ಹಲಗೂರು: ಇಲ್ಲಿಗೆ ಸಮೀಪದ ಯತ್ತಂಬಾಡಿ ಗ್ರಾಮದಲ್ಲಿ ತಡರಾತ್ರಿ ಮನೆಯ ಹಿಂಬಾಗಿಲಿನ ಚಿಲಕ ಮುರಿದು ಒಳನುಗ್ಗಿರುವ ದುಷ್ಕರ್ಮಿಗಳು ಮನೆಯಲ್ಲಿದ್ದ ಚಿನ್ನಾಭಾರಣಗಳನ್ನ ದೋಚಿ ಪರಾರಿಯಾಗಿರುವ ಘಟನೆ ನಡೆದಿದೆ.
ಯತ್ತಂಬಾಡಿ ಗ್ರಾಮದ ಪ್ರೇಮಾ ಎಂಬವರು ಮನೆಯವರೆಲ್ಲ ರಾತ್ರಿ ಊಟ ಮುಗಿಸಿ ಮಲಗಿದ್ದ ವೇಳೆ ಮನೆಯ ಹಿಂಬಾಗಿಲಿನ ಚಿಲಕ ಮುರಿದು ಒಳ ನುಗ್ಗಿರುವ ಕಳ್ಳರು ಬೀರುವಿನ ಬಾಗಿಲು ತೆಗೆದು ಸುಮಾರು ೫ ಲಕ್ಷ ರೂ. ಬೆಲೆ ಬಾಳುವ ಚಿನ್ನಾಭರಣಗಳನ್ನ ದೊಚಿ ಪರಾರಿಯಾಗಿದ್ದಾರೆ ಎಂದು ಮನೆಯ ಮಾಲೀಕರಾದ ಪ್ರೇಮ ತಿಳಿಸಿದರು.
ಸ್ಥಳಕ್ಕೆ ಅಪರ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಗಂಗಾಧರಸ್ವಾಮಿ, ಪಿಎಸ್‌ಐ ಮಹೇಂದ್ರ ಭೇಟಿ ನೀಡಿ ಪರಿಶೀಲನೆ ನಡೆಸಿದರು. ಇದೇ ವೇಳೆ ಶ್ವಾನದಳ ಹಾಗೂ ಬೆರಳಚ್ಚು ತಜ್ಞರು ಆಗಮಿಸಿ ಪರಿಶೀಲಿಸಿದರು.
ಈ ಸಂಬಂಧ ಹಲಗೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಕೊಡಗು: ಕೊಡಗು ಜಿಲ್ಲೆ ಶನಿವಾರಸಂತೆ ಬಳಿಯ ಗುಡುಗಳಲೆಯಲ್ಲಿ ಸಿಮೆಂಟ್ ತುಂಬಿದ್ದ ಲಾರಿ ಉರುಳಿಬಿದ್ದಿದೆ. ಶನಿವಾರಸಂತೆ–ಅರಕಲಗೂಡು ರಸ್ತೆಯ ಗುಡುಗಳಲೆ ತಿರುವಿನಲ್ಲಿ ಘಟನೆ…
ಕುಶಾಲನಗರ: ದುಬಾರೆ ಆನೆ ಶಿಬಿರದಲ್ಲಿದ್ದ ಸುಮಾರು 19 ವರ್ಷ ಪ್ರಾಯದ ಗಂಡಾನೆಯೊಂದು ಐದು ತಿಂಗಳಿಗೂ ಹೆಚ್ಚು ಕಾಲ ನಿರಂತರ ಚಿಕಿತ್ಸೆ…
ಮೈಸೂರು: ಪ್ರೀತಿಗೆ ನಿರಾಕರಿಸಿದ ಪರಿಣಾಮ ಯುವಕನೋರ್ವ ಯುವತಿಯನ್ನು ತಬ್ಬಿಕೊಂಡು ಪೆಟ್ರೋಲ್ ಸುರಿದುಕೊಂಡು ಆತ್ಮಹತ್ಯೆಗೆ ಯತ್ನಿಸಿರುವ ಘಟನೆ ಮೈಸೂರಿನ ವಿಜಯನಗರದ ಬಳಿ…
ಮಂಡ್ಯ: ಮನ್ಮುಲ್ ಹಾಲಿನ ಪುಡಿ ಕಲಬೆರಕೆ ಪ್ರಕರಣಕ್ಕೆ ಸಂಬಂಧಿಸಿದಂತೆ ಕಾಂಗ್ರೆಸ್ ಮುಖಂಡ ಹಾಗೂ ಮಾಜಿ ಮನ್ ಮುಲ್ ಅಧ್ಯಕ್ಷ ಶಿವಕುಮಾರ್(ಶಿವಪ್ಪ)…
ಹನೂರು: ಸೋಮವಾರ ತಡರಾತ್ರಿ ಸುರಿದ ಭಾರಿ ಮಳೆಗೆ ಕ್ಷೇತ್ರದ ಹಲವು ಜಮೀನುಗಳಲ್ಲಿ ಬೆಳೆದಿದ್ದ ಬೆಳೆಗಳು ಸಂಪೂರ್ಣ ಜಲಾವೃತಗೊಂಡು ಲಕ್ಷಾಂತರ ರೂಪಾಯಿ…
ಮೈಸೂರು: ಜಿಲ್ಲೆಯ ಹುಣಸೂರು ತಾಲೂಕಿನ ನಂಜಾಪುರ ಗ್ರಾಮದಲ್ಲಿ ಹೃದಯವಿದ್ರಾವಕ ಘಟನೆ ನಡೆದಿದೆ. ರಸ್ತೆ ಬದಿ ನಿಂತಿದ್ದ ಒಂದೂವರೆ ವರ್ಷದ ಪುಟ್ಟ…