Mysore
24
haze

Social Media

ಭಾನುವಾರ, 21 ಡಿಸೆಂಬರ್ 2025
Light
Dark

185ನೇ ವಿಶ್ವ ಛಾಯಾಗ್ರಹಣ ದಿನ: ಉಚಿತ ವೈದ್ಯಕೀಯ ತಪಾಸಣೆ ಶಿಬಿರಕ್ಕೆ ಚಾಲನೆ ನೀಡಿದ ಚೆಲುವರಾಯಸ್ವಾಮಿ

ಮಂಡ್ಯ: ವೃತ್ತಿಪರ ಛಾಯಾಚಿತ್ರಗ್ರಾಹಕರ ಸಂಘದ ವತಿಯಿಂದ ಮತ್ತು ಸ್ಪಂದನ ಆಸ್ಪತ್ರೆಯ ಸಹಯೋಗದೊಂದಿಗೆ 185ನೇ ವಿಶ್ವ ಛಾಯಾಗ್ರಹಣ ದಿನಾಚರಣೆಯ ಅಂಗವಾಗಿ ಉಚಿತ ವೈದ್ಯಕೀಯ ತಪಾಸಣೆ ಹಾಗೂ ರಕ್ತದಾನ ಶಿಬಿರದ ಕಾರ್ಯಕ್ರಮ ಮಂಡ್ಯದ ಕಾವೇರಿ ಕಲ್ಯಾಣ ಮಂಟಪದಲ್ಲಿ ನಡೆಯಿತು.

ಜಿಲ್ಲಾ ಉಸ್ತುವಾರಿ ಸಚಿವ ಹಾಗೂ ಕೃಷಿ ಸಚಿವ ಎನ್. ಚಲುವರಾಯಸ್ವಾಮಿರವರು ಗಿಡಕ್ಕೆ ನೀರೆರೆಯುವುದರ ಮೂಲಕ ಉದ್ಘಾಟಿಸಿದರು.

ನಂತರ ಮಾತನಾಡಿದ ಅವರು, ಛಾಯಾಚಿತ್ರಗ್ರಾಹಕರಿಗೆ ಸರ್ಕಾರದಿಂದ ಸಿಗಬೇಕಾದ ಸವಲತ್ತುಗಳನ್ನು ನೀಡುವ ಪ್ರಾಮಾಣಿಕವಾಗಿ ದೊರಕಿಸುವ ಕೆಲಸ ಮಾಡುವುದಾಗಿ ತಿಳಿಸಿದರು.

ಶಾಸಕ ಪಿ. ರವಿಕುಮಾರ್ ಗಣಿಗ ಮಾತನಾಡಿ, ನಿವೇಶನ ಇಲ್ಲದವರಿಗೆ ಹಾಗೂ ವಸತಿ ಇಲ್ಲದ ಛಾಯಾಗ್ರಹಕರಿಗೆ ಸರ್ಕಾರದಿಂದ ನಿವೇಶನ ಹಾಗೂ ವಸತಿಯನ್ನು ಕಲ್ಪಿಸುವುದಾಗಿ ಭರವಸೆ ನೀಡಿದರು.

ಇದೇ ಸಂದರ್ಭದಲ್ಲಿ ಎಸ್‌ಎಸ್‌ಎಲ್‌ಸಿ ಹಾಗೂ ಪಿಯುಸಿ ಪರೀಕ್ಷೆಯಲ್ಲಿ ಶೇಕಡ 65ಕ್ಕಿಂತ ಹೆಚ್ಚು ಅಂಕ ಪಡೆದ ಪ್ರತಿಭಾನ್ವಿತ ಛಾಯಾಗ್ರಹಕ ಮಕ್ಕಳಿಗೆ ಹಾಗೂ ಹಿರಿಯ ಛಾಯಾಗ್ರಾಹಕರಿಗೆ ಛಾಯಾ ಭೂಷಣ ಪ್ರಶಸ್ತಿಯನ್ನು ನೀಡಿ ಗೌರವಿಸಲಾಯಿತು.

ಕಾರ್ಯಕ್ರಮದಲ್ಲಿ ಚಲನಚಿತ್ರ ನಟಿ ಭಾವನ, ಮಂಡ್ಯ ಜಿಲ್ಲಾ ಛಾಯಾಗ್ರಾಹಕರ ಸಂಘದ ಅಧ್ಯಕ್ಷರಾದ ವಿನೋದ್ ಸೇರಿದಂತೆ ಇನ್ನಿತರರು ಹಾಜರಿದ್ದರು.

Tags:
error: Content is protected !!