ಮಂಡ್ಯ : ಕೆ.ಆರ್.ಎಸ್. ವ್ಯಾಪ್ತಿಯ ರೈತರ ಹಿತದೃಷ್ಟಿಟ್ಟುಕೊಂಡು ಕೆಆರ್‌ಎಸ್ ಜಲಾಶಯದಿಂದ ನಾಲೆಗಳಿಗೆ ನೀರು ಹರಿಸುವ ಸಂಬಂಧ 24 ಗಂಟೆ ಅವಧಿಯೊಳಗೆ ತೀರ್ಮಾನ ಕೈಗೊಳ್ಳಲಾಗುವುದು ಎಂದು ಕೃಷಿ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಎನ್.ಚಲುವರಾಯಸ್ವಾಮಿ ಹೇಳಿದರು.
ಶ್ರೀರಂಗಪಟ್ಟಣ ತಾಲ್ಲೂಕಿನ ಕೆಆರ್‌ಎಸ್ ಕಾವೇರಿ ಸಭಾಂಗಣದಲ್ಲಿ ಸೋಮವಾರ ಮೈಸೂರು ಜಿಲ್ಲಾ ಉಸ್ತುವಾರಿ ಸಚಿವ ಎಚ್.ಸಿ. ಮಹದೇಪ್ಪ, ಮಂಡ್ಯ ಮತ್ತು ಮೈಸೂರು ಜಿಲ್ಲೆಯ ಶಾಸಕರೊಂದಿಗೆ ಕಾವೇರಿ ನೀರಾವರಿ ಸಲಹಾ ಸಮಿತಿ ಸಭೆ ನಡೆಸಿದ ನಂತರ ಮಾತನಾಡಿದ ಅವರು, ಜನ-ಜಾನುವಾರುಗಳು ಹಾಗೂ ರೈತರ ಹಿತ ಕಾಯಲಾಗುವುದು ಎಂದರು.
ಅರೆ ನೀರಾವರಿ ಕೃಷಿ ಪದ್ಧತಿ ಅನಿವಾರ್ಯ : ಕೆಆರ್‌ಎಸ್ ಜಲಾಶಯದಲ್ಲಿ ಪ್ರಸ್ತುತ 113 ಅಡಿ ನೀರು ಸಂಗ್ರಹವಾಗಿದೆ. ಈಗಿನ ಜಲಾಶಯ ಸ್ಥಿತಿ ಅವಲೋಕನ ಮಾಡಿದರೆ ಈ ವರ್ಷ ಅರೆ ನೀರಾವರಿ ಕೃಷಿ ಪದ್ಧತಿ ಅಳವಡಿಸಿಕೊಳ್ಳುವ ಅನಿವರ‍್ಯತೆ ಕಾಣುತ್ತಿದೆ. ಇಂತಹ ಸಂಕಷ್ಟ ಸ್ಥಿತಿಯನ್ನು ಈಗಾಗಾಲೇ ನಾವು ಎದುರಿಸಿದ್ದೇವೆ. ಇದು ರಾಜ್ಯದ ರೈತರಿಗೂ ತಿಳಿದಿದೆ ಎಂದರು.
ಮಂಡ್ಯ, ಮೈಸೂರು, ಬೆಂಗಳೂರು ಜಿಲ್ಲೆಗಳಿಗೆ ಕುಡಿಯುವ ನೀರು, ಬೆಳೆದು ನಿಂತಿರುವ ಬೆಳೆ ರಕ್ಷಣೆ, ಕೆರೆಗಳಿಗೆ ನೀರು ಹರಿಸುವ ಸಂಬಂಧ, ಕೇಂದ್ರ ಸರ್ಕಾರ, ಸುಪ್ರೀಂ ಕೋರ್ಟ್ ನ ತೀರ್ಮಾನಗಳು ಇತರೆ ಸಾಧಕ, ಬಾಧಕಗಳ ಕುರಿತು ಎಲ್ಲರೂ ಸುದೀರ್ಘ ಚರ್ಚೆ ನಡೆದ್ದೇವೆ. ಸದ್ಯಕ್ಕೆ ನಮ್ಮ ರೈತರನ್ನು ಉಳಿಸುವ ಪ್ರಯತ್ನವನ್ನಂತೂ ಮಾಡಲಾಗುವುದು. ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಉಪಮುಖ್ಯಮಂತ್ರಿ ಮತ್ತು ನೀರಾವರಿ ಸಚಿವರೂ ಆದ ಡಿ.ಕೆ ಶಿವಕುಮಾರ್ ಅವರ ಜತೆ ಚರ್ಚಿಸಿ ಅಂತಿಮ ನಿರ್ಣಯ ಕೈಗೊಳ್ಳಲಾಗುವುದು ಎಂದರು.
