Mysore
29
scattered clouds

Social Media

ಶುಕ್ರವಾರ, 20 ಡಿಸೆಂಬರ್ 2024
Light
Dark

ಮಂಡ್ಯ: 87ನೇ ಕನ್ನಡ ಸಾಹಿತ್ಯ ಸಮ್ಮೇಳನಕ್ಕೆ ಚಾಲನೆ

 

ಮಂಡ್ಯ: ಸಕ್ಕರೆ ನಗರಿ ಮಂಡ್ಯದಲ್ಲಿ ಡಿ.20,21 ಮತ್ತು 22ರಂದು ಮೂರು ದಿನಗಳ ಕಾಲ ಜರುಗಲಿರುವ ಕನ್ನಡ ನುಡಿ ಜಾತ್ರೆ 87ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನಕ್ಕೆ ಧ್ವಜಾರೋಹಣ ನೆರವೇರಿಸುವ ಮೂಲಕ ಅಧಿಕೃತವಾಗಿ ಚಾಲನೆ ನೀಡಲಾಯಿತು.

ಬೆಳಗ್ಗೆ 6.30ಕ್ಕೆ ಧ್ವಜಾರೋಹಣ ಕಾರ್ಯಕ್ರಮ ನೆರವೇರಿಸಲಾಯಿತು. ಸಮ್ಮೇಳನಾಧ್ಯಕ್ಷರಾದ ಗೊ.ರು.ಚನ್ನಬಸಪ್ಪ ಅವರ ಉಪಸ್ಥಿತಿಯಲ್ಲಿ ಕೃಷಿ ಸಚಿವರು ಹಾಗೂ ಮಂಡ್ಯ ಜಿಲ್ಲಾ ಉಸ್ತುವಾರಿ ಸಚಿವರು ಹಾಗೂ ಸಮ್ಮೇಳನ ಸ್ವಾಗತ ಸಮಿತಿಯ ಅಧ್ಯಕ್ಷರಾದ ಎನ್. ಚಲುವರಾಯಸ್ವಾಮಿ ಅವರು ರಾಷ್ಟ್ರಧ್ವಜಾರೋಹಣ ಮಾಡಿದರು.

ಕನ್ನಡ ಸಾಹಿತ್ಯ ಪರಿಷತ್ತಿನ ರಾಜ್ಯಾಧ್ಯಕ್ಷ ಹಾಗೂ ಸಮ್ಮೇಳನ ಸ್ವಾಗತ ಸಮಿತಿಯ ಗೌರವ ಕಾರ್ಯಾಧ್ಯಕ್ಷ ನಾಡೋಜ ಡಾ. ಮಹೇಶ ಜೋಶಿ ಕನ್ನಡ ಸಾಹಿತ್ಯ ಪರಿಷತ್ತಿನ ಧ್ವಜಾರೋಹಣವನ್ನು ಹಾಗೂ ಮಂಡ್ಯ ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತಿನ ಸಂಚಾಲಕಿ ಮೀರಾ ಶಿವಲಿಂಗಯ್ಯ ಅವರು ನಾಡಧ್ವಜಾರೋಹಣ ಮಾಡಿದರು.

 

ಶಾಸಕರುಗಳಾದ ರಮೇಶ್ ಬಾಬು ಬಂಡಿಸಿದ್ದೇಗೌಡ, ದಿನೇಶ್ ಗೂಳಿಗೌಡ, ಜಿಲ್ಲಾಧಿಕಾರಿ ಡಾ. ಕುಮಾರ, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಮಲ್ಲಿಕಾರ್ಜುನ ಬಾಲದಂಡಿ, ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಶೇಖ್ ತನ್ವೀರ್ ಆಸಿಫ್ ಸೇರಿದಂತೆ ನಾನಾ ಗಣ್ಯರು ಸ್ಕೌಟ್ಸ್ ಮತ್ತು ಗೈಡ್ಸ್, ಭಾರತ್ ಸೇವಾದಳದ ಮಕ್ಕಳು ಧ್ವಜಾರೋಹಣ ಕಾರ್ಯಕ್ರಮದಲ್ಲಿ ಉಪಸ್ಥಿಪ್ರಕಾರಗಳರು.

