ಬೆಂಗಳೂರು: ಮಂಡ್ಯ ಜಿಲ್ಲೆಯ ಶ್ರೀರಂಗಪಟ್ಟಣ ತಾಲೂಕಿನ ಮೀನಾ ಎಂಬ ಮಹಿಳೆಯು ಸಿಎಂ ಸಿದ್ದರಾಮಯ್ಯ ಅವರ ಎರಡನೇ ಜನ ಸ್ಪಂದನಾ ಕಾರ್ಯಕ್ರಮದಲ್ಲಿ ದಯಾಮರಣ ನಿಡುವಂತೆ ಮನವಿ ಮಾಡಿದ ಪ್ರಸಂಗ ನಡೆಯಿತು.
ಇಂದು ವಿಧಾನಸೌಧ ಆವರಣದಲ್ಲಿ ಸಿಎಂ ಸಿದ್ದರಾಮಯ್ಯರ ನೇತೃತ್ವದಲ್ಲಿ ನಡೆದ ಜನಸ್ಪಂದನ ಕಾರ್ಯಕ್ರಮಕ್ಕೆ ಬಂದಿದ್ದ ಮಂಡ್ಯ ಮೂಲದ ಅಂಗವಿಕಲ ಮಹಿಳೆಯೊಬ್ಬರು ತಮ್ಮ ಕಷ್ಟಗಳಿಂದ ಶಾಸ್ವತ ಪರಿಹಾರಕ್ಕಾಗಿ ಜನ ಸ್ಪಂದನಾ ಕಾರ್ಯಕ್ರಮಲ್ಲಿ ಭಾಗಿಯಾಗಿದ್ದರು.
ನಾನು ಅಂಗವಿಕಲೆ ನನಗೆ ಯಾರೂ ಕೆಲಸ ಕೊಡುತ್ತಿಲ್ಲ. ನನ್ನ ಪತಿ ಕೋವಿಡ್ಗೆ ಬಲಿಯಾದರು. ನನ್ನ ಮಗನ ಓದಿಗೆ ಕಷ್ಟ ಆಗುತ್ತಿದ್ದು, ನಮಿಬ್ಬರಿಗೂ ದಯಾಮರಣ ಕೇಳಲು ಜನಸ್ಪಂದನ ಕಾರ್ಯಕ್ರಮಕ್ಕೆ ಬಂದಿರುವುದಾಗಿ ನೊಂದ ಮಹಿಲೆ ಹೇಳಿರುವುದಾಗಿ ಖಾಸಗಿ ವಾಹಿನಿ ಟಿವಿ-9 ವರದಿ ಮಾಡಿದೆ.
ಮೂರು ವರ್ಷಗಳ ಹಿಂದೆ ನನ್ನ ಗಂಡ ಕೋವಿಡ್ನಿಂದ ಮೃತಪಟ್ಟಿದ್ದಾರೆ. ನನಗೆ ಜೀವನ ನಡೆಸಲು ತುಂಬಾ ಕಷ್ಟವಾಗುತ್ತಿದೆ. ನಾನು ಕೂಡ ಅಂಗವಿಕಲೆ. ನಾನು ಅಂಗವಿಕಲೆ ಎಂದು ಯಾರೂ ಕೆಲಸ ಕೊಡುತ್ತಿಲ್ಲ. ನನ್ನ ಮಗನ ಓದಿಗಾಗಿ ಸಹಾಯ ಮಾಡಬೇಕು. ನಾನು ಕೆಲಸ ಕೇಳಿದರೆ ನನ್ನನ್ನ ಕೆಟ್ಟದಾಗಿ ಬಳಸಿಕೊಳ್ಳಲು ಪ್ರಯತ್ನ ಮಾಡುತ್ತಾರೆ. ಹೀಗಾಗಿ ನಮಗೆ ದಯಾಮರಣ ಕೊಡಿ ಎಂದು ಸರ್ಕಾರಕ್ಕೆ ಮನವಿ ಮಾಡಿದ್ದಾರೆ.
