ಮಂಡ್ಯ

ಕಾವೇರಿ ಜಲಾನಯನ ಪ್ರದೇಶಕ್ಕೆ 2 ಸಾವಿರ ಕೊಟಿ ಅನುದಾನ: ಡಿಸಿಎಂ ಡಿ.ಕೆ.ಶಿವಕುಮಾರ್

ಕಾವೇರಿ ಆರತಿಗೆ ವಿರೋಧ ಮಾಡಬೇಡಿ, ಸಹಕಾರ ನೀಡಿ

ಮಂಡ್ಯ : “ಕಾವೇರಿ ಜಲಾನಯನ ಪ್ರದೇಶಕ್ಕೆ 2 ಸಾವಿರ ಕೋಟಿಗೂ ಹೆಚ್ಚು ಅನುದಾನ ನೀಡಲಾಗಿದೆ. ಪ್ರತಿ ಕ್ಷೇತ್ರವನ್ನೂ ಗಮದಲ್ಲಿಟ್ಟುಕೊಂಡು ಕೆಲಸ‌ ಮಾಡಲಾಗುತ್ತಿದೆ. ಮಂಡ್ಯ ಜಿಲ್ಲೆ ಒಂದಕ್ಕೆ 1 ಸಾವಿರ ಕೋಟಿಗೂ ಹೆಚ್ಚು ಅನುದಾನಕ್ಕೆ ಅನುಮೋದನೆ ನೀಡಲಾಗಿದೆ” ಎಂದು ಡಿಸಿಎಂ ಡಿ.ಕೆ.ಶಿವಕುಮಾರ್ ಅವರು ಹೇಳಿದರು.

92 ವರ್ಷಗಳ ಇತಿಹಾಸದಲ್ಲಿ ಮೊಟ್ಟಮೊದಲ ಬಾರಿಗೆ ಜೂನ್ ತಿಂಗಳಿನಲ್ಲಿ ಭರ್ತಿಯಾಗಿರುವ ಕೆಆರ್ ಎಸ್ ಅಣೆಕಟ್ಟಿಗೆ ಸಿಎಂ ಹಾಗೂ ಡಿಸಿಎಂ ಅವರು ಬಾಗಿನ ಅರ್ಪಿಸಿ ನಂತರ ನಡೆದ ಕಾರ್ಯಕ್ರಮದಲ್ಲಿ ಮಾತನಾಡಿದರು.

“ನಮ್ಮ ಸರ್ಕಾರ ಎರಡು ವರ್ಷಗಳ ಅಧಿಕಾರವಧಿಯಲ್ಲಿ ಕಾವೇರಿ ಅಚ್ಚುಕಟ್ಟು ಪ್ರದೇಶವನ್ನು ಹೆಚ್ಚು ಮಾಡಿದೆ. 80 ವರ್ಷಗಳ ಹಳೆಯ ಕಾಲುವೆಗಳನ್ನು ದುರಸ್ತಿಗೊಳಿಸಲಾಗಿದೆ. ತಮಿಳುನಾಡಿಗೆ 9 ಟಿಎಂಸಿ ನೀರು ಹೋಗಬೇಕಿತ್ತು ಹೆಚ್ಚು ಮಳೆ ಬಂದ ಕಾರಣಕ್ಕೆ 30 ಟಿಎಂಸಿಗಿಂತ ಹೆಚ್ಚು ನೀರು ಬಿಡಲಾಗಿದೆ. ಕಳೆದ ವರ್ಷವೂ 177 ಟಿಎಂಸಿಗಿಂತ ಹೆಚ್ಚುವರಿಯಾಗಿ 305 ಟಿಎಂಸಿ ನೀರು ಹರಿಸಲಾಗಿತ್ತು. 2022- 23 ರಲ್ಲಿ 400 ಟಿಎಂಸಿ ಹೆಚ್ಚುವರಿ ನೀರು ಹರಿಸಲಾಗಿದೆ.‌ ಮೂರು ವರ್ಷಗಳಿಗೊಮ್ಮೆ ನೀರು ಹರಿವಿನ ಪ್ರಮಾಣ ಕಡಿಮೆಯಾಗುವುದನ್ನು ಅಂಕಿಅಂಶಗಳನ್ನು ನೋಡಿದರೆ ತಿಳಿಯುತ್ತದೆ” ಎಂದರು.

