ಮಂಡ್ಯ: ಸಕ್ಕರೆ ನಾಡು ಮಂಡ್ಯದಲ್ಲಿ ನಡೆದ 87ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನ ಯಶಸ್ವಿಯಾಗಿ ಮುಕ್ತಾಯಗೊಂಡಿದೆ.
ಕನ್ನಡ ಸಾಹಿತ್ಯ ಸಮ್ಮೇಳನದಲ್ಲಿ ಕನ್ನಡ ಸಾಹಿತ್ಯ ಪರಿಷತ್ತು ಆರು ಪ್ರಮುಖ ನಿರ್ಣಯಗಳನ್ನು ಕೈಗೊಂಡಿದ್ದು, ಇವುಗಳನ್ನು ಅನುಷ್ಠಾನಕ್ಕೆ ತರುವಂತೆ ಸಿಎಂ ಸಿದ್ದರಾಮಯ್ಯರಿಗೆ ಮನವಿ ಮಾಡಿದೆ.
ಕಳೆದ ಮೂರು ದಿನಗಳಿಂದ ನಡೆಯುತ್ತಿದ್ದ ಕನ್ನಡ ಸಾಹಿತ್ಯ ಸಮ್ಮೇಳನ ಇಂದು ಸಂಪನ್ನಗೊಂಡಿದೆ.
ಇಂದು ಕನ್ನಡ ಸಾಹಿತ್ಯ ಪರಿಷತ್ತು ಮತ್ತು ಪದಾಧಿಕಾರಿಗಳ ಸಮ್ಮುಖದಲ್ಲಿ ನಡೆದ ಬಹಿರಂಗ ಅಧಿವೇಶನದಲ್ಲಿ ಕನ್ನಡ ಭಾಷೆ ಅಭಿವೃದ್ಧಿ ಅಧಿನಿಯಮ, ರಾಷ್ಟ್ರಕವಿ ಪ್ರಶಸ್ತಿ ಘೋಷಣೆ ಸೇರಿದಂತೆ ಒಟ್ಟು ಆರು ಪ್ರಮುಖ ನಿರ್ಣಯಗಳನ್ನು ಜಾರಿ ಮಾಡಲು ರಾಜ್ಯ ಸರ್ಕಾರಕ್ಕೆ ಒತ್ತಾಯಿಸಲಾಗಿದೆ. ಅವುಗಳು ಈ ಕೆಳಕಂಡಂತಿವೆ.
೧) ಕನ್ನಡ ಭಾಷೆ ಅಭಿವೃದ್ಧಿ ಅಧಿನಿಯಮ-೨೦೨೨ ಸಮಗ್ರ ಜಾರಿಗೆ ಒತ್ತಾಯ
೨) ಸರ್ಕಾರ ಕನ್ನಡ ಶಾಲೆಗೆ ಕಟ್ಟಡ, ವಾಚನಾಲಯ ಸೇರಿದಂತೆ ಅನೇಕ ಮೂಲಭೂತ ಸೌಕರ್ಯ ಕಲ್ಪಿಸಬೇಕು ಹಾಗೂ ಖಾಲಿ ಇರುವ ಶಿಕ್ಷಕರ ಹುದ್ದೆ ಭರ್ತಿ ಮಾಡುವಂತೆ ಒತ್ತಾಯ
೩) ಸರೋಜಿನಿ ಮಹಿಷಿ ವರದಿ ಶಾಸನಬದ್ಧಗೊಳಿಸಿ ಅನುಷ್ಠಾನಗೊಳಿಸಬೇಕು.
೪) ಧಾರವಾಡದಲ್ಲಿ ನಡೆಯಬೇಕಿದ್ದ ವಿಶ್ವ ಕನ್ನಡ ಸಾಹಿತ್ಯ ಸಮ್ಮೇಳನವನ್ನು ಕೇಂದ್ರ ಕನ್ನಡ ಸಾಹಿತ್ಯ ಪರಿಷತ್ ಸಹಯೋಗದಲ್ಲಿ ಅತಿ ಶೀಘ್ರದಲ್ಲೇ ನಡೆಸಬೇಕೆಂಬ ಒತ್ತಾಯ
೫) ರಾಷ್ಟ್ರಕವಿ ಪ್ರಶಸ್ತಿಯನ್ನು ಘೋಷಣೆ ಮಾಡಬೇಕು
೬) ೮೭ನೇ ಕನ್ನಡ ಸಾಹಿತ್ಯ ಸಮ್ಮೇಳನದ ಯಶಸ್ವಿಗೆ ಕಾರಣವಾದ ಸಚಿವ ಚಲುವರಾಯಸ್ವಾಮಿ ಸೇರಿದಂತೆ ಎಲ್ಲರಿಗೂ ಅಭಿನಂದನೆ ಸಲ್ಲಿಸುವ ಮಂಡನೆ
ಈ ಮೇಲಿನ ಎಲ್ಲಾ ವಿಷಯಗಳನ್ನು ಅನುಮೋದನೆ ಮಾಡುವಂತೆ ಕನ್ನಡ ಸಾಹಿತ್ಯ ಪರಿಷತ್ ಸದಸ್ಯರು ಸರ್ಕಾರಕ್ಕೆ ಮನವಿ ಮಾಡಿದ್ದಾರೆ.
