ಮೂರು ದಿನಗಳಲ್ಲಿ ವೇದಿಕೆ ನಿರ್ಮಾಣ ಕಾರ್ಯ ಪೂರ್ಣ
120 ಫುಡ್ ಕೌಂಟರ್,450 ಪುಸ್ತಕ ಮಳಿಗೆ, 250 ಶೌಚಾಲಯಗಳ ನಿರ್ಮಾಣ
ಮಂಡ್ಯ: 87ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನಕ್ಕೆ ಮಂಡ್ಯ ಸಕಲ ರೀತಿಯಲ್ಲಿಯೂ ಸಜ್ಜಾಗಿದೆ. 64 ಎಕರೆ ಪ್ರದೇಶದಲ್ಲಿ ಎಲ್ಲಾ ಮುಂಜಾಗ್ರತಾ ಕ್ರಮಗಳನ್ನು ಕೈಗೊಂಡಂತೆ ವೇದಿಕೆ ನಿರ್ಮಾಣ ಕಾರ್ಯದ ಸಿದ್ಧತೆ ಭರದಿಂದ ಸಾಗುತ್ತಿದೆ. ಇನ್ನೂ ಮೂರು ದಿನಗಳಲ್ಲಿ ವೇದಿಕೆ ನಿರ್ಮಾಣ ಕಾರ್ಯ ಪೂರ್ಣಗೊಳ್ಳಲಿದೆ ಎಂದು ಶಾಸಕರು ಹಾಗೂ 87ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನದ ವೇದಿಕೆ ನಿರ್ವಹಣಾ ಸಮಿತಿ ಅಧ್ಯಕ್ಷ ಪಿ.ಎಂ.ನರೇಂದ್ರಸ್ವಾಮಿ ಹೇಳಿದರು.
ನಗರದ ಸ್ಯಾಂಜೊ ಆಸ್ಪತ್ರೆ ಹಾಗೂ ಅಮರಾವತಿ ಹೋಟೆಲ್ ಹಿಂಭಾಗದಲ್ಲಿ ವೇದಿಕೆ ನಿರ್ಮಾಣವಾಗುತ್ತಿರುವ ಸ್ಥಳದ ಸಿದ್ಧತೆ ಪರಿಶೀಲನೆ ನಡೆಸಿದ ನಂತರ ಮಾಧ್ಯಮಗೋಷ್ಠಿ ನಡೆಸಿ ಅವರು ಮಾತನಾಡಿದರು.
ಪ್ರಧಾನ ವೇದಿಯಲ್ಲಿ ಸುಮಾರು 40 ಸಾವಿರ ಜನರಿಗೆ ಆಸನದ ವ್ಯವಸ್ಥೆ ಮಾಡಲಾಗಿದೆ. 450 ಪುಸ್ತಕ ಮಳಿಗೆ, 350 ವಾಣಿಜ್ಯ ಮಳಿಗೆ, 55 ಸರ್ಕಾರಿ ಮಳಿಗೆಗಳನ್ನು ನಿರ್ಮಿಸಲಾಗಿದೆ. ಊಟದ ವ್ಯವಸ್ಥೆಗೆ ಸೂಕ್ತ ವ್ಯವಸ್ಥೆ ಕಲ್ಪಿಸಲಾಗಿದೆ. ಜನದಟ್ಟಣೆಯಾಗದಂತೆ ತಡೆಯಲು ಪ್ರತ್ಯೇಕ ಫುಡ್ ಕೌಂಟರ್ ತೆರೆಯಲಾಗಿದೆ. ನೋಂದಾಯಿತ ಪ್ರತಿನಿಧಿಗಳಿಗೆ 40, ಜನಸಾಮಾನ್ಯರಿಗೆ 120 ಫುಡ್ ಕೌಂಟರ್ ಗಳ ಜೊತೆಗೆ ಮಾಧ್ಯಮದವರಿಗೆ, ವಿಐಪಿಗಳಿಗೆ ಪ್ರತ್ಯೇಕ ಆಹಾರದ ಕೌಂಟರ್ ಮಾಡಲಾಗಿದೆ ಎಂದು ವಿವರಿಸಿದರು.