ಕಾವೇರಿ ಆರತಿಗೆ ಸಹಕರಿಸಿ, ವಿರೋಧಿಸಬೇಡಿ
ಕಾವೇರಿ ಆರತಿ ವಿರೋಧ ಮಾಡುವವರಲ್ಲಿ ಅಡ್ಡಿ ಪಡಿಸಬೇಡಿ. ವಿರೋಧ ಮಾಡಲೇಬೇಕು ಎಂಬ ಕಾರಣಕ್ಕೆ ವಿರೋಧಿಸಬೇಡಿ. ಸಹಕಾರ ‌ನೀಡಿ ಎಂದು ವಿನಮ್ರತೆಯಿಂದ ಕೇಳಿಕೊಳ್ಳುತ್ತೇನೆ. ನೀರಿಗೆ ಜಾತಿ, ಧರ್ಮವಿಲ್ಲ. ನೀರನ್ನು ಪೂಜೆ ಮಾಡುವುದು ನಮ್ಮ ಸಂಸ್ಕೃತಿ. ಪ್ರಯತ್ನಕ್ಕೆ ಸೋಲಾಗಬಹುದು ಪ್ರಾರ್ಥನೆಗೆ ಸೋಲಾಗುವುದಿಲ್ಲ. ಈ ರಾಜ್ಯದ ರೈತರ ಅಭಿವೃದ್ಧಿಗೆ ನಮ್ಮ ಸರ್ಕಾರ ಅನೇಕ ಅನುದಾನ ನೀಡುತ್ತಿದೆ. 19,700 ಕೋಟಿ ಹಣವನ್ನು ರೈತರಿಗೆ ನೀಡುವ ಉಚಿತ ವಿದ್ಯುಚ್ಛಕ್ತಿಗಾಗಿ ನಮ್ಮ ಸರ್ಕಾರ ನೀಡುತ್ತಿದೆ” ಎಂದರು.

“ಅಣೆಕಟ್ಟಿನಿಂದ ಅರ್ಧ ಕಿಲೋಮೀಟರ್ ದೂರದಲ್ಲಿ ಕಾವೇರಿ ಆರತಿ ಜಾಗ ನಿಗದಿ ಮಾಡಿದ್ದೇವೆ. ದೇವರಿಗೆ ಪ್ರಾರ್ಥನೆ ಮಾಡಲು ಅರ್ಜಿ ಹಾಕಬೇಕೆ? ಯಾರದ್ದಾದರೂ ಅನುಮತಿ ಬೇಕೆ? ಬೆಂಗಳೂರಿನಲ್ಲಿ ಜಲಮಂಡಳಿಯಿಂದ ನಡೆಸಿದ ಕಾವೇರಿ ಆರತಿಗೆ 25 ಸಾವಿರ ಜನ ಸೇರಿದ್ದರು. ಇಲ್ಲಿ ಕಾವೇರಿ ಆರತಿ ನಡೆಸಿದರೆ ಮಂಡ್ಯ, ಮೈಸೂರು ಭಾಗದ 1,500 ಜನರಿಗೆ ಉದ್ಯೋಗ ದೊರಕುತ್ತದೆ. ಬೃಂದಾವನ ಉದ್ಯಾನ ಅಭಿವೃದ್ಧಿ ಮಾಡಿದರೆ ಸ್ಥಳಿಯ 3 ಸಾವಿರ ಜನರಿಗೆ ಉದ್ಯೋಗ ದೊರೆಯುತ್ತದೆ” ಎಂದು ಹೇಳಿದರು.

“ಭಕ್ತ ಹಾಗೂ ಭಗವಂತನಿಗೆ ವ್ಯಾವಹಾರ ನಡೆಯುವ ಸ್ಥಳ ದೇವಸ್ಥಾನ. ಇಲ್ಲಿ ಜನ ಕುಳಿತುಕೊಳ್ಳಲು ಸ್ಥಳ ಮಾಡಲಾಗುತ್ತಿದೆ. ನೀವು ಏಕೆ ಮನೆಯಲ್ಲಿ ಪ್ರತಿದಿನ ದೇವರ ಪೂಜೆ ಮಾಡುತ್ತೀರಿ. ದೇವರು ಇಲ್ಲದಿದ್ದರೂ ಸೂರ್ಯನಿಗೆ ಏಕೆ ನಮಸ್ಕಾರ ಮಾಡುತ್ತೀರಿ. ನನ್ನ ಮಾತುಗಳು ನೇರ, ದಿಟ್ಟವಾಗಿ ಇರಬಹುದು ಯಾರೂ ಸಹ ಅನ್ಯತಾ ಭಾವಿಸಬಾರದು” ಎಂದು ಹೇಳಿದರು.

