ಮಂಡ್ಯ

ಅದ್ದೂರಿ ಶ್ರೀರಂಗಪಟ್ಟಣ ದಸರಾ ಬದಲು ಸಾಂಪ್ರದಾಯಿಕ ಆಚರಣೆ: ಸಚಿವ ಎನ್. ಚಲುವರಾಯಸ್ವಾಮಿ

ಮಂಡ್ಯ: ಮೈಸೂರು ದಸರಾಗಿಂತಲೂ ಪುರಾತನವಾದ ಶ್ರೀರಂಗಪಟ್ಟಣ ದಸರಾವನ್ನು ಈ ಬಾರಿ ಬರಗಾಲದ ಹಿನ್ನೆಲೆಯಲ್ಲಿ ಅದ್ದೂರಿತನದ ಬದಲು ಸಾಂಪ್ರದಾಯಿಕವಾಗಿ ಆಚರಿಸಲು ತೀರ್ಮಾನಿಸಲಾಗಿದೆ ಎಂದು ಜಲಸಂಪನ್ಮೂಲ ಹಾಗೂ ಮಂಡ್ಯ ಜಿಲ್ಲಾ ಉಸ್ತುವಾರಿ ಸಚಿವ ಎನ್. ಚಲುವರಾಯಸ್ವಾಮಿ ತಿಳಿಸಿದ್ದಾರೆ.

ಜಿಲ್ಲಾಧಿಕಾರಿ ಕಚೇರಿಯಲ್ಲಿ ಇಂದು ನಡೆದ ಸಭೆ ಬಳಿಕ ಮಾಧ್ಯಮಗಳೊಂದಿಗೆ ಮಾತನಾಡಿದ‌ ಸಚಿವರು, ನಾಡಿನ ಸಮಸ್ತ ಎಂಜಿನಿಯರ್‌ಗಳಿಗೆ ದಿನಾಚರಣೆಯ ಶುಭಾಶಯ ಕೋರಿ, ಜಿಲ್ಲೆಯ ಅಭಿವೃದ್ಧಿ ಹಾಗೂ ಪ್ರಸ್ತುತ ವಿದ್ಯಮಾನಗಳ ಕುರಿತು ಸಮಗ್ರ ಮಾಹಿತಿ ಹಂಚಿಕೊಂಡರು.

ಶ್ರೀರಂಗಪಟ್ಟಣ ದಸರಾ ಆಚರಣೆ ಸಂಬಂಧ ಈಗಾಗಲೇ ಪೂರ್ವಭಾವಿ ಸಭೆ ನಡೆಸಲಾಗಿದ್ದು, ಈ ಬಾರಿ ಉತ್ಸವಕ್ಕೆ ವಿಶೇಷ ರೂಪ ನೀಡಲಾಗುವುದು. ಅಕ್ಟೋಬರ್ 12 ಮತ್ತು 13ರಂದು ಯುವ ಸಂಭ್ರಮ ಹಾಗೂ ಅಕ್ಟೋಬರ್ 15ರಿಂದ 18ರವರೆಗೆ ದಸರಾ ಮಹೋತ್ಸವ ನಡೆಯಲಿದೆ. ಯುವ ದಸರಾದಲ್ಲಿ ಸ್ಥಳೀಯ ಮಕ್ಕಳ ಪ್ರತಿಭೆಗಳಿಗೆ ವೇದಿಕೆ ಕಲ್ಪಿಸಿ ಪ್ರೋತ್ಸಾಹಿಸಲಾಗುವುದು ಎಂದರು. ದಸರಾ ಆಚರಣೆಗೆ ಐದು ಕೋಟಿ ರೂ. ಅನುದಾನ ಕೋರಿ ಸಮಿತಿಯು ಮನವಿ ಮಾಡಿದ್ದು, ಶಾಸಕರ ಸಲಹೆಗಳನ್ನು ಪರಿಗಣಿಸಿ ಮುಂದಿನ ಮೂರು ದಿನಗಳಲ್ಲಿ ಉದ್ಘಾಟಕರ ಹೆಸರನ್ನು ಅಂತಿಮಗೊಳಿಸಲಾಗುವುದು ಎಂದು ಸಚಿವರು ಸ್ಪಷ್ಟಪಡಿಸಿದರು.

