ಮಂಡ್ಯ

ದೃಷ್ಟಿಚೇತನರ ವಿಶೇಷ ಕವಿಗೋಷ್ಠಿಗೆ ಸಾಕ್ಷಿಯಾದ ಸಾಹಿತ್ಯ ಸಮ್ಮೇಳನ

ಮಂಡ್ಯ: ರಾಜಮಾತೆ ಕೆಂಪನಂಜಮಣ್ಣಿ ಮತ್ತು ರಾಜರ್ಷಿ ನಾಲ್ವಡಿ ಕೃಷ್ಣರಾಜ ಒಡೆಯರ್ ಪ್ರಧಾನ ವೇದಿಕೆಯಲ್ಲಿ ನಡೆದ ದೃಷ್ಟಿಚೇತನರ ವಿಶೇಷ ಕವಿಗೋಷ್ಠಿ ಎಲ್ಲರ ಆಕರ್ಷಣೆಯ ಕೇಂದ್ರಬಿಂದುವಾಗಿತ್ತು.

ಸಾಹಿತ್ಯ ಸಮ್ಮೇಳನದ ಇತಿಹಾಸದ ಪುಟದಲ್ಲಿ ಇದೇ ಮೊದಲ ಬಾರಿಗೆ ದೃಷ್ಟಿಚೇತನರ ವಿಶೇಷ ಕವಿಗೋಷ್ಠಿಗೆ ಮಂಡ್ಯದಲ್ಲಿ ನಡೆದ 87ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನ ಸಾಕ್ಷಿಯಾಯಿತು.

ಪ್ರಾಧ್ಯಪಕ ಡಾ. ಶಿವರಾಜ ಶಾಸ್ತ್ರಿ ಹೇರೂರ ಅವರ ಅಧ್ಯಕ್ಷತೆಯಲ್ಲಿ ಆಶಯ ನುಡಿಗಳನ್ನಾಡಿದ ಸಾಹಿತಿ ಮುದಿಗೆರೆ ರಮೇಶ್ ಕುಮಾರ್ ಅವರು, ನಮ್ಮ ಬದುಕೇ ಒಂದು ಸವಾಲು ಅದರಲ್ಲೂ ಕಾವ್ಯ ಕಟ್ಟುವುದೇ ಸವಾಲು. ಸವಾಲಿನ ಬದುಕಿನಲ್ಲಿ ಬರವಣಿಗೆಯಲ್ಲಿ ತೊಡಗಿಸಿಕೊಂಡಿದ್ದೇವೆ. ಬದುಕಿಗಿಂತ ಬರಹ ಮುಖ್ಯ. ದೃಷ್ಟಿ ವಿಶೇಷಚೇತನರ ಕವಿಗೋಷ್ಠಿ ಆಯೋಜಿಸುವ ಮೂಲಕ‌ ಸಾಹಿತ್ಯ ಪರಿಷತ್ತು ಐತಿಹಾಸಿಕ ಕಾರ್ಯಕ್ಕೆ ಮುನ್ನುಡಿ ಬರೆದಿದ್ದು ಮುಂದಿನ ದಿನಗಳಲ್ಲಿ ದೃಷ್ಟಿ ವಿಶೇಷಚೇತನರ ಕೃತಿಗಳನ್ನು ಚಿಂತನೆಗೆ ಒಳಪಡಿಸುವ ಕಾರ್ಯವಾಗಲಿ ಎಂದರು.

ಈ ಸಂದರ್ಭದಲ್ಲಿ ನಾಲ್ವರನ್ನು ನಾವು ನೆನೆಯಬೇಕು. ಬರಗೂರು ರಾಮಚಂದ್ರಪ್ಪ ಅವರು ಅಂಧರ ಕವಿಗೋಷ್ಠಿಗೆ ಮುನ್ನುಡಿ ಬರೆದರು. ಸಿದ್ದಲಿಂಗಯ್ಯ ಅವರು 50 ಕೃತಿಗಳನ್ನು ಬ್ರೈಲಿ ಲಿಪಿಯಲ್ಲಿ ಮುದ್ರಿಸಿದರು. ಎಚ್.ವಿಶ್ವನಾಥ್ ಅವರು ದತ್ತಿ ಪ್ರಶಸ್ತಿ ಆರಂಭಿಸಿ ದೃಷ್ಟಿ ಚೇತನರಿಗೆ ಪ್ರಶಸ್ತಿ ನೀಡಿದರು. ಈಗ ನಾಡೋಜ ಡಾ. ಮಹೇಶ್ ಜೋಶಿ ಅವರು ದಾಖಲಾರ್ಹವಾದ ಐತಿಹಾಸಿಕ ಕಾರ್ಯಕ್ರಮ ಆಯೋಜಿಸಿದ್ದಾರೆ ಎಂದರು.