 

 

ಮೆರವಣಿಗೆಯಲ್ಲಿ ಸಾಗಿದ ಕಲಾತಂಡಗಳು

ನಂದಿಧ್ವಜ, ಚಕ್ಕಡಿಗಾಡಿ, ಕೊಂಬುಕಹಳೆ, ನಾದಸ್ವರ, ಸ್ತಬ್ಧಚಿತ್ರ, ವೀರಗಾಸೆ, ತಮಟೆ, ಕಂಸಾಳೆ, ಮಹಿಳಾ ವೀರಗಾಸೆ, ಕೀಲುಕುದುರೆ, ಜಗ್ಗಲಿಗೆ ಮೇಳ, ಪೂರ್ಣಕುಂಭ, ನಗಾರಿ, ಛತ್ರಿಚಾಮರ, ಲಿಡಕರ್ ಸ್ತಬ್ಧಚಿತ್ರ, ಖಾಸಬೇಡರಪಡೆ, ಭಾಗವಂತಿಕೆ, ಹಗಲು ವೇಷ, ಅರೆವಾದ್ಯ, ಪೆಟ್ಟಿಗೆ ಮಾರಮ್ಮ, ಕೋಲಾಟ, ಗಾರುಡಿಗೊಂಬೆ, ಕರಗ, ಚಿಲಿಪಿಲಿ ಗೊಂಬೆ, ದಾಸಪ್ಪ ಜೋಗಪ್ಪ, ಬೆಂಕಿಭರಾಟೆ, ದೊಣ್ಣೆ ವರಸೆ, ಚಿಟ್ಟಲಗಿ ಮೇಳ, ಷಹನಾಯವಾದನ, ಗಾರುಡಿ ಗೊಂಬೆ, ಯಕ್ಷಗಾನ ಗೊಂಬೆ, ವಾನರಸೇನೆ, ಕರಡಿ ಮಜಲು, ದೇವಿ ವೇಷಧಾರಿ, ಕೀಲು ಕುದುರೆ, ನೃತ್ಯ, ಮರಗಾಲು, ಮುಳ್ಳು ಕುಣಿತ, ಡೊಳ್ಳು ಕುಣಿತ, ಪೂಜಾಕುಣಿತ, ಡೊಳ್ಳು ಕುಣಿತ, ಹಾಲಕ್ಕಿ ಸುಗ್ಗಿ ಕುಣಿತ, ಪಟಕುಣಿತ, ರಂಗದಕುಣಿತ, ಮಹಿಳಾ ಡೊಳ್ಳು ಕುಣಿತ, ಸೋಮನ ಕುಣಿತ, ಗೊರವರ ಕುಣಿತ, ಲಂಬಾಣಿ ನೃತ್ಯ, ಕೋಳಿ ನೃತ್ಯ, ಕೊಡವ ನೃತ್ಯ, ಜೋಗತಿ ನೃತ್ಯ,  ವೀರಮಕ್ಕಳ ಕುಣಿತ, ಸತ್ತಿಗೆ ಕುಣಿತ,  ದಟ್ಟಿ ಕುಣಿತ,  ಹಲಗು ಕುಣಿತ, ಪಟಕುಣಿತ, ನಾಲ್ವಡಿ ಕೃಷ್ಣರಾಜ ಒಡೆಯರ್, ಕೆಂಪೇಗೌಡ, ವಿಶ್ವೇಶ್ವರಯ್ಯ ವೇಷಧಾರಿ, ಅಶ್ವಾರೋಹಿ ದಳ, ಟಾಂಗಾ ಗಾಡಿ, ಎತ್ತಿನ ಗಾಡಿ, ಸಮ್ಮೇಳನಾಧ್ಯಕ್ಷರ ಭಾವಚಿತ್ರ ಒಳಗೊಂಡ 87 ಆಟೋ ರಿಕ್ಷಾಗಳು, ಸ್ಕೌಟ್ಸ್ ಮತ್ತು ಗೈಟ್ಸ್, ಎನ್ ಸಿಸಿ, ಭಾರತ್ ಸೇವಾದಳ ತಂಡ ಮೆರವಣಿಗೆಯಲ್ಲಿ ಪಾಲ್ಗೊಂಡಿದ್ದವು.

ಹೊರರಾಜ್ಯದ ಕಲಾ ಪ್ರಕಾರಗಳು

ತಮಿಳುನಾಡಿನ ಕರಗಂ, ಒಡಿಶಾದ ಸಂಬಲ್ಪುರಿ ಮತ್ತು ಧಾಪ್ ಬುಡಕಟ್ಟು ನೃತ್ಯ, ಮಧ್ಯಪ್ರದೇಶದ ಬಧಾಯಿ ಮತ್ತು ನೋರಾ, ಕಲಾ ಪ್ರಕಾರಗಳು ಒಳಗೊಂಡಂತೆ, ನಾನಾ ಜಿಲ್ಲೆಯ ನೂರಾರು ಕಲಾತಂಡಗಳು ಸಮ್ಮೇಳನಾಧ್ಯಕ್ಷರ ಮೆರವಣಿಗೆಯಲ್ಲಿ ಸಾಗಿದವು.

 

 

Tags: