ಮಂಡ್ಯ

ಶ್ರೀರಂಗಪಟ್ಟಣದಲ್ಲಿ ಬರೋಬ್ಬರಿ 9.20 ಲಕ್ಷಕ್ಕೆ ಮಾರಾಟವಾದ ಹಳ್ಳಿಕಾರ್ ಎತ್ತು

ಶ್ರೀರಂಗಪಟ್ಟಣ : ಹಳ್ಳಿಕಾರ್ ತಳಿಯ ಒಂಟಿ ಎತ್ತು ಬರೋಬ್ಬರಿ 9.20 ಲಕ್ಷ ರೂ.ಗಳಿಗೆ ಮಾರಾಟವಾಗಿದೆ. ಶ್ರೀರಂಗಪಟ್ಟಣ ತಾಲೂಕಿನ ಶ್ರೀನಿವಾಸ ಅಗ್ರಹಾರ ಗ್ರಾಮದ ರೈತ ನವೀನ್ ಈ ಹಳ್ಳಿಕಾರ್‌ ಎತ್ತನ್ನು ಸಾಕಿದ್ದರು.

ಹಳ್ಳಿಕಾರ್ ತಳಿಯ ಎರಡು ಹಲ್ಲಿನ ಈ ಒಂಟಿ ಎತ್ತನ್ನು ತಮಿಳುನಾಡು ಮೂಲದ ಸರವಣಪಟ್ಟಿ ಗ್ರಾಮದ ಸಿರವೈ ತಂಬಿ 9.20 ಲಕ್ಷ ರೂ.ಗಳಿಗೆ ಖರೀದಿಸಿದ್ದಾರೆ.

ಜಾಗ್ವಾರ್ ಹೆಸರಿನ ಈ ಎತ್ತು ಹೊರ ರಾಜ್ಯಗಳಲ್ಲೂ ಎತ್ತಿನಗಾಡಿ ಸ್ಪರ್ಧೆಯಲ್ಲಿ ಪಾಲ್ಗೊಂಡು ಹಲವು ಪ್ರಶಸ್ತಿಗಳನ್ನು ಬಾಚಿಕೊಂಡಿತ್ತು. ತಮಿಳುನಾಡಿನಲ್ಲೂ ಪ್ರಶಸ್ತಿ ಗೆದ್ದು ಅಭಿಮಾನಿಗಳ ಮೆಚ್ಚುಗೆ ಗಳಿಸಿತ್ತು. ರೇಸ್‌ನಲ್ಲಿ ಕಣಕ್ಕಿಳಿದರೆ ಅಬ್ಬರಿಸುತ್ತಿದ್ದ ಈ ಜಾಗ್ವಾರ್ ವೇಗಕ್ಕೆ ಮನಸೋತ ತಮಿಳುನಾಡಿನ ವ್ಯಕ್ತಿ 9.20 ಲಕ್ಷ ರೂ. ನೀಡಿ ಖರೀದಿಸಿದ್ದಾರೆ.

lokesh

Recent Posts

ಸುಗಮ ಸಂಗೀತದ ಅದ್ಬುತ ಗಾಯಕ ಮಡಿಕೇರಿ ನಾಗೇಂದ್ರ

ಡಾ.ಕೆ.ವಿ.ಲಕ್ಷ್ಮೀದೇವಿ, ಗುರುಕೃಪಾ ಸಂಗೀತ ಕೇಂದ್ರ, ಮೈಸೂರು ಇಂದು ಗುರು ನಮನ ಮಡಿಕೇರಿ ನಾಗೇಂದ್ರರೆಂದೇ ಪ್ರಖ್ಯಾತರಾದ ‘ಗುರು ಕೃಪಾ ಸಂಗೀತ ಕೇಂದ್ರ’ದ…

2 hours ago

ಸುಮ್ಮನಿದ್ದರೂ ಪರಿಣಮಿಸುವ ರಂಗಭೂಮಿಯ ಝೆನ್ ಗುರು – ಜಂಬೆ ಮೇಷ್ಟ್ರು

ಸತೀಶ್ ತಿಪಟೂರು ಕರ್ನಾಟಕದ ಯಾವುದೇ ಭಾಗದಲ್ಲಿ ಜಂಬೆ ಮೇಷ್ಟ್ರ ಹಿರಿ - ಕಿರಿಯ ವಿದ್ಯಾರ್ಥಿಗಳು ಮೂರ್ನಾಲ್ಕು ಜನ ಒಂದೆಡೆ ಸೇರಿದರೆಂದರೆ…

2 hours ago

ಮಕ್ಕಳ ಮನದಂಗಳದಲ್ಲಿ ಗಾಂಧಿ ಚಿಂತನೆಯ ಬೇರುಗಳು

ಪ್ರತಿ ಭಾರತೀಯರ ಎದೆ ಬಡಿತದ ಚೇತನ ಗಾಂಧೀಜಿ:  ಕೈಯಲ್ಲೊಂದು ಕೋಲು ಹಿಡಿದು, ದುಂಡು ಕನ್ನಡಕ ಧರಿಸಿ, ಸತ್ಯ, ಅಹಿಂಸೆಯ ಅಸದಿಂದ…

3 hours ago

ಸುಬ್ಬಮ್ಮ ಜೋಯಿಸ್ ಮೈಸೂರಿನಲ್ಲಿ ತ್ರಿವರ್ಣಧ್ವಜ ಹಾರಿಸಿದ್ದು

ಸೋನಿಯಾ ಎಮ್.ವಿ., ಉಪನ್ಯಾಸಕಿ, ಟೆರಿಷಿಯನ್ ಕಾಲೇಜ್ ಎಮ್. ಎನ್. ಜೋಯಿಸ್ ಮತ್ತು ಸುಬ್ಬಮ್ಮ ಜೋಯಿಸ್ ಮೈಸೂರಿನ ಸ್ವತಂತ್ರ ಹೋರಾಟಗಾರರಲ್ಲಿ ತಮ್ಮ…

3 hours ago

ಉರಿ ಉಂಡ ಕರ್ಪೂರ ಟಿ.ಎಸ್.ಸುಬ್ಬಣ್ಣ

ಪರಮಶಿವ ನಡುಬೆಟ್ಟ ಬ್ರಿಟಿಷರ ವಿರುದ್ಧ ಸ್ವಾತಂತ್ರ್ಯ ಹೋರಾಟಗಾರರು ಧ್ವಜ ಸತ್ಯಾಗ್ರಹ ಕಾರ್ಯ ಕ್ರಮವನ್ನು ಹಮ್ಮಿ ಕೊಂಡಿದ್ದರು. ಈ ಧ್ವಜ ಸತ್ಯಾಗ್ರಹವನ್ನು…

3 hours ago

ಬ್ಯಾರಿಸ್ಟರ್ ಏನೋ ಆದೆ ಆದರೆ ಆಮೇಲೆ?

ಗಾಂಧಿ ಮಹಾತ್ಮನ ಆತ್ಮಕಥೆಗೆ ಶತಮಾನೋತ್ಸವದ ಸಂದರ್ಭದಲ್ಲಿ ‘ಆಂದೋಲನ’ ದಿನಪತ್ರಿಕೆಯ ಗಾಂಧಿ ಅಭಿಯಾನ ನಾನು ಇಂಗ್ಲೆಂಡಿಗೆ ಹೋದ ಉದ್ದೇಶವನ್ನು ಬ್ಯಾರಿಸ್ಟರ್ ಆಗುವುದನ್ನು, ಕುರಿತು ನಾನು…

3 hours ago