mysugar
ಮಂಡ್ಯ : ಈಗಿರುವ ಮೈಸೂರು ಸಕ್ಕರೆ ಕಾರ್ಖಾನೆ ಆವರಣದಲ್ಲೇ ರಾಜ್ಯ ಸರ್ಕಾರ ಹೊಸ ಕಾರ್ಖಾನೆಯನ್ನು ನಿರ್ಮಿಸಲು ತೀರ್ಮಾನಿಸಿದೆ. ೫೯.೮೦ ಕೋಟಿ ರೂ. ವೆಚ್ಚದಲ್ಲಿ ೫ ಸಾವಿರ ಟಿಸಿಡಿ ಸಾಮರ್ಥ್ಯದ ಕಬ್ಬು ನುರಿಸುವ ಹೊಸ ಯಂತ್ರ, ೧೧೬ ಕೋಟಿ ರೂ. ವೆಚ್ಚದ ೮೦ ಕೆಎಲ್‌ಪಿಡಿ ಸಾಮರ್ಥ್ಯ ಕಾಕಂಬಿ ಆಧಾರಿತ ಎಥೆನಾಲ್ ಘಟಕವನ್ನು ಅಳವಡಿಸಲು ನಿರ್ಧರಿಸಲಾಗಿದೆ ಎಂದು ಸಕ್ಕರೆ ಸಚಿವ ಶಿವಾನಂದ ಎಸ್.ಪಾಟೀಲ ಅವರು ತಿಳಿಸಿದರು.
ವಿಧಾನ ಪರಿಷತ್ತಿನಲ್ಲಿ ಸದಸ್ಯ ಮಧು ಜಿ.ಮಾದೇಗೌಡ ಅವರ ಚುಕ್ಕೆ ಗುರುತಿನ ಪ್ರಶ್ನೆಗೆ ಉತ್ತರಿಸಿದ ಸಕ್ಕರೆ ಸಚಿವ ಶಿವಾನಂದ ಎಸ್.ಪಾಟೀಲ ಅವರು, ಹೊಸ ಕಾರ್ಖಾನೆ ನಿರ್ಮಾಣ ಸಂಬಂಧ ಬೆಳಗಾವಿಯ ಎಸ್.ನಿಜಲಿಂಗಪ್ಪ ಸಕ್ಕರೆ ಸಂಸ್ಥೆಯಿಂದ ವಿಸ್ತೃತ ಯೋಜನಾ ವರದಿಯನ್ನು ಪಡೆಯಲಾಗಿದೆ. ವರದಿಯಲ್ಲಿರುವ ಮೂರು ಅಂಶಗಳಲ್ಲಿ ಕಬ್ಬು ನುರಿಸಲು ಹೊಸ ಯಂತ್ರ ಅಳವಡಿಕೆ, ಎಥೆನಾಲ್ ಘಟಕ ಸ್ಥಾಪನೆಗೆ ಅಗತ್ಯವಿರುವ ೧೭೫.೮೦ ಕೋಟಿ ರೂ. ಪ್ರಸ್ತಾವನೆಯನ್ನು ಸರ್ಕಾರ ಒಪ್ಪಿದ್ದು, ಇದರಲ್ಲಿ ೧೦೦ ಕೋಟಿ ರೂ. ಸಹಾಯಧನವನ್ನು ರಾಜ್ಯ ಸರ್ಕಾರದಿಂದ ಒದಗಿಸಲು ಪ್ರಸ್ತಾವನೆಯನ್ನು ಆರ್ಥಿಕ ಇಲಾಖೆಗೆ ನಂತರ ಸಚಿವ ಸಂಪುಟದಲ್ಲಿ ಮಂಡಿಸಲು ತೀರ್ಮಾನಿಸಲಾಗಿದೆ ಎಂದು ಹೇಳಿದರು.