ಸಂಪೂರ್ಣ ಮಾಹಿತಿ ಕೊಡಲು ಸೂಚನೆ : ಕಾಂಗ್ರೆಸ್ ನೇತೃತ್ವದ ಸರ್ಕಾರ ರಚನೆಯಾದ ನಂತರ ನೂತನ ಐಸಿಸಿ ಸಮಿತಿಯನ್ನು ಮುಖ್ಯಮಂತ್ರಿಗಳು ರಚನೆ ಮಾಡಿ ಆದೇಶ ಹೊರಡಿಸಿದ್ದಾರೆ. ಮೈಸೂರು, ಮಂಡ್ಯ ಜಿಲ್ಲೆಯ ಅಣೆಕಟ್ಟೆ ನಾಲೆಗಳು ಹಾಗೂ ವಿಶ್ವೇಶ್ವರಯ್ಯ ನಾಲೆ ಅಚ್ಚುಕಟ್ಟು ಪ್ರದೇಶ ವ್ಯಾಪ್ತಿಯಲ್ಲಿ ಹಲವು ಸಮಸ್ಯೆಗಳಿವೆ. ಹಾಗಾಗಿ ಎರಡು ಜಿಲ್ಲೆಗಳ ಜಿಲ್ಲಾಧಿಕಾರಿಗಳೊಡನೆ ಮೈಸೂರು ಜಿಲ್ಲೆ ಉಸ್ತುವಾರಿ ಮಂತ್ರಿ ಎಚ್.ಸಿ ಮಹದೇವಪ್ಪ ಹಾಗೂ ನಾನು ಸಭೆ ನಡೆಸಿದ್ದೇವೆ. ಎರಡೂ ಜಿಲ್ಲೆಯ ಶಾಸಕರು ಹಲವು ಸಮಸ್ಯೆ ಹೇಳಿದ್ದಾರೆ. ಮಂಡ್ಯ ಹಾಗೂ ಮೈಸೂರು ಜಿಲ್ಲೆಯ ಒಣ ಭೂಮಿಗೆ ಸದಾ ನೀರು ಹೋಗಲಿಕ್ಕೆ ಅನೇಕ ತೊಂದರೆಗಳಿವೆ. ಎಲ್ಲಿ ನಾಲೆಗಳು ದುರಸ್ಥಿಯಲ್ಲಿವೆ, ಎಲ್ಲಿ ನಾಲೆಗಳಲ್ಲಿ ಹೂಳು ತುಂಬಿಕೊಂಡಿದೆ, ಕೊನೆಯ ಭಾಗಕ್ಕೆ ಏಕೆ ನೀರು ಹರಿಯುತ್ತಿಲ್ಲ ಎಂಬುದರ ಕುರಿತು ನೀರಾವರಿ ಇಲಾಖೆ ಅಧಿಕಾರಿಗಳು ಸಂಪೂರ್ಣ ಮಾಹಿತಿ ಕೊಡುವಂತೆ ಸೂಚಿಸಿದ್ದೇವೆ ಎಂದು ಹೇಳಿದರು.
ಇದಕ್ಕೂ ಮೊದಲು ಕಾವೇರಿ ನೀರಾವರಿ ನಿಗಮ ಸೂಪರಿಂಟೆಂಡೆಂಟ್ ಇಂಜಿನಿಯರ್ ರಘುರಾಮ್ ಕೆಆರ್‌ಎಸ್ ಜಲಾಶಯದಲ್ಲಿ 113 ಅಡಿ ನೀರು ಸಂಗ್ರಹವಾಗಿದೆ. ಇನ್ನೂ 20 ಟಿಎಂಸಿ ನೀರು ಹರಿದು ಬಂದರೆ ಆನ್ ಅಂಡ್ ಆಫ್ ಪದ್ಧತಿಯಲ್ಲಿ ಜಲಾಶಯ ವ್ಯಾಪ್ತಿಯ ಎಲ್ಲ ನಾಲೆಗಳಿಗೆ ನೀರು ಹರಿಸಬಹುದು. 15 ದಿನ ನೀರು ಹರಿಸಿ, 15 ದಿನ ನಿಲ್ಲಿಸಬಹುದು. ಡಿಸೆಂಬರ್‌ವರೆಗೆ ನಾಲೆಗಳಿಗೆ ನೀರು ಹರಿಸುವ ಮಾಹಿತಿ ನೀಡಿದರು.
