ಮಂಡ್ಯ

ಕೆಆರ್‌ಎಸ್‌ನಿಂದ 85,000 ಕ್ಯೂಸೆಕ್ಸ್ ನೀರು ಹೊರಕ್ಕೆ : ನದಿ ತೀರದ ನಿವಾಸಿಗಳಿಗೆ ಎಚ್ಚರಿಕೆ

ಶ್ರೀರಂಗಪಟ್ಟಣ : ತಾಲ್ಲೂಕಿನ ಕೆಆರ್‌ಎಸ್ ಅಣೆಕಟ್ಟೆಯಿಂದ 85,000 ಕ್ಯೂಸೆಕ್ಸ್ ನೀರನ್ನು ಹೊರ ಬಿಡಲಾಗುತ್ತಿದ್ದು, ಯಾವುದೇ ಕ್ಷಣದಲ್ಲಾದರೂ ಮತ್ತಷ್ಟು ಹೆಚ್ಚಿನ ನೀರನ್ನು ಕಾವೇರಿ ನದಿಗೆ ಬಿಡುವ ಸಾಧ್ಯತೆಯಿದೆ. ಆ ಕಾರಣದಿಂದ ಕಾವೇರಿ ನದಿ ತೀರದ ತಗ್ಗು ಪ್ರದೇಶದಲ್ಲಿ ವಾಸಿಸುವ ಜನರು ಕೂಡಲೇ ಸೂಕ್ತ ಸ್ಥಳಕ್ಕೆ ತೆರಳುವಂತೆ ಜಿಲ್ಲಾಧಿಕಾರಿ ಡಾ.ಕುಮಾರ ಎಚ್ಚರಿಕೆ ನೀಡಿದ್ದಾರೆ.

ಈ ಸಂಬಂಧ ಮುನ್ನೆಚ್ಚರಿಕೆಯ ಪ್ರಕಟಣೆ ಹೊರಡಿಸಿರುವ ಅವರು, ಮಡಿಕೇರಿ, ಭಾಗಮಂಡಲ ಸೇರಿದಂತೆ ಕಾವೇರಿ ಜಲಾಯನ ಪ್ರದೇಶದಲ್ಲಿ ಭಾರೀ ಮಳೆಯಾಗುತ್ತಿರುವ ಹಿನ್ನೆಲೆಯಲ್ಲಿ ಕೆ.ಆರ್.ಜಲಾಶಯಕ್ಕೆ ಹೆಚ್ಚಿನ ನೀರು ಹರಿದು ಬರುತ್ತಿದೆ.

ಕನ್ನಂಬಾಡಿ ಅಣೆಕಟ್ಟೆ ಈಗಾಗಲೇ ಭರ್ತಿಯಾಗಿರುವ ಹಿನ್ನೆಲೆಯಲ್ಲಿ, ಅಣೆಕಟ್ಟೆಯ ಭದ್ರತೆಯ ದೃಷ್ಟಿಯಿಂದ 50 ಸಾವಿರ ಕ್ಯೂಸೆಕ್ಸ್ ನೀರನ್ನು ಕಾವೇರಿ ನದಿಗೆ ಹರಿಸಲಾಗುತ್ತಿದೆ. ಕಾವೇರಿ ನದಿ ತೀರ ಪ್ರದೇಶಗಳ ವೀಕ್ಷಣೆಗೆ ಬರುವ ಪ್ರವಾಸಿಗರು ಹಾಗೂ ರಾಜ್ಯದ ನಿವಾಸಿಗಳು ಯಾವುದೇ ಕಾರಣಕ್ಕೂ ನದಿಗೆ ಇಳಿಯದಂತೆ ಕಟ್ಟಪ್ಪಣೆ ಹೊರಡಿಸಿದ್ದಾರೆ.

ಮುಂಜಾಗ್ರತಾ ಕ್ರಮವಾಗಿ ಕಾವೇರಿ ನದಿ ತೀರದ ತಗ್ಗು ಪ್ರದೇಶಗಳಲ್ಲಿ ಬ್ಯಾರಿಕೇಡ್‌ಗಳನ್ನು ಅಳವಡಿಸಿ, ಅನಾವಶ್ಯವಾಗಿ ನೀರಿಗಿಳಿಯದಂತೆ ನಾಮಫಲಕ ಅಳವಡಿಸಿ, ಬಿಗಿ ಭದ್ರತೆ ಒದಗಿಸಲಾಗಿದೆ.

ಕಾವೇರಿ ನದಿಯಲ್ಲಿ ೮೫ ಸಾವಿರ ಕ್ಯೂ. ನೀರು ಹರಿಯುತ್ತಿರುವ ಪರಿಣಾಮ ಶ್ರೀರಂಗಪಟ್ಟಣದ ವೆಲ್ಲೆಸ್ಲಿ ಸೇತುವೆ ಮುಳುಗಡೆ ಹಂತಕ್ಕೆ ಬಂದಿರುವ ದೃಶ್ಯ.

