Mysore
21
broken clouds

Social Media

ಬುಧವಾರ, 26 ಆಗಸ್ಟ್ 2026
Light
Dark

ಮಂಡ್ಯ ನುಡಿಜಾತ್ರೆಗೆ ಬರುವವರಿಗೆ ಭರ್ಜರಿ ಭೋಜನ ವ್ಯವಸ್ಥೆ

ಮಂಡ್ಯ: ಮೂರು ದಿನಗಳ ಕಾಲ ಸಕ್ಕರೆ ನಾಡು ಮಂಡ್ಯದಲ್ಲಿ ನಡೆಯಲಿರುವ ಕನ್ನಡ ನುಡಿ ಜಾತ್ರೆಗೆ ನಾಳೆ ಅದ್ಧೂರಿ ಚಾಲನೆ ಸಿಗಲಿದ್ದು, ಸಮ್ಮೇಳನಕ್ಕೆ ಬರುವವರಿಗೆ ಭರ್ಜರಿ ಭೋಜನದ ವ್ಯವಸ್ಥೆ ಮಾಡಿಕೊಳ್ಳಲಾಗಿದೆ.

ಕನ್ನಡ ಸಾಹಿತ್ಯ ಸಮ್ಮೇಳನಕ್ಕೆ ಬರುವ ಜನರಿಗೆ ಉಪಾಹಾರ ಹಾಗೂ ಊಟ ನೀಡಲು 140 ಕೌಂಟರ್‌ಗಳನ್ನು ತೆರಯಲಾಗಿದೆ. ಸಮ್ಮೇಳನದಲ್ಲಿ ಭಾಗವಹಿಸುವ ಎಲ್ಲರಿಗೂ ಒಂದೇ ಮೆನುವನ್ನು ಈಗಾಗಲೇ ಸಿದ್ಧ ಮಾಡಲಾಗಿದೆ. ನೂರಾರು ಬಾಣಸಿಗರು ಹಾಗೂ ಸಾವಿರಾರು ಸಹಾಯಕರಿಂದ ಖಾದ್ಯಗಳು ತಯಾರಾಗುತ್ತಿವೆ.

ಇನ್ನು ಈಗಾಗಲೇ ಸಿಹಿ ತಿನಿಸು ತಯಾರಿಕೆ ಆರಂಭವಾಗಿದ್ದು, ಹೋಳಿಗೆ, ಮೈಸೂರು ಪಾಕ್‌, ಬರ್ಫಿ, ಲಾಡುಗಳನ್ನು ತಯಾರು ಮಾಡಲಾಗುತ್ತಿದೆ.

ನಾಳೆಯಿಂದ ಮೆನು ಪ್ರಕಾರ ಊಟ ರೆಡಿಯಾಗಲಿದ್ದು, ಈ ಬಾರಿ ಮಂಡ್ಯ ಶೈಲಿಯಲ್ಲಿ ಊಟ ಇರಲಿದೆ. ಇದರ ಜೊತೆಗೆ ರಾಜ್ಯದ ಪ್ರಮುಖ ಊಟದ ಮೆನು ಸಹ ಇರಲಿದೆ. ಸಾಹಿತ್ಯ ಸಮ್ಮೇಳನ ನಡೆಯುವ ಮೂರು ದಿನವೂ ಬೆಳಿಗ್ಗೆ ತಿಂಡಿ, ಮಧ್ಯಾಹ್ನ ಹಾಗೂ ರಾತ್ರಿ ಊಟದ ವ್ಯವಸ್ಥೆ ಮಾಡಲಾಗಿದೆ.

ನುರಿತ ಅಡುಗೆ ಸಿಬ್ಬಂದಿ ಅತ್ಯಂತ ಶುಚಿತ್ವದಿಂದ ಖಾದ್ಯಗಳನ್ನು ತಯಾರು ಮಾಡಲಾಗುತ್ತಿದ್ದು, ಅನುಮತಿ ಪಡೆದವರಷ್ಟೇ ಅಡುಗೆ ಮಾಡುವ ಸ್ಥಳಕ್ಕೆ ಪ್ರವೇಶವಿದೆ. ಇಲ್ಲೂ ಕೂಡ ಯಾವುದೇ ಘಟನೆಗಳು ನಡೆಯದಂತೆ ಪೊಲೀಸರನ್ನು ಸಹ ನಿಯೋಜನೆ ಮಾಡಲಾಗಿದೆ.

Tags:
error: Content is protected !!