ಮಂಡ್ಯ

ಸಕ್ಕರೆ ನಾಡು ಮಂಡ್ಯದಲ್ಲಿ ದುರಂತ ಪ್ರೇಮ ಕಥೆ

ಮಂಡ್ಯ: ಇಬ್ಬರು ವಿವಾಹಿತ ಪ್ರೇಮಿಗಳು ಪ್ರೇಮ ಪುರಾಣಕ್ಕೆ ಆತ್ಮಹತ್ಯೆಗೆ ಶರಣಾಗಿರುವ ಧಾರುಣ ಘಟನೆ ಸಕ್ಕರೆ ನಾಡು ಮಂಡ್ಯದಲ್ಲಿ ನಡೆದಿದೆ.

ಮದುವೆಯಾಗಿದ್ದರೂ ಗೃಹಿಣಿ ಗೆಳೆಯನಿಗಾಗಿ ನದಿಗೆ ಹಾರಿ ಆತ್ಮಹತ್ಯೆ ಮಾಡಿಕೊಂಡರೆ, ಪ್ರಿಯತಮೆ ಸಾವಿನ ವಿಚಾರ ತಿಳಿದು ಪ್ರಿಯಕರ ಕೂಡ ನೇಣಿಗೆ ಶರಣಾಗಿದ್ದಾರೆ.

ಮದ್ದೂರು ತಾಲ್ಲೂಕಿನ ಯರಗನಹಳ್ಳಿ ಗ್ರಾಮದ ಸೃಷ್ಟಿ ಎಂಬುವವರೇ ನದಿಗೆ ಹಾರಿ ಆತ್ಮಹತ್ಯೆ ಮಾಡಿಕೊಂಡಿರುವ ಗೃಹಿಣಿಯಾಗಿದ್ದು, ಬನ್ನಹಳ್ಳಿ ಗ್ರಾಮದ ಪ್ರಸನ್ನ ಎಂಬುವವರೇ ನೇಣಿಗೆ ಶರಣಾಗಿರುವ ವ್ಯಕ್ತಿಯಾಗಿದ್ದಾರೆ.

ಕಳೆದ ಕೆಲ ವರ್ಷಗಳಿಂದ ಪ್ರಸನ್ನ ಹಾಗೂ ಸೃಷ್ಟಿ ಪರಸ್ಪರ ಪ್ರೀತಿ ಮಾಡುತ್ತಿದ್ದರು. ಈ ನಡುವೆ ಪ್ರಸನ್ನ ಸೃಷ್ಟಿಯ ಸ್ನೇಹಿತೆ ಸ್ಪಂದನಾಳನ್ನು ಪ್ರೀತಿ ಮಾಡುತ್ತಿದ್ದ. ಅಂತಿಮವಾಗಿ ಪ್ರಸನ್ನ ಹಾಗೂ ಸ್ಪಂದನಾ ಮದುವೆಯಾದರೆ ಒಂದೂವರೆ ವರ್ಷದ ಹಿಂದೆ ದಿನೇಶ್‌ ಎಂಬುವವರ ಜೊತೆ ಸೃಷ್ಟಿಯ ಮದುವೆ ಕೂಡ ನಡೆದು ಹೋಗಿತ್ತು.

ಇಬ್ಬರು ಬೇರೆ ಬೇರೆಯವರನ್ನು ಮದುವೆಯಾಗಿದ್ದರೂ ಪ್ರಸನ್ನ ಹಾಗೂ ಸೃಷ್ಟಿ ನಡುವೆ ಪ್ರೀತಿ ಮಾತುಕತೆ ನಡೆಯುತ್ತಿತ್ತು ಎನ್ನಲಾಗಿದೆ.

ಈ ವಿಚಾರ ಗೊತ್ತಾಗುತ್ತಿದ್ದಂತೆ ಸೃಷ್ಟಿ ಹಾಗೂ ದಿನೇಶ್‌ ನಡುವೆ ಆಗಾಗ ಜಗಳ ನಡೆಯುತ್ತಿತ್ತು. ಹೀಗಿರುವಾಗಲೇ ಡಿಸೆಂಬರ್.‌11ರಂದು ಸೃಷ್ಟಿ ಪತಿ ಮನೆಯಿಂದ ನಾಪತ್ತೆಯಾಗಿದ್ದಳು. ನಾಪತ್ತೆ ಬೆನ್ನಲ್ಲೇ ದಿನೇಶ್‌ ಅವರು ಕೆಸ್ತೂರು ಪೊಲೀಸ್‌ ಠಾಣೆಯಲ್ಲಿ ದೂರು ದಾಖಲಿಸಿದ್ದರು.