ಸಹಸ್ರಾರು ಸಂಖ್ಯೆಯಲ್ಲಿ ಜನ ಸೇರುವುದರಿಂದ ಶುಚಿತ್ವಕ್ಕೆ ಮತ್ತು ಶೌಚಾಲಯಕ್ಕೆ ಪ್ರಾಧಾನ್ಯತೆ ನೀಡಲಾಗಿದೆ. 250 ಶೌಚಾಲಯ, ಅಡುಗೆ ಸಿಬ್ಬಂದಿಗಳಿಗೆ 50 ಸ್ನಾನದಗೃಹದ ವ್ಯವಸ್ಥೆ ಮಾಡಲಾಗಿದೆ. ವಿದ್ಯುತ್ ಅಡಚಣೆಯಿಂದ ತೊಂದರೆ ಆಗದಂತೆ ಜನರೇಟರ್ ವ್ಯವಸ್ಥೆ ಕೂಡ ಮಾಡಲಾಗಿದೆ. ಅಗ್ನಿ ದುರಂತ ಸಂಭವಿಸದಂತೆ ಮುಂಜಾಗ್ರತಾ ಕ್ರಮಗಳನ್ನು ಸಹ ಕೈಗೊಂಡಿದ್ದು ಮಂಡ್ಯದಲ್ಲಿ ನಡೆಯುತ್ತಿರುವ 87ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನ ಬಹಳ ವಿಜೃಂಭಣೆಯಿಂದ, ವೈಭವೋಪೇತದಿಂದ ಕೂಡಿರಲಿದೆ ಎಂದರು.
ಜಿಲ್ಲಾಡಳಿತ ಸಾಕಷ್ಟು ಮುತುವರ್ಜಿಯಿಂದ ಕಾರ್ಯನಿರ್ವಹಿಸುತ್ತಿದೆ. ಸಾರ್ವಜನಿಕರು, ನೋಂದಾಯಿತ ಪ್ರತಿನಿಧಿಗಳು, ಗಣ್ಯರಿಗೆ ತೊಂದರೆಯಾಗದಂತೆ ಕ್ರಮವಹಿಸಲಾಗಿದೆ. ಪೊಲೀಸ್, ಅಗ್ನಿಶಾಮಕ ಸಿಬ್ಬಂದಿಯವರನ್ನು ನೇಮಿಸಲಾಗಿದೆ. ಸಮ್ಮೇಳನದ ಅಂಗವಾಗಿ ಮಳವಳ್ಳಿಯಲ್ಲಿ ಡಿ.18ರಂದು ನಾನಾ ಸಂಘಟನೆಗಳ ವತಿಯಿಂದ ಮೆರವಣಿಗೆ ಹಮ್ಮಿಕೊಳ್ಳಲಾಗಿದೆ ಎಂದರು.
ಅತಿಥಿ ಸತ್ಕಾರಕ್ಕೆ ಹೆಸರಾಗಿರುವ ಮಂಡ್ಯ ಜಿಲ್ಲೆಗೆ ಎಲ್ಲೂ ಚ್ಯುತಿ ಬಾರದ ರೀತಿಯಲ್ಲಿ ಮಂಡ್ಯದ ಹಿರಿಮೆ, ಗರಿಮೆ ಎತ್ತಿಯಿಡುವ ನಿಟ್ಟಿನಲ್ಲಿ ಸಾಹಿತ್ಯ ಸಮ್ಮೇಳನ ಆಯೋಜಿಸಿ ಜಿಲ್ಲೆಗೆ ಕೀರ್ತಿ ತರಲಾಗುವುದು. ಇದಕ್ಕೆ ಎಲ್ಲರ ಸಹಕಾರ, ಸಹಭಾಗಿತ್ವ ಕೂಡ ಮುಖ್ಯವಾಗಿದ್ದು ಸಮ್ಮೇಳನದ ಯಶಸ್ವಿಗೆ ಎಲ್ಲರೂ ಕೈಜೋಡಿಸಬೇಕೆಂದು ಮನವಿ ಮಾಡಿದರು.