ಶ್ರೀರಂಗಪಟ್ಟಣದ ಶಾಸಕರ ಬಳಿ 2 ಬಾರಿ ಸಮಸ್ಯೆ ಕೇಳಿಕೊಂಡಿದ್ದೇನೆ. ಆದರೆ ಯಾವುದೇ ಪ್ರಯೋಜನವಾಗಿಲ್ಲ. ನನ್ನ ಗಂಡ ಕೋವಿಡ್ನಿಂದ ಮೃತಪಟ್ಟಾಗ ಅಂಬರೀಶ್ ಅವರ ಮಗ ಮನೆಗೆ ಬಂದು ಸಹಾಯ ಮಾಡುವುದಾಗಿ ಹೇಳಿದ್ದರು. ಅವರು ಕೂಡ ಸಹಾಯ ಮಾಡಲಿಲ್ಲ ಎಂದು ಮೀನಾ ತಮ್ಮ ಅಳಲನ್ನು ತೋಡಿಕೊಂಡಿದ್ದಾರೆ.
ಹನೂರು: ವಿಷ ಕುಡಿದು ವ್ಯಕ್ತಿಯೊಬ್ಬರು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ರಾಮಪುರ ಪೊಲೀಸ್ ಠಾಣೆ ವ್ಯಾಪ್ತಿಯ ಗರಿಕೆಕಂಡಿ ಅರಣ್ಯ ಪ್ರದೇಶದಲ್ಲಿ ನಡೆದಿದೆ.…
ನವದೆಹಲಿ: ದೆಹಲಿ ಪ್ರವಾಸದಲ್ಲಿರುವ ಮಾಜಿ ಸಿಎಂ ಸಿದ್ದರಾಮಯ್ಯ ಅವರು ಇಂದು ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಅವರನ್ನು ಭೇಟಿಯಾಗಿದ್ದಾರೆ. ನಿನ್ನೆ…
ಹನೂರು: ಸುಕ್ಷೇತ್ರ ಶ್ರೀ ಮಲೆ ಮಹದೇಶ್ವರ ಸ್ವಾಮಿ ಕ್ಷೇತ್ರದಲ್ಲಿ ಶ್ರಾವಣ ಮಾಸದ ಸಮಾರೋಪದ ಅಂಗವಾಗಿ 108 ಕುಂಭಾಭಿಷೇಕ ಮಹೋತ್ಸವ ಹಾಗೂ…
ಮಹಾದೇಶ್ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ಕೊಪ್ಪ ಗ್ರಾಮದಿಂದ ಕೊಳ್ಳೇಗಾಲಕ್ಕೆ ತೆರಳುತ್ತಿದ್ದ ದ್ವಿಚಕ್ರ ವಾಹನಕ್ಕೆ ಕಾರು ಡಿಕ್ಕಿ…
ಮೈಸೂರು ದಸರಾ ನಮ್ಮ ನಾಡಿನ ಹೆಮ್ಮೆ. ಈ ನಾಡಹಬ್ಬದಲ್ಲಿ ದಸರಾ ಚಿತ್ರೋತ್ಸವವನ್ನು ರದ್ದುಪಡಿಸಿರುವ ನಿರ್ಧಾರ ಖಂಡನೀಯ. ಈ ನಿರ್ಧಾರವನ್ನು ಮರುಪರಿಶೀಲಿಸಿ…
ಮೈಸೂರು ಜಿಲ್ಲೆಯ ಇಮ್ಮಾವು ಬಳಿ ಅಂತರಾಷ್ಟ್ರೀಯ ದರ್ಜೆಯ ಫಿಲಂ ಸಿಟಿ ನಿರ್ಮಿಸುವ ಬಗ್ಗೆ ಮೈಸೂರು ಜಿ ಉಸ್ತುವಾರಿ ಸಚಿವರಾದ ಯತೀಂದ್ರ…