ಆಂದೋಲನ ಡೆಸ್ಕ್

Recent Posts

ಹನೂರು ತಾಲ್ಲೂಕಿನಲ್ಲಿ ಕೇಂದ್ರ ಬರ ಅಧ್ಯಯನ ತಂಡದಿಂದ ಎರಡನೇ ದಿನದ ಸಮಗ್ರ ಪರಿಶೀಲನೆ

ಹನೂರು: ತಾಲ್ಲೂಕಿನಾದ್ಯಂತ ತೀವ್ರ ಬರಗಾಲ ಆವರಿಸಿರುವ ಹಿನ್ನೆಲೆಯಲ್ಲಿ ಕೇಂದ್ರ ಸರ್ಕಾರದ ಬರ ಅಧ್ಯಯನ ತಂಡವು ಎರಡನೇ ದಿನವಾದ ಇಂದು ಹನೂರು…

14 hours ago

ಬಿರುಗಾಳಿ ಮಳೆಗೆ ಬಾಳೆ ಬೆಳೆ ನೆಲಕಚ್ಚಿ:ರೈತರಿಗೆ ಲಕ್ಷಾಂತರ ರೂ. ನಷ್ಟ!

ಯಳಂದೂರು: ತಾಲ್ಲೂಕಿನ ಕೆಸ್ತೂರು ಗ್ರಾಮದಲ್ಲಿ ರಾತ್ರಿ ಸುರಿದ ಬಿರುಗಾಳಿ ಸಹಿತ ಭಾರಿ ಮಳೆಗೆ ಕಟಾವಿಗೆ ಬಂದಿದ್ದ ಬಾಳೆ ಬೆಳೆ ಸಂಪೂರ್ಣ…

14 hours ago

ಕಾಡುಪ್ರಾಣಿಗಳ ಹಾವಳಿ ತಡೆಗೆ ಸ್ಟೀಲ್ ರೋಪ್ ಬ್ಯಾರಿಕೇಡ್

ಮಂಜು ಕೋಟೆ ಕೋಟೆ: ನಾಗರಹೊಳೆ ರಾಷ್ಟ್ರೀಯ ಉದ್ಯಾನವನದ ವ್ಯಾಪ್ತಿಯಲ್ಲಿ ಅರಣ್ಯ ಇಲಾಖೆಯಿಂದ ಅಳವಡಿಕೆ  ಎಚ್.ಡಿ.ಕೋಟೆ: ತಾಲ್ಲೂಕಿನ ಕಾಡಂಚಿನಲ್ಲಿ ಕಾಡು ಪ್ರಾಣಿಗಳು…

15 hours ago

ದಸರೆಯಲ್ಲಿ ಹೊಸ ಸಂಪ್ರದಾಯಕ್ಕೆ ಮುನ್ನುಡಿ ಬರೆದ ಮುಖ್ಯಮಂತ್ರಿ

ಮುಂದಿನ ಭಾನುವಾರದಿಂದ ನವರಾತ್ರಿ ಆರಂಭ. ಐತಿಹಾಸಿಕ ಮೈಸೂರು ದಸರಾ ಮಹೋತ್ಸವಕ್ಕೆ ಚಾಲನೆ. ವಿಶ್ವವಿಖ್ಯಾತ ಮೈಸೂರು ದಸರಾ ಉತ್ಸವದಲ್ಲಿ ಈ ಬಾರಿ…

15 hours ago

ಪೌರಕಾರ್ಮಿಕರಿಗೆ ಉಚಿತ ಸಾಬೂನು ಗ್ಯಾರಂಟಿ ಕೊಡಿ

ವಸಂತಕುಮಾರ್ ಮೈಸೂರು ಮಠ ಮೈಸೂರಿನ ಸ್ವಚ್ಛತೆ ಜವಾಬ್ದಾರಿ ಪೌರಕಾರ್ಮಿಕರ ಹೆಗಲ ಮೇಲಿದೆ ಇದು ನಮ್ಮ ಕಸ, ಇದರ ನಿರ್ವಹಣೆ ನಮ್ಮ…

15 hours ago

ಅಸ್ತ್ರಗಳು, ಅಂಧಕಾರ, ಆತಂಕ

ಬೆಂಗಳೂರು ಡೈರಿ: ಆರ್.ಟಿ.ವಿಠ್ಠಲಮೂರ್ತಿ ಅವರ ವಾರದ ಅಂಕಣ   ಪ್ರಯೋಗಕೆ ಸಜ್ಜಾಗುತ್ತಿರುವ ರಾಜಕೀಯ ಪಕ್ಷಗಳು ಕರ್ನಾಟಕದ ರಾಜಕಾರಣ ಎಷ್ಟು ಆತಂಕದ ಮಟ್ಟಕ್ಕೆ…

15 hours ago