ಆಹಾರದ ಗುಣಮಟ್ಟ, ನೀರಿನ ಶುದ್ಧತೆ ಪರಿಶೀಲನೆ: ಡಿಸಿ ಡಾ. ಕುಮಾರ
ಸಾಹಿತ್ಯ ಸಮ್ಮೇಳನದಲ್ಲಿ ಲಕ್ಷಾಂತರ ಜನರು ಊಟ ಮಾಡುವುದರಿಂದ ಹಲವು ಮುಂಜಾಗ್ರತಾ ಕ್ರಮಗಳನ್ನು ಕೈಗೊಳ್ಳಲಾಗಿದೆ. ಆಹಾರದ ಗುಣಮಟ್ಟ ಪರಿಶೀಲನೆಗಾಗಿ 10 ಜನರ ಆಹಾರ ತಜ್ಞರ ತಂಡವೊಂದನ್ನು ರಚನೆ ಮಾಡಲಾಗಿದೆ. ಮೂರು ದಿನವೂ ಆ ತಂಡ ಆಹಾರದ ಗುಣಮಟ್ಟದ ಪರಿಶೀಲನೆ ನಡೆಸಿ ವರದಿ ನೀಡಲಿದೆ ಎಂದು ಜಿಲ್ಲಾಧಿಕಾರಿ ಡಾ. ಕುಮಾರ ಹೇಳಿದರು.
ನೀರಿನ ವ್ಯವಸ್ಥೆಗೆ ಕ್ರಮಕೈಗೊಳ್ಳಲಾಗಿದೆ. ಒಟ್ಟು ಮೂರು ಬೋರ್ ವೆಲ್ ಗಳಿದ್ದು ನೀರು ಪೂರೈಕೆಗೆ 5.8 ಕಿ.ಮೀ. ಉದ್ದದ ಪೈಪ್ ಲೈನ್ ವ್ಯವಸ್ಥೆ ಮಾಡಲಾಗಿದೆ. ಓವರ್ ಹೆಡ್ ಟ್ಯಾಂಕ್ ನಿಂದ ಆಹಾರ ತಯಾರಿಕಾ ಸ್ಥಳ, ಶೌಚಾಲಯಗಳಿಗೆ ನೀರು ಪೂರೈಕೆ ಆಗಲಿದೆ. 3 ಕಡೆ ಆರ್ ಓ ಪ್ಲಾಂಟ್ ನಿರ್ಮಿಸಲಾಗಿದೆ. ನೀರಿನ ಶುದ್ಧತೆ ಕೂಡ ಪರಿಶೀಲನೆ ನಡೆಸಲಾಗುವುದು ಎಂದು ತಿಳಿಸಿದರು.
24 ಎಕರೆ ಜಾಗವನ್ನು ಪಾರ್ಕಿಂಗ್ ಗೆಂದೇ ನಿಗದಿಗೊಳಿಸಲಾಗಿದೆ. ನಗರದಿಂದ ಉಚಿತ ಬಸ್ ಸಂಚಾರ ಇರಲಿದೆ. ಸಮ್ಮೇಳನಕ್ಕೆ ಆಗಮಿಸುವವರಿಗೆಂದು ತಾಲೂಕು ಕೇಂದ್ರಗಳಿಂದ ಕೂಡ ಬಸ್ ವ್ಯವಸ್ಥೆ ಮಾಡಲಾಗಿದೆ. 6 ಸಾವಿರ ನೋಂದಾಯಿತ ಪ್ರತಿನಿಧಿಗಳಿಗೆ ಅರ್ಧ ಕೆಜಿ ಬೆಲ್ಲ, ಅರ್ಧ ಕೆಜಿ ಸಕ್ಕರೆ, ಬ್ರೆಶ್, ಪೇಸ್ಟ್, ಸೋಪು,ಬೆಡ್ ಶಿಟ್ ಒಳಗೊಂಡ ಲೇದರ್ ಬ್ಯಾಗ್ ನಲ್ಲಿ ವಸತಿ ಮತ್ತು ಸಮ್ಮೇಳನದ ಕಿಟ್ ನೀಡಲಾಗುವುದು ಎಂದರು.