ಕಾನೂನು ಹೋರಾಟದ ಮೂಲಕ ಉತ್ತರ: ಮಂಡ್ಯ ವೈದ್ಯಕೀಯ ವಿಜ್ಞಾನಗಳ ಸಂಸ್ಥೆ (ಮಿಮ್ಸ್) ಬಳಿಯ ಜಾಗದ ಒತ್ತುವರಿ ತೆರವು ಕುರಿತು ಪ್ರತಿಕ್ರಿಯಿಸಿದ ಅವರು, ಒತ್ತುವರಿದಾರರಿಗೆ ಪರ್ಯಾಯ ಜಾಗ ನೀಡಿದ್ದರೂ ಇನ್ನೂ ಸ್ಥಳಾಂತರಗೊಂಡಿಲ್ಲ. ಪ್ರಸ್ತುತ ನ್ಯಾಯಾಲಯದ ತಡೆಯಾಜ್ಞೆ ಇದ್ದು, ಇದನ್ನು ತೆರವುಗೊಳಿಸಲು ಅಡ್ವೊಕೇಟ್ ಜನರಲ್ ಅವರನ್ನು ನೇಮಿಸಿ ಕಾನೂನು ಹೋರಾಟ ನಡೆಸಲಾಗುವುದು. ಮಿಮ್ಸ್ ಆಸ್ಪತ್ರೆಯ ಸಾಮರ್ಥ್ಯವನ್ನು ಸಾವಿರ ಹಾಸಿಗೆಗಳಿಗೆ ಮೇಲ್ದರ್ಜೆಗೇರಿಸುವ ನಿಟ್ಟಿನಲ್ಲಿ ಮುಖ್ಯಮಂತ್ರಿಗಳೊಂದಿಗೆ ಶೀಘ್ರವೇ ಮಾತುಕತೆ ನಡೆಸಲಾಗುವುದು ಎಂದು ಭರವಸೆ ನೀಡಿದರು.

ಕುಡಿಯುವ ನೀರಿಗೆ ಸಮಸ್ಯೆ ಇಲ್ಲ: ಮುಂಬರುವ ಬೇಸಿಗೆಯಲ್ಲಿ ಕುಡಿಯುವ ನೀರಿನ ಸಮಸ್ಯೆ ಎದುರಾಗದಂತೆ ಮುನ್ನೆಚ್ಚರಿಕೆ ವಹಿಸಲಾಗುತ್ತಿದ್ದು, ಹೇಮಾವತಿ ಜಲಾಶಯದಿಂದ ನೀರು ಹರಿಸಲಾಗುತ್ತಿದೆ. ಆದರೆ, ಕೆಲವೆಡೆ ರೈತರು ನೀರು ತಡೆಯುತ್ತಿರುವುದು ಗಮನಕ್ಕೆ ಬಂದಿದೆ. ಕೆ.ಆರ್. ಪೇಟೆ ಹಾಗೂ ಪಾಂಡವಪುರ ಭಾಗದ ರೈತರು ಸಹಕರಿಸಿ, ಮದ್ದೂರು ಹಾಗೂ ಮಳವಳ್ಳಿ ಭಾಗದ ಕೆರೆಗಳು ತುಂಬಲು ಅವಕಾಶ ಮಾಡಿಕೊಡಬೇಕು. ಅಗತ್ಯವಿದ್ದರೆ ಪೊಲೀಸ್ ಭದ್ರತೆ ಪಡೆದು ನೀರು ಹರಿಸಲಾಗುವುದು ಎಂದರು.

 

ಆಂದೋಲನ ಡೆಸ್ಕ್

Recent Posts

ಸೆಪ್ಟೆಂಬರ್ ತಿಂಗಳಲ್ಲೇ ಕರ್ನಾಟಕದಲ್ಲಿ ಬಿರು ಬೇಸಿಗೆಯ ವಾತಾವರಣ

ಬೆಂಗಳೂರು: ಮುಂಗಾರು ಮಳೆಯ ಅಬ್ಬರ ಕಾಣಬೇಕಿದ್ದ ಸೆಪ್ಟೆಂಬರ್ ತಿಂಗಳಲ್ಲೇ ಕರ್ನಾಟಕದಲ್ಲಿ ಬಿರು ಬೇಸಿಗೆಯ ವಾತಾವರಣ ನಿರ್ಮಾಣವಾಗಿದೆ. ರಾಜ್ಯದ ಹಲವು ಜಿಲ್ಲೆಗಳಲ್ಲಿ…

