ಮಂಡ್ಯ

ಸೆ.25 ರಿಂದ 4 ದಿನಗಳ ಶ್ರೀರಂಗಪಟ್ಟಣ ದಸರಾ

ಮಂಡ್ಯ : ಜಿಲ್ಲಾಡಳಿತದ ವತಿಯಿಂದ ಈ ಬಾರಿ 4 ದಿನಗಳ ಕಾಲ ಸೆಪ್ಟೆಂಬರ್ 25 ರಿಂದ 28 ರವರಗೆ ಶ್ರೀರಂಗಪಟ್ಟಣ ದಸರಾ ಹಮ್ಮಿಕೊಳ್ಳಲಾಗಿದೆ. ಕಾರ್ಯಕ್ರಮಗಳು ವಿಭಿನ್ನವಾಗಿ ಜನರನ್ನು ಆಕರ್ಷಿಸುವ ರೀತಿ ಇರಲಿ ಎಂದು ಕೃಷಿ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಎನ್ ಚಲುವರಾಯಸ್ವಾಮಿ ಅವರು ತಿಳಿಸಿದರು.

ಜಿಲ್ಲಾ ಪಂಚಾಯತ್ ಕಾವೇರಿ ಸಭಾಂಗಣದಲ್ಲಿ ಗುರುವಾರ ನಡೆದ ಪೂರ್ವಭಾವಿ ಸದ್ಧತಾ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು. ಶ್ರೀರಂಗಪಟ್ಟಣ ದಸರಾ ಕಾರ್ಯಕ್ರಮದ ಮೆರವಣಿಗೆ ಗೆ ಸೆಪ್ಟೆಂಬರ್ 25 ರಂದು ಮಧ್ಯಾಹ್ನ 3 ಗಂಟೆಗೆ ಚಾಲನೆ ನೀಡಲಾಗುವುದು. ಕಾರ್ಯಕ್ರಮಗಳು ಶ್ರೀ ರಂಗನಾಥ್ ದೇವಸ್ಥಾನದ ಮುಂಭಾಗದ ಆವರಣದಲ್ಲಿ ವಿಜೃಂಭಣೆಯಿಂದ ನಡೆಯಲಿದೆ.

ಸ್ಥಳೀಯ ಕಲಾವಿದರಿಗೆ ಆದ್ಯತೆ ನೀಡಿ ಶ್ರೀರಂಗಪಟ್ಟಣ ದಸರಾ ಮೆರವಣಿಕೆ ಹಾಗೂ ವೇದಿಕೆ ಕಾರ್ಯಕ್ರಮಗಳಲ್ಲಿ ಸ್ಥಳೀಯ ಕಲಾವಿದರಿಗೆ ಆದ್ಯತೆ ನೀಡಲಾಗುವುದು. ಕಾರ್ಯಕ್ರಮಗಳಲ್ಲಿ ನಮ್ಮ ಇತಿಹಾಸ ಹಾಗೂ ಸಂಸ್ಕೃತಿಗಳ ಹಿನ್ನಲೆ ಹೊಂದಿರಲಿ ಎಂದರು.

ಮಹಿಳೆಯರು, ಮಕ್ಕಳು, ಯುವಕರು, ವೃದ್ಧರು ಸೇರಿದಂತೆ ವಿವಿಧ ವಯೋಮಿತಿಗಳ ಜನರು ಭಾಗವಹಿಸುವ ರೀತಿ ಕಾರ್ಯಕ್ರಮಗಳನ್ನು ಅಧಿಕಾರಿಗಳು ವೈವಿದ್ಯಮಯವಾಗಿ ರೂಪಿಸಿ ದಸರಾ ಕಾರ್ಯಕ್ರಮಗಳನ್ನು ಯಾವುದೇ ಲೋಪವಿಲ್ಲದಂತೆ ಅಚ್ಚುಕಟ್ಟಾಗಿ ಸಂಘಟಿಸಿ ಎಂದರು.

ಶ್ರೀರಂಗಪಟ್ಟಣ ವಿಧಾನಸಭಾ ಕ್ಷೇತ್ರದ ಶಾಸಕ ರಮೇಶ್ ಬಂಡಿಸಿದ್ದೇಗೌಡ ಅವರು ಮಾತನಾಡಿ ಹಾಲು ಕರೆಯುವ ಸ್ಪರ್ಧೆಯ ಜೊತೆಗೆ ಈ ಬಾರಿ ರಾಸುಗಳ ಪ್ರದರ್ಶನ ಏರ್ಪಡಿಸಿ ಬಹುಮಾನ ವಿತರಣೆ ಮಾಡಬೇಕು ಎಂದರು.