ಆದರೆ ಡಿಸೆಂಬರ್.‌16ರಂದು ಶಿಂಷಾ ನದಿಯಲ್ಲಿ ಸೃಷ್ಟಿಯ ಶವ ಪತ್ತೆಯಾಗಿದ್ದು, ಈ ವಿಚಾರ ತಿಳಿಯುತ್ತಿದ್ದಂತೆ ಪ್ರಸನ್ನ ವಿಚಲಿತಗೊಂಡಿದ್ದ ಎನ್ನಲಾಗಿದೆ.

ಸೃಷ್ಟಿ ಆತ್ಮಹತ್ಯೆ ಪ್ರಕರಣದ ತನಿಖೆ ನಡೆಯುವಾಗಲೇ ಇತ್ತ ಪ್ರಸನ್ನ ತನ್ನ ಮನೆಯಲ್ಲಿ ನೇಣಿಗೆ ಶರಣಾಗಿದ್ದಾನೆ. ಈ ಸಂಬಂಧ ಮದ್ದೂರು ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

 

ಕೆಂಡಗಣ್ಣಸ್ವಾಮಿ

ಮೈಸೂರು ಜಿಲ್ಲೆಯ ಸರಗೂರು ತಾಲ್ಲೂಕಿನ ಹಂಚೀಪುರ ಗ್ರಾಮದವನಾದ ನಾನು ಮೈಸೂರಿನ ಮಹಾರಾಜ ಕಾಲೇಜಿನಲ್ಲಿ ಪದವಿ ಪಡೆದಿದ್ದೇನೆ. ಪದವಿ ನಂತರದಲ್ಲಿ ಪತ್ರಿಕೋದ್ಯಮ ಕ್ಷೇತ್ರದಲ್ಲಿ 5 ವರ್ಷಗಳ ಕಾಲ ಅನುಭವ ಪಡೆದಿದ್ದೇನೆ. ಸದ್ಯ ಮೈಸೂರಿನ ಪ್ರತಿಷ್ಠಿತ ಆಂದೋಲನ ಪತ್ರಿಕೆಯ ಡಿಜಿಟಲ್‌ ವಿಭಾಗದಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ನಾನು ನೈಸರ್ಗಿಕ ಕೃಷಿ ಹಾಗೂ ಪಶು ಸಂಗೋಪನೆಗೆ ಹೆಚ್ಚು ಒತ್ತು ಕೊಡುತ್ತೇನೆ.‌ ಪರಿಸರ ಸಂರಕ್ಷಣೆ ಜೊತೆ ಜೊತೆಗೆ ಪ್ರಾಣಿ ಪಕ್ಷಿಗಳ ಉಳಿವಿಗಾಗಿ ನಾನು ಶ್ರಮ ವಹಿಸುತ್ತಿದ್ದೇನೆ.‌ ನನ್ನ ಮೊಬೈಲ್‌ ಸಂಖ್ಯೆ: 9964859626, 9606570286

Recent Posts

ಅರಮನೆ ಬಳಿ ಹೀಲಿಯಂ ಗ್ಯಾಸ್ ಬ್ಲಾಸ್ಟ್ ಪ್ರಕರಣ: ತಂಗಿ ಅಂತ್ಯಸಂಸ್ಕಾರ ಆಗುತ್ತಿದ್ದಂತೆ ಅಣ್ಣನ ಸಾವು

ನಂಜನಗೂಡು: ಮೈಸೂರು ಅರಮನೆ ಬಳಿ ಹೀಲಿಯಂ ಗ್ಯಾಸ್‌ ಬ್ಲಾಸ್ಟ್‌ ಆಗಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ನಂಜನಗೂಡಿನ ಚಾಮಲಾಪುರದ ನಿವಾಸಿ ಮಂಜುಳ ಸಾವನ್ನಪ್ಪಿರುವ…

