2000 Crore Grant for Cauvery River Basin DyCM D.K. Shivakumar
ಕಾವೇರಿ ಆರತಿಗೆ ವಿರೋಧ ಮಾಡಬೇಡಿ, ಸಹಕಾರ ನೀಡಿ
ಮಂಡ್ಯ : “ಕಾವೇರಿ ಜಲಾನಯನ ಪ್ರದೇಶಕ್ಕೆ 2 ಸಾವಿರ ಕೋಟಿಗೂ ಹೆಚ್ಚು ಅನುದಾನ ನೀಡಲಾಗಿದೆ. ಪ್ರತಿ ಕ್ಷೇತ್ರವನ್ನೂ ಗಮದಲ್ಲಿಟ್ಟುಕೊಂಡು ಕೆಲಸ ಮಾಡಲಾಗುತ್ತಿದೆ. ಮಂಡ್ಯ ಜಿಲ್ಲೆ ಒಂದಕ್ಕೆ 1 ಸಾವಿರ ಕೋಟಿಗೂ ಹೆಚ್ಚು ಅನುದಾನಕ್ಕೆ ಅನುಮೋದನೆ ನೀಡಲಾಗಿದೆ” ಎಂದು ಡಿಸಿಎಂ ಡಿ.ಕೆ.ಶಿವಕುಮಾರ್ ಅವರು ಹೇಳಿದರು.
92 ವರ್ಷಗಳ ಇತಿಹಾಸದಲ್ಲಿ ಮೊಟ್ಟಮೊದಲ ಬಾರಿಗೆ ಜೂನ್ ತಿಂಗಳಿನಲ್ಲಿ ಭರ್ತಿಯಾಗಿರುವ ಕೆಆರ್ ಎಸ್ ಅಣೆಕಟ್ಟಿಗೆ ಸಿಎಂ ಹಾಗೂ ಡಿಸಿಎಂ ಅವರು ಬಾಗಿನ ಅರ್ಪಿಸಿ ನಂತರ ನಡೆದ ಕಾರ್ಯಕ್ರಮದಲ್ಲಿ ಮಾತನಾಡಿದರು.
“ನಮ್ಮ ಸರ್ಕಾರ ಎರಡು ವರ್ಷಗಳ ಅಧಿಕಾರವಧಿಯಲ್ಲಿ ಕಾವೇರಿ ಅಚ್ಚುಕಟ್ಟು ಪ್ರದೇಶವನ್ನು ಹೆಚ್ಚು ಮಾಡಿದೆ. 80 ವರ್ಷಗಳ ಹಳೆಯ ಕಾಲುವೆಗಳನ್ನು ದುರಸ್ತಿಗೊಳಿಸಲಾಗಿದೆ. ತಮಿಳುನಾಡಿಗೆ 9 ಟಿಎಂಸಿ ನೀರು ಹೋಗಬೇಕಿತ್ತು ಹೆಚ್ಚು ಮಳೆ ಬಂದ ಕಾರಣಕ್ಕೆ 30 ಟಿಎಂಸಿಗಿಂತ ಹೆಚ್ಚು ನೀರು ಬಿಡಲಾಗಿದೆ. ಕಳೆದ ವರ್ಷವೂ 177 ಟಿಎಂಸಿಗಿಂತ ಹೆಚ್ಚುವರಿಯಾಗಿ 305 ಟಿಎಂಸಿ ನೀರು ಹರಿಸಲಾಗಿತ್ತು. 2022- 23 ರಲ್ಲಿ 400 ಟಿಎಂಸಿ ಹೆಚ್ಚುವರಿ ನೀರು ಹರಿಸಲಾಗಿದೆ. ಮೂರು ವರ್ಷಗಳಿಗೊಮ್ಮೆ ನೀರು ಹರಿವಿನ ಪ್ರಮಾಣ ಕಡಿಮೆಯಾಗುವುದನ್ನು ಅಂಕಿಅಂಶಗಳನ್ನು ನೋಡಿದರೆ ತಿಳಿಯುತ್ತದೆ” ಎಂದರು.
