ಮಂಡ್ಯ: ನಗರದ ಹೊರವಲಯದಲ್ಲಿರುವ ಅಗ್ರಿ ಕ್ಲಬ್ ಮೇಲೆ ದಾಳಿ ನಡೆಸಿರುವ ಮಂಡ್ಯ ಗ್ರಾಮಾಂತರ ಪೊಲೀಸರು ಜೂಜಾಟದಲ್ಲಿ ತೊಡಗಿದ್ದ 29 ಮಂದಿಯನ್ನು ಬಂಧಿಸಿ, 10 ಲಕ್ಷ ರೂ. ಹಣವನ್ನು ವಶಪಡಿಸಿಕೊಂಡಿದ್ದಾರೆ.
ಜೂಜಾಟದಲ್ಲಿ ತೊಡಗಿರುವ ಬಗ್ಗೆ ಖಚಿತ ಮಾಹಿತಿ ಹಿನ್ನೆಲೆಯಲ್ಲಿ ಜಿಲ್ಲಾ ಪೊಲೀಸ್ ಅಧೀಕ್ಷಕಿ ಡಾ. ವಿ.ಜೆ. ಶೋಭಾರಾಣಿ ಅವರ ನೇತೃತ್ವದಲ್ಲಿ ಸೋಮವಾರ ತಡರಾತ್ರಿ ದಾಳಿ ನಡೆಸಿದ ಗ್ರಾಮಾಂತರ ಠಾಣೆ ಪೊಲೀಸರು ಜೂಜಿನಲ್ಲಿ ತೊಡಗಿದ್ದ 29 ಜನರನ್ನು ವಶಕ್ಕೆ ಪಡೆದು, 10 ಲಕ್ಷ ರೂ. ಹಣವನ್ನು ವಶಕ್ಕೆ ಪಡೆದಿದ್ದಾರೆ.
ಸಾಮಾನ್ಯವಾಗಿ ಕ್ಲಬ್‌ಗಳಲ್ಲಿ ರಾತ್ರಿ 11 ಗಂಟೆಯವರೆಗೆ ಜಾಕ್ ಪಾಟ್ ಹಾಗೂ ರಮ್ಮಿ ಆಡಲು ಅವಕಾಶ ನೀಡಲಾಗುತ್ತದೆ. ಆದರೆ, ಅಗ್ರಿ ಕ್ಲಬ್‌ನಲ್ಲಿ ಸಮಯ ಮೀರಿ ಇತರೆ ಜೂಜಿನಲ್ಲಿ ತಡರಾತ್ರಿಯವರೆಗೆ ಹಲವರು ತೊಡಗಿದ್ದರು ಎನ್ನಲಾಗಿದೆ. ಅಗ್ರಿ ಕ್ಲಬ್‌ನ ಸದಸ್ಯರಲ್ಲದೆ ರಾಮನಗರ, ಚನ್ನಪಟ್ಟಣ ಭಾಗದಲ್ಲಿ ಹಲವರು ಗೆಸ್ಟ್ ಹೆಸರಿನಲ್ಲಿ ಬಂದು ಇಲ್ಲಿ ಜೂಜಿನಲ್ಲಿ ತೊಡಗಿದ್ದರು ಎನ್ನಲಾಗಿದ್ದು, ಇದರ ಮಾಹಿತಿ ಪಡೆದ ಪೊಲೀಸರು, ಮಧ್ಯರಾತ್ರಿ ದಾಳಿ ನಡೆಸಿದರು. ಈ ಸಂದರ್ಭದಲ್ಲಿ ಕೆಲವರು ಕೌಂಪೌಂಡ್ ನೆಗೆದು ಪರಾರಿಯಾದರು ಎಂದು ತಿಳಿದುಬಂದಿದೆ.
