ಮಂಡ್ಯ

ಮಂಡ್ಯ: ಕೆಆರ್‌ಎಸ್‌ ಜಲಾಶಯದಿಂದ ನೀರು ಬಿಡುಗಡೆ; ರೈತರ ಆಕ್ರೋಶ

ಮಂಡ್ಯ: ಜಿಲ್ಲೆಯ ಶ್ರೀರಂಗಪಟ್ಟಣ ತಾಲೂಕಿನಲ್ಲಿರುವ ಕೆಆರ್‌ಎಸ್‌ ಜಲಾಶಯದಿಂದ ನಿನ್ನೆ ( ಮಾರ್ಚ್‌ 9 ) 4000 ಕ್ಯೂಸೆಕ್‌ ನೀರನ್ನು ಬಿಡುಗಡೆ ಮಾಡಲಾಗಿದ್ದು, ಇದರ ವಿರುದ್ಧ ಕಿಡಿಕಾರಿರುವ ರೈತರು ಆಕ್ರೋಶ ಹೊರಹಾಕಿದ್ದಾರೆ.

ʼಕುಡಿಯುವ ಉದ್ದೇಶಕ್ಕಾಗಿ ಬೆಂಗಳೂರಿಗೆ 700 ಕ್ಯೂಸೆಕ್‌ ನೀರು ಸಾಕು, ಆದರೆ 4000 ಕ್ಯೂಸೆಕ್‌ ನೀರು ಬಿಡುವ ಅಗತ್ಯವೇನಿತ್ತು? ತಮಿಳುನಾಡಿಗೆ ನೀರು ಕೊಡುವ ಉದ್ದೇಶ ಸರ್ಕಾರದ್ದುʼ ಎಂದು ರೈತ ಮುಖಂಡರು ಕಿಡಿಕಾರಿದ್ದಾರೆ.

ಈಗಾಗಲೇ ಬೇಸಿಗೆಯ ಪ್ರಭಾವ ಕಾವೇರಿ ನೀರಿನ ಮೇಲೆ ಬಿದ್ದಿದ್ದು, ನೀರಿನ ಅಭಾವ ಉಂಟಾಗಿದೆ. ಕಳೆದ ವರ್ಷದಿಂದ ಸಾಕಷ್ಟು ಬಾರಿ ತಮಿಳುನಾಡಿಗೆ ನೀರು ಹರಿಸಿರುವ ಕರ್ನಾಟಕ ಇಂತಹ ಕಠಿಣ ಸಂದರ್ಭದಲ್ಲಿ ನೀರು ಹರಿಸಿರುವುದು ಎಷ್ಟು ಸರಿ ಎಂದು ಪ್ರಶ್ನಿಸಿದ್ದಾರೆ.

andolana

Recent Posts

ಕನ್ನಡಿಗರ ರಕ್ಷಣೆಗೆ ಕ್ರಮ ಕೈಗೊಳ್ಳಿ: ಪ್ರಧಾನಿ ಮೋದಿಗೆ ಪತ್ರ ಬರೆದ ಸಿಎಂ ಸಿದ್ದರಾಮಯ್ಯ

ಬೆಂಗಳೂರು: ಇರಾನ್‌-ಇಸ್ರೇಲ್‌ ನಡುವಿನ ಸಂಘರ್ಷ ಏರ್ಪಟ್ಟಿರುವ ಪರಿಣಾಮ ಕನ್ನಡಿಗರ ರಕ್ಷಣೆಗೆ ತುರ್ತು ಕ್ರಮ ಕೈಗೊಳ್ಳಿ ಎಂದು ಪ್ರಧಾನಿ ನರೇಂದ್ರ ಮೋದಿ…