ಕಾವೇರಿ ಆರತಿಗೆ ಸಹಕರಿಸಿ, ವಿರೋಧಿಸಬೇಡಿ
ಕಾವೇರಿ ಆರತಿ ವಿರೋಧ ಮಾಡುವವರಲ್ಲಿ ಅಡ್ಡಿ ಪಡಿಸಬೇಡಿ. ವಿರೋಧ ಮಾಡಲೇಬೇಕು ಎಂಬ ಕಾರಣಕ್ಕೆ ವಿರೋಧಿಸಬೇಡಿ. ಸಹಕಾರ ನೀಡಿ ಎಂದು ವಿನಮ್ರತೆಯಿಂದ ಕೇಳಿಕೊಳ್ಳುತ್ತೇನೆ. ನೀರಿಗೆ ಜಾತಿ, ಧರ್ಮವಿಲ್ಲ. ನೀರನ್ನು ಪೂಜೆ ಮಾಡುವುದು ನಮ್ಮ ಸಂಸ್ಕೃತಿ. ಪ್ರಯತ್ನಕ್ಕೆ ಸೋಲಾಗಬಹುದು ಪ್ರಾರ್ಥನೆಗೆ ಸೋಲಾಗುವುದಿಲ್ಲ. ಈ ರಾಜ್ಯದ ರೈತರ ಅಭಿವೃದ್ಧಿಗೆ ನಮ್ಮ ಸರ್ಕಾರ ಅನೇಕ ಅನುದಾನ ನೀಡುತ್ತಿದೆ. 19,700 ಕೋಟಿ ಹಣವನ್ನು ರೈತರಿಗೆ ನೀಡುವ ಉಚಿತ ವಿದ್ಯುಚ್ಛಕ್ತಿಗಾಗಿ ನಮ್ಮ ಸರ್ಕಾರ ನೀಡುತ್ತಿದೆ” ಎಂದರು.
“ಅಣೆಕಟ್ಟಿನಿಂದ ಅರ್ಧ ಕಿಲೋಮೀಟರ್ ದೂರದಲ್ಲಿ ಕಾವೇರಿ ಆರತಿ ಜಾಗ ನಿಗದಿ ಮಾಡಿದ್ದೇವೆ. ದೇವರಿಗೆ ಪ್ರಾರ್ಥನೆ ಮಾಡಲು ಅರ್ಜಿ ಹಾಕಬೇಕೆ? ಯಾರದ್ದಾದರೂ ಅನುಮತಿ ಬೇಕೆ? ಬೆಂಗಳೂರಿನಲ್ಲಿ ಜಲಮಂಡಳಿಯಿಂದ ನಡೆಸಿದ ಕಾವೇರಿ ಆರತಿಗೆ 25 ಸಾವಿರ ಜನ ಸೇರಿದ್ದರು. ಇಲ್ಲಿ ಕಾವೇರಿ ಆರತಿ ನಡೆಸಿದರೆ ಮಂಡ್ಯ, ಮೈಸೂರು ಭಾಗದ 1,500 ಜನರಿಗೆ ಉದ್ಯೋಗ ದೊರಕುತ್ತದೆ. ಬೃಂದಾವನ ಉದ್ಯಾನ ಅಭಿವೃದ್ಧಿ ಮಾಡಿದರೆ ಸ್ಥಳಿಯ 3 ಸಾವಿರ ಜನರಿಗೆ ಉದ್ಯೋಗ ದೊರೆಯುತ್ತದೆ” ಎಂದು ಹೇಳಿದರು.
“ಭಕ್ತ ಹಾಗೂ ಭಗವಂತನಿಗೆ ವ್ಯಾವಹಾರ ನಡೆಯುವ ಸ್ಥಳ ದೇವಸ್ಥಾನ. ಇಲ್ಲಿ ಜನ ಕುಳಿತುಕೊಳ್ಳಲು ಸ್ಥಳ ಮಾಡಲಾಗುತ್ತಿದೆ. ನೀವು ಏಕೆ ಮನೆಯಲ್ಲಿ ಪ್ರತಿದಿನ ದೇವರ ಪೂಜೆ ಮಾಡುತ್ತೀರಿ. ದೇವರು ಇಲ್ಲದಿದ್ದರೂ ಸೂರ್ಯನಿಗೆ ಏಕೆ ನಮಸ್ಕಾರ ಮಾಡುತ್ತೀರಿ. ನನ್ನ ಮಾತುಗಳು ನೇರ, ದಿಟ್ಟವಾಗಿ ಇರಬಹುದು ಯಾರೂ ಸಹ ಅನ್ಯತಾ ಭಾವಿಸಬಾರದು” ಎಂದು ಹೇಳಿದರು.