ದಾಳಿ ಸಂದರ್ಭದಲ್ಲಿ ೧೦ ಲಕ್ಷ ರೂ.ಗಿಂತಲೂ ಹೆಚ್ಚು ಹಣ ಸಿಕ್ಕಿರುವುದರಿಂದ ಇಲ್ಲಿ ರಮ್ಮಿ, ಜಾಕ್‌ಪಾಟ್ ಅಷ್ಟೇ ಅಲ್ಲದೆ ಜೂಜು ನಡೆಯುತ್ತಿರುವ ಅನುಮಾನಗಳು ವ್ಯಕ್ತವಾಗಿದೆ. ಪದೇ ಪದೇ ಅಗ್ರಿ ಕ್ಲಬ್ ಮೇಲೆ ಇಂತಹ ದಾಳಿ ನಡೆಯುತ್ತಿರುವುದು ಹಲವು ಅನುಮಾನಗಳಿಗೆ ಕಾರಣವಾಗಿದ್ದು, ಪೊಲೀಸರು ಸೂಕ್ತ ತನಿಖೆ ನಡೆಸಿ ತಪ್ಪಿತಸ್ಥರ ವಿರುದ್ದ ಕಾನೂನು ಕ್ರಮ ಕೈಗೊಳ್ಳಬೇಕೆಂದು ಸಾರ್ವಜನಿಕರು ಆಗ್ರಹಿಸಿದ್ದಾರೆ. ಮಂಡ್ಯ ಗ್ರಾಮಾಂತರ ಪೊಲೀಸರು ಈ ಸಂಬಂಧ ಪ್ರಕರಣ ದಾಖಲಿಸಿಕೊಂಡು ಮುಂದಿನ ಕ್ರಮ ಕೈಗೊಂಡಿದ್ದಾರೆ.
ಎಚ್.ಡಿ.ಕೋಟೆ: ತಾಲೂಕಿನ ಹ್ಯಾಂಡ್‌ಪೋಸ್ಟ್ ಜಕ್ಕಳ್ಳಿ ಸಮೀಪವಿರುವ ಜಫ್ರುಲ್ಲಾ ಎಂಬುವರಿಗೆ ಸೇರಿದ ಗುಜರಿ ಗೋಡೌನ್‌ಗೆ ಬೆಂಕಿ ತಗುಲಿ, ಲಕ್ಷಾಂತರ ರೂಪಾಯಿ ವೆಚ್ಚದ…
ಪಾಟ್ನಾ: ವಂದೇ ಭಾರತ್ ಎಕ್ಸ್‌ಪ್ರೆಸ್ ರೈಲಿನಲ್ಲಿ ಪ್ರಯಾಣಿಕರಿಗೆ ನೀಡಿದ ಮೊಸರಿನಲ್ಲಿ ಹುಳುಗಳು ಪತ್ತೆಯಾದ ಹಿನ್ನೆಲೆಯಲ್ಲಿ ರೈಲ್ವೆ ಇಲಾಖೆ ಐಆರ್‌ಸಿಟಿಸಿಗೆ 10…
ಮಹಾದೇಶ್ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ತಾಲ್ಲೂಕಿನ ಬಿಆರ್‌ಟಿ ಹುಲಿ ಸಂರಕ್ಷಿತ ಪ್ರದೇಶ ಬೈಲೂರು ವಲಯ ವ್ಯಾಪ್ತಿಯ…
ಮೈಸೂರು: ಜನಸ್ನೇಹಿ ಪಾದಾಚಾರಿ ಮಾರ್ಗಗಳ ಅಭಿವೃದ್ಧಿಗೆ 10 ಕೋಟಿ ರೂ ಮೀಸಲಿಟ್ಟಿರುವ ಪಾಲಿಕೆಯು ಪಾರಂಪರಿಕ ಕಟ್ಟಡಗಳ ಅಭಿವೃದ್ಧಿಗೆ ನಯಾಪೈಸೆ ಅನುದಾನ…
ಗುಂಡ್ಲುಪೇಟೆ: ತಾಲ್ಲೂಕಿನ ಮದ್ದೂರು ವಲಯದಲ್ಲಿ ಮತ್ತೆರಡು ಹುಲಿಗಳು ಪ್ರತ್ಯಕ್ಷವಾಗಿದ್ದು, ಸ್ಥಳೀಯರಲ್ಲಿ ಆತಂಕ ಮನೆಮಾಡಿದೆ. ಹುಲಿಗಳ ಚಲನವಲನದ ದೃಶ್ಯ ಡ್ರೋನ್ ಕ್ಯಾಮೆರಾದಲ್ಲಿ…
ಬೆಂಗಳೂರು: ಕಾಂಗ್ರೆಸ್ ಸರ್ಕಾರ ಬಜೆಟ್ ಮೂಲಕ ಜನರನ್ನು ಸಾಲದ ಕೂಪಕ್ಕೆ ತಳ್ಳಿರುವುದನ್ನು ಅಧಿವೇಶನದಲ್ಲಿ ಮನವರಿಕೆ ಮಾಡಿಕೊಟ್ಟಿದ್ದೇವೆ. ಹಾಗೆಯೇ ಅನೇಕ ಸಮಸ್ಯೆಗಳನ್ನು…