ಮಂಡ್ಯ: ಐತಿಹಾಸಿಕ ಶ್ರೀರಂಗಪಟ್ಟಣ ದಸರಾವನ್ನು ಅಕ್ಟೋಬರ್ 4 ರಿಂದ ಮೂರು ದಿನಗಳ ಕಾಲ ಅಥವಾ 5 ದಿನಗಳ ಕಾಲ ಆಚರಿಸಲಾಗುವುದು ಎಂದು ಕೃಷಿ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಎನ್ ಚಲುವರಾಯಸ್ವಾಮಿ ಅವರು ತಿಳಿಸಿದರು.
ಅವರು ಮಂಗಳವಾರ ಜಿಲ್ಲಾ ಪಂಚಾಯತ್ ಕಾವೇರಿ ಸಭಾಂಗಣದಲ್ಲಿ ಪೂರ್ವಸಿದ್ಧತಾ ಸಭೆ ನಡೆಸಿ ಮಾತನಾಡಿದರು. ದಸರಾದಲ್ಲಿ ಕಾರ್ಯಕ್ರಮಗಳು ಜನಾಕರ್ಷಿತವಾಗಿರಲಿ ಹಾಗೂ ಯಾವುದೇ ಲೋಪವಿಲ್ಲದಂತೆ ವಿಜೃಂಭಣೆಯಿಂದ ಆಚರಿಸಬೇಕು ಎಂದರು.
ವಿವಿಧ ಸಮಿತಿಗಳನ್ನು ರಚಿಸಿ ಯೋಜನೆಗಳನ್ನು ಸಿದ್ಧಪಡಿಸಿ ಉತ್ತಮವಾಗಿ ಕಾರ್ಯಕ್ರಮಗಳು ಮೂಡಿ ಬರಬೇಕು ಹಾಗೂ ಸ್ಥಳೀಯ ಕಲಾವಿದರಿಗೆ ಆದ್ಯತೆ ನೀಡಿ ಎಂದರು.
ಜಿಲ್ಲಾಧಿಕಾರಿ ಡಾ: ಕುಮಾರ ಮಾತನಾಡಿ, ದಸರಾ ಕಾರ್ಯಕ್ರಮಗಳನ್ನು ಅಚ್ಚುಕಟ್ಟಾಗಿ ನಡೆಸಲು ಸ್ವಾಗತ, ವೇದಿಕೆ, ಸಾಂಸ್ಕೃತಿಕ ಸೇರಿದಂತೆ ವಿವಿಧ ಸಮಿತಿಗಳನ್ನು ರಚಿಸಲಾಗಿದೆ. ಕ್ರೀಡಾ, ಯೋಗ, ಮಕ್ಕಳ ದಸರಾ ಸೇರಿದಂತೆ ವಿವಿಧ ಕಾರ್ಯಕ್ರಮಗಳನ್ನು ಆಯೋಜಿಸಲಾಗುವುದು ಎಂದರು.
ಸಭೆಯಲ್ಲಿ ಶಾಸಕರಾದ ರಮೇಶ್ ಬಾಬು ಬಂಡಿಸಿದ್ದೇಗೌಡ, ಹೆಚ್. ಟಿ ಮಂಜು, ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಶೇಖ್ ತನ್ವೀರ್ ಆಸೀಫ್, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಮಲ್ಲಿಕಾರ್ಜುನ ಬಾಲದಂಡಿ ಸೇರಿದಂತೆ ಇನ್ನಿತರೆ ಅಧಿಕಾರಿಗಳು ಉಪಸ್ಥಿತರಿದ್ದರು.
ಹನೂರು: ವಿಷ ಕುಡಿದು ವ್ಯಕ್ತಿಯೊಬ್ಬರು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ರಾಮಪುರ ಪೊಲೀಸ್ ಠಾಣೆ ವ್ಯಾಪ್ತಿಯ ಗರಿಕೆಕಂಡಿ ಅರಣ್ಯ ಪ್ರದೇಶದಲ್ಲಿ ನಡೆದಿದೆ.…
ನವದೆಹಲಿ: ದೆಹಲಿ ಪ್ರವಾಸದಲ್ಲಿರುವ ಮಾಜಿ ಸಿಎಂ ಸಿದ್ದರಾಮಯ್ಯ ಅವರು ಇಂದು ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಅವರನ್ನು ಭೇಟಿಯಾಗಿದ್ದಾರೆ. ನಿನ್ನೆ…
ಹನೂರು: ಸುಕ್ಷೇತ್ರ ಶ್ರೀ ಮಲೆ ಮಹದೇಶ್ವರ ಸ್ವಾಮಿ ಕ್ಷೇತ್ರದಲ್ಲಿ ಶ್ರಾವಣ ಮಾಸದ ಸಮಾರೋಪದ ಅಂಗವಾಗಿ 108 ಕುಂಭಾಭಿಷೇಕ ಮಹೋತ್ಸವ ಹಾಗೂ…
ಮಹಾದೇಶ್ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ಕೊಪ್ಪ ಗ್ರಾಮದಿಂದ ಕೊಳ್ಳೇಗಾಲಕ್ಕೆ ತೆರಳುತ್ತಿದ್ದ ದ್ವಿಚಕ್ರ ವಾಹನಕ್ಕೆ ಕಾರು ಡಿಕ್ಕಿ…
ಮೈಸೂರು ದಸರಾ ನಮ್ಮ ನಾಡಿನ ಹೆಮ್ಮೆ. ಈ ನಾಡಹಬ್ಬದಲ್ಲಿ ದಸರಾ ಚಿತ್ರೋತ್ಸವವನ್ನು ರದ್ದುಪಡಿಸಿರುವ ನಿರ್ಧಾರ ಖಂಡನೀಯ. ಈ ನಿರ್ಧಾರವನ್ನು ಮರುಪರಿಶೀಲಿಸಿ…
ಮೈಸೂರು ಜಿಲ್ಲೆಯ ಇಮ್ಮಾವು ಬಳಿ ಅಂತರಾಷ್ಟ್ರೀಯ ದರ್ಜೆಯ ಫಿಲಂ ಸಿಟಿ ನಿರ್ಮಿಸುವ ಬಗ್ಗೆ ಮೈಸೂರು ಜಿ ಉಸ್ತುವಾರಿ ಸಚಿವರಾದ ಯತೀಂದ್ರ…