ಸಭೆಯಲ್ಲಿ ಶಾಸಕರಾದ ಜಿ.ಟಿ ದೇವೇಗೌಡ, ಪಿ.ಎಂ.ನರೇಂದ್ರಸ್ವಾಮಿ, ಎ.ಬಿ. ರಮೇಶ್ ಬಾಬು ಬಂಡಿಸಿದ್ದೇಗೌಡ, ಕೆ.ಎಂ.ಉದಯ್, ಎಚ್.ಟಿ. ಮಂಜು, ರವಿಕುಮಾರ್ ಗಣಿಗ, ದಿನೇಶ್ ಗೂಳಿಗೌಡ, ಮಧು ಜಿ. ಮಾದೇಗೌಡ, ಮರಿತಿಬ್ಬೇಗೌಡ, ಜಿಲ್ಲಾಧಿಕಾರಿಗಳಾದ ಡಾ.ಕುಮಾರ, ರಾಜೇಂದ್ರ, ಕಾವೇರಿ ನೀರಾವರಿ ನಿಗಮದ ಮುಖ್ಯ ಇಂಜಿನಿಯರ್ ವೆಂಕಟೇಶ್, ಎಇಇ ಎ.ಜಯಂತ್, ಪೊಲೀಸ್ ವರಿಷ್ಠಾಧಿಕಾರಿಗಳಾದ ಎನ್.ಯತೀಶ್, ಸೀಮಾ ಇತರರು ಭಾಗವಹಿಸಿದ್ದರು.
ಬಾರಾಮತಿ : ಭಾರತೀಯ ರಾಜಕಾರಣದಲ್ಲಿ ಅನೇಕ ರಾಜಕೀಯ ನಾಯಕರು ವಿಮಾನ ದುರಂತದಲ್ಲಿ ಮೃತಪಟ್ಟಿದ್ದಾರೆ. ಈ ಹಿಂದೆ ವಿಮಾನ ಅಪಘಾತದಲ್ಲಿ ಯಾವೆಲ್ಲಾ…
ಮೈಸೂರು : ಹೆಬ್ಬಾಳ ಕೈಗಾರಿಕಾ ಪ್ರದೇಶದಲ್ಲಿ ಡ್ರಗ್ಸ್ ಲ್ಯಾಬ್ ಇರುವ ಶಂಕೆ ವ್ಯಕ್ತವಾಗಿದೆ. ಹೀಗಾಗಿ ರಾಷ್ಟ್ರಿಯ ಮಾದಕ ದ್ರವ್ಯ ನಿಯಂತ್ರಣ…
ಬೆಂಗಳೂರು : 25 ನಿಗಮ ಮಂಡಳಿಗಳ ಅಧ್ಯಕ್ಷರ ಅಧಿಕಾರಾವಧಿ ಮುಂದುವರಿಕೆ ಮಾಡಿ ರಾಜ್ಯ ಸರ್ಕಾರ ಆದೇಶ ಮಾಡಿದೆ. ಶಾಸಕರಿಗೆ ಮಾತ್ರ…
ಮೈಸೂರು : ಸೈಬರ್ ವಂಚಕರು ವಾಟ್ಸಾಪ್ ಕರೆ ಮೂಲಕ ಹೂಡಿದ ಡಿಜಿಟಲ್ ಅರೆಸ್ಟ್ ಕುತಂತ್ರಕ್ಕೆ ಬಲಿಯಾಗಿ ವಿವೇಕಾನಂದ ನಗರದ ಹಿರಿಯ…
ಬೆಂಗಳೂರು : ಕೆಎಸ್‌ಆರ್‌ಟಿಸಿ ಸ್ಟಾಫ್ ವರ್ಕರ್ಸ್ ಫೆಡರೇಷನ್ ಅಧ್ಯಕ್ಷ, ಕಾರ್ಮಿಕ ಮುಖಂಡ ಎಚ್.ವಿಅನಂತ್ ಸುಬ್ಬರಾವ್ (85) ಬುಧವಾರ ಸಂಜೆ ನಿಧನರಾಗಿದ್ದಾರೆ.…
ಮೈಸೂರು : ಶ್ರೀ ಚಾಮರಾಜೇಂದ್ರ ಮೃಗಾಲಯದಲ್ಲಿದ್ದ 25 ವರ್ಷದ ಗಂಡು ಜಿರಾಫೆ ‘ಯುವರಾಜ’ ಬುಧವಾರ ಬೆಳಿಗ್ಗೆ ಸಾವನ್ನಪ್ಪಿದೆ. 1987ರಲ್ಲಿ ಜರ್ಮನಿಯಿಂದ…