8 hours ago

ಕಾನೂನು ವ್ಯವಸ್ಥೆ ಕಾಪಾಡುವಲ್ಲಿ ರಾಜ್ಯ ಸರ್ಕಾರ ವಿಫಲ: ಸಂಸದ ಯದುವೀರ್‌ ಒಡೆಯರ್‌

ನಾಪೋಕ್ಲು: ಕಾನೂನು ವ್ಯವಸ್ಥೆ ಕಾಪಾಡುವಲ್ಲಿ ರಾಜ್ಯ ಸರ್ಕಾರ ಸಂಪೂರ್ಣ ವಿಫಲವಾಗಿದೆ ಎಂದು ಸಂಸದ ಯದುವೀರ್‌ ಕೃಷ್ಣದತ್ತ ಚಾಮರಾಜ ಒಡೆಯರ್‌ ವಾಗ್ದಾಳಿ…

9 hours ago

ಹನೂರು: ಶಾಲೆಗೆ ನೂತನ ಕಟ್ಟಡ ನಿರ್ಮಿಸುವಂತೆ ಆಗ್ರಹ: ಜಿಲ್ಲಾಧಿಕಾರಿಗೆ ಮನವಿ ಸಲ್ಲಿಸಿದ ಶಿಕ್ಷಕ

ಮಹಾದೇಶ್‌ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ತಾಲ್ಲೂಕಿನ ಮಲೆಮಹದೇಶ್ವರ ಬೆಟ್ಟ ಗ್ರಾಮ ಪಂಚಾಯಿತಿ ವ್ಯಾಪ್ತಿಯ ತೊಳಸಿಕೆರೆ ಗ್ರಾಮದ…

9 hours ago

ರಾಜ್ಯದ ಆರ್ಥಿಕ ದುಸ್ಥಿತಿಯ ವಿರುದ್ಧ ಹೋರಾಟ: ವಿಪಕ್ಷ ನಾಯಕ ಆರ್.‌ಅಶೋಕ್‌

ಬೆಂಗಳೂರು: ಈ ಬಾರಿಯ ಬಜೆಟ್‌ ಅಧಿವೇಶನದಲ್ಲಿ ಸರ್ಕಾರದ ಲೋಪದೋಷಗಳನ್ನು ಚರ್ಚಿಸಲಾಗುವುದು. ರಾಜ್ಯದ ಆರ್ಥಿಕ ದುಸ್ಥಿತಿಯ ವಿರುದ್ಧ ಹೋರಾಟ ಮಾಡಲಾಗುವುದು ಎಂದು…

9 hours ago

ನಾಳೆ ರಕ್ತ ಚಂದ್ರಗ್ರಹಣ: ಕೊಡಗಿನ ವಿವಿಧ ದೇವಾಲಯಗಳಲ್ಲಿ ಪೂಜಾ ಸಮಯ ಬದಲು

ಕೊಡಗು: ನಾಳೆ ವರ್ಷದ ಮೊದಲ ಚಂದ್ರಗ್ರಹಣ ಹೋಳಿ ಹುಣ್ಣಿಮೆಯ ದಿನದಂದು ಸಂಭವಿಸುತ್ತಿದೆ. ಈ ಹಿನ್ನೆಲೆಯಲ್ಲಿ ರಾಜ್ಯದ ಹಲವು ದೇವಾಲಯಗಳ ಪೂಜಾ…

9 hours ago

ಸಿಎಂ ಸಿದ್ದರಾಮಯ್ಯಗೆ ಪತ್ರ ಬರೆದ ಎಚ್.ಡಿ.ಕುಮಾರಸ್ವಾಮಿ: ಕಾರಣ ಇಷ್ಟೇ.!

ಮಂಡ್ಯ: ಜಿಲ್ಲೆಯ ಮದ್ದೂರು ತಾಲ್ಲೂಕಿನ ಗೆಜ್ಜಲಗೆರೆ, ಗೊರವನಹಳ್ಳಿ, ಚಾಮನಹಳ್ಳಿ, ಸೋಮನಹಳ್ಳಿ ಸೇರಿದಂತೆ ವಿವಿಧ ಪ್ರದೇಶಗಳನ್ನು ಸ್ಥಳೀಯರ ಆಶಯಗಳಿಗೆ ವಿರುದ್ಧವಾಗಿ ಮದ್ದೂರು…

10 hours ago