ಹೊಸ ಬಾಯ್ಲರ್ ಘಟಕ ಸ್ಥಾಪನೆಗೆ ೨೮೮ ಕೋಟಿ ರೂ. ಅಗತ್ಯವಿರುವುದರಿಂದ ಸದ್ಯಕ್ಕೆ ಆ ಪ್ರಸ್ತಾವನೆಯನ್ನು ಮುಂದೂಡಲಾಗಿದೆ. ಮುಂದಿನ ಹಂಗಾಮುಗಳಲ್ಲಿ ಕಬ್ಬಿನ ಲಭ್ಯತೆಯನ್ನು ಆಧರಿಸಿ ಚರ್ಚಿಸಿ ನಿರ್ಧಾರ ಕೈಗೊಳ್ಳಲಾಗುವುದು ಎಂದು ತಿಳಿಸಿದರು.
ಮಂಡ್ಯ : ಕೊಬ್ಬರಿ ಶೆಡ್ ಗೆ ಬೆಂಕಿ ಬಿದ್ದು ಲಕ್ಷಾಂತರ ರೂ. ಮೌಲ್ಯದ ಕೊಬ್ಬರಿ ನಾಶವಾಗಿರುವ ಘಟನೆ ತಾಲೂಕಿನ ಗುನ್ನಾಯಕನಹಳ್ಳಿಯಲ್ಲಿ…
ಹನೂರು : ತಾಲೂಕಿನ ಕಾವೇರಿ ವನ್ಯಜೀವಿಧಾಮ ವ್ಯಾಪ್ತಿಯ ಅಲಗುಮೂಲೆ ಅರಣ್ಯ ಪ್ರದೇಶದಲ್ಲಿ ಬುಧವಾರ ರಾತ್ರಿ ಏಕಾಏಕಿ ಎರಡು ಮೂರು ಕಡೆ…
ಶ್ರೀರಂಗಪಟ್ಟಣ : ಸಿಗರೇಟ್ ಮತ್ತು ತಂಬಾಕು ಉತ್ಪನ್ನಗಳ ಸೇವನೆಯಿಂದ ಕ್ಯಾನ್ಸರ್, ಹೃದಯ, ಶ್ವಾಸಕೋಶ ಸಂಬಂಧಿತ ಮಾರಣಾಂತಿಕ ಕಾಯಿಲೆಗಳು ಬರುತ್ತವೆಂದು ಕ್ಷೇತ್ರ…
ಹೊಸದಿಲ್ಲಿ : ದೇಶದ ಎಲ್ಲ ನಗರಗಳ ರಸ್ತೆಗಳಲ್ಲಿ ಆಂಬ್ಯುಲೆನ್ಸ್‌ಗಳ ಸಂಚಾರಕ್ಕಾಗಿ ಪ್ರತ್ಯೇಕ ಮೀಸಲು ಮಾರ್ಗಗಳನ್ನು ಒದಗಿಸುವಂತೆ ಸಮಾಜವಾದಿ ಪಕ್ಷದ ಸಂಸದೆ…
ಗುಂಡ್ಲುಪೇಟೆ : ಜಾನುವಾರು ಹಾಗೂ ಜಾನುವಾರು ಮೇಯಿಸುತ್ತಿದ್ದ ರೈತರೊಬ್ಬರ ಮೇಲೆ ಹುಲಿ ದಾಳಿ ನಡೆಸಿದೆ. ಪರಿಣಾಮ ರೈತ ಗಾಯಗೊಂಡಿದ್ದಾನೆ. ಘಟನೆ…
ಮೈಸೂರು : ರಾಜ್ಯದ ಪ್ರತಿಯೊಂದೂ ಜಿಲ್ಲೆಗಳ ವಿಶೇಷ ಉತ್ಪನ್ನಗಳ ಪರಿಚಯ, ಮಾರಾಟಕ್ಕೆ ಅವಕಾಶ ಕಲ್ಪಿಸಿಕೊಡುವ ಉದ್ದೇಶದಿಂದ ಕೇಂದ್ರ ಸರ್ಕಾರ ನಿರ್ಮಿಸುತ್ತಿರುವ…