ಮಂಡ್ಯ: ಸಂಪೂರ್ಣ ಭರ್ತಿಯಾಗಿರುವ ಕೆಆರ್‌ಎಸ್ ಜಲಾಶಯದಿಂದ ಮುಂಗಾರು ಬೆಳೆಗಳಿಗೆ 5 ಕಟ್ಟು ನೀರನ್ನು ಹರಿಸುತ್ತೇವೆ ಎಂದು ಮಂಡ್ಯ ಜಿಲ್ಲಾ ಉಸ್ತುವಾರಿ ಸಚಿವ ಹಾಗೂ ಕೃಷಿ ಸಚಿವ ಚಲುವರಾಯಸ್ವಾಮಿ ತಿಳಿಸಿದ್ದಾರೆ.
ಈ ಬಗ್ಗೆ ಮಂಡ್ಯದಲ್ಲಿ ಮಾಹಿತಿ ನೀಡಿದ ಅವರು, ಮುಂಗಾರು ಬೆಳೆಗಳಿಗೆ ನಾಲೆಗಳು ಮತ್ತು ಅಣೆಕಟ್ಟು ನಾಲೆಗಳ ಮೂಲಕ ನೀರನ್ನು ಹರಿಸಲಾಗುತ್ತಿದೆ. ರೈತರು ಹಿತ-ಮಿತವಾಗಿ ನೀರನ್ನು ಬಳಕೆ ಮಾಡಬೇಕು ಎಂದು ವಿನಂತಿಸಿದರು.
ಕಾವೇರಿ ಜಲಾನಯದ ಪ್ರದೇಶದಲ್ಲಿ ಈ ಬಾರಿ ಉತ್ತಮ ಮಳೆಯಾದ ಪರಿಣಾಮ ಕೆಆರ್‌ಎಸ್ ಜಲಾಶಯ ಸಂಪೂರ್ಣ ಭರ್ತಿಯಾಗಿದೆ.
2018ರ ಸುಪ್ರೀಂಕೋರ್ಟ್ ಆದೇಶವನ್ನು ಪಾಲನೆ ಮಾಡಬೇಕಿದೆ. ಮುಂದಿನ ಬೇಸಿಗೆಯಲ್ಲಿ ಜನ-ಜಾನುವಾರುಗಳು ಕುಡಿಯಲು ನೀರನ್ನು ಕಾಯ್ದಿರಿಸಬೇಕಾಗಿರುವುದರಿಂದ ನೀರನ್ನು ಎಲ್ಲರೂ ಮಿತವಾಗಿ ಬಳಸಿ ಎಂದು ಮನವಿ ಮಾಡಿದರು.
ಇನ್ನು ಕೆಆರ್‌ಎಸ್ ಜಲಾಶಯದಲ್ಲಿ ಲಭ್ಯವಿರುವ ನೀರನ್ನು ಜಲಾಶಯದ ಅಚ್ಚುಕಟ್ಟು ಪ್ರದೇಶದಲ್ಲಿ ಬರುವ ಎಲ್ಲಾ ಕೆರೆ-ಕೆಟ್ಟೆಗಳನ್ನು ತುಂಬಿಸಲು ನಿರ್ಣಯ ಕೈಗೊಳ್ಳಲಾಗಿದೆ ಎಂದರು.
ಬೆಳಗಾವಿ: ಸಚಿವೆ ಲಕ್ಷ್ಮಿ ಹೆಬ್ಬಾಳಕರ್ ಅವರಿಗೆ ಅಶ್ಲೀಲ ಪದ ಬಳಸಿ ನಿಂದಿಸಿರುವ ಆರೋಪದ ಮೇಲೆ ಬಂಧಿತಾರಾಗಿರುವ ಬಿಜೆಪಿ ಎಂಎಲ್‌ಸಿ ಸಿ.ಟಿ…
ಮೈಸೂರು: ನಗರದ ಅಲ್ ಅನ್ಸಾರ್ ಆಸ್ಪತ್ರೆಯ ವೈದ್ಯರೊಬ್ಬರ ಮೇಲೆ ದುಷ್ಕರ್ಮಿಗಳು ಬುಧವಾರ ತಡರಾತ್ರಿ ಹಲ್ಲೆ ನಡೆಸಿದ ಘಟನೆ ನಡೆದಿದೆ. ಡಾ.…
' ಗ್ರೇಸ್' ಪೋಷಕರ ದಿನಾಚರಣೆಯಲ್ಲಿ ಮೈಜಿಪಸಂ ಅಧ್ಯಕ್ಷ ಕೆ.ದೀಪಕ್ ಅಭಿಮತ ಮೈಸೂರು : ಹಣ ಆಸ್ತಿಗೆ ಹೆತ್ತವರ ಉಸಿರು ತೆಗೆಯುವ…
ಕನ್ನಡ ಸಾಹಿತ್ಯ ಸಮ್ಮೇಳನ: ಪ್ರಮುಖ ರಸ್ತೆಗಳಿಗೆ ವಿದ್ಯುತ್ ದೀಪಾಲಂಕಾರ ಮಂಡ್ಯ:ಸಕ್ಕರೆ ನಗರಿ ಮಂಡ್ಯದಲ್ಲಿ ಡಿ.20 ರಿಂದ ಮೂರು ದಿನಗಳ ಕಾಲ…
ಮಂಡ್ಯ: 87ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನದ ಅಂಗವಾಗಿ ಮಂಡ್ಯ ನಗರದಲ್ಲಿನ ವಿದ್ಯುತ್ ದೀಪಾಲಂಕಾರಕ್ಕೆ ಕೃಷಿ ಸಚಿವರು ಹಾಗೂ…
ಕೇರಳ ಮೂಲದ ಮಾಸ್ಟರ್ ಮೈಂಡ್ ಸೇರಿದಂತೆ 12 ಆರೋಪಿಗಳ ಬಂಧನ; ಮತ್ತೊಂದು ಮೋಸದ ಜಾಲ ಬಯಲಿಗೆಳೆದ ಕೊಡಗು ಜಿಲ್ಲಾ ಪೊಲೀಸರು…