ಮಂಡ್ಯ: ಸಕ್ಕರೆ ನಾಡು ಮಂಡ್ಯದಲ್ಲಿ ಕನ್ನಡ ಸಾಹಿತ್ಯ ಸಮ್ಮೇಳನಕ್ಕೆ ಭರ್ಜರಿ ಸಿದ್ಧತೆ ನಡೆಯುತ್ತಿದೆ.
ಈಗಾಗಲೇ 87ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನದ ಮಾಧ್ಯಮ ಸಮನ್ವಯ ಸಮಿತಿ ಸಭೆ ನಡೆದಿದ್ದು, ವಿಧಾನಪರಿಷತ್ ಸದಸ್ಯ ದಿನೇಶ್ ಗೂಳಿಗೌಡ ಅವರು ಅಧಿಕಾರಿಗಳಿಗೆ ಖಡಕ್ ಸೂಚನೆ ನೀಡಿದ್ದಾರೆ.
ಸಮ್ಮೇಳನದ ಯಶಸ್ವಿಗೆ ಮಾಧ್ಯಮದ ಪಾತ್ರ ಬಹಳ ಮುಖ್ಯವಾಗಿದೆ. ಸಾಹಿತ್ಯ ಸಮ್ಮೇಳನದ ಕುರಿತು ಮಾಧ್ಯಮದಲ್ಲಿ ವ್ಯಾಪಕ ಪ್ರಚಾರ ನೀಡುವ ಮೂಲಕ ಸಮ್ಮೇಳನದ ಯಶಸ್ವಿಗೆ ಮಾಧ್ಯಮದವರು ಸಹಕರಿಸಬೇಕು ಎಂದು ಮನವಿ ಮಾಡಿದ್ದಾರೆ.
ಇದು ಕನ್ನಡದ ಹಬ್ಬವಾಗಿರುವುದರಿಂದ ಎಲ್ಲರ ಸಹಕಾರ ಮುಖ್ಯವಾಗಿದೆ. ಹಾಗಾಗಿ ಎಲ್ಲರೂ ಕೂಡ ಹೆಚ್ಚಿನ ಪ್ರಚಾರ ನೀಡಿ ಸಕ್ಕರೆ ನಾಡಿನ ಘಮಲನ್ನು ಎಲ್ಲಾ ಕಡೆ ಪಸರಿಸುವಂತೆ ಕರೆ ನೀಡಿದ್ದಾರೆ.
ಇನ್ನು ರಾಜ್ಯ, ರಾಷ್ಟ್ರದ ನಾನಾ ಭಾಗಗಳಿಂದ ಬರುವವರಿಗೆ ಸಕಲ ವ್ಯವಸ್ಥೆ ಮಾಡಲಾಗಿದ್ದು, ಊಟ, ಪುಸ್ತಕ ಮಳಿಗೆ, ವೇದಿಕೆ ಒಂದೇ ಕಡೆ ಇರುವಂತೆ ಜಾಗ ಗುರುತಿಸಲಾಗಿದೆ.
ಇನ್ನು ಪ್ರಮುಖವಾಗಿ ಕನ್ನಡ ಸಾಹಿತ್ಯ ಸಮ್ಮೇಳನಕ್ಕೆ ಬರುವವರಿಗೆ ಸಂಚಾರ ದಟ್ಟಣೆ ಆಗದಂತೆ ಕ್ರಮವಹಿಸಲಾಗಿದ್ದು, ನುಡಿ ಜಾತ್ರೆಗೆ ಭರ್ಜರಿ ಸಿದ್ಧತೆ ಕೈಗೊಳ್ಳಲಾಗಿದೆ.
ಮೈಸೂರು : ನಾವು ಪರಸ್ಪರ ಪ್ರೀತಿಸಿ ಮದುವೆಯಾಗಿದ್ದೇವೆ. ನಮಗೆ ಜೀವ ಬೆದರಿಕೆ ಇದ್ದು, ರಕ್ಷಣೆ ಕೊಡಿ ಎಂದು ತುಮಕೂರು ಮೂಲದ…
ಪ್ರಶಾಂತ್ ಎಸ್. ಮೈಸೂರು : ನಗರ ಹೊರವಲಯದ ಶ್ರೀರಾಂಪುರ ಪಟ್ಟಣ ಪಂಚಾಯಿತಿ ಹಾಗೂ ನಗರಪಾಲಿಕೆ ವ್ಯಾಪ್ತಿಯ ಕಂದಾಯ ಇಲಾಖೆ ನೌಕರರ…
ಚಾಮರಾಜನಗರ : ನೀರಿನ ವಿದ್ಯುತ್ ಬಿಲ್ ಬಾಕಿ ಉಳಿಸಿಕೊಂಡಿರುವ ಕಾರಣಕ್ಕೆ ತಾಲ್ಲೂಕಿನ ಮೂರು ಗ್ರಾಮ ಪಂಚಾಯಿತಿ ಕಾರ್ಯಾಲಯಗಳ ವಿದ್ಯುತ್ ಸಂಪರ್ಕವನ್ನು…
ಇಸ್ರೇಲ್ : ಇಸ್ರೇಲ್-ಲೆಬನಾನ್ ಉದ್ವಿಗ್ನತೆಗೆ 10 ದಿನಗಳ ಕದನ ವಿರಾಮ ಘೋಷಿಸಲಾಗಿದೆ ಎಂದು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಹೇಳಿದ್ದಾರೆ.…
ನವದೆಹಲಿ : ಉತ್ತರ, ದಕ್ಷಿಣ, ದೊಡ್ಡ ಅಥವಾ ಸಣ್ಣ ರಾಜ್ಯಗಳಾವುದೇ ಇರಲಿ ಕ್ಷೇತ್ರ ಪುನರ್ ವಿಂಗಡಣೆಯ ವಿಷಯಕ್ಕೆ ಬಂದಾಗ ರಾಜ್ಯಗಳ…