ಮಂಡ್ಯ

ಬೃಂದಾವನಕ್ಕೆ ಹೊಸ ರೂಪ; ಕಾವೇರಿ ಆರತಿ ಪ್ರಾರಂಭ: ಡಿಕೆ ಶಿವಕುಮಾರ್

ಮಂಡ್ಯ:ಮೈಸೂರು ಮಹಾರಾಜರು ಬೃಂದಾವನ ಅಣೆಕಟ್ಟನು ಅದ್ಭುತವಾಗಿ  ನಿರ್ಮಾಣ ಮಾಡಿದ್ದರು. ಗುಂಡೂರಾವ್ ಅವರು ಇದಕ್ಕೆ ಹೊಸರೂಪ ನೀಡಿದರು. ಪ್ರವಾಸೋದ್ಯಮವನ್ನು ಗುರಿಯಾಗಿಟ್ಟುಕೊಂಡು ಪಿಪಿಪಿ ಮಾದರಿಯಲ್ಲಿ ಹೊಸ ರೂಪ ನೀಡಲು ನಮ್ಮ ಸರ್ಕಾರ ಹೊರಟಿದೆ. ಗಂಗಾ ಆರತಿಗಿಂತ ಮಿಗಿಲಾಗಿ ಪ್ರತಿವಾರ ಕಾವೇರಿ ಆರತಿ ಮಾಡಲಾಗುವುದು ಎಂದು ಡಿಸಿಎಂ ಡಿಕೆ ಶಿವಕುಮಾರ್‌ ಹೇಳಿದರು.

ಕೆಆರ್‌ಎಸ್‌ಗೆ ಬಾಗಿನ ಅರ್ಪಿಸಿ ಬಳಿಕ ಮಾತನಾಡಿದ ಅವರು,  ಕಾವೇರಿ ಆರತಿ ಕಾರ್ಯಕ್ರಮವನ್ನು ಆದಷ್ಟು ಬೇಗ ಪ್ರಾರಂಭ ಮಾಡಲಾಗುವುದು. ಈಗಾಗಲೇ ಚೆಲುವರಾಯಸ್ವಾಮಿ ಅವರ ನೇತೃತ್ವದಲ್ಲಿ ಕಾವೇರಿ ಜಲಾನಯದ ಪ್ರದೇಶದ ಶಾಸಕರ ಹಾಗೂ ಸಂಬಂಧಪಟ್ಟ ಇಲಾಖೆಗಳನ್ನು ಸೇರಿಸಿ ಸಮಿತಿ ರಚಿಸಲಾಗಿದೆ ಎಂದರು.

ಕಾವೇರಿ ಜಲಾನಯನ ಪ್ರದೇಶಕ್ಕೆ ಹೊಸ ರೂಪ ನೀಡಲು ನಮ್ಮ ಸರ್ಕಾರ ಮುಂದಾಗಿದೆ. ಕಳೆದ ವರ್ಷ ಎಲ್ಲಾ ಕಾಲುವೆಗಳನ್ನು ಸ್ವಚ್ಚಗೊಳಿಸಲಾಗಿದೆ. ಕಾಲುವೆಯ ಕೊನೆ ಭಾಗದ ರೈತರಿಗೂ ನೀರು ತಲುಪಬೇಕು ಎಂದು 1964-65 ರ ಕಾನೂನಿಗೆ ತಿದ್ದುಪಡಿ ತಂದು ಈ ಬಾರಿಯ ವಿಧಾನಸಭೆಯಲ್ಲಿ ಮಂಡನೆ ಮಾಡಿ ಹೊಸ ಕಾನೂನು ತಂದಿದ್ದೇವೆ ಎಂದು ಹೇಳಿದರು.

ರೈತರ ಬದುಕು ಹಸನಾಗಬೇಕು ಎಂದು ಜಿಲ್ಲೆಯಲ್ಲಿ ಕೃಷಿ ವಿಶ್ವವಿದ್ಯಾನಿಲಯ ಸ್ಥಾಪಿಸಬೇಕು ಎನ್ನುವ ಕನಸನ್ನು ಸಚಿವ ಚೆಲುವರಾಯಸ್ವಾಮಿ ಅವರು ಹೊಂದಿದ್ದಾರೆ. ಇದು ಮಂಡ್ಯ ಜಿಲ್ಲೆಯ ರೈತರ ಬದುಕಿಗೆ ದೊಡ್ಡ ಮಾರ್ಗದರ್ಶನ ಸಿಗಲಿದೆ. ರೈತನಿಗೆ ಬಡ್ತಿ, ಸಂಬಳ, ನಿವೃತ್ತಿ ಎಂಬುದಿಲ್ಲ. ಆದ ಕಾರಣಕ್ಕೆ ರೈತರನ್ನು ನಾವು ಉಳಿಸಬೇಕಿದೆ ಎಂದರು.