ಮೆರವಣಿಗೆಗೆ ಚಾಲನೆ ನೀಡುವ ಕಿರಂಗೂರು ಬನ್ನಿಮಂಟಪದಲ್ಲಿ ಸ್ವಚ್ಛತಾ ಕಾರ್ಯಕ್ರಮಗಳನ್ನು ಕೈಗೊಂಡು ಸಿದ್ಧತೆಗಳನ್ನು ಪ್ರಾರಂಭಿಸಿ. ಯೋಗ ದಸರಾದಲ್ಲಿ ಯೋಗ ಪ್ರದರ್ಶನದೊಂದಿಗೆ ಯೋಗ ಸ್ಪರ್ಧೆಗಳನ್ನು ಸಹ ಆಯೋಜಿಸಿ. ಶಿಕ್ಷಣ ಇಲಾಖೆ ಅವರು ಯೋಗ ಸ್ಪರ್ಧೆಗಳಲ್ಲಿ ಹೆಚ್ಚಿನ ವಿದ್ಯಾರ್ಥಿಗಳು ಭಾಗವಹಿಸುವಂತೆ ಶಾಲಾ ಕಾಲೇಜುಗಳಿಗೆ ಮಾಹಿತಿ ನೀಡಿ ಎಂದರು.

ಜಿಲ್ಲಾಧಿಕಾರಿ ಡಾ: ಕುಮಾರ ಅವರು ಮಾತನಾಡಿ ಶ್ರೀರಂಗಪಟ್ಟಣ ದಸರಾ ಕಾರ್ಯಕ್ರಮಗಳ ಆಯೋಜನೆಗಾಗಿ ಸ್ವಾಗತ, ಕ್ರೀಡಾ, ವೇದಿಕೆ, ಮೆರವಣಿಗೆ, ಆರೋಗ್ಯ, ನಗರ ಅಲಂಕಾರ, ಹಣಕಾಸು, ಸ್ವಚ್ಛತೆ, ಆಹಾರ, ಆಹಾರ ಮೇಳ, ವಸ್ತು ಪ್ರಸರ್ಶನ, ಸಾಂಸ್ಕೃತಿಕ ಕಾರ್ಯಕ್ರನ ಸೇರಿದಂತೆ ವಿವಿಧ ಉಪಸಮಿತಿಗಳನ್ನು ರಚಿಸಿ ಅಧಿಕಾರಿಗಳನ್ನು ನಿಯೋಜಿಸಲಾಗಿದೆ ಎಂದರು.

ವಸ್ತು ಪ್ರದರ್ಶನ ಸಮಿತಿಯಿಂದ ಅನಾವರಣ ಗೊಳಿಸಲಾಗುವ ಮಳಿಗೆಗಳಲ್ಲಿ ಅರ್ಧದಷ್ಟು ಮಳಿಗೆಗಳನ್ನು ಆಹಾರ ಮೇಳಕ್ಕೆ ನೀಡಲಾಗುವುದು. ಇಲ್ಲಿ ವಿವಿಧ ಜಿಲ್ಲೆಯಲ್ಲಿ ಹೆಸರುವಾಸಿಯಾಗಿರುವ ಆಹಾರ ಪದಾರ್ಥಗಳನ್ನು ಮಾರಾಟ ಮಾಡಲು ವ್ಯವಸ್ಥೆ ಮಾಡಲಾಗುವುದು ಎಂದರು‌.

ಸಭೆಯಲ್ಲಿ ಮಂಡ್ಯ ನಗರಸಭೆ ಅಧ್ಯಕ್ಷ ಎಂ.ವಿ ಪ್ರಕಾಶ್, ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ನಂದಿನಿ ಕೆ.ಆರ್, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಮಲ್ಲಿಕಾರ್ಜುನ ಬಾಲದಂಡಿ, ಅಪರ ಜಿಲ್ಲಾಧಿಕಾರಿ ಬಿ.ಸಿ.ಶಿವಾನಂದಮೂರ್ತಿ, ಪಾಂಡವಪುರ ಉಪವಿಭಾಗಾಧಿಕಾರಿ ಶ್ರೀನಿವಾಸ್ ಸೇರಿದಂತೆ ಇನ್ನಿತರೆ ಅಧಿಕಾರಿಗಳು ಉಪಸ್ಥಿತರಿದ್ದರು.

