Mysore
23
broken clouds
Light
Dark

ಎರಡು ದಿನ ಮಂಡ್ಯ ಪ್ರವಾಸಿ ತಾಣಗಳಿಗೆ ಪ್ರವೇಶ ನಿರ್ಬಂಧ

ಮಂಡ್ಯ: ಕೆಆರ್‌ಎಸ್‌ ಜಲಾಶಯದಿಂದ ಅಪಾರ ಪ್ರಮಾಣದ ನೀರನ್ನು ಹೊರಬಿಟ್ಟಿರುವ ಹಿನ್ನೆಲೆಯಲ್ಲಿ ಮುಂಜಾಗ್ರತಾ ಕ್ರಮವಾಗಿ ಮಂಡ್ಯ ಜಿಲ್ಲೆಯ ಪ್ರವಾಸಿ ತಾಣಗಳಿಗೆ ಎರಡು ದಿನ ನಿರ್ಬಂಧ ವಿಧಿಸಿ ಆದೇಶ ಹೊರಡಿಸಲಾಗಿದೆ.

ಕಾವೇರಿ ಜಲಾನಯನ ಪ್ರದೇಶದಲ್ಲಿ ಭಾರೀ ಮಳೆ ಸುರಿಯುತ್ತಿರುವ ಪರಿಣಾಮ ಮಂಡ್ಯ ಜಿಲ್ಲೆ ಶ್ರೀರಂಗಪಟ್ಟಣ ತಾಲ್ಲೂಕಿನ ಕೆಆರ್‌ಎಸ್‌ ಜಲಾಶಯ ಸಂಪೂರ್ಣ ಭರ್ತಿಯಾಗಿದ್ದು, ಜಲಾಶಯದಿಂದ 1.70 ಲಕ್ಷ ಕ್ಯೂಸೆಕ್ಸ್‌ ನೀರನ್ನು ಕಾವೇರಿ ನದಿಗೆ ಬಿಡಲಾಗಿದೆ. ಈ ಹಿನ್ನೆಲೆಯಲ್ಲಿ ಕಾವೇರಿ ನದಿ ಅಪಾಯದ ಮಟ್ಟ ಮೀರಿ ಹರಿಯುತ್ತಿದ್ದು, ಪ್ರವಾಹ ಪರಿಸ್ಥಿತಿ ಉಂಟಾಗಿದೆ.

ಕಾವೇರಿ ನದಿ ಆರ್ಭಟಿಸುತ್ತಿರುವ ಹಿನ್ನೆಲೆಯಲ್ಲಿ ಮುಂಜಾಗ್ರತಾ ಕ್ರಮವಾಗಿ ಮಂಡ್ಯ ಜಿಲ್ಲೆಯ ಎಲ್ಲಾ ಪ್ರವಾಸಿ ತಾಣಗಳಿಗೆ ಪ್ರವಾಸಿಗರಿಗೆ ನಿರ್ಬಂಧ ವಿಧಿಸಿ ಆದೇಶ ಹೊರಡಿಸಲಾಗಿದೆ.

ಇನ್ನು ಎರಡು ದಿನಗಳ ಕಾಲ ಮಳೆ ಕಡಿಮೆಯಾಗಿ ನೀರಿನ ಆರ್ಭಟ ನಿಂತರೆ ಮಾತ್ರ ಪ್ರವಾಸಿ ತಾಣಗಳಿಗೆ ಎಂಟ್ರಿ. ಇಲ್ಲದಿದ್ದರೆ ನಿರ್ಬಂಧವನ್ನು ಮತ್ತೆ ಮುಂದುವರಿಸುವ ಎಲ್ಲಾ ಸಾಧ್ಯತೆಗಳು ಕಾಣಿಸುತ್ತಿವೆ.

ನಾಳೆಯೂ ಕೂಡ ಮಂಡ್ಯ ಜಿಲ್ಲೆಯಲ್ಲಿ ಶಾಲೆಗಳಿಗೆ ರಜೆ ನೀಡುವ ಸಾಧ್ಯತೆಯಿದ್ದು, ಮಕ್ಕಳನ್ನು ಜಾಗ್ರತೆಯಿಂದ ನೋಡಿಕೊಳ್ಳುವಂತೆ ಪೋಷಕರಿಗೆ ಎಚ್ಚರಿಕೆ ನೀಡಲಾಗಿದೆ.