19 mins ago

ಹನೂರು: ಬಿಸಿಯೂಟಕ್ಕೂ ನೀರಿಲ್ಲ – ಖಾಲಿ ಬಿಂದಿಗೆ ಹಿಡಿದು ವಿದ್ಯಾರ್ಥಿಗಳ ಪ್ರತಿಭಟನೆ

ಹನೂರು: ತಾಲೂಕಿನ ಮಾರ್ಟಳ್ಳಿ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಸಂದನಪಾಳ್ಯ ಗ್ರಾಮದ ಸೆಂಟ್ ಆಂಥೋನಿ ಶಾಲೆಯಲ್ಲಿ ಕಳೆದ ಆರು ತಿಂಗಳಿನಿಂದ ಕುಡಿಯುವ…

51 mins ago

ಮದ್ದೂರಿನಲ್ಲಿ ಬೆಳ್ಳಂಬೆಳಗ್ಗೆ ಜವರಾಯನ ಅಟ್ಟಹಾಸ: ರಸ್ತೆ ಅಪಘಾತದಲ್ಲಿ ಒಂದೇ ಕುಟುಂಬದ ಮೂವರು ಸಾವು

ಮಂಡ್ಯ: ಬೈಕ್‌ಗೆ ಹಾಲಿನ ಟ್ಯಾಂಕರ್ ಡಿಕ್ಕಿ ಹೊಡೆದ ಪರಿಣಾಮ ಒಂದೇ ಕುಟುಂಬದ ಮೂವರು ಸ್ಥಳದಲ್ಲೇ ಸಾವನ್ನಪ್ಪಿರುವ ದಾರುಣ ಘಟನೆ ಮಂಡ್ಯ…

4 hours ago

ರಾಜ್ಯದಲ್ಲಿ ಮಳೆ ಕೊರತೆ: ತಾಪಮಾನ ಏರಿಕೆ: ಹವಾಮಾನ ಇಲಾಖೆ ಮಹತ್ವದ ಮುನ್ಸೂಚನೆ

ಬೆಂಗಳೂರು: ರಾಜ್ಯದ ಬಹುತೇಕ ಕಡೆ ಮಳೆ ಕೊರತೆ ಮುಂದುವರಿದಿದ್ದು, ತಾಪಮಾನ ಏರಿಕೆಯಾಗುವ ಸಾಧ್ಯತೆ ಇದೆ. ಈ ಬಾರಿ ಮುಂಗಾರು ಕೊರತೆ…

9 hours ago

ಕೊಡಗು: ಪತ್ನಿಗೆ ಗುಂಡಿಕ್ಕಿ ಕೊಂದು ತಾನೂ ಗುಂಡು ಹಾರಿಸಿಕೊಂಡು ವೃದ್ಧ ಆತ್ಮಹತ್ಯೆ

ಸೋಮವಾರಪೇಟೆ: ತಾಲೂಕಿನ ಮಾದಾಪುರ ಹೋಬಳಿ ವ್ಯಾಪ್ತಿಯ ಕುಂಬಾರಗಡಿಗೆ ಗ್ರಾಮದಲ್ಲಿ ಕೌಟುಂಬಿಕ ಕಲಹ ಶಂಕೆಯಡಿ ವೃದ್ಧ ದಂಪತಿ ಶವವಾಗಿ ಪತ್ತೆಯಾಗಿದ್ದಾರೆ. ಕನ್ನಿಕಂಡ…

9 hours ago

ಬಿಗ್‌ಬಾಸ್ ಮನೆಯಿಂದ ದಿಢೀರ್ ಹೊರಬಂದ ಓಂ ಪ್ರಕಾಶ್ ರಾವ್: ಆಸ್ಪತ್ರೆಗೆ ದಾಖಲು..!!

ಬೆಂಗಳೂರು: ಬಿಗ್‌ಬಾಸ್ ಮನೆಯಲ್ಲಿ ಇದ್ದ ಓಂ ಪ್ರಕಾಶ್ ರಾವ್ ದಿಢೀರ್ ಆಸ್ಪತ್ರೆಗೆ ದಾಖಲಾಗಿದ್ದಾರೆ. ಈ ಹಿಂದೆ ಅಪಘಾತವೊಂದರಲ್ಲಿ ಓಂ ಪ್ರಕಾಶ್…

9 hours ago