ನಂತರ ಅವರು ವಾಚಿಸಿದ ಆತ್ಮದ ಹಾಡು ಕವನಕ್ಕೆ ನೆರೆದಿದ್ದ ಪ್ರೇಕ್ಷಕರು ಚಪ್ಪಾಳೆಯ ಸುರಿಮಳೆ ಹರಿಸಿದರು. ಬಳಿಕ ಬಾಪು ಖಾಡೆ, ಹರೀಶ್ ಸಿ, ಹೇಮಂತ ಕುಮಾರ್, ಜಯನಂದಾ ಟೋಪುಗೋಳು, ರಮಾ ಫಣಿಭಟ್ ಗೋಪಿ, ಸೋಮಶೇಖರ್ ಬಳೆಗಾರ್, ಶಿವಸ್ವಾಮಿ ಚೀನಕೇರ, ಟಿ. ಎಂ. ತೋಟಯ್ಯ, ಡಾ. ಕೃಷ್ಣ ಹೊಂಬಾಳ, ಡಾ. ಆನಂದ್ ಇಂದೂರಾ ಅವರು ಕವನ ವಾಚಿಸಿದರು.

ಚಂದು ಸಿಎನ್

ಮೈಸೂರು ಜಿಲ್ಲೆಯ ಹುಣಸೂರಿನ ಚಲ್ಲಹಳ್ಳಿ ಗ್ರಾಮದವನಾದ ನಾನು ಒಂದು ದಶಕದಿಂದ ಮೈಸೂರಿನಲ್ಲಿ ನೆಲೆಸಿದ್ದೇನೆ. ಮೈಸೂರಿನ ಮಹಾರಾಜ ಕಾಲೇಜಿನಲ್ಲಿ ಪತ್ರಿಕೋದ್ಯಮ ಪದವಿ ಪಡೆದು ಅಂದಿನಿಂದಲೇ ಹವ್ಯಾಸಿ ಪತ್ರಕರ್ತನಾಗಿ ವೃತ್ತಿ ಆರಿಸಿಕೊಂಡೆ. ನಂತರ ಮೈಸೂರು ವಿಶ್ವವಿದ್ಯಾನಿಲಯದಲ್ಲಿ ಪ್ರಾಚೀನ ಇತಿಹಾಸ ಮತ್ತು ಪುರಾತತ್ವ ವಿಷಯದಲ್ಲಿ ಸ್ನಾತಕೋತ್ತರ ಪದವಿ ಮುಗಿಸಿದ ಬಳಿಕ ಪತ್ರಿಕೋದ್ಯಮ ಕ್ಷೇತ್ರದಲ್ಲಿ 2 ವರ್ಷಗಳ ಕಾಲ ಅನುಭವ ಪಡೆದಿದ್ದೇನೆ. ಸದ್ಯ ಮೈಸೂರಿನ ಪ್ರತಿಷ್ಠಿತ ಆಂದೋಲನ ಪತ್ರಿಕೆಯ ಡಿಜಿಟಲ್‌ ವಿಭಾಗದಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ಪ್ರಾಚೀನ ಪಳಿಯುಳಿಕೆ ಹಾಗೂ ಇತಿಹಾಸದ ಕಡೆ ಎಲ್ಲಿಲ್ಲದ ಒಲವು. ಪ್ರವಾಸ, ಪುಸ್ತಕ ಓದುವುದು ನೆಚ್ಚಿನ ಹವ್ಯಾಸಗಳಾಗಿವೆ. ಮೊಬೈಲ್‌ ಸಂಖ್ಯೆ: 9164535321.

