ಮಂಡ್ಯ: ರಾಜಮಾತೆ ಕೆಂಪನಂಜಮಣ್ಣಿ ಮತ್ತು ರಾಜರ್ಷಿ ನಾಲ್ವಡಿ ಕೃಷ್ಣರಾಜ ಒಡೆಯರ್ ಪ್ರಧಾನ ವೇದಿಕೆಯಲ್ಲಿ ನಡೆದ ದೃಷ್ಟಿಚೇತನರ ವಿಶೇಷ ಕವಿಗೋಷ್ಠಿ ಎಲ್ಲರ ಆಕರ್ಷಣೆಯ ಕೇಂದ್ರಬಿಂದುವಾಗಿತ್ತು.
ಸಾಹಿತ್ಯ ಸಮ್ಮೇಳನದ ಇತಿಹಾಸದ ಪುಟದಲ್ಲಿ ಇದೇ ಮೊದಲ ಬಾರಿಗೆ ದೃಷ್ಟಿಚೇತನರ ವಿಶೇಷ ಕವಿಗೋಷ್ಠಿಗೆ ಮಂಡ್ಯದಲ್ಲಿ ನಡೆದ 87ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನ ಸಾಕ್ಷಿಯಾಯಿತು.
ಪ್ರಾಧ್ಯಪಕ ಡಾ. ಶಿವರಾಜ ಶಾಸ್ತ್ರಿ ಹೇರೂರ ಅವರ ಅಧ್ಯಕ್ಷತೆಯಲ್ಲಿ ಆಶಯ ನುಡಿಗಳನ್ನಾಡಿದ ಸಾಹಿತಿ ಮುದಿಗೆರೆ ರಮೇಶ್ ಕುಮಾರ್ ಅವರು, ನಮ್ಮ ಬದುಕೇ ಒಂದು ಸವಾಲು ಅದರಲ್ಲೂ ಕಾವ್ಯ ಕಟ್ಟುವುದೇ ಸವಾಲು. ಸವಾಲಿನ ಬದುಕಿನಲ್ಲಿ ಬರವಣಿಗೆಯಲ್ಲಿ ತೊಡಗಿಸಿಕೊಂಡಿದ್ದೇವೆ. ಬದುಕಿಗಿಂತ ಬರಹ ಮುಖ್ಯ. ದೃಷ್ಟಿ ವಿಶೇಷಚೇತನರ ಕವಿಗೋಷ್ಠಿ ಆಯೋಜಿಸುವ ಮೂಲಕ ಸಾಹಿತ್ಯ ಪರಿಷತ್ತು ಐತಿಹಾಸಿಕ ಕಾರ್ಯಕ್ಕೆ ಮುನ್ನುಡಿ ಬರೆದಿದ್ದು ಮುಂದಿನ ದಿನಗಳಲ್ಲಿ ದೃಷ್ಟಿ ವಿಶೇಷಚೇತನರ ಕೃತಿಗಳನ್ನು ಚಿಂತನೆಗೆ ಒಳಪಡಿಸುವ ಕಾರ್ಯವಾಗಲಿ ಎಂದರು.
ಈ ಸಂದರ್ಭದಲ್ಲಿ ನಾಲ್ವರನ್ನು ನಾವು ನೆನೆಯಬೇಕು. ಬರಗೂರು ರಾಮಚಂದ್ರಪ್ಪ ಅವರು ಅಂಧರ ಕವಿಗೋಷ್ಠಿಗೆ ಮುನ್ನುಡಿ ಬರೆದರು. ಸಿದ್ದಲಿಂಗಯ್ಯ ಅವರು 50 ಕೃತಿಗಳನ್ನು ಬ್ರೈಲಿ ಲಿಪಿಯಲ್ಲಿ ಮುದ್ರಿಸಿದರು. ಎಚ್.ವಿಶ್ವನಾಥ್ ಅವರು ದತ್ತಿ ಪ್ರಶಸ್ತಿ ಆರಂಭಿಸಿ ದೃಷ್ಟಿ ಚೇತನರಿಗೆ ಪ್ರಶಸ್ತಿ ನೀಡಿದರು. ಈಗ ನಾಡೋಜ ಡಾ. ಮಹೇಶ್ ಜೋಶಿ ಅವರು ದಾಖಲಾರ್ಹವಾದ ಐತಿಹಾಸಿಕ ಕಾರ್ಯಕ್ರಮ ಆಯೋಜಿಸಿದ್ದಾರೆ ಎಂದರು.