ರೈತರು ಬೃಂದಾವನಕ್ಕೆ ಹೊಸ ರೂಪ ನೀಡುವ ಮೊದಲು ನಮ್ಮ ಜೊತೆ ಚರ್ಚೆ ನಡೆಸಿ ಎಂದು ಹೇಳಿದ್ದಾರೆ. ಯಾವುದೇ ಮುಚ್ಚುಮರೆಯಿಲ್ಲದೇ ಇದರ ಅಭಿವೃದ್ಧಿ ಮಾಡಲಾಗುವುದು ಹಾಗೂ ಅವರ ಜೊತೆ ಚರ್ಚೆ ನಡೆಸಲಾಗುವುದು. ಯಾರ ಜಮೀನು ವಶಪಡಿಸಿಕೊಳ್ಳುವುದಿಲ್ಲ. ಸರ್ಕಾರದ ಜಮೀನಿನಲ್ಲೇ ಅಭಿವೃದ್ಧಿ ಮಾಡಲಾಗುವುದು. ಇಷ್ಟವಿದ್ದವರು ಜಮೀನು ನೀಡಬಹುದು, ಯಾರಿಗೂ ಒತ್ತಾಯ ಮಾಡುವುದಿಲ್ಲ. ಅಣೆಕಟ್ಟಿನ ಭದ್ರತೆಯನ್ನು ಗಮನದಲ್ಲಿ ಇಟ್ಟುಕೊಂಡು ಕಾರ್ಯಕ್ರಮ ರೂಪಿಸಲಾಗುವುದು. ಸ್ಥಳೀಯ ಶಾಸಕರಾದ ರಮೇಶ್ ಬಂಡಿಸಿದ್ದೇಗೌಡರು ನೀರಾವರಿಗೆ ಸಂಬಂಧಿಸಿದಂತೆ ಅನೇಕ ಮನವಿಗಳನ್ನು ಸಲ್ಲಿಸಿದ್ದಾರೆ. ಅವರ ಮನವಿಗಳನ್ನು ಶೀಘ್ರ ಪರಿಗಣಿಸಲಾಗುವುದು ಭರವಸೆ ನೀಡಿದರು.

ಪ್ರತಿವರ್ಷ ಐದು ಮಂದಿಗೆ ಪ್ರಶಸ್ತಿ
ಕಬಿನಿ, ಕೆಆರ್ ಎಸ್, ಹೇಮಾವತಿ ವಿಭಾಗದಲ್ಲಿ ಮೂರು ಜನ ರೈತರು ಹಾಗೂ ಒಬ್ಬ ಪ್ರಗತಿಪರ ರೈತ ಮತ್ತು ಕಿರಿಯ ಎಂಜಿನಿಯರ್ ಅವರಿಗೆ ಕಾವೇರಿ ನೀರಾವರಿ ನಿಗಮದಿಂದ ಪ್ರಶಸ್ತಿ ನೀಡಲಾಗುವುದು ಎಂದು ಇದೇ ವೇಳೆ ಹೇಳಿದರು.

ಚಂದು ಸಿಎನ್

ಮೈಸೂರು ಜಿಲ್ಲೆಯ ಹುಣಸೂರಿನ ಚಲ್ಲಹಳ್ಳಿ ಗ್ರಾಮದವನಾದ ನಾನು ಒಂದು ದಶಕದಿಂದ ಮೈಸೂರಿನಲ್ಲಿ ನೆಲೆಸಿದ್ದೇನೆ. ಮೈಸೂರಿನ ಮಹಾರಾಜ ಕಾಲೇಜಿನಲ್ಲಿ ಪತ್ರಿಕೋದ್ಯಮ ಪದವಿ ಪಡೆದು ಅಂದಿನಿಂದಲೇ ಹವ್ಯಾಸಿ ಪತ್ರಕರ್ತನಾಗಿ ವೃತ್ತಿ ಆರಿಸಿಕೊಂಡೆ. ನಂತರ ಮೈಸೂರು ವಿಶ್ವವಿದ್ಯಾನಿಲಯದಲ್ಲಿ ಪ್ರಾಚೀನ ಇತಿಹಾಸ ಮತ್ತು ಪುರಾತತ್ವ ವಿಷಯದಲ್ಲಿ ಸ್ನಾತಕೋತ್ತರ ಪದವಿ ಮುಗಿಸಿದ ಬಳಿಕ ಪತ್ರಿಕೋದ್ಯಮ ಕ್ಷೇತ್ರದಲ್ಲಿ 2 ವರ್ಷಗಳ ಕಾಲ ಅನುಭವ ಪಡೆದಿದ್ದೇನೆ. ಸದ್ಯ ಮೈಸೂರಿನ ಪ್ರತಿಷ್ಠಿತ ಆಂದೋಲನ ಪತ್ರಿಕೆಯ ಡಿಜಿಟಲ್‌ ವಿಭಾಗದಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ಪ್ರಾಚೀನ ಪಳಿಯುಳಿಕೆ ಹಾಗೂ ಇತಿಹಾಸದ ಕಡೆ ಎಲ್ಲಿಲ್ಲದ ಒಲವು. ಪ್ರವಾಸ, ಪುಸ್ತಕ ಓದುವುದು ನೆಚ್ಚಿನ ಹವ್ಯಾಸಗಳಾಗಿವೆ. ಮೊಬೈಲ್‌ ಸಂಖ್ಯೆ: 9164535321.