ಕೊಳ್ಳೇಗಾಲ: ಹಣ ದ್ವಿಗುಣಗೊಳಿಸಿಕೊಡುವುದಾಗಿ ಆಮಿಷ ಒಡ್ಡಿ, ಒಟ್ಟು ೨೮.೮೮ ಲಕ್ಷ ರೂ.ಗಳನ್ನು ವಂಚಿಸಿರುವ ಬಗ್ಗೆ ಪಟ್ಟಣ ಪೊಲೀಸ್ ಠಾಣೆಯಲ್ಲಿ ಮಮತಾ…
ಯಳಂದೂರು:ತಾಲ್ಲೂಕಿನ ಅಂಬಳೆ ಗ್ರಾಮದಲ್ಲಿರುವ ಸುವರ್ಣಾವತಿ ನದಿ ದಡಲ್ಲಿರುವ ಐತಿಹಾಸಿಕ ಚಾಮುಂಡೇಶ್ವರಿ ದೇಗುದಲ್ಲಿ ಗುರುವಾರ ರಾತ್ರಿ ಕಳ್ಳತನ ನಡೆದಿದ್ದು, ಲಕ್ಷಾಂತರ ರೂ.…
ನವದೆಹಲಿ: ದೇಶಾದ್ಯಂತ ಇಂಡಿಗೋ ವಿಮಾನದ ಹಾರಾಟದಲ್ಲಿ ಭಾರೀ ವ್ಯತ್ಯಯ ಉಂಟಾದ ಬೆನ್ನಲ್ಲೇ ಕೇಂದ್ರ ನಾಗರಿಕ ವಿಮಾನಯಾನ ನಿರ್ದೇಶನಾಲಯ ಪೈಲಟ್‌ಗಳ ರಜಾ…
ಬೆಂಗಳೂರು: ಕೆಪಿಸಿಸಿ ಅಧ್ಯಕ್ಷ ಸ್ಥಾನದ ಬಗ್ಗೆ ಚರ್ಚೆಯಾಗಿಲ್ಲ ಎಂದು ಲೋಕೋಪಯೋಗಿ ಸಚಿವ ಸತೀಶ್ ಜಾರಕಿಹೊಳಿ ಹೇಳಿದ್ದಾರೆ. ಈ ಕುರಿತು ಬೆಂಗಳೂರಿನಲ್ಲಿ…
ನವದೆಹಲಿ: ಕಾಲಾತೀತ, ಮೌಲ್ಯಾಧರಿತ ಆದರ್ಶಗಳನ್ನು ಒಳಗೊಂಡಿರುವ ಭಗವದ್ಗೀತೆಯನ್ನು ವಿದ್ಯಾರ್ಥಿಗಳಿಗೆ ಬೋಧಿಸಲು ಪಠ್ಯದಲ್ಲಿ ಸೇರಿಸಬೇಕು ಎಂದು ಕೇಂದ್ರದ ಬೃಹತ್ ಕೈಗಾರಿಕೆ ಮತ್ತು…
ನಂಜನಗೂಡು: ಸೋಲು, ಗೆಲುವಿಗಿಂತ ಕ್ರೀಡೆಯಲ್ಲಿ ಭಾಗವಹಿಸುವುದು ಮುಖ್ಯ ಎಂದು ತಹಶೀಲ್ದಾರ್ ಶಿವಕುಮಾರ್ ಕಾಸ್ನೂರು ಹೇಳಿದರು. ನಂಜನಗೂಡು ನಗರದ ಕಾಲೇಜೊಂದರಲ್ಲಿ ಆಯೋಜಿಸಿದ್ದ…