ನಂತರ ಅವರು ವಾಚಿಸಿದ ಆತ್ಮದ ಹಾಡು ಕವನಕ್ಕೆ ನೆರೆದಿದ್ದ ಪ್ರೇಕ್ಷಕರು ಚಪ್ಪಾಳೆಯ ಸುರಿಮಳೆ ಹರಿಸಿದರು. ಬಳಿಕ ಬಾಪು ಖಾಡೆ, ಹರೀಶ್ ಸಿ, ಹೇಮಂತ ಕುಮಾರ್, ಜಯನಂದಾ ಟೋಪುಗೋಳು, ರಮಾ ಫಣಿಭಟ್ ಗೋಪಿ, ಸೋಮಶೇಖರ್ ಬಳೆಗಾರ್, ಶಿವಸ್ವಾಮಿ ಚೀನಕೇರ, ಟಿ. ಎಂ. ತೋಟಯ್ಯ, ಡಾ. ಕೃಷ್ಣ ಹೊಂಬಾಳ, ಡಾ. ಆನಂದ್ ಇಂದೂರಾ ಅವರು ಕವನ ವಾಚಿಸಿದರು.
ಹನೂರು: ತಾಲೂಕಿನ ಲೊಕ್ಕನಹಳ್ಳಿ ಹೋಬಳಿ ವ್ಯಾಪ್ತಿಯ ಮಲೆ ಮಹದೇಶ್ವರ ಅರಣ್ಯ ಪ್ರದೇಶ ವ್ಯಾಪ್ತಿಯ ಬಳಗುಡ್ಡ ಬಿಟ್ ವ್ಯಾಪ್ತಿಯಲ್ಲಿ ಏಕಕಾಲಕ್ಕೆ ಎರಡು…
ನವದೆಹಲಿ: ನಾಗರಿಕ ವಿಮಾನಯಾನ ಸಚಿವಾಲಯವು ಇಂಡಿಗೋದ ಬಾಕಿ ಇರುವ ಎಲ್ಲಾ ಪ್ರಯಾಣಿಕರ ಮರುಪಾವತಿಗಳನ್ನು ವಿಳಂಬವಿಲ್ಲದೇ ಪಾವತಿಸಲು ಆದೇಶಿಸಿದೆ. ರದ್ದಾದ ಅಥವಾ…
ತುಮಕೂರು: ರಾಜ್ಯದಲ್ಲಿ ಸಿಎಂ ಸ್ಥಾನ ಬದಲಾವಣೆ ಚರ್ಚೆ ಬೆನ್ನಲ್ಲೇ ಮಾಜಿ ಸಚಿವ ಕೆ.ಎನ್.ರಾಜಣ್ಣ ಮಹತ್ವದ ಹೇಳಿಕೆ ಕೊಟ್ಟಿದ್ದಾರೆ. ಈ ಕುರಿತು…
ಹಾಸನ: ನ್ಯಾಷನಲ್ ಹೆರಾಲ್ಡ್ ಪ್ರಕರಣದಲ್ಲಿ ದೆಹಲಿ ಪೊಲೀಸರು ನೋಟಿಸ್ ಕೊಟ್ಟ ವಿಚಾರಕ್ಕೆ ಡಿಸಿಎಂ ಡಿ.ಕೆ.ಶಿವಕುಮಾರ್ ಪ್ರತಿಕ್ರಿಯೆ ನೀಡಿದ್ದಾರೆ. ಈ ಕುರಿತು…
ಹಾಸನ: ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬಂದ ಒಂದು ವರ್ಷದೊಳಗೆ ಎಲ್ಲ ಗ್ಯಾರಂಟಿ ಯೋಜನೆಗಳನ್ನು ಯಶಸ್ವಿಯಾಗಿ ಜಾರಿಗೊಳಿಸಿದ್ದು, ಕರ್ನಾಟಕದ ಇತಿಹಾಸದಲ್ಲಿಯೇ ಕಾಂಗ್ರೆಸ್…
ನಂಜನಗೂಡು: ಜಮೀನಿನಲ್ಲಿ ಭಾರೀ ಗಾತ್ರದ ಹೆಬ್ಬಾವು ಪತ್ತೆಯಾಗಿದ್ದು, ಅರಣ್ಯ ಇಲಾಖೆ ಸಿಬ್ಬಂದಿಗಳು ರಕ್ಷಿಸಿ ಸುರಕ್ಷಿತ ಪ್ರದೇಶಕ್ಕೆ ಬಿಟ್ಟಿದ್ದಾರೆ. ಜಿಲ್ಲೆಯ ನಂಜನಗೂಡು…