Recent Posts

ಗಾಂಧಿ ಅಭಿಯಾನ ಅರಿವಿನ ಯಾನ | ಭಾಷೆ, ಬದುಕು ಕಲಿಸಿದ ನನ್ನಪ್ಪ

ಸಂತೋಷ ಕೌಲಗಿ ಒಬ್ಬ ವ್ಯಕ್ತಿಯ ಜೀವನದಲ್ಲಿ ಅವನ ತಂದೆಯ ಪಾತ್ರ ಬಹಳ ದೊಡ್ಡದು. ಒಬ್ಬ ಆದರ್ಶ ಮನೋಭಾವದ, ಮಕ್ಕಳನ್ನು ಸಮಾನವಾಗಿ…

23 hours ago

ಗಾಂಧಿ ಅಭಿಯಾನ ಅರಿವಿನ ಯಾನ | ಮತಗಳ ಪರಿಚಯ

ನಾನು ಇಂಗ್ಲೆಂಡಿಗೆ ಹೋದ ಎರಡನೆಯ ವರ್ಷದ ಕೊನೆಯಲ್ಲಿ ನನಗೆ ಇಬ್ಬರು ಥಿಯಾಸಫಿಸ್ಟರ ಪರಿಚಯವಾಯಿತು. ಅವರಿಬ್ಬರೂ ಅಣ್ಣ ತಮ್ಮಂದಿರು ಮತ್ತು ಅವಿವಾಹಿತರು.…

23 hours ago

ರೆಟ್ರೋ ಫೋಟೋಗಳ ಹೊಸ ಅಲೆ

ಹಳೆಯ ನೆನಪು, ಹೊಸ ತಂತ್ರಜ್ಞಾನ ೧೯೭೦-೮೦ರ ದಶಕದ ರೂಪದಲ್ಲಿ ಹೊಸ ತಲೆಮಾರು -ಡಾ.ಎಂ.ಲೋಕೇಶ ಒಮ್ಮೆ ಯೋಚಿಸಿ ನೋಡಿ... ಇಂದು ತೆಗೆದ…

23 hours ago

ಮಹಾಪಂಚ್‌ ಕಾರ್ಟೂನ್‌

  ಮಹಾಪಂಚ್‌ ಕಾರ್ಟೂನ್‌ | ಸೆಪ್ಟಂಬರ್‌ 12 ಶನಿವಾರ

23 hours ago

ಒಳ್ಳೆಯತನಕ್ಕೂ ಕೆಟ್ಟತನಕ್ಕೂ ಜಾತಿ ಮಾನದಂಡ ಅಲ್ಲ

ಜಾತಿ ಯಾವುದು?" - ಒಂದು ಪ್ರಶ್ನೆಯ ಹಿಂದೆ ಅಡಗಿರುವ ಮನಸ್ಥಿತಿ ಟಿ.ಕೆ.ಹರೀಶ್ ನೀವು ಯಾವ ಜಾತಿ?... ಪರಿಚಯವಾದ ಕೆಲವೇ ಕ್ಷಣಗಳಲ್ಲಿ…

23 hours ago

ಓದುಗರ ಪತ್ರ | ‘ಅಕ್ಕ’ ಸಮ್ಮೇಳನದಲ್ಲೂ ‘ನಂದಿನಿ’ ಮಿಂಚಿಂಗ್!

ಸೆಪ್ಟೆಂಬರ್ ೪, ೫, ೬ ರಂದು ಅಮೆರಿಕಾದ ಫಿಲಡೆಲಿಯಾದಲ್ಲಿ ನಡೆದ ‘ಅಕ್ಕ’ ಸಮ್ಮೇಳನದಲ್ಲೂ ಕನ್ನಡಿಗರ ಹೆಮ್ಮೆ ನಂದಿನಿ ಅಂಗಡಿ ಇದ್ದದ್ದು…

24 hours ago