ಆಂದೋಲನ ಡೆಸ್ಕ್

Recent Posts

ಕೆಪಿಎಸ್‌ಸಿ ಮುಚ್ಚುವ ಬಗ್ಗೆ ಚಿಂತನೆ: ಸಿಎಂ ಡಿ.ಕೆ.ಶಿವಕುಮಾರ್‌

ಬೆಂಗಳೂರು: ಕೆಪಿಎಸ್‌ಸಿಯಲ್ಲಿ ಹಗರಣಗಳು ಹೆಚ್ಚಿವೆ. ಇದನ್ನು ಕಾನೂನು ಚೌಕಟ್ಟಿನಲ್ಲಿ ಮುಚ್ಚುವ ಬಗ್ಗೆ ತಜ್ಞರ ಜೊತೆ ಚರ್ಚೆ ಮಾಡುತ್ತಿದ್ದೇನೆ ಎಂದು ಸಿಎಂ…

6 hours ago

ನಂಜನಗೂಡು: ಬೋನಿಗೆ ಬಿದ್ದ ಚಿರತೆ

ನಂಜನಗೂಡು: ಮೈಸೂರು ಜಿಲ್ಲೆ ನಂಜನಗೂಡು ತಾಲ್ಲೂಕಿನ ಚುಂಚನಹಳ್ಳಿ ಗ್ರಾಮದ ಬಳಿ ಅರಣ್ಯ ಇಲಾಖೆ ಇಟ್ಟಿದ್ದ ಬೋನಿಗೆ ಚಿರತೆ ಸೆರೆಯಾಗಿದೆ. ಸುಮಾರು…

6 hours ago

ವಂದೇ ಮಾತರಂ ಅರ್ಧಕ್ಕೆ ಕಡಿತ: ಆದೇಶ ಮರುಪರಿಶೀಲನೆಗೆ ರಾಜ್ಯಪಾಲರ ಸೂಚನೆ

ಬೆಂಗಳೂರು: ಸರ್ಕಾರಿ ಕಾರ್ಯಕ್ರಮಗಳಲ್ಲಿ ವಂದೇ ಮಾತರಂ ಗೀತೆಯ ಮೊದಲ ಎರಡು ಚರಣಗಳನ್ನು ಮಾತ್ರ ಹಾಡುವಂತೆ ರಾಜ್ಯ ಸರ್ಕಾರ ಹೊರಡಿಸಿರುವ ಆದೇಶಕ್ಕೆ…

7 hours ago

ಮದ್ದೂರಿನಲ್ಲಿ ನಿವೃತ್ತ ಹಾಸ್ಟೆಲ್ ಅಧೀಕ್ಷಕನ ಮನೆ ಮೇಲೆ ಲೋಕಾಯುಕ್ತ ದಾಳಿ

ಮದ್ದೂರು: ಮದ್ದೂರಿನಲ್ಲಿ ಬೆಳ್ಳಂಬೆಳಗ್ಗೆ ಲೋಕಾಯುಕ್ತ ಪೊಲೀಸರು ಭರ್ಜರಿ ಕಾರ್ಯಾಚರಣೆ ನಡೆಸಿದ್ದಾರೆ. ಅಕ್ರಮ ಆಸ್ತಿ ಗಳಿಕೆ ಆರೋಪದ ಹಿನ್ನೆಲೆಯಲ್ಲಿ ನಿವೃತ್ತ ಹಾಸ್ಟೆಲ್…

8 hours ago

ಮಂಡ್ಯದಲ್ಲಿ ಚಾಕುವಿನಿಂದ ಇರಿದು ವ್ಯಕ್ತಿಯ ಕೊಲೆ

ಮಂಡ್ಯ: ನಗರದ ಗಾಂಧಿನಗರದಲ್ಲಿ ವ್ಯಕ್ತಿಯೊಬ್ಬರನ್ನು ಚಾಕುವಿನಿಂದ ಇರಿದು ಕೊಲೆ ಮಾಡಿರುವ ಘಟನೆ ನಡೆದಿದೆ. ಗಾಂಧಿನಗರ ನಿವಾಸಿ 47 ವರ್ಷದ ಪುರುಷೋತ್ತಮ್…

10 hours ago

ಓದುಗರ ಪತ್ರ: ಪೌರಕಾರ್ಮಿಕರಿಗೆ ಉಚಿತ ಆರೋಗ್ಯ ತಪಾಸಣೆ ಸ್ವಾಗತಾರ್ಹ

ಮೈಸೂರು ನಗರದಲ್ಲಿ ಸ್ವಚ್ಛತಾ ಕಾರ್ಯ ನಿರ್ವಹಿಸುತ್ತಿರುವ ಸ್ವಚ್ಛತೆಯ ಜೀವನಾಡಿಗಳಾಗಿರುವ ಪೌರಕಾರ್ಮಿಕರಿಗೆ, ಮೈಸೂರು ಮಹಾನಗರ ಪಾಲಿಕೆ ವತಿಯಿಂದ ಮಣಿಪಾಲ್ ಆಸ್ಪತ್ರೆಯಲ್ಲಿ ಆಯೋಜಿಸಿದ್ದ…

16 hours ago