ಆಂದೋಲನ ಡೆಸ್ಕ್

Recent Posts

ಓದುಗರ ಪತ್ರ: ಇನ್ಸ್‌ಪೆಕ್ಟರ್ ಧನಂಜಯರ ಹೇಳಿಕೆಯಲ್ಲಿ ತಪ್ಪಿಲ್ಲ

ತಿ.ನರಸೀಪುರ ಪಟ್ಟಣದಲ್ಲಿ ನಡೆದ ಗಣೇಶೋತ್ಸವ ಪೂರ್ವಭಾವಿ ಸಭೆಯಲ್ಲಿ ಇನ್ಸ್ ಪೆಕ್ಟರ್ ಧನಂಜಯ ಅವರು ಪ್ರಚೋದನಕಾರಿಯಾಗಿ ಮಾತನಾಡಿದ್ದಾರೆ ಎಂದು ಸಾಮಾಜಿಕ ಜಾಲತಾಣಗಳಲ್ಲಿ…

6 hours ago

ಓದುಗರ ಪತ್ರ: ದಸರಾ ಬಂದಾಗ ಮಾತ್ರ ಮೈಸೂರಿಗೆ ಸಿಂಗಾರ

ವಿಶ್ವವಿಖ್ಯಾತ ಮೈಸೂರು ದಸರಾಕ್ಕೆ ದಿನಗಣನೆ ಆರಂಭವಾಗಿದ್ದು, ಈ ನಿಟ್ಟಿನಲ್ಲಿ ಜಿಲ್ಲಾ ಆಡಳಿತ ಸಕಲ ಸಿದ್ಧತೆಗಳನ್ನೂ ಮಾಡುತ್ತಿದೆ. ದಸರಾ ಆನೆಗಳು ಅರಮನೆ…

6 hours ago

ಓದುಗರ ಪತ್ರ: ತ್ಯಾಜ್ಯದಿಂದ ವಿದ್ಯುತ್ ಉತ್ಪಾದನೆ ಕಡ್ಡಾಯವಾಗಲಿ

ರಾಜ್ಯದ ನಗರ ಪ್ರದೇಶಗಳಲ್ಲಿ ದಿನಂಪ್ರತಿ ಶೇ.೭೦ ಕ್ಕೂ ಹೆಚ್ಚು ಹಸಿ ತ್ಯಾಜ್ಯ ಸೃಷ್ಟಿಯಾಗುತ್ತಿದೆ. ಈ ತ್ಯಾಜ್ಯವನ್ನು ಸುಮ್ಮನೆ ಸುರಿಯುವ ಬದಲು…

6 hours ago

ಓದುಗರ ಪತ್ರ: ಯುಪಿಐ ವಹಿವಾಟು ಶುಲ್ಕ; ಹೊರೆಯಾಗದಿರಲಿ

ಇತ್ತೀಚಿನ ದಿನಗಳಲ್ಲಿ ಡಿಜಿಟಲ್ ಇಂಡಿಯಾ ಯೋಜನೆಯಡಿ ಯುಪಿಐ ಪಾವತಿ ವ್ಯವಸ್ಥೆಯು ಭಾರತೀಯರ ದೈನಂದಿನ ಜೀವನದ ಅವಿಭಾಜ್ಯ ಅಂಗವಾಗಿದೆ. ಜೇಬಿನಲ್ಲಿ ಹಣವಿಲ್ಲದಿದ್ದರೂ…

6 hours ago

ಮೋದಿ ಅಧಿಕಾರ ಪರ್ವ ರಜತ ಮಹೋತ್ಸವ: ಏನಿತ್ತು? ಏನಿಲ್ಲ?

ನರೇಂದ್ರ ಮೋದಿ ಅವರು ೨೦೦೧ರಲ್ಲಿ ಮೊದಲ ಬಾರಿಗೆ ಗುಜರಾತ್ ಸಿಎಂ ಆಗಿ ಅಧಿಕಾರ ಸ್ವೀಕರಿಸಿದರು. ಸತತ ೧೫ ವರ್ಷಗಳು ಅಲ್ಲಿ…

6 hours ago

ತನ್ನನ್ನು ತಾನೇ ಚಿವುಟಿ ಎಚ್ಚರಿಸಿದ್ದ ನೆಹರೂ

ಜವಾಹರಲಾಲ್ ಎಂಬ ಅಪಾಯಕಾರಿ ಮನುಷ್ಯ ೬ ಬಾರಿ ಕಾಂಗ್ರೆಸ್ ಪಕ್ಷದ ರಾಷ್ಟ್ರಾಧ್ಯಕ್ಷರಾಗಿ ೩ ಬಾರಿ ಸತತವಾಗಿ ದೇಶದ ಪ್ರಧಾನಿಯಾಗಿದ್ದ ಜವಾಹರಲಾಲ್…

6 hours ago