KRS Dam
ಶ್ರೀರಂಗಪಟ್ಟಣ : ತಾಲ್ಲೂಕಿನ ಕೆಆರ್‌ಎಸ್ ಅಣೆಕಟ್ಟೆಯಿಂದ 85,000 ಕ್ಯೂಸೆಕ್ಸ್ ನೀರನ್ನು ಹೊರ ಬಿಡಲಾಗುತ್ತಿದ್ದು, ಯಾವುದೇ ಕ್ಷಣದಲ್ಲಾದರೂ ಮತ್ತಷ್ಟು ಹೆಚ್ಚಿನ ನೀರನ್ನು ಕಾವೇರಿ ನದಿಗೆ ಬಿಡುವ ಸಾಧ್ಯತೆಯಿದೆ. ಆ ಕಾರಣದಿಂದ ಕಾವೇರಿ ನದಿ ತೀರದ ತಗ್ಗು ಪ್ರದೇಶದಲ್ಲಿ ವಾಸಿಸುವ ಜನರು ಕೂಡಲೇ ಸೂಕ್ತ ಸ್ಥಳಕ್ಕೆ ತೆರಳುವಂತೆ ಜಿಲ್ಲಾಧಿಕಾರಿ ಡಾ.ಕುಮಾರ ಎಚ್ಚರಿಕೆ ನೀಡಿದ್ದಾರೆ.
ಈ ಸಂಬಂಧ ಮುನ್ನೆಚ್ಚರಿಕೆಯ ಪ್ರಕಟಣೆ ಹೊರಡಿಸಿರುವ ಅವರು, ಮಡಿಕೇರಿ, ಭಾಗಮಂಡಲ ಸೇರಿದಂತೆ ಕಾವೇರಿ ಜಲಾಯನ ಪ್ರದೇಶದಲ್ಲಿ ಭಾರೀ ಮಳೆಯಾಗುತ್ತಿರುವ ಹಿನ್ನೆಲೆಯಲ್ಲಿ ಕೆ.ಆರ್.ಜಲಾಶಯಕ್ಕೆ ಹೆಚ್ಚಿನ ನೀರು ಹರಿದು ಬರುತ್ತಿದೆ.
ಕನ್ನಂಬಾಡಿ ಅಣೆಕಟ್ಟೆ ಈಗಾಗಲೇ ಭರ್ತಿಯಾಗಿರುವ ಹಿನ್ನೆಲೆಯಲ್ಲಿ, ಅಣೆಕಟ್ಟೆಯ ಭದ್ರತೆಯ ದೃಷ್ಟಿಯಿಂದ 50 ಸಾವಿರ ಕ್ಯೂಸೆಕ್ಸ್ ನೀರನ್ನು ಕಾವೇರಿ ನದಿಗೆ ಹರಿಸಲಾಗುತ್ತಿದೆ. ಕಾವೇರಿ ನದಿ ತೀರ ಪ್ರದೇಶಗಳ ವೀಕ್ಷಣೆಗೆ ಬರುವ ಪ್ರವಾಸಿಗರು ಹಾಗೂ ರಾಜ್ಯದ ನಿವಾಸಿಗಳು ಯಾವುದೇ ಕಾರಣಕ್ಕೂ ನದಿಗೆ ಇಳಿಯದಂತೆ ಕಟ್ಟಪ್ಪಣೆ ಹೊರಡಿಸಿದ್ದಾರೆ.
ಮುಂಜಾಗ್ರತಾ ಕ್ರಮವಾಗಿ ಕಾವೇರಿ ನದಿ ತೀರದ ತಗ್ಗು ಪ್ರದೇಶಗಳಲ್ಲಿ ಬ್ಯಾರಿಕೇಡ್‌ಗಳನ್ನು ಅಳವಡಿಸಿ, ಅನಾವಶ್ಯವಾಗಿ ನೀರಿಗಿಳಿಯದಂತೆ ನಾಮಫಲಕ ಅಳವಡಿಸಿ, ಬಿಗಿ ಭದ್ರತೆ ಒದಗಿಸಲಾಗಿದೆ.
