಿದೆ. ಸಂವಿಧಾನದ ತಿದ್ದುಪಡಿ ಮಸೂದೆ-2026,…

19 mins ago

ಪಶ್ಚಿಮಘಟ್ಟಗಳನ್ನು ಭವಿಷ್ಯದ ಪೀಳಿಗೆಯ ಜೀವನಾಡಿಯಾಗಿ ನೋಡಬೇಕು: ಸಚಿವ ಈಶ್ವರ ಖಂಡ್ರೆ

ಬೆಂಗಳೂರು: ಪ್ರಕೃತಿ, ಪರಿಸರ ಸಂರಕ್ಷಣೆ ಹಾಗೂ ಹಸಿರು ಹೊದಿಕೆ ಹೆಚ್ಚಳದಲ್ಲಿ ಸುಸ್ಥಿರ ಸಾಂಸ್ಥಿಕ ಸಾಮಾಜಿಕ ಹೊಣೆಗಾರಿಕೆ ಪಾತ್ರ ಹಿರಿದಾಗಿದೆ ಎಂದು…

46 mins ago

ಲೋಕಸಭೆಯಲ್ಲಿ ಮಹತ್ವದ ಕ್ಷೇತ್ರ ಮರುವಿಂಗಡಣೆ ಮಸೂದೆ ಮಂಡನೆ

ನವದೆಹಲಿ: ಕೇಂದ್ರ ಸಚಿವ ಅರ್ಜುನ್‌ ರಾಮ್‌ ಮೇಘವಾಲ್‌ ಅವರು ಇಂದು ಲೋಕಸಭೆಯಲ್ಲಿ ಕ್ಷೇತ್ರ ಮರುವಿಂಗಡಣೆ ಮಸೂದೆ 2026ನ್ನು ಮಂಡಿಸಿದರು. ಈ…

1 hour ago

ಲೋಕಸಭಾ ಕ್ಷೇತ್ರ ಮರು ವಿಂಗಡಣೆ ಮಸೂದೆಗೆ ತೀವ್ರ ವಿರೋಧ: ತಮಿಳುನಾಡು ಸಿಎಂ ಸ್ಟಾಲಿನ್‌ ಪ್ರತಿಭಟನೆ

ಚೆನ್ನೈ: ಕೇಂದ್ರ ಸರ್ಕಾರ ಜಾರಿ ಮಾಡಲು ಹೊರಟಿರುವ ಲೋಕಸಭಾ ಕ್ಷೇತ್ರ ಮರು ವಿಂಗಡಣೆ ಮಸೂದೆಗೆ ವಿಪಕ್ಷಗಳು ತೀವ್ರ ವಿರೋಧ ವ್ಯಕ್ತಪಡಿಸಿದ್ದು,…

2 hours ago

ತಾಪಮಾನ ಏರಿಕೆ ಬೆನ್ನಲ್ಲೇ ಮಳೆ ಮುನ್ಸೂಚನೆ ನೀಡಿದ ಹವಾಮಾನ ಇಲಾಖೆ

ಬೆಂಗಳೂರು: ರಾಜ್ಯದಲ್ಲಿ ರಣ ಬಿಸಿಲ ಧಗೆ ದಿನದಿಂದ ದಿನಕ್ಕೆ ಹೆಚ್ಚುತ್ತಿದೆ. ಕೆಲ ಜಿಲ್ಲೆಗಳಲ್ಲಿ ಅತ್ಯಧಿಕ ತಾಪಮಾನ ದಾಖಲಾಗುತ್ತಿದ್ದು, ಜನರು ಬಿಸಿಲ…

2 hours ago

ಓದುಗರ ಪತ್ರ: ವಿಶ್ವ ಶಾಂತಿಗೆ ಪೋಪ್ ಕರೆ ಸ್ವಾಗತಾರ್ಹ

ಮಧ್ಯ ಪ್ರಾಚ್ಯ ದೇಶಗಳಲ್ಲಿ ಕಳೆದ ೪೦ ದಿನಗಳಿಂದಲೂ ಯುದ್ಧ ನಡೆಯುತ್ತಿರುವುದರಿಂದ ವಿವಿಧ ದೇಶಗಳು ಸಂಕಷ್ಟಕ್ಕೆ ಸಿಲುಕಿವೆ. ಪೋಪ್ ೧೪ನೇ ಲಿಯೋರವರು…

3 hours ago