ಪ್ಲಾಸ್ಟಿಕ್ ಮುಕ್ತ ಸಮ್ಮೇಳನ ಇದಾಗಿರಲಿದೆ. ಮಹಿಳೆಯರಿಗೆ ಸಕಲ ಸೌಲಭ್ಯ ಕಲ್ಪಿಸಲಾಗಿದೆ. ಆರೋಗ್ಯದ ಹಿತದೃಷ್ಟಿಯಿಂದ ಎಲ್ಲಾ ಮುಂಜಾಗ್ರತಾ ಕ್ರಮಗಳನ್ನು ಕೈಗೊಳ್ಳಲಾಗಿದೆ. ಉಚಿತ ಸಾರಿಗೆ ವ್ಯವಸ್ಥೆ ಬಗ್ಗೆ ರೂಟ್ ಮ್ಯಾಪ್ ಸಿದ್ಧಪಡಿಸಿ ಹಲವು ಕಡೆಗಳಲ್ಲಿ ಅವುಗಳ ಮಾಹಿತಿಯನ್ನು ಪ್ರದರ್ಶಿಸಲಾಗುವುದು. ಒಟ್ಟಾರೆ 87ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನಕ್ಕೆ ಜಿಲ್ಲಾಡಳಿತ ಸಕಲ ರೀತಿಯಲ್ಲೂ ಸಜ್ಜಾಗಿದ್ದು ನುಡಿಹಬ್ಬವನ್ನು ಮನೆಹಬ್ಬದಂತೆ ಎಲ್ಲರೂ ಆಚರಿಸಬೇಕು ಎಂದು ಹೇಳಿದರು.
ಚೆನ್ನೈ: ಸಂವಿಧಾನ ಶಿಲ್ಪಿ ಡಾ.ಬಿ.ಆರ್.ಅಂಬೇಡ್ಕರ್ ಕುರಿತು ಸಂಸತ್ತಿನಲ್ಲಿ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ ಹೇಳಿಕೆ ಕುರಿತು ತಮಿಳು…
ಮಂಡ್ಯ: ಸಕ್ಕರೆ ನಾಡು ಮಂಡ್ಯದಲ್ಲಿ ನಾಳೆಯಿಂದ ಆರಂಭವಾಗುವ 87ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನಕ್ಕೆ ಬರುವವರಿಗೆ ಕೆಎಸ್ಆರ್ಟಿಸಿ ಸಿಹಿ…
ಮಂಡ್ಯ: ಸಕ್ಕರೆ ನಾಡು ಮಂಡ್ಯದಲ್ಲಿ ಡಿಸೆಂಬರ್.20ರಿಂದ 22ರವರೆಗೆ 87ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನ ನಡೆಯಲಿದ್ದು, ಇದಕ್ಕಾಗಿ ಮಂಡ್ಯ…
ಯಾವುದಾದರೂ ಕವನ ವಾಚಿಸಿ, ಏನಾದರೂ ಆಹಾರ ತಿನ್ನಿ ಎಂದವಳು ಹೇಳಿದಳು ಕವಿರಾಯರಿಗೆ ಕಿವಿಮಾತು! ಸಮ್ಮೇಳನದಿಂದ ಬರುವಾಗ ಆ..ಹಾರ, ಶಾಲು, ಸ್ಮರಣಿಕೆಗಳ…
ಡಿ.೧೨ರಂದು ಹೈಕೋರ್ಟ್ ನ್ಯಾಯಮೂರ್ತಿಗಳಾದ, ಕೃಷ್ಣ ಎಸ್. ದೀಕ್ಷಿತ್ ಮತ್ತು ಸಿ.ಎಂ.ಜೋಶಿ ಅವರ ವಿಭಾಗೀಯ ಪೀಠವು ತುಮಕೂರಿನ ಶಿರಾ ತಾಲ್ಲೂಕಿನ ಪಟ್ಟನಾಯಕನಹಳ್ಳಿಯ…
ಕೃಷ್ಣ ಮೃಗ ಬೇಟೆಯಾಡಿದ ಪ್ರಕರಣದಲ್ಲಿ ನಟ ಸಲ್ಮಾನ್ ಖಾನ್ನನ್ನು ಪೊಲೀಸ್ ವಶಕ್ಕೆ ಪಡೆಯುವಂತೆ ಮುಂಬೈ ನ್ಯಾಯಾಲಯ ಆದೇಶ ನೀಡಿತ್ತು. ಆದರೆ…