Mysore
21
overcast clouds

Social Media

ಶುಕ್ರವಾರ, 18 ಅಕ್ಟೋಬರ್ 2024
Light
Dark

ಮುಂಗಾರು ಬೆಳೆಗಳಿಗೆ ನಾಲೆಗಳ ಮೂಲಕ 5 ಕಟ್ಟು ನೀರು: ಸಚಿವ ಚಲುವರಾಯಸ್ವಾಮಿ

ಮಂಡ್ಯ: ಸಂಪೂರ್ಣ ಭರ್ತಿಯಾಗಿರುವ ಕೆಆರ್‌ಎಸ್‌ ಜಲಾಶಯದಿಂದ ಮುಂಗಾರು ಬೆಳೆಗಳಿಗೆ 5 ಕಟ್ಟು ನೀರನ್ನು ಹರಿಸುತ್ತೇವೆ ಎಂದು ಮಂಡ್ಯ ಜಿಲ್ಲಾ ಉಸ್ತುವಾರಿ ಸಚಿವ ಹಾಗೂ ಕೃಷಿ ಸಚಿವ ಚಲುವರಾಯಸ್ವಾಮಿ ತಿಳಿಸಿದ್ದಾರೆ.

ಈ ಬಗ್ಗೆ ಮಂಡ್ಯದಲ್ಲಿ ಮಾಹಿತಿ ನೀಡಿದ ಅವರು, ಮುಂಗಾರು ಬೆಳೆಗಳಿಗೆ ನಾಲೆಗಳು ಮತ್ತು ಅಣೆಕಟ್ಟು ನಾಲೆಗಳ ಮೂಲಕ ನೀರನ್ನು ಹರಿಸಲಾಗುತ್ತಿದೆ. ರೈತರು ಹಿತ-ಮಿತವಾಗಿ ನೀರನ್ನು ಬಳಕೆ ಮಾಡಬೇಕು ಎಂದು ವಿನಂತಿಸಿದರು.

ಕಾವೇರಿ ಜಲಾನಯದ ಪ್ರದೇಶದಲ್ಲಿ ಈ ಬಾರಿ ಉತ್ತಮ ಮಳೆಯಾದ ಪರಿಣಾಮ ಕೆಆರ್‌ಎಸ್‌ ಜಲಾಶಯ ಸಂಪೂರ್ಣ ಭರ್ತಿಯಾಗಿದೆ.

2018ರ ಸುಪ್ರೀಂಕೋರ್ಟ್‌ ಆದೇಶವನ್ನು ಪಾಲನೆ ಮಾಡಬೇಕಿದೆ. ಮುಂದಿನ ಬೇಸಿಗೆಯಲ್ಲಿ ಜನ-ಜಾನುವಾರುಗಳು ಕುಡಿಯಲು ನೀರನ್ನು ಕಾಯ್ದಿರಿಸಬೇಕಾಗಿರುವುದರಿಂದ ನೀರನ್ನು ಎಲ್ಲರೂ ಮಿತವಾಗಿ ಬಳಸಿ ಎಂದು ಮನವಿ ಮಾಡಿದರು.

ಇನ್ನು ಕೆಆರ್‌ಎಸ್‌ ಜಲಾಶಯದಲ್ಲಿ ಲಭ್ಯವಿರುವ ನೀರನ್ನು ಜಲಾಶಯದ ಅಚ್ಚುಕಟ್ಟು ಪ್ರದೇಶದಲ್ಲಿ ಬರುವ ಎಲ್ಲಾ ಕೆರೆ-ಕೆಟ್ಟೆಗಳನ್ನು ತುಂಬಿಸಲು ನಿರ್ಣಯ ಕೈಗೊಳ್ಳಲಾಗಿದೆ ಎಂದರು.

 

 

Tags: