ಮಂಡ್ಯ

ಸಾಲಕ್ಕೆ ಹೆದರಿ ಒಂದೇ ಕುಟುಂಬದ ಮೂವರು ಆತ್ಮಹತ್ಯೆ

ಮಂಡ್ಯ: ಸಾಲದಿಂದ ಬೇಸತ್ತು ಒಂದೇ ಕುಟುಂಬದ ಮೂವರು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಮಂಡ್ಯ ಜಿಲ್ಲೆಯ ಯಲಿಯೂರು ಗ್ರಾಮದ ಬಳಿ ನಡೆದಿದೆ.

ಮಾಸ್ತಪ್ಪ (65), ರತ್ನಮ್ಮ (45), ಮಗಳು ಲಕ್ಷ್ಮೀ(18) ಎಂಬುವವರು ಮೃತ ದುರ್ದೈವಿಗಳಾಗಿದ್ದು. ಮೃತರು ಶ್ರೀರಂಗಪಟ್ಟಣದ ಗಂಜಾಂ ನಿವಾಸಿಗಳು ಎಂದು ತಿಳಿದು ಬಂದಿದೆ.

ಗಂಜಾಂ ನಿವಾಸಿ ಮಾಸ್ತಪ್ಪ ಎಂಬುವವರು ತುಂಬಾ ಬಡವರಾಗಿದ್ದು, ಜೀವನಕ್ಕಾಗಿ ಆಟೋ ಓಡಿಸುತ್ತಿದ್ದರು. ತಮ್ಮ ಕುಟುಂಬ ನಿರ್ವಹಣೆಗಾಗಿ 3 ಲಕ್ಷ ರೂ. ಕೈ ಸಾಲ ಮಾಡಿಕೊಂಡಿದ್ದರು.

ಸಾಲ ಕೊಟ್ಟವರು ಮನೆ ಬಳಿ ಬಂದು ಗಲಾಟೆ ಮಾಡಿದ ಹಿನ್ನಲೆಯಲ್ಲಿ ಮರ್ಯಾದೆಗೆ ಅಂಜಿ ಕುಟುಂಬ ಸಮೇತ ತಾಲೂಕಿನ ಯಲಿಯೂರು ಬಳಿಯ ವಿಸಿ ನಾಲೆಗೆ ಹಾರಿ ಅತ್ಮಹತ್ಯೆ ಮಾಡಿಕೊಂಡಿದ್ದಾರೆ.

ಆತ್ಮಹತ್ಯೆ ಮಾಡಿಕೊಂಡವರಲ್ಲಿ ಇಬ್ಬರ ಮೃತದೇಹ ಪತ್ತೆಯಾಗಿದ್ದು ಮತ್ತೊಬ್ಬರಿಗಾಗಿ ಹುಡುಕಾಟ ನಡೆಸಲಾಗುತ್ತಿದೆ. ಇನ್ನು ಘಟನೆ ಸಂಬಂಧ ಮಂಡ್ಯ ಗ್ರಾಮಾಂತರ ಪೊಲೀಸ್‌ ಠಾಣೆ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದೆ.

ಆಂದೋಲನ ಡೆಸ್ಕ್

Recent Posts

ಬಿಟ್‌ಕಾಯಿಲ್‌ ಪ್ರಕರಣ; ನಲಪಾಡ್‌ ಹ್ಯಾರಿಸ್‌ ಮನೆ ಸೇರಿ 17 ಕಡೆ ಇ.ಡಿ ದಾಳಿ

ಬೆಂಗಳೂರು : ಕಾಂಗ್ರೆಸ್ ಶಾಸಕ ಎನ್.​ಎ ಹ್ಯಾರಿಸ್ ಮತ್ತು ಅವರ ಪುತ್ರ ಮೊಹಮ್ಮದ್ ನಲಪಾಡ್ ನಿವಾಸಗಳ ಮೇಲೆ ಸೋಮವಾರ ಬೆಳಗ್ಗೆ…

