ಮಂಡ್ಯ: ಕೆಆರ್‌ಎಸ್ ಜಲಾಶಯದಿಂದ ಅಪಾರ ಪ್ರಮಾಣದ ನೀರನ್ನು ಹೊರಬಿಟ್ಟಿರುವ ಹಿನ್ನೆಲೆಯಲ್ಲಿ ಮುಂಜಾಗ್ರತಾ ಕ್ರಮವಾಗಿ ಮಂಡ್ಯ ಜಿಲ್ಲೆಯ ಪ್ರವಾಸಿ ತಾಣಗಳಿಗೆ ಎರಡು ದಿನ ನಿರ್ಬಂಧ ವಿಧಿಸಿ ಆದೇಶ ಹೊರಡಿಸಲಾಗಿದೆ.
ಕಾವೇರಿ ಜಲಾನಯನ ಪ್ರದೇಶದಲ್ಲಿ ಭಾರೀ ಮಳೆ ಸುರಿಯುತ್ತಿರುವ ಪರಿಣಾಮ ಮಂಡ್ಯ ಜಿಲ್ಲೆ ಶ್ರೀರಂಗಪಟ್ಟಣ ತಾಲ್ಲೂಕಿನ ಕೆಆರ್‌ಎಸ್ ಜಲಾಶಯ ಸಂಪೂರ್ಣ ಭರ್ತಿಯಾಗಿದ್ದು, ಜಲಾಶಯದಿಂದ 1.70 ಲಕ್ಷ ಕ್ಯೂಸೆಕ್ಸ್ ನೀರನ್ನು ಕಾವೇರಿ ನದಿಗೆ ಬಿಡಲಾಗಿದೆ. ಈ ಹಿನ್ನೆಲೆಯಲ್ಲಿ ಕಾವೇರಿ ನದಿ ಅಪಾಯದ ಮಟ್ಟ ಮೀರಿ ಹರಿಯುತ್ತಿದ್ದು, ಪ್ರವಾಹ ಪರಿಸ್ಥಿತಿ ಉಂಟಾಗಿದೆ.
ಕಾವೇರಿ ನದಿ ಆರ್ಭಟಿಸುತ್ತಿರುವ ಹಿನ್ನೆಲೆಯಲ್ಲಿ ಮುಂಜಾಗ್ರತಾ ಕ್ರಮವಾಗಿ ಮಂಡ್ಯ ಜಿಲ್ಲೆಯ ಎಲ್ಲಾ ಪ್ರವಾಸಿ ತಾಣಗಳಿಗೆ ಪ್ರವಾಸಿಗರಿಗೆ ನಿರ್ಬಂಧ ವಿಧಿಸಿ ಆದೇಶ ಹೊರಡಿಸಲಾಗಿದೆ.
ಇನ್ನು ಎರಡು ದಿನಗಳ ಕಾಲ ಮಳೆ ಕಡಿಮೆಯಾಗಿ ನೀರಿನ ಆರ್ಭಟ ನಿಂತರೆ ಮಾತ್ರ ಪ್ರವಾಸಿ ತಾಣಗಳಿಗೆ ಎಂಟ್ರಿ. ಇಲ್ಲದಿದ್ದರೆ ನಿರ್ಬಂಧವನ್ನು ಮತ್ತೆ ಮುಂದುವರಿಸುವ ಎಲ್ಲಾ ಸಾಧ್ಯತೆಗಳು ಕಾಣಿಸುತ್ತಿವೆ.
ನಾಳೆಯೂ ಕೂಡ ಮಂಡ್ಯ ಜಿಲ್ಲೆಯಲ್ಲಿ ಶಾಲೆಗಳಿಗೆ ರಜೆ ನೀಡುವ ಸಾಧ್ಯತೆಯಿದ್ದು, ಮಕ್ಕಳನ್ನು ಜಾಗ್ರತೆಯಿಂದ ನೋಡಿಕೊಳ್ಳುವಂತೆ ಪೋಷಕರಿಗೆ ಎಚ್ಚರಿಕೆ ನೀಡಲಾಗಿದೆ.
ಗುಂಡ್ಲುಪೇಟೆ : ತಾಲ್ಲೂಕಿನ ಬರಗಿ ಗ್ರಾಮದ ಜಮೀನುಗಳಲ್ಲಿ ಜಾನುವಾರುಗಳ ಮೇಲೆ ದಾಳಿ ನಡೆಸಿ ಕೊಂದುಹಾಕಿದ್ದ ವಿಚಾರವಾಗಿ ಅರಣ್ಯ ಇಲಾಖೆ ಚಿರತೆ…
ಮೈಸೂರು : ಬುಧವಾರವಷ್ಟೇ ಹೆಬ್ಬಾಳ್‌ನಲ್ಲಿ ಶೆಡ್‌ವೊಂದರ ಮೇಲೆ ದಾಳಿ ನಡೆಸಿದ್ದ ಎನ್‌ಸಿಬಿ ಪೊಲೀಸರು, ಮಾದಕ ವಸ್ತು ಮಾರಾಟ ಆರೋಪ ಪ್ರಕರಣದಲ್ಲಿ…
ಹನೂರು : ತಾಲ್ಲೂಕಿನ ಬಿ.ಆರ್.ಟಿ ಹುಲಿ ಸಂರಕ್ಷಿತ ಪ್ರದೇಶದ ಬೈಲೂರು ವನ್ಯಜೀವಿ ವಲಯ ವ್ಯಾಪ್ತಿಯಲ್ಲಿ ಅಕ್ರಮವಾಗಿ ತೇಗದ ಮರಗಳನ್ನು ಕಟಾವು…
ಮೈಸೂರು : ವಿಶ್ವವಿದ್ಯಾನಿಲಯಗಳ ಕ್ಯಾಂಪಸ್‌ನಲ್ಲಿ ಜಾತಿ, ಧರ್ಮ,ಲಿಂಗ ಆಧಾರಿತ ಶೋಷಣೆಯನ್ನು ತಡೆಗಟ್ಟಲು ಯುಜಿಸಿಯ ಉದ್ದೇಶಿತ ಹೊಸ ನಿಯಮಾವಳಿಗಳ ಜಾರಿಗೆ ಒತ್ತಾಯಿಸಿ…
ಬೆಂಗಳೂರು : ರಾಜ್ಯ ಸರ್ಕಾರಿ ನೌಕರರಿಗೆ ಖಾದಿ ಬಟ್ಟೆ ಬಳಕೆ ಕಡ್ಡಾಯಗೊಳಿಸಲಾಗಿದೆ. ಪ್ರತಿ ತಿಂಗಳ ಮೊದಲ ಶನಿವಾರ ಖಾದಿ ಬಟ್ಟೆ…
ಹೊಸದಿಲ್ಲಿ : ಮಹತ್ವದ ಬೆಳವಣಿಗೆಯಲ್ಲಿ ವಿಶ್ವವಿದ್ಯಾಲಯ ಅನುದಾನ ಆಯೋಗದ (ಯುಜಿಸಿ) ಹೊಸ ನಿಯಮಗಳಿಗೆ ಸರ್ವೋಚ್ಚ ನ್ಯಾಯಾಲಯ ತಡೆ ನೀಡಿದೆ. ವಿಶ್ವವಿದ್ಯಾಲಯ…