Recent Posts

ಕಾಡಾನೆ ದಾಳಿ: ವ್ಯಕ್ತಿ ಸಾವು

ಸರಗೂರು: ಆಸ್ಪತ್ರೆಗೆ ತೆರಳುತ್ತಿದ್ದ ವೇಳೆ ಕಾಡಾನೆ ದಾಳಿ ನಡೆಸಿದ ಪರಿಣಾಮ ವ್ಯಕ್ತಿಯೊಬ್ಬರು ಮೃತಪಟ್ಟಿರುವ ಘಟನೆ ಸರಗೂರು ತಾಲ್ಲೂಕಿನ ಕಾಡಗೆರೆ ಗ್ರಾಮದ…

2 hours ago

ಗಣೇಶ ವಿಸರ್ಜನೆ ಮೆರವಣಿಗೆ ರಾಜಕೀಯ ದಾಳವಾಗದಿರಲಿ…

ಬ್ರಿಟೀಷರ ವಿರುದ್ಧ ಸಮಾಜವನ್ನು ಅದರಲ್ಲೂ ಯುವಜನರನ್ನು ಸಂಘಟಿಸಿ, ದೇಶಭಕ್ತಿಯನ್ನು ಜಾಗೃತಿಗೊಳಿಸುವ ಮೂಲಕ ಅವರನ್ನು ಸ್ವಾತಂತ್ರ್ಯಸಂಗ್ರಾಮಕ್ಕೆ ಸಜ್ಜುಗೊಳಿಸುವ ಉದ್ದೇಶದಿಂದ ಆರಂಭವಾದ ಸಾರ್ವಜನಿಕ…

5 hours ago

ಕಾಂಗ್ರೆಸ್‌ನಲ್ಲೀಗ ಆತಂಕದ ಕಾರ್ಮೋಡ…

ಬೆಂಗಳೂರು ಡೈರಿ: ಆರ್.ಟಿ.ವಿಠ್ಠಲಮೂರ್ತಿ ಅವರ ವಾರದ ಅಂಕಣ  ಕಳೆದ ಮೂರು ವರ್ಷಗಳಿಂದ ಅಧಿಕಾರ ಹಂಚಿಕೆಯ ಸಂಘರ್ಷದಲ್ಲಿ ಮುಳುಗಿದ್ದ ಆಡಳಿತಾರೂಢ ಕಾಂಗ್ರೆಸ್…

6 hours ago

ಕಸ್ತೂರಿ ರಂಗನ್ ವರದಿ: ದೇವರ ಕಾಡುಗಳಿಗೂ ಆತಂಕ

ಲಕ್ಷ್ಮೀ ಕಾಂತ್ ಕೊಮಾರಪ್ಪ ಕೃಷಿ, ಧಾರ್ಮಿಕ ಆಚರಣೆಗಳಿಗೆ ಧಕ್ಕೆ ಬಾರದಂತೆ ತಿದ್ದುಪಡಿ ತರಲು ಆಗ್ರಹ  ಸೋಮವಾರಪೇಟೆ: ಕೊಡಗು ಜಿಲ್ಲೆಯ ಅರ್ಧದಷ್ಟು…

6 hours ago

ರಸ್ತೆ ಡುಬ್ಬ ನಿರ್ಮಿಸಿ; ಅಪಘಾತ ತಪ್ಪಿಸಿ

ಪ್ರಶಾಂತ್ ಎಸ್. ಬೊಂತಗಳ್ಳಿ ಸೇತುವೆ, ತಂತಿಗುಳ್ಳು ತಿರುವಿನಲ್ಲಿ ಹಂಪ್, ಬ್ಯಾರಿಕೇಡ್‌ಗಳನ್ನು ಅಳವಡಿಸಲು ಗ್ರಾಮಸ್ಥರ ಆಗ್ರಹ  ಮೈಸೂರು: ಬನ್ನೂರು ಮುಖ್ಯ ರಸ್ತೆಯಲ್ಲಿನ…

6 hours ago

ಕಾಲ್ಚೆಂಡು ಮೈದಾನ ಈಗ ಬಿಡಾಡಿ ದನಗಳ, ವಾಹನಗಳ ತಂಗುದಾಣ

ಕೆ.ಬಿ.ರಮೇಶನಾಯಕ ಮೈದಾನ ಸಂರಕ್ಷಿಸಿಕೊಳ್ಳದ ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ; ಅಧಿಕಾರಿಗಳ ನಿರ್ಲಕ್ಷ್ಯದಿಂದ ಕಾಲ್ಚೆಂಡು ಮೈದಾನ ಈಗ ಬಿಡಾಡಿ ದನಗಳ,…

6 hours ago