7 mins ago

ಪ್ರಸ್ತುತ ದಲಿತ ರಾಜಕಾರಣದಲ್ಲಿ ಮಹದೇವಪ್ಪ ಎಂಬ ವಿದ್ಯಮಾನ

ರಮೇಶ್‌ ಎಚ್.ಕೆ. ಶಿವಮೊಗ್ಗ ಕರ್ನಾಟಕದಲ್ಲಿ ದಲಿತ ವರ್ಗಗಳ ರಾಜಕಾರಣ ಎಂದಾಕ್ಷಣ ಕೆ. ಹೆಚ್. ರಂಗನಾಥ್, ಬಿ. ರಾಚಯ್ಯ, ಎನ್. ರಾಚಯ್ಯ,…

43 mins ago

ಬೆಂ-ಮೈ ಹೆದ್ದಾರಿಯಲ್ಲಿ ಕಾರು-ಬಸ್ ಡಿಕ್ಕಿ ; ತಪ್ಪಿದ ಭಾರೀ ಅನಾಹುತ, ಪ್ರಯಾಣಿಕರು ಪಾರು

ಮಂಡ್ಯ : ಬೆಂಗಳೂರು-ಮೈಸೂರು ದಶಪಥ ರಾಷ್ಟ್ರೀಯ ಹೆದ್ದಾರಿಯಲ್ಲಿ ಸೋಮವಾರ ಬೆಳ್ಳಂಬೆಳಗ್ಗೆ ಕಾರು ಮತ್ತು ಬಸ್ ನಡುವೆ ಅಪಘಾತ ಸಂಭವಿಸಿದೆ. ಅದೃಷ್ಟವಶಾತ್…

1 hour ago

ಅಮೆರಿಕ ವಶವಾದ ಇರಾನ್‌ ಹಡಗು ; ಸಶಸ್ತ್ರ ಕಡಲ್ಗಳ್ಳತನ ಎಂದ ಇರಾನ್‌

ವಾಷಿಂಗ್ಟನ್ : ಇರಾನ್ ಧ್ವಜವಿರುವ ಸರಕು ಹಡಗನ್ನು (ಟೂಸ್ಕಾ) ಒಮಾನ್ ಕೊಲ್ಲಿಯಲ್ಲಿ (ಹಾರ್ಮುಜ್ ಜಲಸಂಧಿ ಸಮೀಪ) ನಮ್ಮ ಭದ್ರತಾ ಪಡೆಗಳು…

1 hour ago

ದಲಿತ ಚಿಂತಕ ಧೀಮಂತ ನಾಯಕ ಡಾ.ಎಚ್.ಸಿ.ಮಹದೇವಪ್ಪ ಅವರ ಹೋರಾಟದ ಕತೆ……

‘ಆಂದೋಲನ’ ವಿಶೇಷ ಸಂದರ್ಶನದಲ್ಲಿ ಸಮಾಜ ಕಲ್ಯಾಣ ಸಚಿವ ಡಾ. ಎಚ್.ಸಿ.ಮಹದೇವಪ್ಪ ಅವರ ಮನದಾಳದ ಮಾತು ಇಲ್ಲಿದೆ ನಿರೂಪಣೆ.. ಆರ್‌.ಟಿ.ವಿಠ್ಠಲಮೂರ್ತಿ ನಾನು…

2 hours ago

ಬಿಸಿ ಗಾಳಿ ; ಸಮವಸ್ತ್ರ ಕಡ್ಡಾಯಗೊಳಿಸದಂತೆ ಜಿಲ್ಲಾಧಿಕಾರಿ ಆದೇಶ

ಚಾಮರಾಜನಗರ : ತೀವ್ರ ಬಿಸಿ ಗಾಳಿ (ಹೀಟ್ ವೇವ್) ಇರುವುದರಿಂದ ಜಿಲ್ಲೆಯ ಎಲ್ಲಾ ಖಾಸಗಿ ಅನುದಾನಿತ, ಅನುದಾನರಹಿತ ಹಾಗೂ ಸರ್ಕಾರಿ…

5 hours ago