ಮಂಡ್ಯ: ಬೆಳಕಿನ ಹಬ್ಬ ದೀಪಾವಳಿ ದಿನವೇ ಪತಿ ಮಹಾಶಯ ಪತ್ನಿಯನ್ನು ಮಚ್ಚಿನಿಂದ ಕೊಚ್ಚಿ ಕೊಲೆಗೈದಿರುವ ಘಟನೆ ಸಕ್ಕರೆ ನಾಡು ಮಂಡ್ಯದಲ್ಲಿ ನಡೆದಿದೆ.
ಜಿಲ್ಲೆಯ ಕಾಳೇನಹಳ್ಳಿ ಗ್ರಾಮದಲ್ಲಿ ಈ ಘಟನೆ ನಡೆದಿದ್ದು, ಪತಿ-ಪತ್ನಿ ನಡುವೆ ಆರಂಭವಾದ ಜಗಳ ಕೊಲೆಯಲ್ಲಿ ಅಂತ್ಯವಾಗಿದೆ. ಪತಿ ಲೋಕೇಶ್ ಪತ್ನಿ ಶ್ವೇತಾಳನ್ನು ಬರ್ಬರವಾಗಿ ಕೊಲೆಗೈದಿದ್ದಾನೆ.
ಈ ಸಂಬಂಧ ಮಂಡ್ಯ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.