ಈ ಮೂಲಕ ಮೂರು ದಿನಗಳ ಕನ್ನಡ ಸಾಹಿತ್ಯ ಸಮ್ಮೇಳನ ಇಂದು ಸಂಪನ್ನಗೊಂಡಿದ್ದು, ಸಾವಿರಾರು ಕನ್ನಡಾಭಿಮಾನಿಗಳು ಸಮ್ಮೇಳನಕ್ಕೆ ಸಾಗರೋಪಾದಿಯಲ್ಲಿ ಆಗಮಿಸಿದ್ದು ವಿಶೇಷವೆನಿಸಿತು.
ಮೈಸೂರು: ಮಾಗಿ ಉತ್ಸವದ ಅಂಗವಾಗಿ ಜಗತ್ಪ್ರಸಿದ್ಧ ಮೈಸೂರು ಅರಮನೆ ಆವರಣದಲ್ಲಿ ಇಂದು ಸಂಜೆ ಖ್ಯಾತ ಗಾಯಕ ವಿಜಯ್ ಪ್ರಕಾಶ್ ಅವರು…
ಚಾಮರಾಜನಗರ: ಬಿಆರ್‌ಟಿ ಹುಲಿ ಸಂರಕ್ಷಿತಾರಣ್ಯದಲ್ಲಿ ಪಶು ವೈದ್ಯರ ಕೊರತೆ ಎದ್ದು ಕಾಣುತ್ತಿದ್ದು, ಹೊರಗುತ್ತಿಗೆ ಆಧಾರದಲ್ಲಿ ವೈದ್ಯರ ಹುದ್ದೆಯ ನೇಮಕಾತಿಗೂ ಜಾಹೀರಾತು…
ಬೆಂಗಳೂರು: ರಾಜ್ಯದಲ್ಲಿ ಸಂಭವಿಸಿದ ಪ್ರಕೃತಿ ವಿಕೋಪದಿಂದ ಹಣ್ಣುಗಳ ರಾಣಿ ಎಂದು ಕರೆಯಿಸಿಕೊಳ್ಳುವ ಮಾವಿಗೆ ಅನೇಕ ರೋಗಗಳು ಕಾಣಿಸಿಕೊಂಡಿದ್ದು, ರೈತರಿಗೆ ಇಳುವರಿ…
ಗುಂಡ್ಲುಪೇಟೆ: ಗಡಿ ಜಿಲ್ಲೆ ಚಾಮರಾಜನಗರದ ಗುಂಡ್ಲುಪೇಟೆ ತಾಲ್ಲೂಕಿನಲ್ಲಿರುವ ರಾಷ್ಟ್ರೀಯ ಉದ್ಯಾನವನ ಬಂಡೀಪುರ ಹುಲಿ ಸಂರಕ್ಷಿತ ಪ್ರದೇಶದ ಕುಂದಕೆರೆ ವಲಯದ ಚಿಕ್ಕ…
ಲಕ್ನೋ: ಆಕರ್ಷಣೀಯ ಪ್ರವಾಸಿತಾಣಗಳ ಪಟ್ಟಿಯಲ್ಲಿ ಅಯೋಧ್ಯೆ ರಾಮಮಂದಿರವು ತಾಜ್‌ಮಹಲನ್ನು ಹಿಂದಿಕ್ಕಿ ನಂಬರ್ ಒನ್ ಪಟ್ಟ ಪಡೆದಿದೆ. ಈ ಮೂಲಕ ಈಗ…
ಚಿಕ್ಕಬಳ್ಳಾಪುರ: ನಂದಿಗಿರಿಧಾಮದಲ್ಲಿ ಹೊ ವರ್ಷಾಚರಣೆಗೆ ಬ್ರೇಕ್ ನೀಡಲಾಗಿದ್ದು, ಪ್ರವಾಸಿಗರಿಗೆ ಬಿಗ್ ಶಾಕ್ ಎದುರಾಗಿದೆ. ಪ್ರಕೃತಿ ಮಡಿಲಿನಲ್ಲಿ ಕುಣಿಸು ಕುಪ್ಪಳಿಸಿ ಹೊಸ…