ಮಂಡ್ಯ: ವೃತ್ತಿಪರ ಛಾಯಾಚಿತ್ರಗ್ರಾಹಕರ ಸಂಘದ ವತಿಯಿಂದ ಮತ್ತು ಸ್ಪಂದನ ಆಸ್ಪತ್ರೆಯ ಸಹಯೋಗದೊಂದಿಗೆ 185ನೇ ವಿಶ್ವ ಛಾಯಾಗ್ರಹಣ ದಿನಾಚರಣೆಯ ಅಂಗವಾಗಿ ಉಚಿತ ವೈದ್ಯಕೀಯ ತಪಾಸಣೆ ಹಾಗೂ ರಕ್ತದಾನ ಶಿಬಿರದ ಕಾರ್ಯಕ್ರಮ ಮಂಡ್ಯದ ಕಾವೇರಿ ಕಲ್ಯಾಣ ಮಂಟಪದಲ್ಲಿ ನಡೆಯಿತು.
ಜಿಲ್ಲಾ ಉಸ್ತುವಾರಿ ಸಚಿವ ಹಾಗೂ ಕೃಷಿ ಸಚಿವ ಎನ್. ಚಲುವರಾಯಸ್ವಾಮಿರವರು ಗಿಡಕ್ಕೆ ನೀರೆರೆಯುವುದರ ಮೂಲಕ ಉದ್ಘಾಟಿಸಿದರು.
ನಂತರ ಮಾತನಾಡಿದ ಅವರು, ಛಾಯಾಚಿತ್ರಗ್ರಾಹಕರಿಗೆ ಸರ್ಕಾರದಿಂದ ಸಿಗಬೇಕಾದ ಸವಲತ್ತುಗಳನ್ನು ನೀಡುವ ಪ್ರಾಮಾಣಿಕವಾಗಿ ದೊರಕಿಸುವ ಕೆಲಸ ಮಾಡುವುದಾಗಿ ತಿಳಿಸಿದರು.
ಶಾಸಕ ಪಿ. ರವಿಕುಮಾರ್ ಗಣಿಗ ಮಾತನಾಡಿ, ನಿವೇಶನ ಇಲ್ಲದವರಿಗೆ ಹಾಗೂ ವಸತಿ ಇಲ್ಲದ ಛಾಯಾಗ್ರಹಕರಿಗೆ ಸರ್ಕಾರದಿಂದ ನಿವೇಶನ ಹಾಗೂ ವಸತಿಯನ್ನು ಕಲ್ಪಿಸುವುದಾಗಿ ಭರವಸೆ ನೀಡಿದರು.
ಇದೇ ಸಂದರ್ಭದಲ್ಲಿ ಎಸ್‌ಎಸ್‌ಎಲ್‌ಸಿ ಹಾಗೂ ಪಿಯುಸಿ ಪರೀಕ್ಷೆಯಲ್ಲಿ ಶೇಕಡ 65ಕ್ಕಿಂತ ಹೆಚ್ಚು ಅಂಕ ಪಡೆದ ಪ್ರತಿಭಾನ್ವಿತ ಛಾಯಾಗ್ರಹಕ ಮಕ್ಕಳಿಗೆ ಹಾಗೂ ಹಿರಿಯ ಛಾಯಾಗ್ರಾಹಕರಿಗೆ ಛಾಯಾ ಭೂಷಣ ಪ್ರಶಸ್ತಿಯನ್ನು ನೀಡಿ ಗೌರವಿಸಲಾಯಿತು.
ಕಾರ್ಯಕ್ರಮದಲ್ಲಿ ಚಲನಚಿತ್ರ ನಟಿ ಭಾವನ, ಮಂಡ್ಯ ಜಿಲ್ಲಾ ಛಾಯಾಗ್ರಾಹಕರ ಸಂಘದ ಅಧ್ಯಕ್ಷರಾದ ವಿನೋದ್ ಸೇರಿದಂತೆ ಇನ್ನಿತರರು ಹಾಜರಿದ್ದರು.
ಚಾಮರಾಜನಗರ : ತಾಲ್ಲೂಕಿನ ಬೇಡರಪುರ ಗ್ರಾಮದಲ್ಲಿ ಅರಣ್ಯ ಇಲಾಖೆ ಇರಿಸಿದ್ದ ಬೋನಿಗೆ ಇನ್ನೂ ಒಂದು ಚಿರತೆ ಸೆರೆಯಾಗಿದೆ. ಗ್ರಾಮದ ಮಲ್ಲಣ್ಣ…
ಬೆಂಗಳೂರು : 2026-27ನೇ ಸಾಲಿನ ಶೈಕ್ಷಣಿಕ ವರ್ಷದಲ್ಲಿ ಸರ್ಕಾರಿ ಶಾಲಾ-ಕಾಲೇಜುಗಳಲ್ಲಿ ದಾಖಲಾತಿ ಅಭಿಯಾನ ಯಶಸ್ವಿಯಾಗಿ ನಡೆಸುವಂತೆ ರಾಜ್ಯದ ಎಲ್ಲಾ ಜಿಲ್ಲಾಧಿಕಾರಿಗಳು…
ಸಿದ್ದಾಪುರ : ಎರಡು ಬೈಕ್‌ಗಳು ಮತ್ತು ಕಾರಿನ ನಡುವೆ ಸಂಭವಿಸಿದ ಭೀಕರ ಅಪಘಾತದಲ್ಲಿ ಇಬ್ಬರು ಬೈಕ್ ಸವಾರರು ಸ್ಥಳದಲ್ಲೇ ಮೃತಪಟ್ಟಿರುವ…
ಹೊಸದಿಲ್ಲಿ : ಎಲ್‌ಪಿಜಿ ಕೊರತೆಯಿಂದಾಗಿ ಸಂಕಷ್ಟಕ್ಕೆ ಸಿಲುಕಿದ್ದ ಹೋಟೆಲ್, ರೆಸ್ಟೋರೆಂಟ್ ಮತ್ತು ಆಹಾರ ಸಂಸ್ಕರಣಾ ಘಟಕಗಳಿಗೆ ಕೇಂದ್ರ ಪೆಟ್ರೋಲಿಯಂ ಮತ್ತು…
ಟೆಹ್ರಾನ್ : ಇರಾನ್‌ನ ಡ್ರೋನ್ ಉತ್ಪಾದನಾ ಘಟಕದ ಮೇಲೆ ಅಮೆರಿಕ ಸೇನೆ ನಡೆಸಿದ ನಿಖರ ದಾಳಿಗೆ ಸಂಬಂಧಿಸಿದಂತೆ ಮಹತ್ವದ ಉಪಗ್ರಹ…
ಮೈಸೂರು : ರಾಜ್ಯ ಸರ್ಕಾರವು ಜಾರಿಗೆ ತರಲು ಮುಂದಾಗಿರುವ ʻಕರ್ನಾಟಕ ಜಾಹೀರಾತು ನೀತಿ-2026ʼ ವಾರ್ತಾ ಇಲಾಖೆ ಅಧಿಕಾರಿಗಳ ವಕ್ರ ದೃಷ್ಟಿಯ…