ಕಾವೇರಿ ನದಿಯಲ್ಲಿ ೮೫ ಸಾವಿರ ಕ್ಯೂ. ನೀರು ಹರಿಯುತ್ತಿರುವ ಪರಿಣಾಮ ಶ್ರೀರಂಗಪಟ್ಟಣದ ವೆಲ್ಲೆಸ್ಲಿ ಸೇತುವೆ ಮುಳುಗಡೆ ಹಂತಕ್ಕೆ ಬಂದಿರುವ ದೃಶ್ಯ.
ಚೆಟ್ಟಳ್ಳಿ: ಯುದ್ಧ ಪರಿಸ್ಥಿತಿಯಿಂದಾಗಿ ದಂಪತಿ ಇರಾನ್‌ಗೆ ಮರಳಲಾಗದೆ ಕೊಡಗು ಜಿಲ್ಲೆಯ ಮೂರ್ನಾಡು ಸಮೀಪದ ಕಾಂತೂರಿನಲ್ಲಿ ಪರಿತಪಿಸುವಂತಾಗಿದೆ. ಕಾಂತೂರು ನಿವಾಸಿ ಪತ್ನಿ…
ದಾವಣಗೆರೆ: ಎಚ್.ಡಿ.ದೇವೇಗೌಡರು, ಹೆಚ್.ಡಿ.ಕುಮಾರಸ್ವಾಮಿ ಮತ್ತು ಚಲವಾದಿ ನಾರಾಯಣಸ್ವಾಮಿ ಅವರು ಬಿಜೆಪಿ-RSS-ಮೋದಿಯವರ ಬಗ್ಗೆ ಎಂತೆಂಥಾ ಮಾತಾಡಿದ್ದಾರೆ ಗೊತ್ತಾ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ…
ನವದೆಹಲಿ: ಈ ವಾರ ದೇಶದ ವಿವಿಧ ಭಾಗಗಳಲ್ಲಿ ಗುಡುಗು ಸಹಿತ ಆಲಿಕಲ್ಲು ಮಳೆಯಾಗುವ ಸಾಧ್ಯತೆಯಿದೆ ಎಂದು ಭಾರತೀಯ ಹವಾಮಾನ ಇಲಾಖೆ…
ಟೆಹರಾನ್: ಅಮೇರಿಕಾ-ಇಸ್ರೇಲ್ ನಡೆಸಿದ ಜಂಟಿ ದಾಳಿಯಲ್ಲಿ ಇರಾನ್‌ನ ಇಸ್ಲಾಮಿಕ ರೆವಲ್ಯೂಷನರಿ ಗಾರ್ಡ್ ಕಾಪ್ಸ್ ಗುಪ್ತಚರ ಮುಖ್ಯಸ್ಥ ಮಜೀದ್ ಖಾದೇಮಿ ಹತ್ಯೆಯಾಗಿದ್ದಾರೆ…
ಬಾಗಲಕೋಟೆ: ಬೂತ್ ಮಟ್ಟದಲ್ಲಿ ನಾವು ಜನರ ಕಣ್ಣೀರನ್ನು ಒರೆಸುವ ಕೆಲಸ ಮಾಡಬೇಕು. ಜನರಿಗೆ ಸರಕಾರದ ಯೋಜನೆಗಳನ್ನು ತಲುಪಿಸಬೇಕು ಎಂದು ಮಾಜಿ…
ದೇವನಹಳ್ಳಿ: ಸಮಸಮಾಜದ ನಿರ್ಮಾಣಕ್ಕೆ ಕ್ರಾಂತಿಯನ್ನೇ ಮಾಡಿದ ಬಸವಣ್ಣನವರ ತತ್ವಾದರ್ಶಗಳು ಸಾರ್ವಕಾಲಿಕವಾಗಿದ್ದು, ಬಸವ ತತ್ವಗಳ ಪ್ರಚಾರ, ಪ್ರಸಾರ ಇಂದಿನ ಅಗತ್ಯವಾಗಿದೆ ಎಂದು…