9 mins ago

ಮೈಸೂರು ಜಿಲ್ಲೆಯಲ್ಲಿ ಮತ್ತೊಂದು ಚಿರತೆ ಸೆರೆ

ನಂಜನಗೂಡು: ತಾಲ್ಲೂಕಿನ ಅಳಗಂಚಿ ಗ್ರಾಮದಲ್ಲಿ ಕಳೆದ ಕೆಲ ದಿನಗಳಿಂದ ಉಪಟಳ ನೀಡುತ್ತಿದ್ದ ಚಿರತೆಯೊಂದು ಸೆರೆಯಾಗಿದ್ದು, ಗ್ರಾಮಸ್ಥರು ನೆಮ್ಮದಿಯ ನಿಟ್ಟುಸಿರು ಬಿಟ್ಟಿದ್ದಾರೆ.…

1 hour ago

ಮೈಸೂರು ಜಿಲ್ಲೆಯಲ್ಲಿ ಮುಂದುವರಿದ ಹುಲಿ ದಾಳಿ ಪ್ರಕರಣಗಳು: ಕಂಗಾಲಾದ ರೈತರು

ಮೈಸೂರು: ಜಿಲ್ಲೆಯಲ್ಲಿ ಹುಲಿ ದಾಳಿ ಪ್ರಕರಣಗಳು ಮುಂದುವರಿದಿದ್ದು, ಗ್ರಾಮಸ್ಥರಲ್ಲಿ ಭಾರೀ ಆತಂಕ ಮೂಡಿಸಿದೆ. ಹುಣಸೂರು ತಾಲ್ಲೂಕಿನ ಗುರುಪುರ ಕೆರೆ ಬಳಿ…

1 hour ago

ಓದುಗರ ಪತ್ರ:   ಜನೌಷಧ ಕೇಂದ್ರ: ಸುಪ್ರೀಂ ತೀರ್ಮಾನ ಸ್ವಾಗತಾರ್ಹ

ಕರ್ನಾಟಕ ರಾಜ್ಯದಲ್ಲಿ ಕೇಂದ್ರ ಸರ್ಕಾರದಿಂದ ಆರಂಭಿಸಲ್ಪಟ್ಟಿದ್ದ ಜನ ಔಷಧ ಕೇಂದ್ರಗಳು ಹಲವು ವರ್ಷಗಳಿಂದ ರಾಜ್ಯದೆಲ್ಲೆಡೆ ಕಾರ್ಯನಿರ್ವಹಿಸುತ್ತಿವೆ. ಕಡು ಬಡಜನರಿಗೆ ಹಾಗೂ…

1 hour ago

ಓದುಗರ ಪತ್ರ:  ಹೀಲಿಯಂ ಗ್ಯಾಸ್ ಬಲೂನ್ ಮಾರಾಟ ನಿಷೇಧಿಸಿ

ಡಿ. 25ರ ಗುರುವಾರ ಮೈಸೂರು ಅರಮನೆ ಬಳಿ ಹೀಲಿಯಂ ಗ್ಯಾಸ್ ಸಿಲಿಂಡರ್ ಸ್ಛೋಟ ಸಂಭವಿಸಿದ್ದು, ಸಾರ್ವಜನಿಕ ಸುರಕ್ಷತೆಗೆ ಗಂಭೀರ ಅಪಾಯ…

2 hours ago

ಓದುಗರ ಪತ್ರ: ಯಥಾ ರಾಜ.. ತಥಾ ಅಧಿಕಾರಿ

‘ಸರಿಯಾಗಿ ಕೆಲಸ ಮಾಡದಿದ್ದರೆ ಜನರಿಂದ ಚಪ್ಪಲಿಯಲ್ಲಿ ಹೊಡೆಸುತ್ತೇನೆ. ನಾಚಿಕೆ ಆಗಲ್ವ ನಿಮಗೆ.. ಜನರನ್ನು ಯಾಕೆ ಹೀಗೆ ಸಾಯಿಸುತ್ತೀರಿ. ಯುವ ಅಧಿಕಾರಿಗಳಾದ…

2 hours ago